logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ. ಶ್ರೀ ಅ. ಪು. ನಾರಾಯಣಪ್ಪ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರ ತೀವ್ರ ಸಂತಾಪ. ಶಿವಮೊಗ್ಗ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡರು, ಸೇವಾಸಾಗರ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಶ್ರೀರಾಮ ಮಂದಿರ ಹೋರಾಟದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಶ್ರೀ ಅ. ಪು. ನಾರಾಯಣಪ್ಪ ಅವರ ನಿಧನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ನಾರಾಯಣಪ್ಪ ಅವರು ತಮ್ಮ ಇಡೀ ಸಾರ್ವಜನಿಕ ಜೀವನವನ್ನು ರಾಷ್ಟ್ರಭಕ್ತಿ, ಭಾರತೀಯ ಸಂಸ್ಕೃತಿ, ಸಾಮಾಜಿಕ ಸೇವೆ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಉನ್ನತ ಧ್ಯೇಯಗಳಿಗೆ ಸಮರ್ಪಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಸಂಘಟನಾ ಶಿಸ್ತು, ನಿಷ್ಠೆ ಮತ್ತು ಸೇವಾ ಮನೋಭಾವದ ಮೂಲಕ ಸಮಾಜದಲ್ಲಿ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸಲು ಮಹತ್ವದ ಕೊಡುಗೆ ನೀಡಿದ್ದರು ಎಂದು ಅವರು ಸ್ಮರಿಸಿದ್ದಾರೆ. ಸೇವಾಸಾಗರ ಟ್ರಸ್ಟ್ ನ ಅಧ್ಯಕ್ಷರಾಗಿ ಅವರು ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರವಾಗಿದೆ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿರದೆ, ಉತ್ತಮ ವ್ಯಕ್ತಿತ್ವ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಮಾಧ್ಯಮವಾಗಬೇಕು ಎಂಬ ಮೌಲ್ಯಾಧಾರಿತ ಚಿಂತನೆಯೊಂದಿಗೆ ಸಂಸ್ಥೆಯ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಸಂಸ್ಕಾರ, ನೈತಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುವಲ್ಲಿ ಅವರು ವಿಶೇಷ ಆಸಕ್ತಿ ಹೊಂದಿದ್ದರು ಎಂದರು. ಶ್ರೀ ಅ.ಪು. ನಾರಾಯಣಪ್ಪ ಅವರ ಅಗಲಿಕೆಯಿಂದ ಸಂಘಟನೆ, ಶಿಕ್ಷಣ, ಸಂಸ್ಕೃತಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. “ಸೇವೆ, ಸಂಸ್ಕಾರ ಮತ್ತು ರಾಷ್ಟ್ರಭಕ್ತಿ” ಎಂಬ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಪ್ರತಿಬಿಂಬಿಸಿದ ಅವರ ಆದರ್ಶ ಜೀವನ ಮತ್ತು ಸೇವಾ ಕೊಡುಗೆ ಮುಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಸಂತಾಪ ಸೂಚಿಸಿದರು.

14 hrs ago
user_Press Narashimha swamy SN
Press Narashimha swamy SN
Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
14 hrs ago
137c4632-7d7a-49a6-8c38-d76b5c3595b9

ಶಿವಮೊಗ್ಗ. ಶ್ರೀ ಅ. ಪು. ನಾರಾಯಣಪ್ಪ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರ ತೀವ್ರ ಸಂತಾಪ. ಶಿವಮೊಗ್ಗ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡರು, ಸೇವಾಸಾಗರ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಶ್ರೀರಾಮ ಮಂದಿರ ಹೋರಾಟದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಶ್ರೀ ಅ. ಪು. ನಾರಾಯಣಪ್ಪ ಅವರ ನಿಧನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ನಾರಾಯಣಪ್ಪ ಅವರು ತಮ್ಮ ಇಡೀ ಸಾರ್ವಜನಿಕ ಜೀವನವನ್ನು ರಾಷ್ಟ್ರಭಕ್ತಿ, ಭಾರತೀಯ ಸಂಸ್ಕೃತಿ, ಸಾಮಾಜಿಕ ಸೇವೆ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಉನ್ನತ ಧ್ಯೇಯಗಳಿಗೆ ಸಮರ್ಪಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಸಂಘಟನಾ ಶಿಸ್ತು, ನಿಷ್ಠೆ ಮತ್ತು ಸೇವಾ ಮನೋಭಾವದ ಮೂಲಕ ಸಮಾಜದಲ್ಲಿ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸಲು ಮಹತ್ವದ ಕೊಡುಗೆ ನೀಡಿದ್ದರು ಎಂದು ಅವರು ಸ್ಮರಿಸಿದ್ದಾರೆ. ಸೇವಾಸಾಗರ ಟ್ರಸ್ಟ್ ನ ಅಧ್ಯಕ್ಷರಾಗಿ ಅವರು ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ

cef9ddc7-6ae1-4d1a-9dfe-7b1a3831a684

ನೀಡಿದ ಸೇವೆ ಅಪಾರವಾಗಿದೆ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿರದೆ, ಉತ್ತಮ ವ್ಯಕ್ತಿತ್ವ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಮಾಧ್ಯಮವಾಗಬೇಕು ಎಂಬ ಮೌಲ್ಯಾಧಾರಿತ ಚಿಂತನೆಯೊಂದಿಗೆ ಸಂಸ್ಥೆಯ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಸಂಸ್ಕಾರ, ನೈತಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುವಲ್ಲಿ ಅವರು ವಿಶೇಷ ಆಸಕ್ತಿ ಹೊಂದಿದ್ದರು ಎಂದರು. ಶ್ರೀ ಅ.ಪು. ನಾರಾಯಣಪ್ಪ ಅವರ ಅಗಲಿಕೆಯಿಂದ ಸಂಘಟನೆ, ಶಿಕ್ಷಣ, ಸಂಸ್ಕೃತಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. “ಸೇವೆ, ಸಂಸ್ಕಾರ ಮತ್ತು ರಾಷ್ಟ್ರಭಕ್ತಿ” ಎಂಬ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಪ್ರತಿಬಿಂಬಿಸಿದ ಅವರ ಆದರ್ಶ ಜೀವನ ಮತ್ತು ಸೇವಾ ಕೊಡುಗೆ ಮುಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಸಂತಾಪ ಸೂಚಿಸಿದರು.

More news from ಕರ್ನಾಟಕ and nearby areas
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    6 hrs ago
  • ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    1
    ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    20 hrs ago
  • ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    1
    ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ  ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ  ಆಸ್ಪತ್ರೆ ಎದುರು ಪ್ರತಿಭಟನೆ
ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು.
ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    15 min ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು
ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
  • ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು. ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.
    4
    ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು.
ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 min ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    9 hrs ago
  • ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    1
    ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ  12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ
ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.