logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಸೆರೆ! ಶಿವಮೊಗ್ಗ: ಶಿವಮೊಗ್ಗದ ಹೊರವಲಯ ಸೋಗಾನೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಸೋಗಾನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿನಾಯಕ ನಗರ ಸಮೀಪ ಕರಡಿ ಕಾಣಿಸಿಕೊಂಡಿತ್ತು. ಸಾರ್ವಜನಿಕ ರಸ್ತೆಗಳು, ಮನೆಗಳ ಹಿಂಭಾಗ ಸೇರಿದಂತೆ ಎಲ್ಲೆಂದರಲ್ಲಿ ಓಡಾಡಿತ್ತು. ತದನಂತರ ಕಾಂಪೌಡ್ ಹಾರಿ ವಿಮಾನ ನಿಲ್ದಾಣ ಒಳ ಪ್ರವೇಶಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ನಂತರ ಕರಡಿಯು ವಿಮಾನ ನಿಲ್ದಾಣದ ಕಾಂಪೌಂಡ್ ಹಾರಿ ಹೊರಬಂದಿತ್ತು. ಜ್ಯೋತಿ ನಗರ, ದೊಡ್ಡಬೀಳು ಸುತ್ತಮುತ್ತ ಓಡಾಡಲಾರಂಭಿಸಿತ್ತು. ಮತ್ತೆ ವಿಮಾನ ನಿಲ್ದಾಣ ಸುತ್ತಮುತ್ತ ಸಂಚರಿಸಲಾರಂಭಿ ಸಿತ್ತು. ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಅರಿವಳಿಕೆ ಚುಚ್ಚುಮದ್ದು ನೀಡಿ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

16 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
16 hrs ago
66991ca4-433f-4e11-99f8-767c4ff93515

ಶಿವಮೊಗ್ಗ-ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಸೆರೆ! ಶಿವಮೊಗ್ಗ: ಶಿವಮೊಗ್ಗದ ಹೊರವಲಯ ಸೋಗಾನೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಸೋಗಾನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿನಾಯಕ ನಗರ ಸಮೀಪ ಕರಡಿ ಕಾಣಿಸಿಕೊಂಡಿತ್ತು. ಸಾರ್ವಜನಿಕ ರಸ್ತೆಗಳು, ಮನೆಗಳ ಹಿಂಭಾಗ ಸೇರಿದಂತೆ ಎಲ್ಲೆಂದರಲ್ಲಿ ಓಡಾಡಿತ್ತು. ತದನಂತರ ಕಾಂಪೌಡ್ ಹಾರಿ ವಿಮಾನ ನಿಲ್ದಾಣ ಒಳ ಪ್ರವೇಶಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ನಂತರ ಕರಡಿಯು ವಿಮಾನ ನಿಲ್ದಾಣದ ಕಾಂಪೌಂಡ್ ಹಾರಿ ಹೊರಬಂದಿತ್ತು. ಜ್ಯೋತಿ ನಗರ, ದೊಡ್ಡಬೀಳು ಸುತ್ತಮುತ್ತ ಓಡಾಡಲಾರಂಭಿಸಿತ್ತು. ಮತ್ತೆ ವಿಮಾನ ನಿಲ್ದಾಣ ಸುತ್ತಮುತ್ತ ಸಂಚರಿಸಲಾರಂಭಿ ಸಿತ್ತು. ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಅರಿವಳಿಕೆ ಚುಚ್ಚುಮದ್ದು ನೀಡಿ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

More news from ಕರ್ನಾಟಕ and nearby areas
  • ಶಿವಮೊಗ್ಗ: ಮಳೆಯ ಅವಾಂತರಕ್ಕೆ ಇಂದು ನಗರದ ವಿನೋಬನಗರ ಬಡಾವಣೆಯ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದು, ಮರ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ ಕಂಡು ಬಂದಿದೆ. ಮಳೆಗಾಲದ ಸಮಯದಲ್ಲಿ ಎಷ್ಟೇ ಸುರಕ್ಷಿತವಾಗಿದ್ದರು ಅಪಾಯಗಳು ತಪ್ಪೋದಿಲ್ಲ ಎಂಬ ಕಾರಣಕ್ಕೆ ಸಾಕ್ಷಿಯಾಗಿದೆ. ಈ ರೀತಿಯ ಮತ್ತೊಂದು ಘಟನೆ ಹೊಸ ಮನೆ ಬಡಾವಣೆಯ 4ನೇ ತಿರುವಿನಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಅವಘಡ ನಡೆದಿದೆ.
    1
    ಶಿವಮೊಗ್ಗ: ಮಳೆಯ ಅವಾಂತರಕ್ಕೆ ಇಂದು ನಗರದ ವಿನೋಬನಗರ ಬಡಾವಣೆಯ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದು, ಮರ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ ಕಂಡು ಬಂದಿದೆ.
ಮಳೆಗಾಲದ ಸಮಯದಲ್ಲಿ ಎಷ್ಟೇ ಸುರಕ್ಷಿತವಾಗಿದ್ದರು ಅಪಾಯಗಳು ತಪ್ಪೋದಿಲ್ಲ ಎಂಬ ಕಾರಣಕ್ಕೆ ಸಾಕ್ಷಿಯಾಗಿದೆ. 
ಈ ರೀತಿಯ ಮತ್ತೊಂದು ಘಟನೆ ಹೊಸ ಮನೆ ಬಡಾವಣೆಯ 4ನೇ ತಿರುವಿನಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಅವಘಡ ನಡೆದಿದೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    16 hrs ago
  • ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್‌ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಅನೇಕ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ದಾವಣಗೆರೆಯಿಂದ ಹೊರಟಿದ್ದ ಬಸ್‌ ಚನ್ನಗಿರಿ ದಾಟಿ ಕಾಗೆಹಳ್ಳದ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪತನಗೊಂಡಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದು, ಮೂವರು-ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಇಬ್ಬರ ಕಾಲು ಮುರಿದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಹೊರತೆಗೆದಿದ್ದಾರೆ. ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    3
    ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್‌ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಅನೇಕ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ದಾವಣಗೆರೆಯಿಂದ ಹೊರಟಿದ್ದ ಬಸ್‌ ಚನ್ನಗಿರಿ ದಾಟಿ ಕಾಗೆಹಳ್ಳದ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪತನಗೊಂಡಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದು, ಮೂವರು-ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಇಬ್ಬರ ಕಾಲು ಮುರಿದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಲ್ಲಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಹೊರತೆಗೆದಿದ್ದಾರೆ.
ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    20 hrs ago
  • ಕಡೂರು : ಏ.2ರಂದು ಕಡೂರಿನಲ್ಲಿ  ಜಿಲ್ಲಾ ಮಟ್ಟದ ಶ್ರೀ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಸಮಾರಂಭವನ್ನು ಆದ್ದೂರಿಯಾಗಿ ಆಚರಿಸಲಾಗುವುದು ಎಂದು ದೇವರ ದಾಸಿಮಯ್ಯ ಆಚರಣೆ ಜಿಲ್ಲಾ ಸಮಿತಿಯ ಅಧ್ಯಕ್ಷ ಜೆ ಯೋಗೀಶ್ವರ ತಿಳಿಸಿದರು. ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ಸಭಾ ಕಾರ್ಯಕ್ರಮವು ಮಧ್ಯಾಹ್ನ 12ಗಂಟೆಗೆ ಪ್ರಾರಂಭವಾಗಲಿದೆ. ಸಮಾರಂಭಕ್ಕೂ ಮುನ್ನಾ  ಬೆಳಿಗ್ಗೆ 10ಗಂಟೆಗೆ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಆವರಣದಿಂದ ಪೆಂಡಾಲ್ ವರೆಗೂ ದೇವರದಾಸಿಮಯ್ಯ ಅವರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳೊಂದಿಗೆ. ಮೆರವಣಿಗೆ ನಡೆಸಲಾಗುತ್ತದೆ. ಹಂಪೆ ಹೇಮಕೂಟದ  ಶ್ರೀ ದಯಾನಂದ ಪುರಿ ಸ್ವಾಮೀಜಿ, ಹಾಗೂ  ಮಹಾರಾಷ್ಟ್ರ ಸೊಲ್ಲಾಪುರದ ಶ್ರೀ ಡಾ. ಅಭಿನವ ರಾಮಲಿಂಗ ಪಟ್ಟದೇವರು ಹಾಗೂ ಜಿಲ್ಲೆಯ ಸಮಾಜ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ದೇವಾಂಗ ಸಂಘದ  ತಾಲೂಕು ಅಧ್ಯಕ್ಷ ಎಚ್.ಎಲ್. ರಂಗನಾಥ್ ಮಾತನಾಡಿ, ಜಿಲ್ಲೆಯಾದ್ಯಂತ  ಸಮಾಜದ ಬಂಧುಗಳು ಇರುವ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.  ಜಿಲ್ಲಾದ್ಯಂತ 5,000ಕ್ಕೂ ಹೆಚ್ಚು ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆ ಇದೆ. ಈ ಮೂಲಕ ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು. ಸಮಾವೇಶದಲ್ಲಿ ಪಟ್ಟಣದ ಪ್ರಖ್ಯಾತಿ ವೈದ್ಯರಾದ ಡಾ. ಛಾಯಾಪತಿ ಅವರಿಗೆ ದೇವಲ ಮಹರ್ಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದರು. ದೇವಾಂಗ ಸಮಾಜದ ಕಡೂರು ನಗರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದಂತಹ ವಿಶಿಷ್ಟ ಕೊಡುಗೆ ನೀಡಿರುವ ದೇವರ ದಾಸಿಮಯ್ಯ ಅವರ 1046ನೇ ಜಯಂತಿಯನ್ನು  ಕಡೂರಿನಲ್ಲಿ ಶೈಕ್ಷಣಿಕ,‌ರಾಜಕೀಯ, ಸಾಮಾಜಿಕವಾಗಿ ಸಂಘಟನೆ ಮೂಲಕ ಜಿಲ್ಲಾ ಮಟ್ಟದಲ್ಲಿ ದೇವಾಂಗ ಜನ ಜಾಗೃತಿ ಮತ್ತು ಸಂಘಟನಾ ಸಮಾವೇಶವನ್ನು ಈ ಬಾರಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ.‌ ಸಮಾವೇಶವನ್ನು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಉದ್ಘಾಟಿಸಲಿದ್ದಾರೆ.ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಮಾಜಿ ಸಚಿವರಾದ ಉಮಾಶ್ರೀ, ಎಂ ಡಿ ಲಕ್ಷ್ಮಿ ನಾರಾಯಣ್. ಶಾಸಕರುಗಳಾದ ಎಚ್ ಡಿ ತಮ್ಮಯ್ಯ. ಸಿ.ಟಿ ರವಿ, ಜಿ ಎಚ್ ಶ್ರೀನಿವಾಸ್, ಎಸ್. ಎಲ್ ಭೋಜೇಗೌಡ, ಮಾಜಿ ಶಾಸಕರಾದ ವೈಎಸ್‌ವಿ ದತ್ತ, ಬೆಳ್ಳಿಪ್ರಕಾಶ್ ಮುಂತಾದವರು ಭಾಗವಹಿಸಲಿದ್ದು,‌  ಸಾಹಿತಿ ನಾಗಶ್ರೀ ತ್ಯಾಗರಾಜ್ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ. ಶ್ರೀನಿವಾಸ್, ರಾಜ್ಯ ಸಹ ಕಾರ್ಯದರ್ಶಿ ಸಿ.ಎಸ್‌.‌ರವಿಕುಮಾರ್, ಕಾರ್ಯದರ್ಶಿ ಧನಪಾಲ್. ಎಚ್ ಎಲ್. ಶೇಖರಪ್ಪ. ಸಿಂಗಟಗೆರೆ ಸಿದ್ದಪ್ಪ. ಅರೆಕಲ್ ಪ್ರಕಾಶ್. ಎಚ್. ವೆಂಕಟೇಶ್ ಮೂರ್ತಿ. ಚಿಕ್ಕಪಟ್ಟಣಗೆರೆ ನಾಗರಾಜು, ಕುಮಾರಸ್ವಾಮಿ ಮತ್ತಿತರಿದ್ದರು.
    3
    ಕಡೂರು : ಏ.2ರಂದು ಕಡೂರಿನಲ್ಲಿ  ಜಿಲ್ಲಾ ಮಟ್ಟದ ಶ್ರೀ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಸಮಾರಂಭವನ್ನು ಆದ್ದೂರಿಯಾಗಿ ಆಚರಿಸಲಾಗುವುದು ಎಂದು ದೇವರ ದಾಸಿಮಯ್ಯ ಆಚರಣೆ ಜಿಲ್ಲಾ ಸಮಿತಿಯ ಅಧ್ಯಕ್ಷ ಜೆ ಯೋಗೀಶ್ವರ ತಿಳಿಸಿದರು.
ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ಸಭಾ ಕಾರ್ಯಕ್ರಮವು ಮಧ್ಯಾಹ್ನ 12ಗಂಟೆಗೆ ಪ್ರಾರಂಭವಾಗಲಿದೆ. ಸಮಾರಂಭಕ್ಕೂ ಮುನ್ನಾ 
ಬೆಳಿಗ್ಗೆ 10ಗಂಟೆಗೆ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಆವರಣದಿಂದ ಪೆಂಡಾಲ್ ವರೆಗೂ ದೇವರದಾಸಿಮಯ್ಯ ಅವರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳೊಂದಿಗೆ. ಮೆರವಣಿಗೆ ನಡೆಸಲಾಗುತ್ತದೆ. ಹಂಪೆ ಹೇಮಕೂಟದ  ಶ್ರೀ ದಯಾನಂದ ಪುರಿ ಸ್ವಾಮೀಜಿ, ಹಾಗೂ  ಮಹಾರಾಷ್ಟ್ರ ಸೊಲ್ಲಾಪುರದ ಶ್ರೀ ಡಾ. ಅಭಿನವ ರಾಮಲಿಂಗ ಪಟ್ಟದೇವರು ಹಾಗೂ ಜಿಲ್ಲೆಯ ಸಮಾಜ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ದೇವಾಂಗ ಸಂಘದ  ತಾಲೂಕು ಅಧ್ಯಕ್ಷ ಎಚ್.ಎಲ್. ರಂಗನಾಥ್ ಮಾತನಾಡಿ, ಜಿಲ್ಲೆಯಾದ್ಯಂತ 
ಸಮಾಜದ ಬಂಧುಗಳು ಇರುವ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.  ಜಿಲ್ಲಾದ್ಯಂತ 5,000ಕ್ಕೂ ಹೆಚ್ಚು ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆ ಇದೆ. ಈ ಮೂಲಕ ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು. ಸಮಾವೇಶದಲ್ಲಿ ಪಟ್ಟಣದ ಪ್ರಖ್ಯಾತಿ ವೈದ್ಯರಾದ ಡಾ. ಛಾಯಾಪತಿ ಅವರಿಗೆ ದೇವಲ ಮಹರ್ಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದರು.
ದೇವಾಂಗ ಸಮಾಜದ ಕಡೂರು ನಗರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದಂತಹ ವಿಶಿಷ್ಟ ಕೊಡುಗೆ ನೀಡಿರುವ ದೇವರ ದಾಸಿಮಯ್ಯ ಅವರ 1046ನೇ ಜಯಂತಿಯನ್ನು  ಕಡೂರಿನಲ್ಲಿ ಶೈಕ್ಷಣಿಕ,‌ರಾಜಕೀಯ, ಸಾಮಾಜಿಕವಾಗಿ ಸಂಘಟನೆ ಮೂಲಕ ಜಿಲ್ಲಾ ಮಟ್ಟದಲ್ಲಿ ದೇವಾಂಗ ಜನ ಜಾಗೃತಿ ಮತ್ತು ಸಂಘಟನಾ ಸಮಾವೇಶವನ್ನು
ಈ ಬಾರಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ.‌ ಸಮಾವೇಶವನ್ನು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಉದ್ಘಾಟಿಸಲಿದ್ದಾರೆ.ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಮಾಜಿ ಸಚಿವರಾದ ಉಮಾಶ್ರೀ, ಎಂ ಡಿ ಲಕ್ಷ್ಮಿ ನಾರಾಯಣ್. ಶಾಸಕರುಗಳಾದ ಎಚ್ ಡಿ ತಮ್ಮಯ್ಯ. ಸಿ.ಟಿ ರವಿ,
ಜಿ ಎಚ್ ಶ್ರೀನಿವಾಸ್, ಎಸ್. ಎಲ್ ಭೋಜೇಗೌಡ, ಮಾಜಿ ಶಾಸಕರಾದ ವೈಎಸ್‌ವಿ ದತ್ತ, ಬೆಳ್ಳಿಪ್ರಕಾಶ್ ಮುಂತಾದವರು ಭಾಗವಹಿಸಲಿದ್ದು,‌  ಸಾಹಿತಿ ನಾಗಶ್ರೀ ತ್ಯಾಗರಾಜ್ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ. ಶ್ರೀನಿವಾಸ್, ರಾಜ್ಯ ಸಹ ಕಾರ್ಯದರ್ಶಿ ಸಿ.ಎಸ್‌.‌ರವಿಕುಮಾರ್, ಕಾರ್ಯದರ್ಶಿ ಧನಪಾಲ್. ಎಚ್ ಎಲ್. ಶೇಖರಪ್ಪ. ಸಿಂಗಟಗೆರೆ ಸಿದ್ದಪ್ಪ. ಅರೆಕಲ್ ಪ್ರಕಾಶ್. ಎಚ್. ವೆಂಕಟೇಶ್ ಮೂರ್ತಿ. ಚಿಕ್ಕಪಟ್ಟಣಗೆರೆ ನಾಗರಾಜು, ಕುಮಾರಸ್ವಾಮಿ ಮತ್ತಿತರಿದ್ದರು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ. ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
    1
    ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ.
ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಬನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಲಿತರ ದುಡ್ಡು ಪಂಗನಾಮ ಸಂವಿಧಾನವನ್ನೇ ಬರೆದುಕೊಟ್ಟ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುಲಬಾಂಧವರಿಗೆ ಅನ್ಯಾಯ ಇದನ್ನು ಪ್ರಶ್ನೆ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆಯೇ ? ಜನ ಜನ ಜನ ಜನ ಕಾಂಚಣದಲ್ಲಿ ಅಮೆರಿಕಾದ ಲಾಂಛನದಲ್ಲಿ ಪರಂಗಿಯವರು ಮತ್ತೆ ಬಂದರೆ ನಾವು ನೀವು ಎಲ್ಲಾ ಮಾಯ ಪರಂಗಿಯವರು ಬಂದಿದ್ದಾರೆಯೇ? ನಾವು 300 ವರ್ಷಗಳ ಕಾಲ ನಮ್ಮನ್ನಾಳಿದ ಬ್ರಿಟೀಷರನೇ ಬಿಟ್ಟಿಲ್ಲ ಇನ್ನು ನಕ್ಲೇಟರ್ ನಕಲಿ ಬಿಲ್ಲು ಸೃಷ್ಟಿಸಿ ಪಂಗನಾಮ ಹಾಕುವವರನ್ನು ಬಿಡಬಹುದೇ ?
    1
    ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಬನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಲಿತರ ದುಡ್ಡು ಪಂಗನಾಮ  ಸಂವಿಧಾನವನ್ನೇ ಬರೆದುಕೊಟ್ಟ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುಲಬಾಂಧವರಿಗೆ ಅನ್ಯಾಯ 
ಇದನ್ನು ಪ್ರಶ್ನೆ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆಯೇ ? 
ಜನ ಜನ ಜನ ಜನ ಕಾಂಚಣದಲ್ಲಿ ಅಮೆರಿಕಾದ ಲಾಂಛನದಲ್ಲಿ ಪರಂಗಿಯವರು ಮತ್ತೆ ಬಂದರೆ ನಾವು ನೀವು ಎಲ್ಲಾ ಮಾಯ 
ಪರಂಗಿಯವರು ಬಂದಿದ್ದಾರೆಯೇ? 
ನಾವು 300 ವರ್ಷಗಳ ಕಾಲ ನಮ್ಮನ್ನಾಳಿದ ಬ್ರಿಟೀಷರನೇ ಬಿಟ್ಟಿಲ್ಲ  ಇನ್ನು ನಕ್ಲೇಟರ್ ನಕಲಿ ಬಿಲ್ಲು ಸೃಷ್ಟಿಸಿ ಪಂಗನಾಮ ಹಾಕುವವರನ್ನು ಬಿಡಬಹುದೇ ?
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    23 hrs ago
  • ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ರವಿವಾರ ಆರಂಭಗೊಂಡ ವಿಮಾನ ಯಾನ ಸಂಸ್ಥೆಗಳ ಬೇಸಿಗೆ ವೇಳಾಪಟ್ಟಿಯಂತೆ ಮುಂಬೈ ಪ್ರದೇಶಕ್ಕೆ ಆರು ವಿಮಾನಗಳು ಸಂಚರಿಸಲಿವೆ. ಸೋಮವಾರ ಮತ್ತು ಗುರುವಾರದಂದು ಮುಂಬೈ ಪ್ರದೇಶಕ್ಕೆ ಒಟ್ಟು 5 ವಿಮಾನಗಳು ಪ್ರಯಾಣಕ್ಕೆ ಲಭ್ಯವಾಗಲಿವೆ. ಈ ಪೈಕಿ ಇಂಡಿಗೋ ಸಂಸ್ಥೆಯಿಂದ ನವಿ ಮುಂಬೈ ಮತ್ತು ಮುಂಬೈಗೆ ತಲಾ ಎರಡು , ಏರ್ ಇಂಡಿಯಾ ಎಕ್ಸ್‌ನಿಂದ ಮುಂಬೈಗೆ 1 ವಿಮಾನ ಹಾರಾಟ ನಡೆಸಲಿದೆ.
    1
    ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ರವಿವಾರ ಆರಂಭಗೊಂಡ ವಿಮಾನ ಯಾನ ಸಂಸ್ಥೆಗಳ ಬೇಸಿಗೆ ವೇಳಾಪಟ್ಟಿಯಂತೆ ಮುಂಬೈ ಪ್ರದೇಶಕ್ಕೆ ಆರು ವಿಮಾನಗಳು ಸಂಚರಿಸಲಿವೆ.
ಸೋಮವಾರ ಮತ್ತು ಗುರುವಾರದಂದು ಮುಂಬೈ ಪ್ರದೇಶಕ್ಕೆ ಒಟ್ಟು 5 ವಿಮಾನಗಳು ಪ್ರಯಾಣಕ್ಕೆ ಲಭ್ಯವಾಗಲಿವೆ. ಈ ಪೈಕಿ ಇಂಡಿಗೋ ಸಂಸ್ಥೆಯಿಂದ ನವಿ ಮುಂಬೈ ಮತ್ತು ಮುಂಬೈಗೆ ತಲಾ ಎರಡು , ಏರ್ ಇಂಡಿಯಾ ಎಕ್ಸ್‌ನಿಂದ ಮುಂಬೈಗೆ 1 ವಿಮಾನ ಹಾರಾಟ ನಡೆಸಲಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಉಕ್ಕಿನ ನಗರ ಗುಡುಗು ಸಹಿತ ಸುಮಾರು ಒಂದು ಗಂಟೆಗಳ ಕಾಲ ಮಳೆಯಾಗಿದೆ. ಸಿಡಿಲು, ಗುಡುಗಿನ ಜೊತೆ ಭಾರಿ ಗಾಳಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಬಿಸಿಲು ಹೆಚ್ಚಾಗಿದ್ದು ಮಳೆ ಬರುವ ಮುನ್ಸೂಚನೆಗಳಿದ್ದವು. ಮಧ್ಯಾಹ್ನ 3-30 ರ ವೇಳೆಹೆ ಗುಡುಗು ಮಿಂಚುವಿನೊಂದಿಗೆ ಸುರಿದ ಮಳೆಗೆ ಇಳೆ ತಂಪಾಗಿದೆ. ಇತ್ತ ಶಿವಮೊಗ್ಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಉಕ್ಕಿನ ನಗರ ಗುಡುಗು ಸಹಿತ ಸುಮಾರು ಒಂದು ಗಂಟೆಗಳ ಕಾಲ ಮಳೆಯಾಗಿದೆ.
ಸಿಡಿಲು, ಗುಡುಗಿನ ಜೊತೆ ಭಾರಿ ಗಾಳಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಬಿಸಿಲು ಹೆಚ್ಚಾಗಿದ್ದು ಮಳೆ ಬರುವ ಮುನ್ಸೂಚನೆಗಳಿದ್ದವು. ಮಧ್ಯಾಹ್ನ 3-30 ರ ವೇಳೆಹೆ ಗುಡುಗು ಮಿಂಚುವಿನೊಂದಿಗೆ ಸುರಿದ ಮಳೆಗೆ ಇಳೆ ತಂಪಾಗಿದೆ. ಇತ್ತ ಶಿವಮೊಗ್ಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.