Shuru
Apke Nagar Ki App…
ಮೈಸೂರು ದಸರಾ ವೈಭವದ ಮಾತು .… ಮಹಾರಾಜರಿಗೆ ಪೊಲೀಸ್ ವ್ಯಾನ್ ? ! ಒಂದು ಕಡೆ ಮೈಸೂರು ದಸರಾಗೆ “ಅರಮನೆ ವೈಭವ” ಎಂದು ಪೋಸ್ಟರ್ ಹಾಕಿ ಪ್ರಚಾರ ಮಾಡಲಾಗುತ್ತದೆ. ಇನ್ನೊಂದು ಕಡೆ ಅದೇ ಮೈಸೂರು ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪೊಲೀಸ್ ವ್ಯಾನ್‌ನಲ್ಲಿ ಕೂರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಸರಾ ವೈಭವವನ್ನು ಸಾರುವ ಸರ್ಕಾರವೇ, ಅರಮನೆಯ ಮಹಾರಾಜರ ಘನತೆಗೆ ಗೌರವ ನೀಡುತ್ತಿದೆಯೇ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ — ಮೈಸೂರು ಮತ್ತು ಕರ್ನಾಟಕದ ರಾಜಪರಂಪರೆ, ಸಂಸ್ಕೃತಿ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ತಂದ ಘಟನೆ ಎಂಬ ಭಾವನೆ ಜನರಲ್ಲಿ ಮೂಡಿದೆ. ಅರಮನೆಯ ವೈಭವವನ್ನು ಪೋಸ್ಟರ್‌ನಲ್ಲಿ ಮಾತ್ರವಲ್ಲ, ನಡೆ-ನುಡಿಯಲ್ಲೂ ಗೌರವಿಸಬೇಕು. ರಾಜಕೀಯಕ್ಕಿಂತ ಮೈಸೂರು–ಕರ್ನಾಟಕದ ಗೌರವವೇ ಮುಖ್ಯ!
R News Kannada
ಮೈಸೂರು ದಸರಾ ವೈಭವದ ಮಾತು .… ಮಹಾರಾಜರಿಗೆ ಪೊಲೀಸ್ ವ್ಯಾನ್ ? ! ಒಂದು ಕಡೆ ಮೈಸೂರು ದಸರಾಗೆ “ಅರಮನೆ ವೈಭವ” ಎಂದು ಪೋಸ್ಟರ್ ಹಾಕಿ ಪ್ರಚಾರ ಮಾಡಲಾಗುತ್ತದೆ. ಇನ್ನೊಂದು ಕಡೆ ಅದೇ ಮೈಸೂರು ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪೊಲೀಸ್ ವ್ಯಾನ್‌ನಲ್ಲಿ ಕೂರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಸರಾ ವೈಭವವನ್ನು ಸಾರುವ ಸರ್ಕಾರವೇ, ಅರಮನೆಯ ಮಹಾರಾಜರ ಘನತೆಗೆ ಗೌರವ ನೀಡುತ್ತಿದೆಯೇ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ — ಮೈಸೂರು ಮತ್ತು ಕರ್ನಾಟಕದ ರಾಜಪರಂಪರೆ, ಸಂಸ್ಕೃತಿ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ತಂದ ಘಟನೆ ಎಂಬ ಭಾವನೆ ಜನರಲ್ಲಿ ಮೂಡಿದೆ. ಅರಮನೆಯ ವೈಭವವನ್ನು ಪೋಸ್ಟರ್‌ನಲ್ಲಿ ಮಾತ್ರವಲ್ಲ, ನಡೆ-ನುಡಿಯಲ್ಲೂ ಗೌರವಿಸಬೇಕು. ರಾಜಕೀಯಕ್ಕಿಂತ ಮೈಸೂರು–ಕರ್ನಾಟಕದ ಗೌರವವೇ ಮುಖ್ಯ!
More news from ಕರ್ನಾಟಕ and nearby areas
- ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2
- ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ1
- ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.1