logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹಿರೇಬೂದೂರು ಗ್ರಾಮದ ಮಹಮ್ಮದ್ ಸಾಬ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಜೀವ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಆಗ್ರಹಿಸಿದ್ದಾರೆ. ಜೂನ್ 2ರಂದು ಜಾಗದ ವಿವಾದದ ಹಿನ್ನೆಲೆಯಲ್ಲಿ ಮಹಮ್ಮದ್ ಸಾಬ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಸ್ತುತ ಸಂತ್ರಸ್ತ ಕುಟುಂಬವು ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದು, ಪ್ರಕರಣದ ಸಾಕ್ಷಿದಾರರಿಗೂ ಬೆದರಿಕೆಗಳು ಎದುರಾಗುತ್ತಿವೆ ಎಂದು ನರಸಣ್ಣ ನಾಯಕ ಆರೋಪಿಸಿದ್ದಾರೆ. ಜೀವ ಬೆದರಿಕೆ ಹಾಕಿರುವ ಗೋವಿಂದರೆಡ್ಡಿ ವಿರುದ್ಧವೂ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿರುವ ಸಂಘವು, ಯಾವುದೇ ಪ್ರಭಾವ ಅಥವಾ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಅಲ್ಲದೆ, ಸಂತ್ರಸ್ತ ಕುಟುಂಬ ಹಾಗೂ ಸಾಕ್ಷಿದಾರರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 13ರಂದು ದೇವದುರ್ಗ ತಹಶೀಲ್ದಾರರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಧರಣಿಯ ಬಳಿಕ ತಹಶೀಲ್ದಾರರ ಮುಖಾಂತರ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನರಸಣ್ಣ ನಾಯಕ ತಿಳಿಸಿದ್ದು, ಒಂದು ವೇಳೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

1 hr ago
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
1 hr ago

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹಿರೇಬೂದೂರು ಗ್ರಾಮದ ಮಹಮ್ಮದ್ ಸಾಬ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಜೀವ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಆಗ್ರಹಿಸಿದ್ದಾರೆ. ಜೂನ್ 2ರಂದು ಜಾಗದ ವಿವಾದದ ಹಿನ್ನೆಲೆಯಲ್ಲಿ ಮಹಮ್ಮದ್ ಸಾಬ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಸ್ತುತ ಸಂತ್ರಸ್ತ ಕುಟುಂಬವು ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದು, ಪ್ರಕರಣದ ಸಾಕ್ಷಿದಾರರಿಗೂ ಬೆದರಿಕೆಗಳು ಎದುರಾಗುತ್ತಿವೆ ಎಂದು ನರಸಣ್ಣ ನಾಯಕ ಆರೋಪಿಸಿದ್ದಾರೆ. ಜೀವ ಬೆದರಿಕೆ ಹಾಕಿರುವ ಗೋವಿಂದರೆಡ್ಡಿ ವಿರುದ್ಧವೂ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿರುವ ಸಂಘವು, ಯಾವುದೇ ಪ್ರಭಾವ ಅಥವಾ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಅಲ್ಲದೆ, ಸಂತ್ರಸ್ತ ಕುಟುಂಬ ಹಾಗೂ ಸಾಕ್ಷಿದಾರರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 13ರಂದು ದೇವದುರ್ಗ ತಹಶೀಲ್ದಾರರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಧರಣಿಯ ಬಳಿಕ ತಹಶೀಲ್ದಾರರ ಮುಖಾಂತರ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನರಸಣ್ಣ ನಾಯಕ ತಿಳಿಸಿದ್ದು, ಒಂದು ವೇಳೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

More news from ಕರ್ನಾಟಕ and nearby areas
  • ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಸಾಮಾನುಗಳು ಬಂದಿದ್ದರೂ ರೈತರಿಗೆ ಸಿಗುತ್ತಿಲ್ಲ. ಸಾಮಾನುಗಳು ಬಂದಿದ್ದರೂ ಅವುಗಳನ್ನು ತಲುಪಿಸದ ಪೋಸ್ಟ್ ಆಫೀಸ್ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
    1
    ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಸಾಮಾನುಗಳು ಬಂದಿದ್ದರೂ ರೈತರಿಗೆ ಸಿಗುತ್ತಿಲ್ಲ. ಸಾಮಾನುಗಳು ಬಂದಿದ್ದರೂ ಅವುಗಳನ್ನು ತಲುಪಿಸದ ಪೋಸ್ಟ್ ಆಫೀಸ್ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೀಗ ಹಾಕಿದ ಮನೆಗಳು, ಬೈಕ್‌ಗಳು ಹಾಗೂ ಜಾನುವಾರುಗಳ ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಮತ್ತು ಸಾರ್ವಜನಿಕರು ಭಯದ ನಡುವೆಯೇ ಜೀವನ ನಡೆಸುವಂತಾಗಿದೆ. ಕಳ್ಳತನ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ, ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳತನಕ್ಕೆ ಬಂದಿದ್ದ ಒಬ್ಬ ಕಳ್ಳನನ್ನು ಗ್ರಾಮಸ್ಥರು ಧೈರ್ಯದಿಂದ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಇತರ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ಜಾಲವನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕೆಳಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿಗಾಗಿ ಮತ್ತು ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ, ಬನ್ನಪ್ಪ ಶರಣಪ್ಪ, ಗಣೇಶ್, ಸಲಿಂ, ಮಹೇಶ್, ವಿನೋದ, ಮೌನೇಶ, ಅಜಯ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೀಗ ಹಾಕಿದ ಮನೆಗಳು, ಬೈಕ್‌ಗಳು ಹಾಗೂ ಜಾನುವಾರುಗಳ ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಮತ್ತು ಸಾರ್ವಜನಿಕರು ಭಯದ ನಡುವೆಯೇ ಜೀವನ ನಡೆಸುವಂತಾಗಿದೆ. ಕಳ್ಳತನ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ, ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳತನಕ್ಕೆ ಬಂದಿದ್ದ ಒಬ್ಬ ಕಳ್ಳನನ್ನು ಗ್ರಾಮಸ್ಥರು ಧೈರ್ಯದಿಂದ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಇತರ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ಜಾಲವನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕೆಳಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿಗಾಗಿ ಮತ್ತು ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ, ಬನ್ನಪ್ಪ ಶರಣಪ್ಪ, ಗಣೇಶ್, ಸಲಿಂ, ಮಹೇಶ್, ವಿನೋದ, ಮೌನೇಶ, ಅಜಯ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_DR. S.S. NANAK
    DR. S.S. NANAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • ಗುರುಮಠಕಲ್ ತಾಲೂಕಿನ ನೀಲಹಳ್ಳಿ ಮತ್ತು ಕಿಲ್ಲನಕೇರಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಈ ಹಿಂದೆಯೇ ಅಧಿಕಾರಿಗಳು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಈ ಕುರಿತು ಎಚ್ಚರಿಕೆ ನೀಡಿರುವ ಅವರು, ಬೇಡಿಕೆಗಳು ಈಡೇರದಿದ್ದಲ್ಲಿ ಜುಲೈ 16ರಂದು ಬೆಳಿಗ್ಗೆ 9 ಗಂಟೆಗೆ ಕಿಲ್ಲನಕೇರಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
    4
    ಗುರುಮಠಕಲ್ ತಾಲೂಕಿನ ನೀಲಹಳ್ಳಿ ಮತ್ತು ಕಿಲ್ಲನಕೇರಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಈ ಹಿಂದೆಯೇ ಅಧಿಕಾರಿಗಳು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಈ ಕುರಿತು ಎಚ್ಚರಿಕೆ ನೀಡಿರುವ ಅವರು, ಬೇಡಿಕೆಗಳು ಈಡೇರದಿದ್ದಲ್ಲಿ ಜುಲೈ 16ರಂದು ಬೆಳಿಗ್ಗೆ 9 ಗಂಟೆಗೆ ಕಿಲ್ಲನಕೇರಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
    user_Nagaraj PATANGE
    Nagaraj PATANGE
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    11 hrs ago
  • ಕಲಬುರಗಿ ಜಿಲ್ಲೆಯ ಸೇಡಂ ಇತಿಹಾಸದಲ್ಲೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಪಿಎಸ್ಐ ಉಪೇಂದ್ರಕುಮಾರ ಅವರು ಮುಂದಾಗಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯವು ಅತ್ಯಂತ ಜೋರಾಗಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಗಳು ಸೇರಿದಂತೆ ರೆಹಮತನಗರ, ವೆಂಕಟೇಶ ನಗರ, ವಿದ್ಯಾನಗರ, ದೊಡ್ಡ ಅಗಸಿ ಹಾಗೂ ಸಣ್ಣ ಅಗಸಿ ಪ್ರದೇಶಗಳಲ್ಲಿ ಈ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಕಳ್ಳತನ, ಅಪಘಾತ, ದೌರ್ಜನ್ಯ ಹಾಗೂ ಸಂಚಾರದ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು ಸಜ್ಜಾಗುತ್ತಿದ್ದು, ಇದಕ್ಕಾಗಿ ಪಟ್ಟಣದಾದ್ಯಂತ ಒಟ್ಟು 80 ಕ್ಕೂ ಅಧಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸೇಡಂ ಇತಿಹಾಸದಲ್ಲೇ ಇದೊಂದು ಹೊಸ ಪ್ರಯೋಗವಾಗಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.
    1
    ಕಲಬುರಗಿ ಜಿಲ್ಲೆಯ ಸೇಡಂ ಇತಿಹಾಸದಲ್ಲೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಪಿಎಸ್ಐ ಉಪೇಂದ್ರಕುಮಾರ ಅವರು ಮುಂದಾಗಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯವು ಅತ್ಯಂತ ಜೋರಾಗಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಗಳು ಸೇರಿದಂತೆ ರೆಹಮತನಗರ, ವೆಂಕಟೇಶ ನಗರ, ವಿದ್ಯಾನಗರ, ದೊಡ್ಡ ಅಗಸಿ ಹಾಗೂ ಸಣ್ಣ ಅಗಸಿ ಪ್ರದೇಶಗಳಲ್ಲಿ ಈ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.

ಕಳ್ಳತನ, ಅಪಘಾತ, ದೌರ್ಜನ್ಯ ಹಾಗೂ ಸಂಚಾರದ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು ಸಜ್ಜಾಗುತ್ತಿದ್ದು, ಇದಕ್ಕಾಗಿ ಪಟ್ಟಣದಾದ್ಯಂತ ಒಟ್ಟು 80 ಕ್ಕೂ ಅಧಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸೇಡಂ ಇತಿಹಾಸದಲ್ಲೇ ಇದೊಂದು ಹೊಸ ಪ್ರಯೋಗವಾಗಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    3 hrs ago
  • ಕಾಳಗಿ ತಾಲೂಕಿನವರೇ ಆದ, ಪೂರ್ಣಾವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ತಿಪ್ಪಣಪ್ಪ ಕಮಕನೂರ ಅವರಿಗೆ ಜುಲೈ 19ರಂದು ಅವರ ತವರೂರಿನ ತಾಲೂಕು ಕೋಲಿ ಸಮಾಜದ ವತಿಯಿಂದ ಅದ್ದೂರಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಜಗನ್ನಾಥ ತೇಲಿ ಈ ಮಾಹಿತಿ ನೀಡಿದ್ದಾರೆ. ಜುಲೈ 19ರಂದು ಬೆಳಗ್ಗೆ 10 ಗಂಟೆಗೆ ಕಾಳಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ನೀಲಕಂಠ ಕಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು ಮತ್ತು ಹಲಗೆ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ತಿಪ್ಪಣಪ್ಪ ಕಮಕನೂರ ಅವರ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಬಳಿಕ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ರಟಕಲ್ ಗೌರಿಗುಡ್ಡದ ಸಿದ್ಧಶಿವಯೋಗಿ ಶರಣರು, ಭರತನೂರ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ರಟಕಲ್ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು, ನೀಲಕಂಠ ಮಹಾಸ್ವಾಮಿಗಳು ಹಾಗೂ ಕಾಳಗಿಯ ನೀಲಕಂಠ ಮರಿದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ, ಮುಖಂಡ ರವಿರಾಜ ಕೊರವಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 85ರಷ್ಟು ಅಂಕ ಪಡೆದ ತಾಲೂಕಿನ ಕೋಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಜರುಗಲಿದ್ದು, ಅರ್ಹ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ಜುಲೈ 16ರ ಒಳಗೆ ಗುಂಡಪ್ಪ ಕರೆಮನೊರ (9741681146) ಅಥವಾ ರಾಘವೇಂದ್ರ ಹಲಚೇರಾ (9731155080) ಅವರನ್ನು ಸಂಪರ್ಕಿಸಲು ಕೋರಲಾಗಿದೆ. ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಕೋಲಿ ಸಮಾಜದ ಯುವ ಘಟಕ ತಾಲೂಕಾಧ್ಯಕ್ಷ ಪ್ರವೀಣ ನಾಮದಾರ, ಮುಖಂಡರಾದ ಭೀಮರಾವ ಮಾಲಿಪಾಟೀಲ, ಮಲ್ಲಪ್ಪ ದಿಗ್ಗಾಂವ, ಸಿದ್ದು ಕೇಶ್ವರ, ಮಾರುತಿ ನೈಕೋಡಿ, ಜಯರಾಜ ಮುದಿರಾಜ, ಶಿವಕುಮಾರ್ ಕಮಕನೂರ, ಮಲ್ಲಿಕಾರ್ಜುನ ಮರಗುತ್ತಿ, ಪ್ರಸಾದ ರಟಕಲ್, ರಾಹುಲ್ ಚಿತ್ತಾಪೂರ, ನೀಲಕಂಠಪ್ಪ ಮಾಸ್ತಾರ, ಮಹೇಶ ಗೋಟೂರ, ಶರಣು ಬಂಕಲಗಿ, ರಾಘವೇಂದ್ರ ಬೆಳಗುಂಪಿ, ಪವಾನ ನಾಮದಾರ, ದತ್ತು ಸಾವಳಗಿ, ಭಾಗೇಶ ಕೋಡ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಕಾಳಗಿ ತಾಲೂಕಿನವರೇ ಆದ, ಪೂರ್ಣಾವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ತಿಪ್ಪಣಪ್ಪ ಕಮಕನೂರ ಅವರಿಗೆ ಜುಲೈ 19ರಂದು ಅವರ ತವರೂರಿನ ತಾಲೂಕು ಕೋಲಿ ಸಮಾಜದ ವತಿಯಿಂದ ಅದ್ದೂರಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಜಗನ್ನಾಥ ತೇಲಿ ಈ ಮಾಹಿತಿ ನೀಡಿದ್ದಾರೆ. ಜುಲೈ 19ರಂದು ಬೆಳಗ್ಗೆ 10 ಗಂಟೆಗೆ ಕಾಳಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ನೀಲಕಂಠ ಕಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು ಮತ್ತು ಹಲಗೆ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ತಿಪ್ಪಣಪ್ಪ ಕಮಕನೂರ ಅವರ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಬಳಿಕ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಸಮಾರಂಭ ಜರುಗಲಿದೆ.

ಈ ಕಾರ್ಯಕ್ರಮದಲ್ಲಿ ರಟಕಲ್ ಗೌರಿಗುಡ್ಡದ ಸಿದ್ಧಶಿವಯೋಗಿ ಶರಣರು, ಭರತನೂರ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ರಟಕಲ್ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು, ನೀಲಕಂಠ ಮಹಾಸ್ವಾಮಿಗಳು ಹಾಗೂ ಕಾಳಗಿಯ ನೀಲಕಂಠ ಮರಿದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ, ಮುಖಂಡ ರವಿರಾಜ ಕೊರವಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 85ರಷ್ಟು ಅಂಕ ಪಡೆದ ತಾಲೂಕಿನ ಕೋಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಜರುಗಲಿದ್ದು, ಅರ್ಹ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ಜುಲೈ 16ರ ಒಳಗೆ ಗುಂಡಪ್ಪ ಕರೆಮನೊರ (9741681146) ಅಥವಾ ರಾಘವೇಂದ್ರ ಹಲಚೇರಾ (9731155080) ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಕೋಲಿ ಸಮಾಜದ ಯುವ ಘಟಕ ತಾಲೂಕಾಧ್ಯಕ್ಷ ಪ್ರವೀಣ ನಾಮದಾರ, ಮುಖಂಡರಾದ ಭೀಮರಾವ ಮಾಲಿಪಾಟೀಲ, ಮಲ್ಲಪ್ಪ ದಿಗ್ಗಾಂವ, ಸಿದ್ದು ಕೇಶ್ವರ, ಮಾರುತಿ ನೈಕೋಡಿ, ಜಯರಾಜ ಮುದಿರಾಜ, ಶಿವಕುಮಾರ್ ಕಮಕನೂರ, ಮಲ್ಲಿಕಾರ್ಜುನ ಮರಗುತ್ತಿ, ಪ್ರಸಾದ ರಟಕಲ್, ರಾಹುಲ್ ಚಿತ್ತಾಪೂರ, ನೀಲಕಂಠಪ್ಪ ಮಾಸ್ತಾರ, ಮಹೇಶ ಗೋಟೂರ, ಶರಣು ಬಂಕಲಗಿ, ರಾಘವೇಂದ್ರ ಬೆಳಗುಂಪಿ, ಪವಾನ ನಾಮದಾರ, ದತ್ತು ಸಾವಳಗಿ, ಭಾಗೇಶ ಕೋಡ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    2 hrs ago
  • ರಾಯಚೂರಿನ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕ್ರಾಂತಿವೀರ ಬೆಳವಡಿ (ವಡ್ಡರ) ಯಲ್ಲಣ್ಣ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಅವರು ಮಾಹಿತಿ ನೀಡಿದ್ದು, ಜುಲೈ 16ರಂದು ಸಾರ್ವಜನಿಕ ಗ್ರಂಥಾಲಯಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಜೀವನ ಚರಿತ್ರೆ ಪುಸ್ತಕಗಳನ್ನು ದೇಣಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಯುವಜನರಲ್ಲಿ ಇತಿಹಾಸದ ಅರಿವು ಮೂಡಿಸಿ, ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ಗದಗ ಜಿಲ್ಲೆಗಳ ಎಲ್ಲಾ ತಾಲ್ಲೂಕು ಸಾರ್ವಜನಿಕ ಗ್ರಂಥಾಲಯಗಳಿಗೆ ಈ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಸಂಗೊಳ್ಳಿ ರಾಯಣ್ಣರ ಸೈನ್ಯದ ಪ್ರಮುಖ ನಾಯಕರಾಗಿದ್ದ ಯಲ್ಲಣ್ಣ ಅವರ ಜೀವನ, ದೇಶಭಕ್ತಿ ಮತ್ತು ತ್ಯಾಗವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಇದರದ್ದಾಗಿದೆ. ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸರ್ಕಾರ ಅಧಿಕೃತವಾಗಿ ಗುರುತಿಸಬೇಕು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೂಕ್ತ ಗೌರವ ನೀಡಬೇಕು ಹಾಗೂ ಅವರ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘವು ಇದೇ ವೇಳೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ತಿಮ್ಮಪ್ಪ, ನಗರಾಧ್ಯಕ್ಷ ಸಣ್ಣ ತಿಮ್ಮಾರೆಡ್ಡಿ, ಗೌರವಾಧ್ಯಕ್ಷ ಈರಣ್ಣ, ಸದಸ್ಯರಾದ ರಾಮಾಂಜಿನಯ್ಯ ಹಾಗೂ ತಿಮ್ಮಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ರಾಯಚೂರಿನ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕ್ರಾಂತಿವೀರ ಬೆಳವಡಿ (ವಡ್ಡರ) ಯಲ್ಲಣ್ಣ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಅವರು ಮಾಹಿತಿ ನೀಡಿದ್ದು, ಜುಲೈ 16ರಂದು ಸಾರ್ವಜನಿಕ ಗ್ರಂಥಾಲಯಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಜೀವನ ಚರಿತ್ರೆ ಪುಸ್ತಕಗಳನ್ನು ದೇಣಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಯುವಜನರಲ್ಲಿ ಇತಿಹಾಸದ ಅರಿವು ಮೂಡಿಸಿ, ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ಗದಗ ಜಿಲ್ಲೆಗಳ ಎಲ್ಲಾ ತಾಲ್ಲೂಕು ಸಾರ್ವಜನಿಕ ಗ್ರಂಥಾಲಯಗಳಿಗೆ ಈ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು.

ಸಂಗೊಳ್ಳಿ ರಾಯಣ್ಣರ ಸೈನ್ಯದ ಪ್ರಮುಖ ನಾಯಕರಾಗಿದ್ದ ಯಲ್ಲಣ್ಣ ಅವರ ಜೀವನ, ದೇಶಭಕ್ತಿ ಮತ್ತು ತ್ಯಾಗವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಇದರದ್ದಾಗಿದೆ. ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸರ್ಕಾರ ಅಧಿಕೃತವಾಗಿ ಗುರುತಿಸಬೇಕು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೂಕ್ತ ಗೌರವ ನೀಡಬೇಕು ಹಾಗೂ ಅವರ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘವು ಇದೇ ವೇಳೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ತಿಮ್ಮಪ್ಪ, ನಗರಾಧ್ಯಕ್ಷ ಸಣ್ಣ ತಿಮ್ಮಾರೆಡ್ಡಿ, ಗೌರವಾಧ್ಯಕ್ಷ ಈರಣ್ಣ, ಸದಸ್ಯರಾದ ರಾಮಾಂಜಿನಯ್ಯ ಹಾಗೂ ತಿಮ್ಮಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ರಾಯಚೂರು ತಾಲೂಕಿನ ಹಂಚಿನಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮಹೇಶ್ ಮತ್ತು ನಾಗರಾಜ್ ಎಂಬುವರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಗಲಾಟೆ ಆರಂಭವಾಗಿತ್ತು. ಅವರು ಬಂಕ್‌ನಲ್ಲಿ 110 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು 100 ರೂಪಾಯಿ ಕೊಟ್ಟಿದ್ದರು. ಈ ಕೇವಲ 10 ರೂಪಾಯಿ ಹಣದ ಜಗಳವೇ ದೊಡ್ಡದಾಗಿ ಕೊಲೆಯಲ್ಲಿ ಮುಕ್ತಾಯವಾಗಿದೆ. ಮಹೇಶ್ ಎಂಬುವರ ಮೇಲೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಲು ಹೋದ ಮೇಘನಾಥ್ ಎಂಬ ಯುವಕನ ಮೇಲೆ ಬಂಕ್ ಸಿಬ್ಬಂದಿ ಸೇರಿದಂತೆ 13 ಜನರ ಗುಂಪು ಏಕಾಏಕಿ ಭೀಕರವಾಗಿ ಹಲ್ಲೆ ನಡೆಸಿದೆ. ಯುವಕರು ಕಟ್ಟಿಗೆಯಿಂದ ಮೇಘನಾಥ್ ತಲೆಗೆ ಬಲವಾಗಿ ಹೊಡೆದಿದ್ದು, ಅವರು ನೆಲದ ಮೇಲೆ ಬಿದ್ದರೂ ಬಿಡದೆ ಕ್ರೂರವಾಗಿ ಥಳಿಸಿದ್ದಾರೆ. ಈ ಭೀಕರ ಹಲ್ಲೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ವಿಡಿಯೋ ಸದ್ಯ ಲಭ್ಯವಾಗಿದೆ. ಈ ಇಡೀ ಘಟನೆಗೆ ಸಂಬಂಧಿಸಿದಂತೆ ಸದ್ಯ ಇಡಕನೂರು ಪೊಲೀಸ್ ಠಾಣೆಯಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    1
    ರಾಯಚೂರು ತಾಲೂಕಿನ ಹಂಚಿನಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮಹೇಶ್ ಮತ್ತು ನಾಗರಾಜ್ ಎಂಬುವರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಗಲಾಟೆ ಆರಂಭವಾಗಿತ್ತು. ಅವರು ಬಂಕ್‌ನಲ್ಲಿ 110 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು 100 ರೂಪಾಯಿ ಕೊಟ್ಟಿದ್ದರು. ಈ ಕೇವಲ 10 ರೂಪಾಯಿ ಹಣದ ಜಗಳವೇ ದೊಡ್ಡದಾಗಿ ಕೊಲೆಯಲ್ಲಿ ಮುಕ್ತಾಯವಾಗಿದೆ.

ಮಹೇಶ್ ಎಂಬುವರ ಮೇಲೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಲು ಹೋದ ಮೇಘನಾಥ್ ಎಂಬ ಯುವಕನ ಮೇಲೆ ಬಂಕ್ ಸಿಬ್ಬಂದಿ ಸೇರಿದಂತೆ 13 ಜನರ ಗುಂಪು ಏಕಾಏಕಿ ಭೀಕರವಾಗಿ ಹಲ್ಲೆ ನಡೆಸಿದೆ. ಯುವಕರು ಕಟ್ಟಿಗೆಯಿಂದ ಮೇಘನಾಥ್ ತಲೆಗೆ ಬಲವಾಗಿ ಹೊಡೆದಿದ್ದು, ಅವರು ನೆಲದ ಮೇಲೆ ಬಿದ್ದರೂ ಬಿಡದೆ ಕ್ರೂರವಾಗಿ ಥಳಿಸಿದ್ದಾರೆ. ಈ ಭೀಕರ ಹಲ್ಲೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ವಿಡಿಯೋ ಸದ್ಯ ಲಭ್ಯವಾಗಿದೆ.

ಈ ಇಡೀ ಘಟನೆಗೆ ಸಂಬಂಧಿಸಿದಂತೆ ಸದ್ಯ ಇಡಕನೂರು ಪೊಲೀಸ್ ಠಾಣೆಯಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    47 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.