ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ
ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ
ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ
ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಈದ್ ಮಿಲಾದ ಹಬ್ಬ ; ನಾವೆಲ್ಲರೂ ಒಂದೇ ಎಂದು ಹೇಳಿದ ಸವಿತಾ ಅಶೋಕ ಚಲವಾದಿ ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿದರು. ದಾರಿಯಲ್ಲಿ ತಂಪು ಪಾನೀಯವನ್ನು ವಿತರಿಸಿ ಮಾತನಾಡಿದ ಸಮಾಜ ಸೇವಕಿ ಸವಿತಾ ಅಶೋಕ್ ಚಲವಾದಿ ಮಾತನಾಡಿ ಹಿಂದೂ ಮುಸ್ಲಿಂ ಎಂಬ ಬೇಧ ಮಾಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಇದ್ದೇವೆ. ಮುಂದು ಇರುತ್ತೇವೆ ಎಂಬ ಸಂದೇಶವನ್ನು ನೀಡಿದರು.1
- ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು1
- ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.2
- ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು. ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು. ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.4
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ ....... ಈದ್ ಮಿಲಾದ ಹಬ್ಬ ; ಭಾವೈಕ್ಯತೆಗೆ ಸಾಕ್ಷಿ ಇಳಕಲ್ ಜನತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಸಂಭ್ರಮದಿಂದ ಈದ್ ಮಿಲಾದ ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭವ್ಯ ಮೆರವಣಿಗೆ ಸಾಗಿತು. ಈ ಸಂದರ್ಭದಲ್ಲಿ ಹಿಂದು ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ತಿಳಿಸಿ, ಭಾವೈಕ್ಯತೆ ಮೆರೆದರು.1
- ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.2