Shuru
Apke Nagar Ki App…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸರಕಾರಿ ಜೂನಿಯರ್ ಕಾಲೇಜು ಆವರಣದಲ್ಲಿದ್ದ ಬಯಲು ರಂಗ ಮಂದಿರವನ್ನು ಏಕಾಏಕಿ ತೆರವುಗೊಳಿಸಿ, ಅಲ್ಲಿ ಫುಡ್ ಕೋರ್ಟ್ ನಿರ್ಮಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಾಲೇಜು ಆವರಣದಲ್ಲಿ ಮತ್ತೆ ಬಯಲು ರಂಗ ಮಂದಿರವನ್ನು ಮರುನಿರ್ಮಾಣ ಮಾಡಬೇಕು ಹಾಗೂ ಈ ಇಡೀ ಆವರಣವನ್ನು ಶಾಲಾ-ಕಾಲೇಜುಗಳಿಗಾಗಿಯೇ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿ ಸಂಘಟನೆಯು ತಾಲೂಕು ತಹಶೀಲ್ದಾರ್ ಹಾಗೂ ಕಮಿಷನರ್ ಅವರಿಗೆ ಆಗ್ರಹ ಪತ್ರವನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
Shiva Belagavi
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸರಕಾರಿ ಜೂನಿಯರ್ ಕಾಲೇಜು ಆವರಣದಲ್ಲಿದ್ದ ಬಯಲು ರಂಗ ಮಂದಿರವನ್ನು ಏಕಾಏಕಿ ತೆರವುಗೊಳಿಸಿ, ಅಲ್ಲಿ ಫುಡ್ ಕೋರ್ಟ್ ನಿರ್ಮಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಾಲೇಜು ಆವರಣದಲ್ಲಿ ಮತ್ತೆ ಬಯಲು ರಂಗ ಮಂದಿರವನ್ನು ಮರುನಿರ್ಮಾಣ ಮಾಡಬೇಕು ಹಾಗೂ ಈ ಇಡೀ ಆವರಣವನ್ನು ಶಾಲಾ-ಕಾಲೇಜುಗಳಿಗಾಗಿಯೇ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿ ಸಂಘಟನೆಯು ತಾಲೂಕು ತಹಶೀಲ್ದಾರ್ ಹಾಗೂ ಕಮಿಷನರ್ ಅವರಿಗೆ ಆಗ್ರಹ ಪತ್ರವನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
More news from ಕರ್ನಾಟಕ and nearby areas
- ರಾಯಭಾಗ ತಾಲೂಕಿನ ಭಿರಡಿ ಗ್ರಾಮದ ಬಸವ ನಗರದಲ್ಲಿ ಶ್ರೀ ಬಸವರಾಜ್ ಶೇಖರ ಬೊರಗಾಂವೆ ಅವರ ಮಾಲೀಕತ್ವದ “ಮಾಯಕ್ಕಾ ಆಗ್ರೋ ಮಿಲ್” ನೂತನ ಉದ್ಘಾಟನೆ ಹಾಗೂ ಪ್ರಾರಂಭೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಉಪಸ್ಥಿತರಿದ್ದು, ಸದಾಶಿವ ದೇಶಿಂಗೆ ಹಾಗೂ ಭಿರಡಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಚೈತನ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಿದರು. ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮಹಾದೇವ ಮಾರುತಿ ಬೋರಗಾಂವೆ, ವೀರಪಾಕ್ಷಿ ಬೋರಗಾಂವೆ, ರಾಜು ಹಿಪ್ಪರಿಗಿ, ಶೇಖರ ಬೋರಗಾಂವೆ, ಕಲ್ಲು ಅಂಬರಗೆ, ಚಿದಾನಂದ ಸ್ವಾಮಿ ಅಲಕನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.1
- Post by ANUSHKA FOOTWEAR Nagarmunnoli1
- ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.1
- ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.1
- ವಿಜಯಪುರದಲ್ಲಿ ಎಸ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್ ಬೆಂಬಲಿಗರು ಹಾಗೂ ಹಮೀದ್ ಮುಶ್ರಿಫ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.1
- ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.1
- ಬೆಳಗಾವಿ ಜಿಲ್ಲೆಯ ರಾಯಭಾಗ ಕೆರೆಗಳಿಗೆ ಅಧಿಕಾರಿಗಳು ಯಶಸ್ವಿಯಾಗಿ ಜೀವ ತುಂಬಿದ್ದಾರೆ. ತಹಸೀಲ್ದಾರ್ ಹಾಗೂ ಮಹಾವೀರ ಮೋಹತೆ ಅವರ ಮುಂದಾಳತ್ವದಲ್ಲಿ ಈ ಕಾರ್ಯ ಯಶಸ್ವಿಯಾಗಿ ನಡೆದಿದೆ.1
- ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.1