logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ಹಕ್ಕುಗಳನ್ನು ಪಡೆಯಲು ಸಾಧ್ಯ: ಉಮೇಶ್ ಪಾಟೀಲ್ ಸೊರಬ: ನಾಡಿನ ರೈತರ ಸಮಸ್ಯೆಗಳಿಗೆ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯುವ ಶಕ್ತಿ ಇರುವುದು ರೈತಪರ ಸಂಘಟನೆಗಳಿಗೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಉಮೇಶ ಪಾಟೀಲ್ ಹೇಳಿದರು. ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಕ್ಕೆ ಅನ್ನ ನೀಡುವ ರೈತನನ್ನು ಗೌರವಿಸುವುದು ಸರ್ಕಾರದ ಆದ್ಯ ಕರ್ತವ್ಯ. ರೈತ ಸಂಘಗಳು ಸದೃಢವಾಗಿ ಸಂಘಟಿತವಾಗಿ ಬಲಯುತವಾಗಿ ಯಾವುದೇ ಹೋರಾಟ ಮಾಡಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ರೈತರು ಇಂದು ಹಲವಾರು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಸರ್ಕಾರಕ್ಕೆ ತಿಳಿಸುವ ಕೆಲಸವಾಗುತ್ತಿದೆ. ರೈತರು ಒಗ್ಗಟ್ಟಾಗಿ ಹೋರಾಡಿದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಘಕ್ಕೆ ಹೆಚ್ಚಿ ಸದಸ್ಯರು ಸೇರ್ಪಡೆಯಾಗುವ ಮೂಲಕ ರೈತ ಸಂಘವನ್ನು ಬಲಪಡಿಸಬೇಕು ಎಂದರು. ಜಿಲ್ಲಾಧ್ಯಕ್ಷ ಮಂಜುನಾಥ್ ಆರೇಕೊಪ್ಪ, ಯುವ ಘಟಕದ ತಾಲೂಕು ಅಧ್ಯಕ್ಷ ಸುಭಾಷ್‌ಚಂದ್ರ ಜಿರಲೆಕೊಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಯೋಗೀಶ್, ಗ್ರಾಮ ಘಟಕದ ಅಧ್ಯಕ್ಷ ಆಂಜನೇಯ, ಉಪಾಧ್ಯಕ್ಷ ಅರುಣ್ ಕುಮಾರ್, ಮೇಘರಾಜ್ ಬೆಟ್ಟದಕೂರ್ಲಿ ಸೇರಿದಂತೆ ಹಲವರು ಇದ್ದರು.

14 hrs ago
user_SANDEEP U. L
SANDEEP U. L
Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
14 hrs ago
9ec2afa7-6943-484a-b2a6-3ae3da1116f0

ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ಹಕ್ಕುಗಳನ್ನು ಪಡೆಯಲು ಸಾಧ್ಯ: ಉಮೇಶ್ ಪಾಟೀಲ್ ಸೊರಬ: ನಾಡಿನ ರೈತರ ಸಮಸ್ಯೆಗಳಿಗೆ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯುವ ಶಕ್ತಿ ಇರುವುದು ರೈತಪರ ಸಂಘಟನೆಗಳಿಗೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಉಮೇಶ ಪಾಟೀಲ್ ಹೇಳಿದರು. ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಕ್ಕೆ ಅನ್ನ ನೀಡುವ ರೈತನನ್ನು ಗೌರವಿಸುವುದು ಸರ್ಕಾರದ ಆದ್ಯ ಕರ್ತವ್ಯ. ರೈತ ಸಂಘಗಳು

a27c3c2a-ca4d-493a-8549-276538d23f05

ಸದೃಢವಾಗಿ ಸಂಘಟಿತವಾಗಿ ಬಲಯುತವಾಗಿ ಯಾವುದೇ ಹೋರಾಟ ಮಾಡಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ರೈತರು ಇಂದು ಹಲವಾರು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಸರ್ಕಾರಕ್ಕೆ ತಿಳಿಸುವ ಕೆಲಸವಾಗುತ್ತಿದೆ. ರೈತರು ಒಗ್ಗಟ್ಟಾಗಿ ಹೋರಾಡಿದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಘಕ್ಕೆ ಹೆಚ್ಚಿ ಸದಸ್ಯರು ಸೇರ್ಪಡೆಯಾಗುವ ಮೂಲಕ ರೈತ ಸಂಘವನ್ನು ಬಲಪಡಿಸಬೇಕು ಎಂದರು. ಜಿಲ್ಲಾಧ್ಯಕ್ಷ ಮಂಜುನಾಥ್ ಆರೇಕೊಪ್ಪ, ಯುವ ಘಟಕದ ತಾಲೂಕು ಅಧ್ಯಕ್ಷ ಸುಭಾಷ್‌ಚಂದ್ರ ಜಿರಲೆಕೊಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಯೋಗೀಶ್, ಗ್ರಾಮ ಘಟಕದ ಅಧ್ಯಕ್ಷ ಆಂಜನೇಯ, ಉಪಾಧ್ಯಕ್ಷ ಅರುಣ್ ಕುಮಾರ್, ಮೇಘರಾಜ್ ಬೆಟ್ಟದಕೂರ್ಲಿ ಸೇರಿದಂತೆ ಹಲವರು ಇದ್ದರು.

More news from Karnataka and nearby areas
  • ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.
    2
    ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. 
ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. 
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ
ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.
    user_ವಿಜಯ ಸಂಘರ್ಷ ನ್ಯೂಸ್
    ವಿಜಯ ಸಂಘರ್ಷ ನ್ಯೂಸ್
    Journalist Shivamogga, Karnataka•
    17 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    15 hrs ago
  • ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..
    1
    ಚಿತ್ರದುರ್ಗ ಬ್ರೇಕಿಂಗ್
ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ..
ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ  ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಿರಿಯೂರಿನ  ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ
ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ
ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು
ಗಂಭೀರವಾಗಿ ಗಾಯಗೊಂಡಿದ್ದಾರೆ..
ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ  ಈ ಭೀಕರ ಅಪಘಾತ
ಸಂಭವಿಸಿದೆ.
ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್
ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು
ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು
ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್,
ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್
ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು
ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ
ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ 
ಅಪಘಾತ ನಡೆದಿದೆ. 
ಘಟನಾ ಸ್ಥಳಕ್ಕೆ DYSP ದಿನಕರ್
ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ದಾಖಲಾಗಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    42 min ago
  • ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    1
    ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು. “ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು. “ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು. "ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು. "ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ.‌ ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು. “ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು. “ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ” “ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು. ವರದಿ: ಶಂಶೀರ್ ಬುಡೋಳಿ
    1
    ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್
ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು.
“ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು.
“ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು.
"ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು.
"ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ.‌ ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು.
“ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು.
“ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ”
“ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    18 hrs ago
  • ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    1
    ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ  
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    user_Yusuf Bepari
    Yusuf Bepari
    Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    13 hrs ago
  • ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.
    1
    ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    17 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.