ಕೆಲಸದಿಂದ ಜನಮೆಚ್ಚುಗೆ ಪಡೆದ ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ ಚಿಂಚೋಳಿ: ಸಾರ್ವಜನಿಕ ಸೇವೆಯಲ್ಲಿ ತಮ್ಮ ನಿಷ್ಠೆ, ಸರಳತೆ ಹಾಗೂ ಮೃದು ಸ್ವಭಾವದ ಮೂಲಕ ಜನರ ಮೆಚ್ಚುಗೆ ಪಡೆದ ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ಅವರು ಕಮಲಾಪುರ ತಾಲೂಕಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗ್ರೇಡ್-1 ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ವೆಂಕಟೇಶ ದುಗ್ಗನ್ ಅವರು ಸುಮಾರು 25 ವರ್ಷಗಳ ಕಾಲ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸರ್ಕಾರಿ ಸೇವೆ ಒದಗಿಸಿದ್ದಾರೆ ಎಂದು ಪ್ರಶಂಸಿಸಿದರು. “ಕಂದಾಯ ಇಲಾಖೆಯಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಅಚ್ಚುಕಟ್ಟಾಗಿ ಹಾಗೂ ಶಾಂತ ಸ್ವಭಾವದಿಂದ ನಿರ್ವಹಿಸಿ ಇಲಾಖೆಯ ಮೆಚ್ಚುಗೆಗೆ ಪಾತ್ರರಾಗಿದ್ದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ, ಸಹೃದಯತೆ ಮತ್ತು ಕರ್ತವ್ಯನಿಷ್ಠೆ ಅವರ ವ್ಯಕ್ತಿತ್ವದ ವಿಶೇಷತೆಯಾಗಿತ್ತು. ಇಂತಹ ಒಬ್ಬ ಉತ್ತಮ ಅಧಿಕಾರಿಯ ವರ್ಗಾವಣೆ ಇಲಾಖೆಗೆ ಹಾಗೂ ತಾಲೂಕಿನ ಜನತೆಗೆ ಬೇಸರ ತಂದಿದೆ” ಎಂದು ಅವರು ಹೇಳಿದರು. ವೆಂಕಟೇಶ ದುಗ್ಗನ್ ಅವರ ಸೇವಾ ಮನೋಭಾವ, ಸರಳ ವ್ಯಕ್ತಿತ್ವ ಹಾಗೂ ಜನಸ್ನೇಹಿ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ. ಅವರು ಮುಂದಿನ ಸೇವಾ ಕ್ಷೇತ್ರದಲ್ಲಿಯೂ ಇದೇ ರೀತಿಯ ಉತ್ತಮ ಕಾರ್ಯನಿರ್ವಹಣೆ ಮೂಲಕ ಇನ್ನಷ್ಟು ಜನರ ಪ್ರೀತಿ ಮತ್ತು ಗೌರವ ಗಳಿಸಲಿ ಎಂದು ಶುಭ ಹಾರೈಸಿದರು. ಬಳಿಕ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ವೆಂಕಟೇಶ ದುಗ್ಗನ್ ಅವರನ್ನು ಸನ್ಮಾನಿಸಿ, ಭಾರವಾದ ಮನಸ್ಸಿನಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ಸಮಾರಂಭದಲ್ಲಿ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕೆಲಸದಿಂದ ಜನಮೆಚ್ಚುಗೆ ಪಡೆದ ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ ಚಿಂಚೋಳಿ: ಸಾರ್ವಜನಿಕ ಸೇವೆಯಲ್ಲಿ ತಮ್ಮ ನಿಷ್ಠೆ, ಸರಳತೆ ಹಾಗೂ ಮೃದು ಸ್ವಭಾವದ ಮೂಲಕ ಜನರ ಮೆಚ್ಚುಗೆ ಪಡೆದ ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ಅವರು ಕಮಲಾಪುರ ತಾಲೂಕಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗ್ರೇಡ್-1 ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ವೆಂಕಟೇಶ ದುಗ್ಗನ್ ಅವರು ಸುಮಾರು 25 ವರ್ಷಗಳ ಕಾಲ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸರ್ಕಾರಿ ಸೇವೆ ಒದಗಿಸಿದ್ದಾರೆ ಎಂದು ಪ್ರಶಂಸಿಸಿದರು. “ಕಂದಾಯ ಇಲಾಖೆಯಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಅಚ್ಚುಕಟ್ಟಾಗಿ ಹಾಗೂ ಶಾಂತ ಸ್ವಭಾವದಿಂದ ನಿರ್ವಹಿಸಿ ಇಲಾಖೆಯ ಮೆಚ್ಚುಗೆಗೆ
ಪಾತ್ರರಾಗಿದ್ದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ, ಸಹೃದಯತೆ ಮತ್ತು ಕರ್ತವ್ಯನಿಷ್ಠೆ ಅವರ ವ್ಯಕ್ತಿತ್ವದ ವಿಶೇಷತೆಯಾಗಿತ್ತು. ಇಂತಹ ಒಬ್ಬ ಉತ್ತಮ ಅಧಿಕಾರಿಯ ವರ್ಗಾವಣೆ ಇಲಾಖೆಗೆ ಹಾಗೂ ತಾಲೂಕಿನ ಜನತೆಗೆ ಬೇಸರ ತಂದಿದೆ” ಎಂದು ಅವರು ಹೇಳಿದರು. ವೆಂಕಟೇಶ ದುಗ್ಗನ್ ಅವರ ಸೇವಾ ಮನೋಭಾವ, ಸರಳ ವ್ಯಕ್ತಿತ್ವ ಹಾಗೂ ಜನಸ್ನೇಹಿ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ. ಅವರು ಮುಂದಿನ ಸೇವಾ ಕ್ಷೇತ್ರದಲ್ಲಿಯೂ ಇದೇ ರೀತಿಯ ಉತ್ತಮ ಕಾರ್ಯನಿರ್ವಹಣೆ ಮೂಲಕ ಇನ್ನಷ್ಟು ಜನರ ಪ್ರೀತಿ ಮತ್ತು ಗೌರವ ಗಳಿಸಲಿ ಎಂದು ಶುಭ ಹಾರೈಸಿದರು. ಬಳಿಕ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ವೆಂಕಟೇಶ ದುಗ್ಗನ್ ಅವರನ್ನು ಸನ್ಮಾನಿಸಿ, ಭಾರವಾದ ಮನಸ್ಸಿನಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ಸಮಾರಂಭದಲ್ಲಿ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
- ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.2
- ಹುಮನಾಬಾದ ಪಟ್ಟಣದಲ್ಲಿ ಈದ್ ಮಿಲಾದ್ ಸಡಗರ ಸಂಭ್ರಮದಿಂದ ಆಚರಣೆ ನಸೀಮುದ್ದಿನ್ ಪಟೇಲ್ ಸೇರಿ ಮುಸ್ಲಿಂ ಮುಖಂಡರು ಭಾಗಿ1
- ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ ಬೀದರ್: ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ1
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಕುಂಬಾರ ರವರ 46ನೇ ಜನ್ಮದಿನ ಅದ್ದೂರಿ ಆಚರಣೆ1
- ಬಸ್-ಟ್ರಕ್ ಡಿಕ್ಕಿ: ಆರು ಮಂದಿ ಸಾವು! ತೆಲಂಗಾಣದ ಸೂರ್ಯಪೇಟೆಯಲ್ಲಿ ಬೆಳ್ಳಂಬೆಳಗ್ಗೆ 5:20ರ ಸುಮಾರಿಗೆ ಖಾಸಗಿ ಸಾರಿಗೆ ಬಸ್-ಟ್ರಕ್ ನಡುವೆ ಡಿಕ್ಕಿಯಾಗಿ 6 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ ಒಟ್ಟು 43 ಪ್ರಯಾಣಿಕರಿದ್ದರು. ಪೊಲೀಸರ ಪ್ರಕಾರ, ಬಸ್ ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿತ್ತು. ಸೂರ್ಯಪೇಟೆಯ ದುರ್ಗಾಪುರಂ ಸ್ಟೇಜ್ ಬಳಿ ಅಪಘಾತ ಸಂಭವಿಸಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಸರಣಿ ಅಪಘಾತ: ಬಸ್-ಟ್ರಕ್ ಡಿಕ್ಕಿಯಾಗಿ 6 ಬಲಿ1