ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯರಿದ್ದು, ಅವರ ಅಹವಾಲುಗಳಿಗೆ ಸ್ಪಂದಿಸಬೇಕು : ಜಿಲ್ಲಾಧಿಕಾರಿ ಸ್ನೇಹಲ್ ಆರ್. ನವಲಗುಂದ: ಗ್ರಾಮ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಸರಕಾರಿ ಅಧಿಕಾರಿ, ನೌಕರರು ಕ್ಷೇತ್ರ ಭೇಟಿ ಹೊರತುಪಡಿಸಿ, ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯರಿದ್ದು, ಅವರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ನಿರ್ದೇಶಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಹಂತದಲ್ಲಿ ಸಾರ್ವಜನಿಕರ ದೂರು, ಮನವಿಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮುಂದಿನ ಕಚೇರಿಗೆ ರವಾನಿಸಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ಕಿರಿಕಿರಿ ಆಗದಂತೆ ಸಂವೇದನಾಶೀಲರಾಗಿ ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು. ಇನ್ನೂ ನಗರದ ಪ್ರಮುಖ ರಸ್ತೆಯಲ್ಲಿ ಒತ್ತುವರಿ ಮಾಡಿ, ಮನೆಗಳ ನಿರ್ಮಾಣವಾಗಿರುವ ಕುರಿತು ದೂರುಗಳು ಬಂದಿದ್ದು, ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿ, ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿ ಸುರಕ್ಷತೆ ಖಚಿತಪಡಿಸಬೇಕು. ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಅಲ್ಲದೇ ಅನಧಿಕೃತವಾಗಿ ಮಧ್ಯದಂಗಡಿಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಾರ್ವಜನಿಕ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ನಿಗಾವಹಿಸಬೇಕು ಹಾಗೂ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿಡಲು ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯರಿದ್ದು, ಅವರ ಅಹವಾಲುಗಳಿಗೆ ಸ್ಪಂದಿಸಬೇಕು : ಜಿಲ್ಲಾಧಿಕಾರಿ ಸ್ನೇಹಲ್ ಆರ್. ನವಲಗುಂದ: ಗ್ರಾಮ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಸರಕಾರಿ ಅಧಿಕಾರಿ, ನೌಕರರು ಕ್ಷೇತ್ರ ಭೇಟಿ ಹೊರತುಪಡಿಸಿ, ಕಚೇರಿ ಸಮಯದಲ್ಲಿ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯರಿದ್ದು, ಅವರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ನಿರ್ದೇಶಿಸಿದರು. ಪಟ್ಟಣದ
ತಹಶೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಹಂತದಲ್ಲಿ ಸಾರ್ವಜನಿಕರ ದೂರು, ಮನವಿಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮುಂದಿನ ಕಚೇರಿಗೆ ರವಾನಿಸಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ಕಿರಿಕಿರಿ ಆಗದಂತೆ ಸಂವೇದನಾಶೀಲರಾಗಿ ತಮ್ಮ ತಮ್ಮ ಕರ್ತವ್ಯಗಳನ್ನು
ನಿರ್ವಹಿಸಬೇಕು ಎಂದು ತಿಳಿಸಿದರು. ಇನ್ನೂ ನಗರದ ಪ್ರಮುಖ ರಸ್ತೆಯಲ್ಲಿ ಒತ್ತುವರಿ ಮಾಡಿ, ಮನೆಗಳ ನಿರ್ಮಾಣವಾಗಿರುವ ಕುರಿತು ದೂರುಗಳು ಬಂದಿದ್ದು, ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿ, ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿ
ಸುರಕ್ಷತೆ ಖಚಿತಪಡಿಸಬೇಕು. ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಅಲ್ಲದೇ ಅನಧಿಕೃತವಾಗಿ ಮಧ್ಯದಂಗಡಿಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಾರ್ವಜನಿಕ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ನಿಗಾವಹಿಸಬೇಕು ಹಾಗೂ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿಡಲು ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ1
- ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ. ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ. " ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........1
- ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,4
- ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.1
- ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1