logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಳಕಲ್‌ದ ಮಹಾಂತೇಶ ಅಂಗಡಿ ನಿವಾಸದಲ್ಲಿ ಪೂಜ್ಯ ಶ್ರೀ ರುದ್ರಾರಾಧ್ಯ ಶ್ರೀಗಳಿಂದ ವಿಶೇಷ ಪೂಜೆ ಪವಿತ್ರ ಶ್ರಾವಣ ಮಾಸದ ನಿಮಿತ್ತ ಇಳಕಲ್ಲ ನಗರದ ಭಕ್ತರಾದ ಮಹಾಂತೇಶ ಅಂಗಡಿ ಅವರ ನಿವಾಸದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀಗುರುಗಿರಿಸಿದ್ದೇಶ್ವರ ನಿಜೈಕ್ಯ ಕ್ಷೇತ್ರ ಶ್ರೀಮಠದ ಪರಮಪೂಜ್ಯ ವೇದಮೂರ್ತಿ ರುದ್ರಾರಾಧ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾ-ಭಕ್ತಿಯಿಂದ ಮಂಗಳವಾರ ನೆರವೇರಿತು. ಶ್ರೀಗಳು ಇಷ್ಟಲಿಂಗ ಪೂಜೆ ಹಾಗೂ ಪೂಜಾ ವಿಧಿವಿಧಾನ ಹಾಗೂ ೧೦೮ ಜಂಗಮರಾಧನೆ ಹಾಗೂ ಪ್ರಸಾದ ಸೇವೆ ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿ ಹರಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಾಂತೇಶ ಅಂಗಡಿ, ಅವರ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ನಗರದ ಪ್ರಮುಖ ಗಣ್ಯರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು, ತೀರ್ಥ-ಪ್ರಸಾದ ಸ್ವೀಕರಿಸಿದರು.

18 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
18 hrs ago

ಇಳಕಲ್‌ದ ಮಹಾಂತೇಶ ಅಂಗಡಿ ನಿವಾಸದಲ್ಲಿ ಪೂಜ್ಯ ಶ್ರೀ ರುದ್ರಾರಾಧ್ಯ ಶ್ರೀಗಳಿಂದ ವಿಶೇಷ ಪೂಜೆ ಪವಿತ್ರ ಶ್ರಾವಣ ಮಾಸದ ನಿಮಿತ್ತ ಇಳಕಲ್ಲ ನಗರದ ಭಕ್ತರಾದ ಮಹಾಂತೇಶ ಅಂಗಡಿ ಅವರ ನಿವಾಸದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀಗುರುಗಿರಿಸಿದ್ದೇಶ್ವರ ನಿಜೈಕ್ಯ ಕ್ಷೇತ್ರ ಶ್ರೀಮಠದ ಪರಮಪೂಜ್ಯ ವೇದಮೂರ್ತಿ ರುದ್ರಾರಾಧ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾ-ಭಕ್ತಿಯಿಂದ ಮಂಗಳವಾರ ನೆರವೇರಿತು. ಶ್ರೀಗಳು ಇಷ್ಟಲಿಂಗ ಪೂಜೆ ಹಾಗೂ ಪೂಜಾ ವಿಧಿವಿಧಾನ ಹಾಗೂ ೧೦೮ ಜಂಗಮರಾಧನೆ ಹಾಗೂ ಪ್ರಸಾದ ಸೇವೆ ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿ ಹರಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಾಂತೇಶ ಅಂಗಡಿ, ಅವರ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ನಗರದ ಪ್ರಮುಖ ಗಣ್ಯರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು, ತೀರ್ಥ-ಪ್ರಸಾದ ಸ್ವೀಕರಿಸಿದರು.

More news from ಕರ್ನಾಟಕ and nearby areas
  • ಈದ್ ಮಿಲಾದ ಹಬ್ಬ ; ನಾವೆಲ್ಲರೂ ಒಂದೇ ಎಂದು ಹೇಳಿದ ಸವಿತಾ ಅಶೋಕ ಚಲವಾದಿ ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿದರು. ದಾರಿಯಲ್ಲಿ ತಂಪು ಪಾನೀಯವನ್ನು ವಿತರಿಸಿ ಮಾತನಾಡಿದ ಸಮಾಜ ಸೇವಕಿ ಸವಿತಾ ಅಶೋಕ್ ಚಲವಾದಿ ಮಾತನಾಡಿ ಹಿಂದೂ ಮುಸ್ಲಿಂ ಎಂಬ ಬೇಧ ಮಾಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಇದ್ದೇವೆ. ಮುಂದು ಇರುತ್ತೇವೆ ಎಂಬ ಸಂದೇಶವನ್ನು ನೀಡಿದರು.
    1
    ಈದ್ ಮಿಲಾದ ಹಬ್ಬ ;   ನಾವೆಲ್ಲರೂ ಒಂದೇ ಎಂದು ಹೇಳಿದ ಸವಿತಾ ಅಶೋಕ  ಚಲವಾದಿ
ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು  ಮೆರವಣಿಗೆ ನಡೆಸಿದರು. ದಾರಿಯಲ್ಲಿ ತಂಪು ಪಾನೀಯವನ್ನು ವಿತರಿಸಿ ಮಾತನಾಡಿದ ಸಮಾಜ ಸೇವಕಿ ಸವಿತಾ ಅಶೋಕ್ ಚಲವಾದಿ ಮಾತನಾಡಿ ಹಿಂದೂ ಮುಸ್ಲಿಂ ಎಂಬ ಬೇಧ ಮಾಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಇದ್ದೇವೆ. ಮುಂದು ಇರುತ್ತೇವೆ ಎಂಬ ಸಂದೇಶವನ್ನು ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    45 min ago
  • ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    2
    ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ
ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ  ನಡೆಯಿತು.
ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. 
ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು.
ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    2
    ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ
ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ  ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು  ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು.
ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯  ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ   ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ.  ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ  ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು.
ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್,  ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    20 hrs ago
  • ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್‌ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇ‌ನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.
    2
    ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ
ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು.
ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್‌ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು.
ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ,
ಗೋವಿಂದ ರಾಠೋಡ,
ರಫಿಕ್ ಮಕನದಾರ,
ಮೋದಿನಸಾಬ್ ಸದರಿ,
ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇ‌ನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. 
ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    34 min ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    2 hrs ago
  • ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    1
    ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    user_Sharanugouda Patil
    Sharanugouda Patil
    Muddebihal, Vijayapura•
    6 hrs ago
  • ಬಾಗಲಕೋಟೆ ನಗರದಲ್ಲಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲಾಯಿತು.
    1
    ಬಾಗಲಕೋಟೆ ನಗರದಲ್ಲಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲಾಯಿತು.
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ ....... ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಸಂಭ್ರಮದಿಂದ ಈದ್ ಮಿಲಾದ ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭವ್ಯ ಮೆರವಣಿಗೆ ಸಾಗಿತು. ಈ ಸಂದರ್ಭದಲ್ಲಿ ಹಿಂದು ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ತಿಳಿಸಿ, ಭಾವೈಕ್ಯತೆ ಮೆರೆದರು.
    1
    ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ ....... 
ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಸಂಭ್ರಮದಿಂದ ಈದ್ ಮಿಲಾದ ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭವ್ಯ ಮೆರವಣಿಗೆ ಸಾಗಿತು. ಈ ಸಂದರ್ಭದಲ್ಲಿ ಹಿಂದು ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ತಿಳಿಸಿ, ಭಾವೈಕ್ಯತೆ ಮೆರೆದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.