ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಸಮೀಪದ ಹಾನಾಪೂರ ಎಲ್.ಟಿ (ಸರಸ್ವತಿ ನಗರ) ಸರ್ಕಾರಿ ಪ್ರೌಢಶಾಲೆಯಲ್ಲಿ ನೂರರಷ್ಟು ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಿ.ಬಿ.ನಾಯಕ್ ಉದ್ಘಾಟಿಸಿದರು. ಬಂಜಾರ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ದೊಡ್ಡದಾಗಿದ್ದು, ಹಳ್ಳಿಯಿಂದ ದಿಲ್ಲಿಯ ತನಕ ಈ ಸಮುದಾಯದ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಕಾಣಸಿಗಲು ಶಿಕ್ಷಣಕ್ಕೆ ನೀಡಿದ ಮಹತ್ವವೇ ಕಾರಣ ಎಂದು ಅವರು ಶ್ಲಾಘಿಸಿದರು. ಬಂಜಾರ ಅಕಾಡೆಮಿ ಮಾಜಿ ಅಧ್ಯಕ್ಷ ಹರಿಲಾಲ ಪವಾರ ಮಾತನಾಡಿ, ಅಂದಿನ ಕಾಲದಲ್ಲಿ ಸರಿಯಾದ ಶೈಕ್ಷಣಿಕ ವ್ಯವಸ್ಥೆ ಇಲ್ಲದಿದ್ದರೂ ಕಷ್ಟಪಟ್ಟು ಅಧ್ಯಯನ ನಡೆಸಿ ಇಂದು ಈ ಹಂತಕ್ಕೆ ತಲುಪಿದ್ದೇವೆ. ಇಂದಿನ ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು ಎಂದರು. ಇದೇ ವೇಳೆ ಮದ್ರಾಸ್ ಐಐಟಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿ ಕುಮಾರ ಕರಿಯಪ್ಪ ಮಾದರನ ಸಾಧನೆಯನ್ನು ರಾಜ್ಯಕ್ಕೆ ಮಾದರಿ ಎಂದು ಬಣ್ಣಿಸಿದ ಅವರು, ಆತನ ತಾಯಿಯ ತ್ಯಾಗವನ್ನು ಅಭಿನಂದಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಹುದ್ದೆಗೇರಿದ್ದು, ಸರ್ಕಾರಿ ಶಾಲೆಯಲ್ಲೂ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂದರು. ಕೃಷ್ಣಾಜಿ ಚೌವ್ಹಾಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಡಿ.ಎಲ್.ರಾಠೋಡ, ಎಸ್.ಎಸ್.ಚೌವ್ಹಾಣ್ ಹಾಗೂ ಪಿ.ಬಿ.ಚೌವ್ಹಾಣ್ ಮತ್ತಿತರರು ಉಪಸ್ಥಿತರಿದ್ದರು.
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಸಮೀಪದ ಹಾನಾಪೂರ ಎಲ್.ಟಿ (ಸರಸ್ವತಿ ನಗರ) ಸರ್ಕಾರಿ ಪ್ರೌಢಶಾಲೆಯಲ್ಲಿ ನೂರರಷ್ಟು ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಿ.ಬಿ.ನಾಯಕ್ ಉದ್ಘಾಟಿಸಿದರು. ಬಂಜಾರ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ದೊಡ್ಡದಾಗಿದ್ದು, ಹಳ್ಳಿಯಿಂದ ದಿಲ್ಲಿಯ ತನಕ ಈ ಸಮುದಾಯದ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಕಾಣಸಿಗಲು ಶಿಕ್ಷಣಕ್ಕೆ ನೀಡಿದ ಮಹತ್ವವೇ ಕಾರಣ ಎಂದು ಅವರು ಶ್ಲಾಘಿಸಿದರು. ಬಂಜಾರ ಅಕಾಡೆಮಿ ಮಾಜಿ ಅಧ್ಯಕ್ಷ ಹರಿಲಾಲ ಪವಾರ ಮಾತನಾಡಿ, ಅಂದಿನ ಕಾಲದಲ್ಲಿ ಸರಿಯಾದ ಶೈಕ್ಷಣಿಕ ವ್ಯವಸ್ಥೆ ಇಲ್ಲದಿದ್ದರೂ ಕಷ್ಟಪಟ್ಟು ಅಧ್ಯಯನ ನಡೆಸಿ ಇಂದು ಈ ಹಂತಕ್ಕೆ ತಲುಪಿದ್ದೇವೆ. ಇಂದಿನ ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು ಎಂದರು. ಇದೇ ವೇಳೆ ಮದ್ರಾಸ್ ಐಐಟಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿ ಕುಮಾರ ಕರಿಯಪ್ಪ ಮಾದರನ ಸಾಧನೆಯನ್ನು ರಾಜ್ಯಕ್ಕೆ ಮಾದರಿ ಎಂದು ಬಣ್ಣಿಸಿದ ಅವರು, ಆತನ ತಾಯಿಯ ತ್ಯಾಗವನ್ನು ಅಭಿನಂದಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಹುದ್ದೆಗೇರಿದ್ದು, ಸರ್ಕಾರಿ ಶಾಲೆಯಲ್ಲೂ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂದರು. ಕೃಷ್ಣಾಜಿ ಚೌವ್ಹಾಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಡಿ.ಎಲ್.ರಾಠೋಡ, ಎಸ್.ಎಸ್.ಚೌವ್ಹಾಣ್ ಹಾಗೂ ಪಿ.ಬಿ.ಚೌವ್ಹಾಣ್ ಮತ್ತಿತರರು ಉಪಸ್ಥಿತರಿದ್ದರು.
- ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.1
- ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಕೆಲವು ಬೇಕರಿಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಆರೋಪಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದ್ದು, ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳು ಸಾರ್ವಜನಿಕರಿಂದ ಲಭ್ಯವಾಗಿರುವ ಮಾಹಿತಿ ಮತ್ತು ಸದ್ಯದ ವರದಿಗಳನ್ನು ಆಧರಿಸಿವೆ. ಹೀಗಾಗಿ, ಸಂಬಂಧಪಟ್ಟ ಇಲಾಖೆಯ ಅಂತಿಮ ತನಿಖೆ ಅಥವಾ ಅಧಿಕೃತ ವರದಿ ಹೊರಬರುವವರೆಗೆ ಈ ಆರೋಪಗಳನ್ನು ದೃಢಪಟ್ಟ ಸತ್ಯ ಎಂದು ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಂಗಡಿ ಮಾಲೀಕರು ಮತ್ತು ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾದರೆ ಅದನ್ನು ಕೂಡ ಪ್ರಕಟಿಸಲಾಗುವುದು.1
- ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ರಾಜ್ಯದ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಬರಲು ಶಂಬುಲಿಂಗ್ ಹಿರೇಮಠ್ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬರಗಾಲದ ಭವಣೆಯನ್ನು ತಪ್ಪಿಸಲು ಮತ್ತು ರೈತರ ಸಂಕಷ್ಟವನ್ನು ಪಾರು ಮಾಡಲು ತಾವೇ ಸ್ವತಃ ತಪಸ್ಸು ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ, ಬೆಳೆಗಳು ಸಮೃದ್ಧಿಯಾಗಿ ಬೆಳೆದು ಜನಜೀವನ ಸುಗಮವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹಿರೇಮಠ್ ಹೇಳಿದ್ದಾರೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿರುವ ಅವರು, ಕೇವಲ ಪ್ರಾರ್ಥನೆಯಷ್ಟೇ ಅಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ, ಮರ ನೆಡುವಿಕೆ ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.1
- ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.1
- ಮಹಾರಾಷ್ಟ್ರದಲ್ಲಿ ಉಂಟಾಗಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ 1.30 ಲಕ್ಷ ಕ್ಯೂಸೆಕ್ಸ್ ಒಳಹರಿವು ಹರಿದುಬಂದಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಒಟ್ಟು 10 ಸೇತುವೆಗಳು ಜಲಾವೃತಗೊಂಡಿವೆ.1
- ಮನೆಯಲ್ಲೇ ರೆಸ್ಟೋರೆಂಟ್ ಶೈಲಿಯ ರುಚಿಕರವಾದ ಪಾಲಕ್ ಪನೀರ್ ಮಸಾಲಾ ತಯಾರಿಸುವ ಸುಲಭ ವಿಧಾನ ಇಲ್ಲಿದೆ. ಇದು ಚಪಾತಿ, ರೋಟಿ ಮತ್ತು ನಾನ್ ಜೊತೆ ಸವಿಯಲು ಅದ್ಭುತವಾಗಿರುತ್ತದೆ. ಈ ರೆಸಿಪಿಗೆ ಬೇಕಾಗುವ ಪ್ರಮುಖ ಪದಾರ್ಥಗಳೆಂದರೆ 2 ಕಟ್ಟು ಪಾಲಕ್ ಸೊಪ್ಪು, 200 ಗ್ರಾಂ ಪನೀರ್, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಹೆಚ್ಚಿದ ಟೊಮೆಟೊ, 2-3 ಹಸಿಮೆಣಸಿನಕಾಯಿ, 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರ್ಧ ಚಮಚ ಜೀರಿಗೆ, ಅರ್ಧ ಚಮಚ ಅಚ್ಚಖಾರದ ಪುಡಿ, 1 ಚಮಚ ಧನಿಯಾ ಪುಡಿ, ಕಾಲು ಚಮಚ ಗರಂ ಮಸಾಲಾ, 3 ಚಮಚ ಬೆಣ್ಣೆ ಅಥವಾ ಎಣ್ಣೆ, 2 ಚಮಚ ಫ್ರೆಶ್ ಕ್ರೀಮ್ ಅಥವಾ ಹಾಲಿನ ಕೆನೆ ಮತ್ತು ರುಚಿಗೆ ತಕ್ಕಷ್ಟು ಉಪ್ಪು. ಇದನ್ನು ತಯಾರಿಸಲು ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು, ಕುದಿಯುವ ನೀರಿಗೆ ಹಾಕಿ 2 ನಿಮಿಷ ಬೇಯಿಸಿ (Blanch) ತಕ್ಷಣವೇ ತಣ್ಣೀರಿಗೆ ಹಾಕಬೇಕು. ಇದರಿಂದ ಸೊಪ್ಪಿನ ಹಸಿರು ಬಣ್ಣ ಹಾಗೇ ಉಳಿಯುತ್ತದೆ. ಆಮೇಲೆ ಇದನ್ನು ಹಸಿಮೆಣಸಿನಕಾಯಿ ಜೊತೆ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ನಂತರ ಒಂದು ಪ್ಯಾನ್‌ನಲ್ಲಿ ಸ್ವಲ್ಪ ಬೆಣ್ಣೆ ಹಾಕಿ ಪನೀರ್ ತುಂಡುಗಳನ್ನು ಹಗುರವಾಗಿ ಫ್ರೈ ಮಾಡಿ ಎತ್ತಿಟ್ಟುಕೊಳ್ಳಬೇಕು. ಅದೇ ಪ್ಯಾನ್‌ಗೆ ಮತ್ತಷ್ಟು ಎಣ್ಣೆ ಅಥವಾ ಬೆಣ್ಣೆ ಹಾಕಿ ಜೀರಿಗೆ ಒಗ್ಗರಣೆ ಕೊಟ್ಟು, ಹೆಚ್ಚಿದ ಈರುಳ್ಳಿ ಮತ್ತು ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಬೇಕು. ಬಳಿಕ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಬೇಯಿಸಿ, ಅದಕ್ಕೆ ಅರಿಶಿನ, ಖಾರದ ಪುಡಿ, ಧನಿಯಾ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮಿಕ್ಸ್ ಮಾಡಬೇಕು. ಕೊನೆಯ ಹಂತದಲ್ಲಿ, ಹುರಿದ ಮಸಾಲಾಕ್ಕೆ ರುಬ್ಬಿದ ಪಾಲಕ್ ಮಿಶ್ರಣವನ್ನು ಸೇರಿಸಿ, ಸ್ವಲ್ಪ ನೀರು ಹಾಕಿ 5 ನಿಮಿಷ ಮಧ್ಯಮ ಉರಿಯಲ್ಲಿ ಕುದಿಸಬೇಕು. ಕೊನೆಯದಾಗಿ ಗರಂ ಮಸಾಲಾ, ಫ್ರೈ ಮಾಡಿದ ಪನೀರ್ ತುಂಡುಗಳು ಮತ್ತು ಫ್ರೆಶ್ ಕ್ರೀಮ್ ಸೇರಿಸಿ 2 ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿದರೆ ರುಚಿಕರವಾದ ಪಾಲಕ್ ಪನೀರ್ ಸಿದ್ಧವಾಗುತ್ತದೆ. ಈ ರೆಸಿಪಿಯಲ್ಲಿ ನಿಮಗೆ ಡಾಬಾ ಸ್ಟೈಲ್ ಟ್ವಿಸ್ಟ್ ಬೇಕೇ ಅಥವಾ ತೂಕ ಇಳಿಸಿಕೊಳ್ಳಲು ಡಯಟ್ ಫ್ರೆಂಡ್ಲಿ ವಿಧಾನ ಬೇಕೇ ಎಂಬ ಹೆಚ್ಚಿನ ಮಾಹಿತಿಯನ್ನೂ ಸಹ ಪಡೆಯಬಹುದು.1
- ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕೆಲವರು ಉದ್ದೇಶಪೂರ್ವಕವಾಗಿ ಆರ್‌ಎಸ್‌ಎಸ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಈಗಾಗಲೇ ಸಂಘದ ಪ್ರಮುಖರು ಸ್ಪಷ್ಟನೆ ನೀಡಿರುವುದರಿಂದ ಮತ್ತೆ ಮತ್ತೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದ ಅವರು, ಸಂಘವು ತನ್ನ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದು ಇಂತಹ ಹೇಳಿಕೆಗಳಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು. ಯಾರು ಏನೇ ಹೇಳಿದರೂ ಪ್ರತಿಯೊಂದಕ್ಕೂ ಉತ್ತರಿಸುವ ಅಗತ್ಯವಿಲ್ಲ ಮತ್ತು ಸಂಘದ ಸಿದ್ಧಾಂತ ಹಾಗೂ ಕಾರ್ಯಚಟುವಟಿಕೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.1
- ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.1