logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು. ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.

9 hrs ago
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
9 hrs ago

ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು. ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    3
    ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು.  
ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ
ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ
ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು.
ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು.
ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು.
ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    17 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    6 hrs ago
  • ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. ನಂತರ ಪಕ್ಷದ ಮುಖಂಡರ ತಂಡವು ತಾಳಿಕೋಟಿ ಮಾರ್ಗವಾಗಿ ದೇವರ ಹಿಪ್ಪರಗಿ ಮತಕ್ಷೇತ್ರದ ಗ್ರಾಮಗಳಿಗೆ ತೆರಳುವ ಸಂದರ್ಭದಲ್ಲಿ ತಾಳಿಕೋಟಿ ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಮಯದಲ್ಲಿ ಪಕ್ಷದ ಮುಖಂಡರಾದ ಕಾಶಿನಾಥ್ ಮುರಾಳ, ಎಂ.ಎಸ್.ಸರಶಟ್ಟಿ, ವಾಸುದೇವ ಹೆಬಸೂರ, ಮಾನಸಿಂಗ್ ಕೊಕಟನೂರ, ಶಿವಶಂಕರ ಹಿರೇಮಠ, ಪರಶುರಾಮ ಕಟ್ಟಿಮನಿ, ರಾಘವೇಂದ್ರ ಮಾನೆ ಹಾಗೂ ರೈತರು ಇದ್ದರು.
    1
    ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ  ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ  ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ  ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ  ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. 
ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ  ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ  ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ  ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ  ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. ನಂತರ ಪಕ್ಷದ ಮುಖಂಡರ ತಂಡವು  ತಾಳಿಕೋಟಿ ಮಾರ್ಗವಾಗಿ ದೇವರ ಹಿಪ್ಪರಗಿ ಮತಕ್ಷೇತ್ರದ ಗ್ರಾಮಗಳಿಗೆ ತೆರಳುವ ಸಂದರ್ಭದಲ್ಲಿ ತಾಳಿಕೋಟಿ  ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ  ಪಕ್ಷದ ಮುಖಂಡರು ಕಾರ್ಯಕರ್ತರು ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಮಯದಲ್ಲಿ ಪಕ್ಷದ ಮುಖಂಡರಾದ ಕಾಶಿನಾಥ್ ಮುರಾಳ, ಎಂ.ಎಸ್.ಸರಶಟ್ಟಿ, ವಾಸುದೇವ ಹೆಬಸೂರ, ಮಾನಸಿಂಗ್ ಕೊಕಟನೂರ, ಶಿವಶಂಕರ ಹಿರೇಮಠ, ಪರಶುರಾಮ ಕಟ್ಟಿಮನಿ, ರಾಘವೇಂದ್ರ ಮಾನೆ ಹಾಗೂ ರೈತರು ಇದ್ದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    10 hrs ago
  • ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ
    1
    ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ
    user_Sharanugouda Patil
    Sharanugouda Patil
    Muddebihal, Vijayapura•
    5 hrs ago
  • ಪುಷ್ಯ ಮಳೆಯ ಸಿಂಚನಕ್ಕೆ ಚಿಂಚೋಳಿ ತಾಲ್ಲೂಕು ತಂಪು – ರೈತರ ಮುಖದಲ್ಲಿ ಮಂದಹಾಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಪುಷ್ಯ ಮಳೆಯ ಸಿಂಚನ ಮುಂದುವರಿದಿದ್ದು, ರೈತ ಸಮುದಾಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುರಿಯುತ್ತಿರುವ ಮಳೆ ಜನಜೀವನಕ್ಕೆ ತಂಪು ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ತೊಗರಿ, ಕಡಲೆ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಅನುಕೂಲಕರವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣದ ನಡುವೆ ಸುರಿಯುತ್ತಿರುವ ಮಳೆಯು ಭೂಗರ್ಭ ಜಲಮಟ್ಟ ಹೆಚ್ಚಳಕ್ಕೂ ನೆರವಾಗುವ ಸಾಧ್ಯತೆ ಇದೆ. ಮಳೆಯ ಕಾರಣದಿಂದ ಕೆಲ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ಹರಿದರೂ ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ. ಮತ್ತೊಂದೆಡೆ, ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದ ಜನರಿಗೆ ಪುಷ್ಯ ಮಳೆಯ ತಂಪು ನೆಮ್ಮದಿ ತಂದಿದೆ. ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಸಲಹೆ ನೀಡಲಾಗಿದೆ. ಒಟ್ಟಾರೆ, ಚಿಂಚೋಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಪುಷ್ಯ ಮಳೆಯು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ರೈತರು ಕಾದು ಕುಳಿತಿದ್ದಾರೆ.
    2
    ಪುಷ್ಯ ಮಳೆಯ ಸಿಂಚನಕ್ಕೆ ಚಿಂಚೋಳಿ ತಾಲ್ಲೂಕು ತಂಪು – ರೈತರ ಮುಖದಲ್ಲಿ ಮಂದಹಾಸ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಪುಷ್ಯ ಮಳೆಯ ಸಿಂಚನ ಮುಂದುವರಿದಿದ್ದು, ರೈತ ಸಮುದಾಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುರಿಯುತ್ತಿರುವ ಮಳೆ ಜನಜೀವನಕ್ಕೆ ತಂಪು ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ.
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ತೊಗರಿ, ಕಡಲೆ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಅನುಕೂಲಕರವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣದ ನಡುವೆ ಸುರಿಯುತ್ತಿರುವ ಮಳೆಯು ಭೂಗರ್ಭ ಜಲಮಟ್ಟ ಹೆಚ್ಚಳಕ್ಕೂ ನೆರವಾಗುವ ಸಾಧ್ಯತೆ ಇದೆ.
ಮಳೆಯ ಕಾರಣದಿಂದ ಕೆಲ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ಹರಿದರೂ ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ. ಮತ್ತೊಂದೆಡೆ, ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದ ಜನರಿಗೆ ಪುಷ್ಯ ಮಳೆಯ ತಂಪು ನೆಮ್ಮದಿ ತಂದಿದೆ.
ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಸಲಹೆ ನೀಡಲಾಗಿದೆ. ಒಟ್ಟಾರೆ, ಚಿಂಚೋಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಪುಷ್ಯ ಮಳೆಯು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ರೈತರು ಕಾದು ಕುಳಿತಿದ್ದಾರೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    14 hrs ago
  • ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು. ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.
    1
    ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ  ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ 
ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.
ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
  • ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್, ಜಾತ್ರೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದರು. ಕೊಂಡಮಾಯಿ ಚೇಳಿನ ಜಾತ್ರೆಗೆ ಮೂಲಸೌಕರ್ಯ ಕಲ್ಪಿಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿ: ಉಮೇಶ ಕೆ. ಮುದ್ನಾಳ್ ಆಗ್ರಹ ಗುರುಮಠಕಲ್: ತಾಲ್ಲೂಕಿನ ಕಂದಕೂರ ಗ್ರಾಮದ ಐತಿಹಾಸಿಕ ಕೊಂಡಮಾಯಿ ದೇವಿ ಚೇಳಿನ ಜಾತ್ರೆ ನಾಗರ ಪಂಚಮಿ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದ್ದಾರೆ. ಗುರುವಾರ ಬೆಳಿಗ್ಗೆ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಂದಕೂರ ಬೆಟ್ಟದ ಮೇಲಿರುವ ಈ ದೇವಾಲಯಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಚೇಳಿನ ಜಾತ್ರೆ ಎಂಬ ವಿಶಿಷ್ಟ ಆಚರಣೆಯಿಂದ ಈ ಕ್ಷೇತ್ರ ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜಾತ್ರೆಯ ದಿನ ಚೇಳು ಕಚ್ಚಿದರೂ ಯಾವುದೇ ಅನಾಹುತವಾಗುವುದಿಲ್ಲ ಎಂಬ ನಂಬಿಕೆ ಭಕ್ತರಲ್ಲಿ ಇದೆ. ಈ ಅಪರೂಪದ ಸಂಪ್ರದಾಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಸೇರುತ್ತಾರೆ ಎಂದರು. ಆದರೆ, ಇಷ್ಟೊಂದು ಮಹತ್ವದ ಧಾರ್ಮಿಕ ಕ್ಷೇತ್ರಕ್ಕೆ ಇಂದಿಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ವಿದ್ಯುತ್ ಬೆಳಕು, ಶೌಚಾಲಯ ಹಾಗೂ ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ ಎಂದು ಆರೋಪಿಸಿದರು. ದೇಗುಲಕ್ಕೆ ತೆರಳುವ ಸುಮಾರು ಎರಡು ಕಿಲೋಮೀಟರ್ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದರೆ ವಾಹನ ಸಂಚಾರ ದುಸ್ತರವಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು ಭಕ್ತರಿಗೆ ತೊಂದರೆ ಉಂಟುಮಾಡುತ್ತಿವೆ. ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಭಕ್ತರು ಕತ್ತಲಲ್ಲೇ ಬೆಟ್ಟ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ನಾಗರ ಪಂಚಮಿ ಜಾತ್ರೆಗೂ ಮುನ್ನ ಕಂದಕೂರ ಸರ್ಕಲ್‌ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಭೀಮಾಶಂಕರ, ಪವನ, ಮಲ್ಲೇಶಿ, ಶಶಿಕಾಂತ, ಭರತಕುಮಾರ, ಹಣಮಂತ, ಮಹೇಶ್, ಅಂಜು, ಬನ್ನಪ್ಪ, ನಾಗಪ್ಪ, ಚಾಂದಪಾಶಾ, ಭಾಗಪ್ಪ, ಮಲ್ಲು, ಸಮೀರ್, ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೋಟ್:೦೧ ಕೊಂಡಮಾಯಿ ದೇವಿ ದೇಗುಲಕ್ಕೆ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. – ಉಮೇಶ ಕೆ. ಮುದ್ನಾಳ್, ಸಾಮಾಜಿಕ ಹೋರಾಟಗಾರ
    4
    ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್, ಜಾತ್ರೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದರು.
ಕೊಂಡಮಾಯಿ ಚೇಳಿನ ಜಾತ್ರೆಗೆ ಮೂಲಸೌಕರ್ಯ ಕಲ್ಪಿಸಿ
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿ: ಉಮೇಶ ಕೆ. ಮುದ್ನಾಳ್ ಆಗ್ರಹ
ಗುರುಮಠಕಲ್: ತಾಲ್ಲೂಕಿನ ಕಂದಕೂರ ಗ್ರಾಮದ ಐತಿಹಾಸಿಕ ಕೊಂಡಮಾಯಿ ದೇವಿ ಚೇಳಿನ ಜಾತ್ರೆ ನಾಗರ ಪಂಚಮಿ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದ್ದಾರೆ.
ಗುರುವಾರ ಬೆಳಿಗ್ಗೆ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಂದಕೂರ ಬೆಟ್ಟದ ಮೇಲಿರುವ ಈ ದೇವಾಲಯಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಚೇಳಿನ ಜಾತ್ರೆ ಎಂಬ ವಿಶಿಷ್ಟ ಆಚರಣೆಯಿಂದ ಈ ಕ್ಷೇತ್ರ ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜಾತ್ರೆಯ ದಿನ ಚೇಳು ಕಚ್ಚಿದರೂ ಯಾವುದೇ ಅನಾಹುತವಾಗುವುದಿಲ್ಲ ಎಂಬ ನಂಬಿಕೆ ಭಕ್ತರಲ್ಲಿ ಇದೆ. ಈ ಅಪರೂಪದ ಸಂಪ್ರದಾಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಸೇರುತ್ತಾರೆ ಎಂದರು.
ಆದರೆ, ಇಷ್ಟೊಂದು ಮಹತ್ವದ ಧಾರ್ಮಿಕ ಕ್ಷೇತ್ರಕ್ಕೆ ಇಂದಿಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ವಿದ್ಯುತ್ ಬೆಳಕು, ಶೌಚಾಲಯ ಹಾಗೂ ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ ಎಂದು ಆರೋಪಿಸಿದರು.
ದೇಗುಲಕ್ಕೆ ತೆರಳುವ ಸುಮಾರು ಎರಡು ಕಿಲೋಮೀಟರ್ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದರೆ ವಾಹನ ಸಂಚಾರ ದುಸ್ತರವಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು ಭಕ್ತರಿಗೆ ತೊಂದರೆ ಉಂಟುಮಾಡುತ್ತಿವೆ. ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಭಕ್ತರು ಕತ್ತಲಲ್ಲೇ ಬೆಟ್ಟ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ನಾಗರ ಪಂಚಮಿ ಜಾತ್ರೆಗೂ ಮುನ್ನ ಕಂದಕೂರ ಸರ್ಕಲ್‌ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಭೀಮಾಶಂಕರ, ಪವನ, ಮಲ್ಲೇಶಿ, ಶಶಿಕಾಂತ, ಭರತಕುಮಾರ, ಹಣಮಂತ, ಮಹೇಶ್, ಅಂಜು, ಬನ್ನಪ್ಪ, ನಾಗಪ್ಪ, ಚಾಂದಪಾಶಾ, ಭಾಗಪ್ಪ, ಮಲ್ಲು, ಸಮೀರ್, ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೋಟ್:೦೧
ಕೊಂಡಮಾಯಿ ದೇವಿ ದೇಗುಲಕ್ಕೆ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು.
– ಉಮೇಶ ಕೆ. ಮುದ್ನಾಳ್, ಸಾಮಾಜಿಕ ಹೋರಾಟಗಾರ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    17 hrs ago
  • ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ
    1
    ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್  ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ
    user_Sharanugouda Patil
    Sharanugouda Patil
    Muddebihal, Vijayapura•
    15 hrs ago
  • ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಪತ್ನಿ ಮತ್ತು 7 ತಿಂಗಳ ಮಗು ಸಾವಿನ ಪ್ರಕರಣ ಬಳ್ಳಾರಿ ಜಿಲ್ಲೆಯ ಅಂದ್ರಾಳ್ ಪ್ರದೇಶದಲ್ಲಿ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗು ಆಶ್ಬಿನಿ ಸಾವಿಗೀಡಾಗಿರುವ ಪ್ರಕರಣದಲ್ಲಿ ಪತಿ ಹೊನ್ನೂರುಸ್ವಾಮಿ ಮೇಲೆ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲವು ದಿನಗಳಿಂದ ಕುಟುಂಬ ಸಂಬಂಧಿತ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದು, ಇದೇ ವಿಚಾರ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ. #Ballari #BellaryNews #BreakingNews #KarnatakaNews #CrimeNews #BallariBreaking #ASNNews24Kannada #LatestNews #KarnatakaBreaking #PoliceInvestigation #Andral #NewsUpdate #KannadaNews #IndiaNews #viralnews
    1
    ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಪತ್ನಿ ಮತ್ತು 7 ತಿಂಗಳ ಮಗು ಸಾವಿನ ಪ್ರಕರಣ
ಬಳ್ಳಾರಿ ಜಿಲ್ಲೆಯ ಅಂದ್ರಾಳ್ ಪ್ರದೇಶದಲ್ಲಿ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗು ಆಶ್ಬಿನಿ ಸಾವಿಗೀಡಾಗಿರುವ ಪ್ರಕರಣದಲ್ಲಿ ಪತಿ ಹೊನ್ನೂರುಸ್ವಾಮಿ ಮೇಲೆ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲವು ದಿನಗಳಿಂದ ಕುಟುಂಬ ಸಂಬಂಧಿತ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದು, ಇದೇ ವಿಚಾರ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ.
#Ballari #BellaryNews #BreakingNews #KarnatakaNews #CrimeNews #BallariBreaking #ASNNews24Kannada #LatestNews #KarnatakaBreaking #PoliceInvestigation #Andral #NewsUpdate #KannadaNews #IndiaNews #viralnews
    user_AsnNews24Kannada
    AsnNews24Kannada
    Local News Reporter Ballari, Karnataka•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.