Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from Karnataka and nearby areas
- *ಭಾರತ ನಲ್ಲಿ ವೈರಲ್*1
- ಹನೂರು: ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆಯೊಂದು ಬಲಿಯಾದ ಘಟನೆ ನಡೆದಿದೆ. ಅಂಬಿಕಾಪುರ ಗ್ರಾಮದ ಕೃಷ್ಣ ಎಂಬುವವರು ತಮ್ಮ ಮೇಕೆಗಳನ್ನು ಅರಣ್ಯ ಸಮೀಪದ ಜಮೀನೊಂದರ ಬಳಿ ಮೇಯಲು ಬಿಟ್ಟಿದ್ದರು. ಈ ವೇಳೆ ಕಾಡಿನಿಂದ ಹೊರಬಂದ ಚಿರತೆಯೊಂದು ಮೇಕೆಯ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ ಮೇಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆ ಸಂಚರಿಸುತ್ತಿರುವ ಪ್ರದೇಶದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ರೈತರಿಗೆ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.1
- ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ? ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು . ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ1
- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....1
- ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- *ಭಾರತ ನಲ್ಲಿ ವೈರಲ್*1