*ವಿಬಿ-ಜಿ ರಾಮ್ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ* ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- ಮಳವಳ್ಳಿ:ಆಗಸ್ಟ್.15 ರಂದು ಬೃಹತ್ ರಕ್ತದಾನ ಶಿಬಿರ-ಪ್ರಚಾರ ರಥಕ್ಕೆ ವಿದ್ಯುಕ್ತ ಚಾಲನೆ ಮಳವಳ್ಳಿ:ಆಗಸ್ಟ್.೧೫ ರಂದು ಬೃಹತ್ ರಕ್ತದಾನ ಶಿಬಿರ-ಪ್ರಚಾರ ರಥಕ್ಕೆ ವಿದ್ಯುಕ್ತ ಚಾಲನೆ • ರಕ್ತದಾನ ಮಹಾದಾನ-ರಕ್ತದಾನ ಮಾಡೋಣ ಜೀವ ಉಳಿಸೋಣ-ಸರ್ಕಾರಿ ವಕೀಲ ಎಂ.ಎಸ್.ಶ್ರೀಕAಠಸ್ವಾಮಿ ಕರೆ ಮಳವಳ್ಳಿಯಲ್ಲಿ ಆಗಸ್ಟ್ ೧೫ ರಂದು ಗಡಿ ಕಾಯುವ ಯೋಧರ ಹಾಗೂ ಅನ್ನ ನೀಡುವ ರೈತರ ಸ್ಮರಣಾರ್ಥ ಯುವಕ ಮಿತ್ರರ ತಂಡ ಹಮ್ಮಿಕೊಂಡಿರುವ ಬೃಹತ್ ರಕ್ತದಾನ ಶಿಬಿರದ ಪ್ರಚಾರ ರಥಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಗಂಗಾಧರೇಶ್ವರಸ್ವಾಮಿ ದೇವಸ್ಥಾನದ ಅವರಣದಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಂಚಾರ ನಡೆಸಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶೇಷವಾಗಿ ಸಿದ್ದಗೊಳಿಸಿರುವ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರೈತ ಮುಖಂಡರು,ಮಳವಳ್ಳಿ ಯುವಕ ತಂಡದ ಸ್ವಯಂ ಸೇವಕರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲ ಎಂ.ಎಸ್.ಶ್ರೀಕAಠಸ್ವಾಮಿ ಮಾತನಾಡಿ, ಇದೊಂದು ಮಾನವೀಯತೆಯ ನೆಲೆಯಲ್ಲಿ ನಡೆಯುತ್ತಿರುವ ಬೃಹತ್ ರಕ್ತದಾನ ಶಿಬಿರವಾಗಿದೆ.ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಪುಣ್ಯ ರಕ್ತದಾನಿಗೆ ಸಿಗಲಿದೆ,ರಕ್ತದಾನದಿಂದ ಅವರ ಅರೋಗ್ಯ ಉತ್ತಮವಾಗಲಿದೆ,ಜನರು ಯಾವುದೆ ಅತಂಕ ವಿಲ್ಲದೆ ನಿರ್ಭಿತಿಯಿಂದ ರಕ್ತದಾನ ಮಾಡುವ ಮೂಲಕ ಆ.೧೫ ರ ೨೬ ಗಮಟೆಗಳ ನಿರಂತರ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸುವಂತೆ ಹಾಗೂ ೨೦೨೬ ಕ್ಕೂ ಹೆಚ್ಚು ಜನರು ದಾಖಲೆ ರಕ್ತದಾನ ಮಾಡುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಎಲ್ಲರೂ ಕಂಕಣಬದ್ದರಾಗೋಣವೆAದರು. ಈ ಸಮದರ್ಭದಲ್ಲಿ ಮಳವಳ್ಳಿ ತಂಡದ ನೂರಾರು ಸ್ವಯಂ ಸೇವಕರು,ರೈತರು,ಸಮಾಜ ಸೇವಕರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬಾಗವಹಿಸಿದ್ದರು.1
- ಮಳೆ ಕೊರತೆಯಿಂದ ಬೆಳೆ ಹಾನಿ – ಕೊರಟಗೆರೆಯಲ್ಲಿ ರೈತರನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ" ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದುರ್ಗದಹಳ್ಳಿ, ವಡ್ಡರಹಳ್ಳಿ ಕ್ರಾಸ್ ಇರಕ ಸಂದ್ರ ಕಾಲೋನಿ ತಣ್ಣೆನಹಳ್ಳಿ ಜೋನಿಗರ ಹಳ್ಳಿ ತೋವಿನಕೆರೆ ಗ್ರಾಮಗಳಿಗೆ ಭೇಟಿ ನೀಡಿ ಮತ್ತು ಎಲೇರಾಂಪುರ ನರಸಿಹಂಗಿರಿ ಕ್ಷೇತ್ರ ಪೀಠಾಧ್ಯಕ್ಷರಾದ ಹನುಮಂತನಾಥಸ್ವಾಮೀಜಿಯವರನ್ನು ಭೇಟಿಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ. ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರ ಸಮಸ್ಯೆಗಳನ್ನು ಆಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಬೆಳೆ ನಷ್ಟದ ಕುರಿತು ಮಾಹಿತಿ ಪಡೆದು ಹೊಲಗಳ ಪರಿಸ್ಥಿತಿಯನ್ನು ವೀಕ್ಷಿಸಿದರು. ಈ ವೇಳೆ ರೈತರು ಮಳೆ ಅಭಾವದಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ತಮ್ಮ ಅಳಲನ್ನು ವ್ಯಕ್ತಪಡಿಸಿದರು. ಸರ್ಕಾರ ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಹಾಗೂ ಪರಿಹಾರ ಧನವನ್ನು ಬಿಡುಗಡೆ ಮಾಡಬೇಕು ಎಂದು ರೈತರು ಮನವಿ ಮಾಡಿದರು. ರೈತರ ಮನವಿಯನ್ನು ಆಲಿಸಿದ ಬಿ.ವೈ. ವಿಜಯೇಂದ್ರ ಅವರು, ರೈತರ ಸಮಸ್ಯೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಬೆಳೆ ಹಾನಿಗೆ ತುರ್ತು ಪರಿಹಾರ, ಬರ ಪರಿಹಾರ ಪ್ಯಾಕೇಜ್ ಹಾಗೂ ಅಗತ್ಯ ನೆರವು ನೀಡುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಮತ್ತು ತುಮಕುರು ನಗರ ಶಾಸಕ ಶ್ಯೋತಿ ಗಣೇಶ್ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.1
- ಚಾಮರಾಜನಗರದಲ್ಲಿ ನೂತನ ಸಚಿವ ರಾದ ಪುಟ್ಟರಂಗಶೆಟ್ಟಿ ಅಭಿಮಾನಿಗಳ ಹರ್ಷ ಸತತ ನಾಲ್ಕು ಬಾರಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ ರವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ನೂತನ ಸಚಿವ ರಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಅಭಿಮಾನಿ ಬಳಗ ತುಂಬಾ ಸಂತೋಷ ವ್ಯಕ್ತಪಡಿಸಿದರು. ನೂತನ ಸಚಿವ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರವರಿಗೆ ವಿಶೇಷ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಮಹದೇವಸ್ವಾಮಿ ಮತ್ತು ರಾಮಸಮುದ್ರ ನಾಗ್ ರವರು ಮತ್ತು ಅಕ್ಷಯ್ ಕುಮಾರ್ ಮತ್ತು ಚಂದಕವಾಡಿ ಸಿದ್ದಪ್ಪಾಜಿ ಸಹ ಭಾಗವಹಿಸಿದರು.1
- ಮಂಡ್ಯ ದಲ್ಲಿ ವಿಶ್ವ ಸ್ತನ್ಯ ಪಾನದಿನಾಚರಣೆ ತಾಯಿಯ ಹಾಲೇ ಮಗುವಿನ ಮೊದಲ ನೈಸರ್ಗಿಕ ಲಸಿಕೆ ಮಂಡ್ಯ-ತಾಯಿಯ ಹಾಲು ಮಗುವಿನ ಮೊದಲ ಅತ್ಯುತ್ತಮ ಆಹಾರವಾಗಿದ್ದು, ಜನನವಾದ ಮೊದಲ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಿ, ಮೊದಲ ಆರು ತಿಂಗಳು ಕೇವಲ ತಾಯಿಯ ಹಾಲನ್ನೇ ನೀಡುವುದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗನಿರೋಧಕ ಶಕ್ತಿಗೆ ಅತ್ಯಂತ ಅಗತ್ಯ ಎಂದು CEO ನಂದಿನಿ ಹೇಳಿದ್ರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿನಿ, ಈ ವರ್ಷದ ಘೋಷವಾಕ್ಯ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದಾಗಿದ್ದು, ತಾಯಿಯ ಹಾಲಿನ ಮಹತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಸಿ. ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮಿ ಸಿ. ಜಿಲ್ಲಾ ಕ್ಷಯ ರೋಗ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ. ಎನ್ ಆಶಾಲತಾ ರವರು ಉಪಸ್ಥಿತರಿದ್ದರು1
- ಟೈರ್‌ಗೆ ಬೆಂಕಿ ಹಚ್ಚಲು ಯತ್ನ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು. ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಭುಗಿಲೆದ್ದ ಆಕ್ರೋಶ: ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಕಾರ್ಯಕರ್ತರ ಪ್ರತಿಭಟನೆ! ಸಚಿವ ಸ್ಥಾನ ಸಿಗದಿದ್ದಕ್ಕೆ ಕಣ್ಣೀರು-ಆಕ್ರೋಶ: ರಸ್ತೆಯಲ್ಲೇ ಮಲಗಿ ತನ್ವೀರ್ ಸೇಠ್ ಬೆಂಬಲಿಗರ ಹೈಡ್ರಾಮಾ! ಮೈಸೂರಿನಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಭಾರಿ ಪ್ರತಿಭಟನೆ: ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೂರಾಟ!1