ಜಾಲಹಳ್ಳಿ ಸರ್ಕಾರಿ ಆಸ್ಪತ್ರೆ ಕೊರತೆಗಳ ವಿರುದ್ಧ DYFI ಧರಣಿಮೂಲಸೌಕರ್ಯ, ವೈದ್ಯರು–ನರ್ಸಿಂಗ್ ಸಿಬ್ಬಂದಿ ಕೊರತೆ ಹಾಗೂ ಔಷಧ ಸಮಸ್ಯೆ 📰 ಜಾಲಹಳ್ಳಿ–ದೇವದುರ್ಗ | ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಆಸ್ಪತ್ರೆ ಕೊರತೆಗಳ ವಿರುದ್ಧ DYFI ಧರಣಿ ಮೂಲಸೌಕರ್ಯ, ವೈದ್ಯರು–ನರ್ಸಿಂಗ್ ಸಿಬ್ಬಂದಿ ಕೊರತೆ ಹಾಗೂ ಔಷಧ ಸಮಸ್ಯೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ ಜಾಲಹಳ್ಳಿ, ಸೆ.16 (ರಾಯಚೂರು): ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿಯ ಕೊರತೆ, ಔಷಧಗಳ ಅಲಭ್ಯತೆ ಸೇರಿದಂತೆ ವಿವಿಧ ಸಮಸ್ಯೆಗಳು ತಲೆದೋರಿದ್ದು, ಸಾರ್ವಜನಿಕರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ದೇವದುರ್ಗ ವಲಯ ಸಮಿತಿ ವತಿಯಿಂದ ಬುಧವಾರ ಆಸ್ಪತ್ರೆ ಎದುರು ಧರಣಿ ನಡೆಸಲಾಯಿತು. ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ನರ್ಸಿಂಗ್ ಸಿಬ್ಬಂದಿಯ ಕೊರತೆಯಿಂದ ತುರ್ತು ಚಿಕಿತ್ಸೆಗಾಗಿ ಬರುವ ರೋಗಿಗಳು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ದೊರೆಯಬೇಕಾದ ಔಷಧಗಳು ಲಭ್ಯವಿಲ್ಲದೆ, ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಔಷಧ ಖರೀದಿಸುವಂತೆ ಚೀಟಿ ಬರೆಯಲಾಗುತ್ತಿದೆ. ಅಲ್ಲದೆ, ಹೆರಿಗೆ ವಿಭಾಗದಲ್ಲಿಯೂ ಗರ್ಭಿಣಿಯರಿಂದ ಹಣಕ್ಕೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು DYFI ಮುಖಂಡರು ತಿಳಿಸಿದರು. ಪ್ರಮುಖ ಬೇಡಿಕೆಗಳು * ಆಸ್ಪತ್ರೆಯಲ್ಲಿ ಸಮರ್ಪಕ ಸ್ವಚ್ಛತೆ ಕಾಪಾಡಿ, ಅಗತ್ಯ ವೈದ್ಯರನ್ನು ತಕ್ಷಣ ನೇಮಿಸಬೇಕು. * ಮಹಿಳಾ ವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಬೇಕು ಹಾಗೂ ರಾತ್ರಿ ವೇಳೆಯಲ್ಲಿ ಆನ್-ಡ್ಯೂಟಿ ವೈದ್ಯರ ವ್ಯವಸ್ಥೆ ಕಲ್ಪಿಸಬೇಕು. * ಹೊರಗಿನ ಮೆಡಿಕಲ್ ಶಾಪ್‌ಗಳಿಗೆ ಔಷಧ ಬರೆದುಕೊಡುವುದನ್ನು ನಿಲ್ಲಿಸಿ, ಆಸ್ಪತ್ರೆಯಲ್ಲೇ ಉಚಿತ ಔಷಧ ದೊರೆಯುವಂತೆ ಮಾಡಬೇಕು. * ಸ್ಥಗಿತಗೊಂಡಿರುವ ಆಮ್ಲಜನಕ ಘಟಕವನ್ನು ತಕ್ಷಣ ಪ್ರಾರಂಭಿಸಬೇಕು. * ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರದ ವ್ಯವಸ್ಥೆ ಮಾಡಬೇಕು. * ವಿದ್ಯುತ್ ಕಡಿತದ ಸಂದರ್ಭದಲ್ಲಿ ಪರ್ಯಾಯ ವಿದ್ಯುತ್‌ಗಾಗಿ ಜನರೇಟರ್ ವ್ಯವಸ್ಥೆ ಕಲ್ಪಿಸಬೇಕು. * ಜನನಿ ಸುರಕ್ಷಾ ಯೋಜನೆಯಡಿ ಬಾಣಂತಿಯರಿಗೆ ನೀಡಬೇಕಾದ ಹಣವನ್ನು ತಕ್ಷಣ ವಿತರಿಸಬೇಕು. ಈ ಕುರಿತು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ DYFI ಅಧ್ಯಕ್ಷ ಕೊಂಡಯ್ಯ ಗೋಸಲ್ ಹಾಗೂ ಕಾರ್ಯದರ್ಶಿ ವೆಂಕಟೇಶ ತ್ಯಾಪ್ಲಿ ಎಚ್ಚರಿಸಿದರು. ಅಧಿಕಾರಿಗಳ ಭೇಟಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ ಅವರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ, ಆಸ್ಪತ್ರೆಯಲ್ಲಿನ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್.ಎಸ್. ಹುಲಮನಿಗೌಡ ಹಾಗೂ ಫಾರ್ಮಸಿ ಅಧಿಕಾರಿ ವೀರೇಶ್ ದೇವದುರ್ಗ ಉಪಸ್ಥಿತರಿದ್ದರು. ಧರಣಿಯಲ್ಲಿ ರಾಜ್ಯ ಕಾರ್ಮಿಕ ಸಂಘಟನೆ ಮುಖಂಡ ಶಬ್ಬೀರ್ ಜಾಲಹಳ್ಳಿ, ಜಿಲ್ಲಾ ಅಧ್ಯಕ್ಷ ರಾಜು ನಾಯಕ, ತಾಲೂಕು ಅಧ್ಯಕ್ಷ ರಿಯಾಜ್ ಆರ್ತಿ, ಮಲ್ಲುಗೌಡ, ತಿಮ್ಮಣ್ಣ ಬೆಂಗಂಡಿ, ಲೋಹಿತ್ ಮೋದಿ, ಉಪಾಧ್ಯಕ್ಷ ರಿಯಾಜ್ ಖುರೇಷಿ, ಮೈಹಿಬೂಬ್ ಖುರೇಷಿ, ರಾಜ್ ಮಹ್ಮದ್ ಟಕೆದ್, ಮಹಾಲಿಂಗ ದೊಡ್ಮನಿ, ರೈತ ಮುಖಂಡ ಶಿವರಾಜ ನಡಿಗೆರ್, ಮೌನೇಶ ದಾಸರ, ಹನುಮಂತ ಮಡಿವಾಳ, ದುರಗಪ್ಪ ಹೊರಟಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಮನವಿಯ ಪ್ರತಿಗಳನ್ನು ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೂ ರವಾನಿಸಲಾಗಿದೆ ಎಂದು DYFI ಮುಖಂಡರು ತಿಳಿಸಿದ್ದಾರೆ. ವರದಿ: ಖಾಜಾ ಹುಸೇನ್ ಬಾಬಾ ಜಾಲಹಳ್ಳಿ
ಜಾಲಹಳ್ಳಿ ಸರ್ಕಾರಿ ಆಸ್ಪತ್ರೆ ಕೊರತೆಗಳ ವಿರುದ್ಧ DYFI ಧರಣಿಮೂಲಸೌಕರ್ಯ, ವೈದ್ಯರು–ನರ್ಸಿಂಗ್ ಸಿಬ್ಬಂದಿ ಕೊರತೆ ಹಾಗೂ ಔಷಧ ಸಮಸ್ಯೆ 📰 ಜಾಲಹಳ್ಳಿ–ದೇವದುರ್ಗ | ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಆಸ್ಪತ್ರೆ ಕೊರತೆಗಳ ವಿರುದ್ಧ DYFI ಧರಣಿ ಮೂಲಸೌಕರ್ಯ, ವೈದ್ಯರು–ನರ್ಸಿಂಗ್ ಸಿಬ್ಬಂದಿ ಕೊರತೆ ಹಾಗೂ ಔಷಧ ಸಮಸ್ಯೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ ಜಾಲಹಳ್ಳಿ, ಸೆ.16 (ರಾಯಚೂರು): ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿಯ ಕೊರತೆ, ಔಷಧಗಳ ಅಲಭ್ಯತೆ ಸೇರಿದಂತೆ ವಿವಿಧ ಸಮಸ್ಯೆಗಳು ತಲೆದೋರಿದ್ದು, ಸಾರ್ವಜನಿಕರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ದೇವದುರ್ಗ ವಲಯ ಸಮಿತಿ ವತಿಯಿಂದ ಬುಧವಾರ ಆಸ್ಪತ್ರೆ ಎದುರು ಧರಣಿ ನಡೆಸಲಾಯಿತು. ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ನರ್ಸಿಂಗ್ ಸಿಬ್ಬಂದಿಯ ಕೊರತೆಯಿಂದ ತುರ್ತು ಚಿಕಿತ್ಸೆಗಾಗಿ ಬರುವ ರೋಗಿಗಳು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ದೊರೆಯಬೇಕಾದ ಔಷಧಗಳು ಲಭ್ಯವಿಲ್ಲದೆ, ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಔಷಧ ಖರೀದಿಸುವಂತೆ
ಚೀಟಿ ಬರೆಯಲಾಗುತ್ತಿದೆ. ಅಲ್ಲದೆ, ಹೆರಿಗೆ ವಿಭಾಗದಲ್ಲಿಯೂ ಗರ್ಭಿಣಿಯರಿಂದ ಹಣಕ್ಕೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು DYFI ಮುಖಂಡರು ತಿಳಿಸಿದರು. ಪ್ರಮುಖ ಬೇಡಿಕೆಗಳು * ಆಸ್ಪತ್ರೆಯಲ್ಲಿ ಸಮರ್ಪಕ ಸ್ವಚ್ಛತೆ ಕಾಪಾಡಿ, ಅಗತ್ಯ ವೈದ್ಯರನ್ನು ತಕ್ಷಣ ನೇಮಿಸಬೇಕು. * ಮಹಿಳಾ ವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಬೇಕು ಹಾಗೂ ರಾತ್ರಿ ವೇಳೆಯಲ್ಲಿ ಆನ್-ಡ್ಯೂಟಿ ವೈದ್ಯರ ವ್ಯವಸ್ಥೆ ಕಲ್ಪಿಸಬೇಕು. * ಹೊರಗಿನ ಮೆಡಿಕಲ್ ಶಾಪ್‌ಗಳಿಗೆ ಔಷಧ ಬರೆದುಕೊಡುವುದನ್ನು ನಿಲ್ಲಿಸಿ, ಆಸ್ಪತ್ರೆಯಲ್ಲೇ ಉಚಿತ ಔಷಧ ದೊರೆಯುವಂತೆ ಮಾಡಬೇಕು. * ಸ್ಥಗಿತಗೊಂಡಿರುವ ಆಮ್ಲಜನಕ ಘಟಕವನ್ನು ತಕ್ಷಣ ಪ್ರಾರಂಭಿಸಬೇಕು. * ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರದ ವ್ಯವಸ್ಥೆ ಮಾಡಬೇಕು. * ವಿದ್ಯುತ್ ಕಡಿತದ ಸಂದರ್ಭದಲ್ಲಿ ಪರ್ಯಾಯ ವಿದ್ಯುತ್‌ಗಾಗಿ ಜನರೇಟರ್ ವ್ಯವಸ್ಥೆ ಕಲ್ಪಿಸಬೇಕು. * ಜನನಿ ಸುರಕ್ಷಾ ಯೋಜನೆಯಡಿ ಬಾಣಂತಿಯರಿಗೆ ನೀಡಬೇಕಾದ ಹಣವನ್ನು ತಕ್ಷಣ ವಿತರಿಸಬೇಕು. ಈ ಕುರಿತು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ DYFI ಅಧ್ಯಕ್ಷ ಕೊಂಡಯ್ಯ ಗೋಸಲ್ ಹಾಗೂ ಕಾರ್ಯದರ್ಶಿ ವೆಂಕಟೇಶ ತ್ಯಾಪ್ಲಿ ಎಚ್ಚರಿಸಿದರು. ಅಧಿಕಾರಿಗಳ ಭೇಟಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ
ತಾಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ ಅವರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ, ಆಸ್ಪತ್ರೆಯಲ್ಲಿನ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್.ಎಸ್. ಹುಲಮನಿಗೌಡ ಹಾಗೂ ಫಾರ್ಮಸಿ ಅಧಿಕಾರಿ ವೀರೇಶ್ ದೇವದುರ್ಗ ಉಪಸ್ಥಿತರಿದ್ದರು. ಧರಣಿಯಲ್ಲಿ ರಾಜ್ಯ ಕಾರ್ಮಿಕ ಸಂಘಟನೆ ಮುಖಂಡ ಶಬ್ಬೀರ್ ಜಾಲಹಳ್ಳಿ, ಜಿಲ್ಲಾ ಅಧ್ಯಕ್ಷ ರಾಜು ನಾಯಕ, ತಾಲೂಕು ಅಧ್ಯಕ್ಷ ರಿಯಾಜ್ ಆರ್ತಿ, ಮಲ್ಲುಗೌಡ, ತಿಮ್ಮಣ್ಣ ಬೆಂಗಂಡಿ, ಲೋಹಿತ್ ಮೋದಿ, ಉಪಾಧ್ಯಕ್ಷ ರಿಯಾಜ್ ಖುರೇಷಿ, ಮೈಹಿಬೂಬ್ ಖುರೇಷಿ, ರಾಜ್ ಮಹ್ಮದ್ ಟಕೆದ್, ಮಹಾಲಿಂಗ ದೊಡ್ಮನಿ, ರೈತ ಮುಖಂಡ ಶಿವರಾಜ ನಡಿಗೆರ್, ಮೌನೇಶ ದಾಸರ, ಹನುಮಂತ ಮಡಿವಾಳ, ದುರಗಪ್ಪ ಹೊರಟಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಮನವಿಯ ಪ್ರತಿಗಳನ್ನು ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೂ ರವಾನಿಸಲಾಗಿದೆ ಎಂದು DYFI ಮುಖಂಡರು ತಿಳಿಸಿದ್ದಾರೆ. ವರದಿ: ಖಾಜಾ ಹುಸೇನ್ ಬಾಬಾ ಜಾಲಹಳ್ಳಿ
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1
- ಗುರುಮಠಕಲ್ ಮತಕ್ಷೇತ್ರ ಸೈದಾಪುರ ಎಪಿಎಂಸಿ ಆವರಣದಲ್ಲಿ ಜಾನುವಾರು ಸಂತೆ ಆರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಸ್ಥಳ ಪರಿಶೀಲನೆ ನಡೆಸಿದರು. ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸಿ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಉಮೇಶ್ ಮುದ್ನಾಳ ವಾರದ ಗಡುವು; ನಿರ್ಲಕ್ಷ್ಯ ವಹಿಸಿದರೆ ರಸ್ತೆ ಬಂದ್ ಹೋರಾಟದ ಎಚ್ಚರಿಕೆ ಗುರುಮಠಕಲ್ ಸೈದಾಪುರ ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯಲ್ಲಿ ದನ-ಕರು, ಕುರಿ, ಆಡು ಹಾಗೂ ಕೋಳಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ಸಂತೆ ಆವರಣಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸುವುದರ ಜತೆಗೆ ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಎಪಿಎಂಸಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಸ್ಥೆಯ ಆಗರವಾದ ಸಂತೆ ಆವರಣ ಸಂತೆ ಆವರಣದಲ್ಲಿ ಜಾಲಿಕಂಟಿಗಳು ಬೆಳೆದು ವಿಷಜಂತುಗಳು ಸೇರಿಕೊಳ್ಳುವಂತಾಗಿದೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಎಲ್ಲೆಡೆ ಅಸ್ವಚ್ಛತೆ ಕಂಡುಬರುತ್ತಿದ್ದು, ಕುಡುಕರ ಹಾವಳಿ ಹಾಗೂ ಅಕ್ರಮ ಚಟುವಟಿಕೆಗಳಿಗೂ ಅವಕಾಶವಾಗುತ್ತಿದೆ. ಕೆಲ ಭಾಗಗಳು ಭಿಕ್ಷುಕರು ಹಾಗೂ ಪುಂಡ-ಪೋಕರಿಗಳ ತಂಗುದಾಣದಂತಾಗಿವೆ. ಇದರಿಂದ ಸಂತೆಗಾಗಿ ಆಗಮಿಸುವ ರೈತರು ಹಾಗೂ ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ ಎಂದು ಮುದ್ನಾಳ ಹೇಳಿದರು. ಪ್ರತಿ ಗುರುವಾರ ಸಾವಿರಾರು ರೈತರು ಹಾಗೂ ವ್ಯಾಪಾರಿಗಳು ಆಗಮಿಸುವ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ನೆರಳು ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ದೂರಿದರು. ಜಾನುವಾರುಗಳ ಆರೋಗ್ಯಕ್ಕೂ ಆದ್ಯತೆ ನೀಡಿ ಜಾನುವಾರು ಸಂತೆ ಆರಂಭಿಸಿದ ಬಳಿಕ ಪ್ರತಿ ವಾರ ಸಂತೆ ಆವರಣದಲ್ಲೇ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಬಿಸಿಲಿನ ತೀವ್ರತೆಯನ್ನು ಗಮನಿಸಿ ಜನರು ಹಾಗೂ ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೆರಳಿಗಾಗಿ ಮರಗಳನ್ನು ಬೆಳೆಸುವುದರ ಜತೆಗೆ ಅಗತ್ಯವಿರುವ ಕಡೆ ಶೆಡ್ ನಿರ್ಮಿಸಬೇಕು. ಎಪಿಎಂಸಿ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಕ್ರಮ ಕೈಗೊಳ್ಳಬೇಕು ಎಂದರು. ಶೆಡ್‌ಗಳ ಅಕ್ರಮ ಬಳಕೆಗೆ ಕಡಿವಾಣ ಎಪಿಎಂಸಿ ಆವರಣದಲ್ಲಿರುವ ಶೆಡ್‌ಗಳನ್ನು ಕೆಲವು ಖಾಸಗಿ ಅಂಗಡಿ ಮಾಲೀಕರು ಅಕ್ರಮವಾಗಿ ದಾಸ್ತಾನು ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ, ರೈತರ ಬಳಕೆಗೆ ಶೆಡ್‌ಗಳನ್ನು ಮುಕ್ತಗೊಳಿಸಬೇಕು ಎಂದು ಮುದ್ನಾಳ ಆಗ್ರಹಿಸಿದರು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕು. ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಒಂದು ವಾರದ ಗಡುವು ಜಿಲ್ಲಾಡಳಿತ ಹಾಗೂ ಎಪಿಎಂಸಿ ಅಧಿಕಾರಿಗಳು ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ಜಾನುವಾರು ಸಂತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪ ಎಪಿಎಂಸಿ ಕಚೇರಿ ಮುಂಭಾಗದ ಯಾದಗಿರಿ–ರಾಯಚೂರು ಕರಿಬೆಟ್ಟ ಸರ್ಕಲ್ ಮುಖ್ಯರಸ್ತೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಉಮೇಶ್ ಕೆ. ಮುದ್ನಾಳ ಎಚ್ಚರಿಕೆ ನೀಡಿದರು. ಜಿಲ್ಲೆಯ ಪ್ರಮುಖ ಜಾನುವಾರು ಸಂತೆಗಳಾದ ಶುಕ್ರವಾರ ಶಹಾಪುರ, ಮಂಗಳವಾರ ಯಾದಗಿರಿ, ಸೋಮವಾರ ಗುರುಮಠಕಲ್ ಹಾಗೂ ಗುರುವಾರ ಸೈದಾಪುರದಲ್ಲೂ ವ್ಯವಸ್ಥಿತವಾಗಿ ಜಾನುವಾರು ಸಂತೆ ನಡೆಸುವ ಮೂಲಕ ರೈತರು ಹಾಗೂ ಜಾನುವಾರು ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.4
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.1
- ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು1
- ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.1
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ ನಾಯಕ ಕರೆ ನೀಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.1
- ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ4
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3