logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆ ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆಯ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು. ದ.ಕ. ಜಿಲ್ಲೆಯ ಹಲವೆಡೆಯಿಂದ ತಮ್ಮ ಮನವಿಗಳು ಈಡೇರುವ ನಿರೀಕ್ಷೆಯನ್ನು ಹೊತ್ತು ಬಂದಿದ್ದ ನಾಗರಿಕರನ್ನು ಎಂದಿಗೂ ನಿರ್ಲಕ್ಷ್ಯ ಮಾಡಲಾರೆವು. ಅವರುಗಳು ಸಲ್ಲಿಸಿದ ಮನವಿಯಂತೆ ಅಗತ್ಯ ಸೇವೆಗಳು ಕೂಡ ಅವರ ಬಳಿಗೆ ತಲುಪಿಸಲಾಗುವುದು ಎಂಬ ಭರವಸೆಯನ್ನು ನೀಡಲಾಯಿತು.

20 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
20 hrs ago

ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆ ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆಯ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು. ದ.ಕ. ಜಿಲ್ಲೆಯ ಹಲವೆಡೆಯಿಂದ ತಮ್ಮ ಮನವಿಗಳು ಈಡೇರುವ ನಿರೀಕ್ಷೆಯನ್ನು ಹೊತ್ತು ಬಂದಿದ್ದ ನಾಗರಿಕರನ್ನು ಎಂದಿಗೂ ನಿರ್ಲಕ್ಷ್ಯ ಮಾಡಲಾರೆವು. ಅವರುಗಳು ಸಲ್ಲಿಸಿದ ಮನವಿಯಂತೆ ಅಗತ್ಯ ಸೇವೆಗಳು ಕೂಡ ಅವರ ಬಳಿಗೆ ತಲುಪಿಸಲಾಗುವುದು ಎಂಬ ಭರವಸೆಯನ್ನು ನೀಡಲಾಯಿತು.

More news from Shivamogga and nearby areas
  • ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ....... ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ  ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ.  ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
    3
    ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ.......


ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ.
ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ  ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ.
ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ.  ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    15 hrs ago
  • ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ. ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. " ಬಿಜೆಪಿ ಸೇವಾ ಸಂಕಲ್ಪ ಅಭಿಯಾನ" ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    1
    ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ.
ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ 
ದೀಪ ಹಚ್ಚೋಣ.
" ಬಿಜೆಪಿ ಸೇವಾ ಸಂಕಲ್ಪ ಅಭಿಯಾನ"
ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    19 hrs ago
  • ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
    1
    ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು.
ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು.
ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    16 hrs ago
  • ‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ. ​ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ. ​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ​ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ: ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು. ​ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ​ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು. ​ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ: ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು. ​ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.
    4
    ‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ.
​ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ.
​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು.
​ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ:
ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು.
​ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
​ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು:
ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು.
​ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ:
ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು.
​ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    21 hrs ago
  • All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*
    1
    All About,How the political Influencial are misuing #WaqfProperties #WaqfFunds to their advantage 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
    1
    ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    17 hrs ago
  • All About,Requesting our Hon'ble Minister for #Waqf to hand#AnwarManipaddy and #UpaLokayuta report to #CBI for fair review *ಭಾರತ ನಲ್ಲಿ ವೈರಲ್*
    1
    All About,Requesting our Hon'ble Minister for #Waqf to hand#AnwarManipaddy and #UpaLokayuta report to #CBI for fair review 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.. ‘ನಕಲಿ ಹಿಂದುತ್ವವಾದಿ’ ಎಂದು ಘೋಷಣೆ | ಗಡಿಪಾರು ಮಾಡುವಂತೆ ಆಗ್ರಹ ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಕಲಿ ಹಿಂದುತ್ವವಾದಿ ಪ್ರತಾಪ್ ಸಿಂಹ’, ‘ಕೋಮುವಾದಿ ಬಿಜೆಪಿ, ಕೋಮುವಾದಿ ಪ್ರತಾಪ್ ಸಿಂಹ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಟಿ. ನರಸೀಪುರದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಗಣೇಶ ಮೂರ್ತಿ ಹಿಡಿದು, ಪಾದರಕ್ಷೆ ಧರಿಸಿ ಪ್ರತಿಭಟನೆ ನಡೆಸಿರುವುದನ್ನು ಪ್ರಶ್ನಿಸಿದ ಕಾರ್ಯಕರ್ತರು, ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಅಶಾಂತಿ ಮೂಡಿಸುವುದಲ್ಲದೆ, ಯುವಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಮುಸ್ಲಿಮರ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಸೂಚನೆಗಳ ಕುರಿತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಇತರ ಸಂಘಟನೆಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
    1
    ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.. ‘ನಕಲಿ ಹಿಂದುತ್ವವಾದಿ’ ಎಂದು ಘೋಷಣೆ | ಗಡಿಪಾರು ಮಾಡುವಂತೆ ಆಗ್ರಹ
ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಕಲಿ ಹಿಂದುತ್ವವಾದಿ ಪ್ರತಾಪ್ ಸಿಂಹ’, ‘ಕೋಮುವಾದಿ ಬಿಜೆಪಿ, ಕೋಮುವಾದಿ ಪ್ರತಾಪ್ ಸಿಂಹ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಟಿ. ನರಸೀಪುರದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಗಣೇಶ ಮೂರ್ತಿ ಹಿಡಿದು, ಪಾದರಕ್ಷೆ ಧರಿಸಿ ಪ್ರತಿಭಟನೆ ನಡೆಸಿರುವುದನ್ನು ಪ್ರಶ್ನಿಸಿದ ಕಾರ್ಯಕರ್ತರು, ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಅಶಾಂತಿ ಮೂಡಿಸುವುದಲ್ಲದೆ, ಯುವಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಮುಸ್ಲಿಮರ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಸೂಚನೆಗಳ ಕುರಿತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಇತರ ಸಂಘಟನೆಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
    user_Mysore update
    Mysore update
    Voice of people Mysuru, Karnataka•
    20 hrs ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.