logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸೆ.17 ರಂದು ಕೊಪ್ಪಳದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ aksharakranti news ಸೆ.17 ರಂದು ಕೊಪ್ಪಳದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಕೊಪ್ಪಳ,: ಜಿಲ್ಲಾಡಳಿತ ಕೊಪ್ಪಳ ವತಿಯಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಧ್ವಜಾರೋಹಣ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ ಅವರು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆಯು ತಿಳಿಸಿದೆ.

1 hr ago
user_ಅಕ್ಷರಕ್ರಾಂತಿ ನ್ಯೂಸ್
ಅಕ್ಷರಕ್ರಾಂತಿ ನ್ಯೂಸ್
Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
1 hr ago
0f6beb58-9954-446f-a18b-4c6fdcb2343e

ಸೆ.17 ರಂದು ಕೊಪ್ಪಳದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ aksharakranti news ಸೆ.17 ರಂದು ಕೊಪ್ಪಳದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಕೊಪ್ಪಳ,: ಜಿಲ್ಲಾಡಳಿತ ಕೊಪ್ಪಳ ವತಿಯಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಧ್ವಜಾರೋಹಣ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ ಅವರು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆಯು ತಿಳಿಸಿದೆ.

More news from ಕರ್ನಾಟಕ and nearby areas
  • 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad
    1
    🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ…

ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು.

ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು.

“ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ.

ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ.

ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ.

ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁

ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು.
ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ,

ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ.

ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ.

ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ;

ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ.

🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ.

ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ.

— @Anil Karne Gajendragad
    user_Praveen Karne Gajendragad
    Praveen Karne Gajendragad
    Farmer ಗಜೇಂದ್ರಗಡ, ಗದಗ, ಕರ್ನಾಟಕ•
    6 hrs ago
  • *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    2
    *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!*
ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ.
ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
*ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ.
ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ.
ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ.
ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    19 hrs ago
  • ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    2
    ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ  ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು.
ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು..
ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    19 hrs ago
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    20 hrs ago
  • ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    3
    ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ  ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ  ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    2
    ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    10 hrs ago
  • "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....
    1
    "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
"ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    7 hrs ago
  • ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    4
    ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.