"ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸ್ವಾಗತ–ಬೀಳ್ಕೊಡುಗೆ ಸಮಾರಂಭ" ಕಲ್ಯಾಣ ವಾರ್ತೆ -ಯಾದಗಿರಿ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಾರ್ತಂಡಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2015ರಲ್ಲಿ ಕೇವಲ ಏಳು ವಿದ್ಯಾರ್ಥಿಗಳ ಪ್ರವೇಶದೊಂದಿಗೆ ಆರಂಭವಾದ ಕಾಲೇಜು, ಇದೀಗ 2026ರಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಮೂಲಕ ಉತ್ತಮ ಬೆಳವಣಿಗೆ ಸಾಧಿಸಿದೆ. ಇದಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾನ್ವಿ ಪತ್ರಿಕೆಯ ಸಂಪಾದಕರಾದ ನಾಗರಾಜ್ ಬೀರನೂರು ಅವರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟವಾದ ಗುರಿ ಹೊಂದಿ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಯುವಕರೇ ನಾಳಿನ ದೇಶದ ಭವಿಷ್ಯವಾಗಿದ್ದು, ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಪನ್ಯಾಸಕರಾದ ಬಸವರಾಜ್ ಪೂಜಾರಿ ಅವರು, ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಬೇಕಾದರೆ ನಿರಂತರ ಪರಿಶ್ರಮ, ಶಿಸ್ತು ಹಾಗೂ ಆತ್ಮವಿಶ್ವಾಸ ಅಗತ್ಯ. ವಿದ್ಯಾರ್ಥಿಗಳು ಸೋಲು–ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ತಮ್ಮ ಗುರಿ ಸಾಧನೆಯತ್ತ ನಿರಂತರವಾಗಿ ಸಾಗಬೇಕು ಎಂದು ಕಿವಿಮಾತು ಹೇಳಿದರು. ಇನ್ನೋರ್ವ ಅತಿಥಿಗಳಾದ ಹುಲುಗಪ್ಪ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ಶ್ರೀ ಆನಂದ್ ಕಾಡ್ಲೂರು ಅವರು ಮಾತನಾಡಿ, ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕಂಡು ಸಂತೋಷವಾಗಿದೆ. ವಿದ್ಯಾರ್ಥಿಗಳು ಈ ಕಾಲೇಜಿನ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆಯುವುದರ ಜೊತೆಗೆ, ಶಿಸ್ತು ಮತ್ತು ಸಂಸ್ಕಾರವನ್ನು ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಲ್ಲಿಕಾರ್ಜುನ್ ಹೊಸಮನಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಜೀವನದಲ್ಲಿ ಸರಿಯಾದ ದಾರಿಯನ್ನು ಆಯ್ಕೆ ಮಾಡಿಕೊಂಡು ಶ್ರಮ ಹಾಗೂ ಪ್ರಾಮಾಣಿಕತೆಯಿಂದ ಮುನ್ನಡೆಯುವಂತೆ ಸಲಹೆ ನೀಡಿದರು. ವೇದಿಕೆಯಲ್ಲಿ ಗುರುಪ್ರಸಾದ್ ವೈದ್ಯ, ವಾಣಿಜ್ಯ ವಿಭಾಗದ ಹಿರಿಯರಾದ ಶ್ರೀ ಮಾಳಪ್ಪ, ಮಲ್ಲಿಕಾರ್ಜುನ್ ಮಡ್ಡಿ, ಎಫ್‌ಡಿಎ, ಉಪನ್ಯಾಸಕರಾದ ಶರಣಪ್ಪ, ಸೀಮಿಯನ, ಕುಮಾರಿ ಲಕ್ಷ್ಮಿ ಮೇಡಂ, ಸವಿತಾ ಮೇಡಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಶರಣಪ್ಪ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಸಮಾರಂಭದಲ್ಲಿ ಕಾಲೇಜಿನ ಪ್ರಥಮ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಸಮಾರಂಭವು ಅರ್ಥಪೂರ್ಣವಾಗಿ ನೆರವೇರಿತು.

- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು1
- ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು. ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು. ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.4
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.2
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್2