logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ವಿಪತ್ತು ನಿರ್ವಹಣೆ ಅರಿವು ಅಗತ್ಯ: ಎಡಿಸಿ ಸೈಯಿದಾ ಆಯಿಷಾ* ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಂದಾಲ್ ಅಲ್ಯುಮಿನಿಯಂ ಲಿಮಿಟೆಡ್ ಹಾಗೂ ಗ್ಯೇಲ್ ಗ್ಯಾಸ್ ಲಿಮಿಟೆಡ್ ರವರ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನಡೆದ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡಿದರು. ನೈಸರ್ಗಿಕ ವಿಕೋಪಗಳ, ಅಪಾಯಕಾರಿ ಕಾರ್ಖಾನೆಗಳಲ್ಲಿ ಆಗುವಂತಹ ದುರಂತ, ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆ ಅಧಿಕಾರಿಗಳಿಗೆ ಅರಿವು ಇರಬೇಕು. ಕಾರ್ಖಾನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಸಂದರ್ಭ ಬಂದರೂ ಕೂಡ ಸಮನ್ವಯ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು ಎಂದರು. *ನೈಜ ಘಟನೆಯಂತೆ ರಾಸಾಯನಿಕ ಸೋರಿಕೆ ಮಾಕ್ ಡ್ರಿಲ್* ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನೈಜ ಘಟನೆಯಂತೆ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಏರ್ಪಡಿಸಲಾಗಿತ್ತು. ಅದರಂತೆ ಕಾರ್ಖಾನೆ ಆವರಣದಲ್ಲಿ ಅಣಕು ಡ್ರಿಲ್ ಸಂಕೀರ್ಣ ಕೈಗಾರಿಕಾ ತುರ್ತು ಸನ್ನಿವೇಶವನ್ನು ಅನುಕರಿಸಿತು, ಇದರಲ್ಲಿ ಉತ್ಖನನ ಕೆಲಸದ ಸಮಯದಲ್ಲಿ PNG ಪೈಪ್‌ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಯಿತು, ಇದರ ಪರಿಣಾಮವಾಗಿ ಅನಿಲ ಸೋರಿಕೆ ಮತ್ತು ಸ್ಥಿರ ದಹನದಿಂದಾಗಿ ನಂತರದ ಬೆಂಕಿ ಉಂಟಾಯಿತು. ಅದೇ ಸಮಯದಲ್ಲಿ, LPG ನಿಲ್ದಾಣದಲ್ಲಿ LPG ಟ್ಯಾಂಕರ್ ಇಳಿಸುವ ಕಾರ್ಯಾಚರಣೆಯಲ್ಲಿ ಮೆದುಗೊಳವೆ ಸೋರಿಕೆ ಉಂಟಾಯಿತು, ಇದು ನಂತರ ಉಗಿ ಮೋಡವನ್ನು ರೂಪಿಸಿತು, ಇದು ಆವಿ ಮೋಡ ಸ್ಫೋಟಕ್ಕೆ (VCE) ಕಾರಣವಾಯಿತು. ಪ್ರಥಮ ಚಿಕಿತ್ಸೆ ಅಗತ್ಯವಿರುವ 05 ಜನರು, ಗಂಭೀರ ಸುಟ್ಟ ಗಾಯಗಳೊಂದಿಗೆ 05 ಜನರು ಮತ್ತು 10 ಜನರು ಸಾವನ್ನಪ್ಪಿದ್ದಾರೆ ಎಂದು ಬಂಬಿಸಲಾಗಿದೆ. ತಕ್ಷಣ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಿ ಸುಮಾರು 400 ರಿಂದ 500 ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕಾರ್ಖಾನೆಗಳಲ್ಲಿ ಘಟಿಸುವ ರಾಸಾಯನಿಕ ಸೋರಿಕೆಯಂತಹ ಘಟನೆಯಿಂದ ಕಾರ್ಖಾನೆ ಸಿಬ್ಬಂದಿಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಹಾನಿ ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ, ನಿರ್ವಹಣೆ ಮಾಡುವ ಜ್ಞಾನ ಅಧಿಕಾರಿ, ಸಿಬ್ಬಂದಿಗಳಿಗೆ, ಕಾರ್ಖಾನೆಗಳಿಗೆ ಇರಬೇಕು.ಭೂಪಾಲ್ ಅನಿಲ ದುರಂತ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಖಾನೆಗಳಲ್ಲಿ, ಸಾರ್ವಜನಿಕರಿಗೆ ಅರಿವು ಮಾಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕರಾದ ನರಸಿಂಹ ಮೂರ್ತಿ, ತಿಮ್ಮರಾಜು; ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್‌ನಿಂದ ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ಎಂ. ಸತೇಶ್ ಕುಮಾರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

on 11 March
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•

More news from Hassan and nearby areas
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    1
    135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    user_MUNAWAR PASHA
    MUNAWAR PASHA
    ಪತ್ರಕರ್ತ Mysuru, Karnataka•
    15 hrs ago
  • ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    1
    ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16  ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    6 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    1
    ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    1
    ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
    1
    ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.