Shuru
Apke Nagar Ki App…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಪುಟ್ಟಮ್ಮ ಮತ್ತು ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಅದ್ವಿತಾ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾಳೆ. ನೀರು ಕುಡಿಯಲು ಅಡುಗೆ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ, ಆಕಸ್ಮಿಕವಾಗಿ ಚಾಲನೆಯಲ್ಲಿರುವ ಗ್ರೈಂಡರ್ ಅನ್ನು ಮುಟ್ಟಿದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಆಕೆ ಪ್ರಾಣ ಕಳೆದುಕೊಂಡಿರುವುದನ್ನು ದೃಢಪಡಿಸಿದ್ದಾರೆ. ಈ ದುರ್ಘಟನೆಯಿಂದ ಮೃತಳ ಸಂಬಂಧಿಕರು, ಬಂಧುಬಳಗದವರು ಹಾಗೂ ಸ್ನೇಹಿತರು ತೀವ್ರ ದುಃಖದಲ್ಲಿದ್ದಾರೆ.
Prasad Prasad
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಪುಟ್ಟಮ್ಮ ಮತ್ತು ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಅದ್ವಿತಾ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾಳೆ. ನೀರು ಕುಡಿಯಲು ಅಡುಗೆ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ, ಆಕಸ್ಮಿಕವಾಗಿ ಚಾಲನೆಯಲ್ಲಿರುವ ಗ್ರೈಂಡರ್ ಅನ್ನು ಮುಟ್ಟಿದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಆಕೆ ಪ್ರಾಣ ಕಳೆದುಕೊಂಡಿರುವುದನ್ನು ದೃಢಪಡಿಸಿದ್ದಾರೆ. ಈ ದುರ್ಘಟನೆಯಿಂದ ಮೃತಳ ಸಂಬಂಧಿಕರು, ಬಂಧುಬಳಗದವರು ಹಾಗೂ ಸ್ನೇಹಿತರು ತೀವ್ರ ದುಃಖದಲ್ಲಿದ್ದಾರೆ.
More news from ಕರ್ನಾಟಕ and nearby areas
- ಭಾರತದಲ್ಲಿ ವೈರಲ್ ಆಗಿರುವ ಒಂದು ಸಂದೇಶವು, ವಿದ್ವಾಂಸರು ಮತ್ತು ಉಲೇಮಾಗಳು ಸ್ಥಳೀಯ ರಾಜಕಾರಣಿಗಳ ರಾಜಕೀಯ ನಿರ್ಧಾರಗಳಿಗೆ ಬಲಿಯಾಗಬಾರದು ಎಂದು ಸ್ಪಷ್ಟವಾಗಿ ಮನವಿ ಮಾಡಿದೆ.1
- ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಬಳಿ, ಭೀಮನಹಳ್ಳಿ ಮತ್ತು ಹಿಟ್ಟನಹಳ್ಳಿ ಕೊಪ್ಪಲು ಮಾರ್ಗಮಧ್ಯದಲ್ಲಿ 34 ವರ್ಷದ ಯುವಕ ಮಹೇಶ್ ಅವರನ್ನು ಕಿಡಿಗೇಡಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಿರುಗವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಭೀಮನಹಳ್ಳಿ ಗ್ರಾಮದ ಮರಿಯಯ್ಯ ಮತ್ತು ಪುಟ್ಟ ಚೆನ್ನಮ್ಮ ದಂಪತಿಯ ಪುತ್ರರಾದ ಮಹೇಶ್ ಅವರೇ ಕೊಲೆಯಾದ ಯುವಕ. ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ಇವರನ್ನು ಸ್ನೇಹಿತರು ಕರೆದುಕೊಂಡು ಹೋಗಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಅವರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿಯಲ್ಲಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿಂತ ಸಂದರ್ಭದಲ್ಲಿ ಈ ಪ್ರಕರಣ ಬಹಿರಂಗಗೊಂಡಿದೆ. ಕೊಲೆಯಾದ ಮಹೇಶ್ ಅವರು ಮದುವೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಹೊಂದಿದ್ದರು. ಈ ಘಟನೆ ಕಾಡ್ಗಿಚ್ಚಿನಂತೆ ಹರಡಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಕಿರುಗಾವಲು ಪೊಲೀಸರ ತಂಡ ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಕೊಲೆಯಾದ ಯುವಕನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.1
- ಬೆಂಗಳೂರಿನಲ್ಲಿ ಅಬೀಬಾ ಟೆಂಟ್ ಹೌಸ್ ಬಾಡಿಗೆ ಆಧಾರದ ಮೇಲೆ ಸೇವೆಗಳನ್ನು ಒದಗಿಸುತ್ತಿದೆ. ಸೇವೆಗಳನ್ನು ಪಡೆಯಲು ಆಸಕ್ತಿ ಇರುವವರು 7760976887 ಅಥವಾ 9900619376 ಸಂಖ್ಯೆಗಳಿಗೆ ಸಂಪರ್ಕಿಸಬಹುದು.1
- ರೌಡಿ ಮಂಜುನಾಥ್ ಎಂಬಾತ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಆತ ದಾಂದಲೆ ಸೃಷ್ಟಿಸಿದ್ದು, ಇದರ ಜೊತೆಗೆ ಪೊಲೀಸರಿಗೂ ಅವಾಜ್ ಹಾಕಿರುವ ಸಂಗತಿ ತಿಳಿದುಬಂದಿದೆ.1
- ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.1
- ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದಾರೆ.1
- ಕೋಲಾರ ನಗರದ ವಾರ್ಡ್ ಸಂಖ್ಯೆ 9, ಒಂದು ಕಾಲದಲ್ಲಿ ನಾಯಕರು ರೂಪುಗೊಳ್ಳುತ್ತಿದ್ದ ಪ್ರಾಚೀನ ಮತ್ತು ಪ್ರಮುಖ ಪ್ರದೇಶವಾಗಿತ್ತು. ಆದರೆ, ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಈ ಪ್ರದೇಶವು ಇಂದು ಅತ್ಯಂತ ಕಳಪೆ ಹಾಗೂ ದುರ್ಬಲ ಸ್ಥಿತಿಯಲ್ಲಿದೆ, ಅದರ ದುಃಸ್ಥಿತಿಯು ಗಮನ ಸೆಳೆಯುವಂತಾಗಿದೆ.1
- ದೊಡ್ಡಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 648ರ ಲಕ್ಷ್ಮೀಪುರ ಗೇಟ್ ಬಳಿ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಭಯಾನಕ ಘಟನೆಯ ದೃಶ್ಯಗಳು ಹೆದ್ದಾರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಮೊದಲು ಮುಂದಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ನಂತರ ಲಾರಿ ಮತ್ತೊಂದು ರಸ್ತೆಗೆ ನುಗ್ಗಿ, ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಟ್ರಾಕ್ಟರ್, ಲಾರಿ ಹಾಗೂ ಬೊಲೆರೊ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್‌ನಲ್ಲಿ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.2