Shuru
Apke Nagar Ki App…
ಮುಧೋಳ ಸುತ್ತಮುತ್ತ ಆಲಿಕಲ್ಲು ಮಳೆ ಅಬ್ಬರ: ರೈತರಲ್ಲಿ ಭಾರಿ ಆತಂಕ ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
GV NEWS
ಮುಧೋಳ ಸುತ್ತಮುತ್ತ ಆಲಿಕಲ್ಲು ಮಳೆ ಅಬ್ಬರ: ರೈತರಲ್ಲಿ ಭಾರಿ ಆತಂಕ ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
More news from ಕರ್ನಾಟಕ and nearby areas
- ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ1
- Post by @april14news1
- ಬೆವನೂರ ಗ್ರಾಮದಲ್ಲಿ ರವಿವಾರ ಗಾಳಿ ಮಳೆಗೆ ನೆಲಕ್ಕುರುಳಿದ 50 ಕ್ಕೂ ಅಧಿಕ ಲೈಟ್ ಕಂಬಗಳು . ಅಥಣಿ :ಬೆವನೂರ ಗ್ರಾಮದಲ್ಲಿ ರವಿವಾರ ಗಾಳಿ ಮಳೆಗೆ 50 ಕ್ಕೂ ಅಧಿಕ ಲೈಟ್ ಕಂಬಗಳು ನೆಲಕ್ಕುರುಳಿವೆ. ಅಕಸ್ಮಾತ್ ಅಷ್ಟೇ ಅಲ್ಲ ಸುದೈವ ವಶಾತ ಜೀವಹಾನಿ ಸಂಭವಿಸಿಲ್ಲ.1
- "ಬಿಳಗಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ವಿಚಾರ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಇಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭರತೇಶ್ ಪಾಟೀಲ್ ಅವರ ನೇಮಕಾತಿ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ." "ಸುಮಾರು ಆರು ತಿಂಗಳ ಹಿಂದೆ ಮುಂಡರಗಿ ಎಂಬ ಅಧಿಕಾರಿ ಬಿಳಗಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ವರ್ಗಾವಣೆ ನಡೆದಿದ್ದು, ಅವರ ಜಾಗಕ್ಕೆ ಭರತೇಶ್ ಪಾಟೀಲ್ ಅವರು ಬಂದಿದ್ದಾರೆ ಎನ್ನಲಾಗಿದೆ." "ಆದರೆ, ಈ ವರ್ಗಾವಣೆ ಅಧಿಕೃತವಾಗಿದೆಯೇ ಅಥವಾ ಕೇವಲ ಮೇಲ್ನೋಟಕ್ಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಕಾರಣ ಏನೆಂದರೆ, ಕಚೇರಿಯಲ್ಲಿರುವ ಅಧಿಕಾರಿಗಳ ವಿವರವನ್ನು ಸೂಚಿಸುವ ಫಲಕದಲ್ಲಿ ಇಂದಿಗೂ ಭರತೇಶ್ ಪಾಟೀಲ್ ಅವರ ಹೆಸರು ಕಾಣಿಸುತ್ತಿಲ್ಲ." "ಒಬ್ಬ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗುವ ದಿನಾಂಕದಿಂದ ಹಿಡಿದು ವರ್ಗಾವಣೆಗೊಂಡ ದಿನಾಂಕದವರೆಗೆ ಎಲ್ಲಾ ವಿವರಗಳನ್ನು ದಾಖಲಿಸುವ ಈ ಫಲಕದಲ್ಲಿ ಅವರ ಹೆಸರು ಇಲ್ಲದಿರುವುದು ಅನುಮಾನಾಸ್ಪದವಾಗಿದೆ." "ಆರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರೆ, ಹೆಸರು ಫಲಕದಲ್ಲಿ ಇರಬೇಕು. ಇದು ಯಾಕೆ ಇಲ್ಲ ಅನ್ನೋದು ಪ್ರಶ್ನೆ." "ಭರತೇಶ್ ಪಾಟೀಲ್ ಅವರ ನೇಮಕಾತಿ ಮತ್ತು ವರ್ಗಾವಣೆ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ." "ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಚಿಕ್ಕೋಡಿ : ಬಿರುಗಾಳಿಯಿಂದ ರಸ್ತೆ ಮೇಲೆ ಬಿದ್ದ ಮರ ಮತ್ತು ಲೈಟ್ ಕಂಬ ಕುಸಿತ,ಚಿಕ್ಕೋಡಿ ಟು ಜೋಡಕುರಳಿ ರಸ್ತೆ ಬಂದ, ಸ್ಥಳಕೆ ಭೇಟೆ ನೀಡಿದ ಹೆಸ್ಕಾಂ ಸಿಬ್ಬಂದಿ2
- ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.1
- ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು1
- 'ಶ್ರಮಿಕ ವಸತಿ ಶಾಲೆ'ಯ ನಿರ್ಮಾಣಕ್ಕೆ ಅಥಣಿ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ. ಅಥಣಿ : ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಅಥಣಿ ತಾಲ್ಲೂಕಿನಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ 'ಶ್ರಮಿಕ ವಸತಿ ಶಾಲೆ'ಯ ನಿರ್ಮಾಣಕ್ಕೆ ಮಾಜಿ ಉಪಮುಖ್ಯ ಮಂತ್ರಿಗಳು ಹಾಗೂ ಅಥಣಿ ಶಾಸಕರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಭೂಮಿ ಪೂಜೆ ನೆರವೇರಿಸಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಅಥಣಿಯ ಚಿಕ್ಕಟ್ಟಿ ಗ್ರಾಮದ ಸತ್ತಿ ರಸ್ತೆ ಬಳಿ ನಿರ್ಮಿಸಲಾಗುತ್ತಿರುವ 'ಶ್ರಮಿಕ ವಸತಿ ಶಾಲೆ'ಗೆ ಭೂಮಿಪೂಜೆ ನೆರವೇರಿಸಿದರು. ನಮ್ಮ ತಾಲೂಕಿನಲ್ಲಿ ಇರುವ ಏಳು ಸಾವಿರ ಕಾರ್ಮಿಕರ ಕಾರ್ಮಿಕ ವರ್ಗದ ಮಕ್ಕಳು ಆರ್ಥಿಕ ಸಂಕಷ್ಟದಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶ್ರಮಿಕ ವಸತಿ ಶಾಲೆಯನ್ನು ಅಥಣಿಯಲ್ಲಿ ಸ್ಥಾಪಿಸಲಾಗುತ್ತಿದೆ. ಅಥಣಿ ತಾಲ್ಲೂಕಿನಲ್ಲಿ 36.25 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಶಾಲೆ 6ರಿಂದ 12 ನೇ ತರಗತಿ ಓದುವ ಈ ಭಾಗದ ನೂರಾರು ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲಿದೆ.ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಈ ಶಾಲೆಯ ಫಲಾನುಭವಿಗಳಾಗಿದ್ದು ಬಡ ದುರ್ಬಲ ವರ್ಗದ ಮಕ್ಕಳ ಪಾಲಿಗೆ ಶೈಕ್ಷಣಿಕವಾಗಿ ಕಾರ್ಮಿಕರು ಇದರ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಸವದಿ ಹೇಳಿದರು. ಈ ಸಂದರ್ಭದಲ್ಲಿ ಶೆಟ್ಟರ್ ಮಠದ ಪರಮಪೂಜ್ಯ ಮರುಳಸಿದ್ದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು ,ಪುರಸಭೆ ಉಪಾಧ್ಯಕ್ಷರಾದ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಡಿ ಜಿ ನಾಗೇಶ ಉಪನಿರ್ದೇಶಕರು,ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ ಜೋಗುರ , ಅಥಣಿ ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಭುವನೇಶ್ವರಿ ಢಾಲೇ,ಪ್ರಕಾಶ ಮಹಾಜನ, ಪುರಸಭೆ ಚುನಾಯಿತ ಹಾಗೂ ನಾಮನಿರ್ದೆಶೀತ ಸದಸ್ಯರು ,ಮುಖಂಡರು ಉಪಸ್ಥಿತರಿದ್ದರು.3