ಶಹಾಪುರ ತಾಲೂಕಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಎಷ್ಟೆ ಅಕ್ರಮ ನಡೆದರು ಯಾರು ಕೇಳೋರಿಲ್ಲದಂತಾಗಿದೆ ಪ್ರದೀಪ್ ಅಣಬಿ ಆರೋಪ ಶಹಾಪೂರ:ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ವಿರುದ್ಧ ಧ್ವನಿ ಎತ್ತದ ದಯನೀಯ ಸ್ಥಿತಿಯಲ್ಲಿ ವಿರೋಧ ಪಕ್ಷಗಳ ಸ್ಥಿತಿ ಬಂದಿದೆ,ಗಾಢನಿದ್ದೆಯಲ್ಲಿ ಕುಂಬಕರ್ಣ ನಿದ್ದೆಯಲ್ಲಿ ಮಲಗಿರುವ ಗುರಪಾಟೀಲ ಶಿರವಾಳ ಮಾಜಿ ಶಾಸಕರು ಜೆಡಿಎಸ್ ಮುಖಂಡರುಶಹಾಪುರ ಹಾಗೂ ಬಿಜೆಪಿ ಮುಖಂಡರುಶ್ರೀ ಬಸವರಾಜಪ್ಪಗೌಡ ವಿಭೂತಿಹಳ್ಳಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಯಾದಗಿರಿ ಜಿಲ್ಲಾ ಇವರಿಬ್ಬರೂ ತಮ್ಮ ತಮ್ಮ ಸ್ವಾರ್ಥಕ್ಕಾಗಿ ಕಾರ್ಯಕರ್ತರ ಏಳಿಗೆಯನ್ನು ಮರೆತು ತಮ್ಮ ಸ್ವಹಿತಕ್ಕಾಗಿ ಪಕ್ಷದ ಕಾರ್ಯಕರ್ತರನ್ನು ಬಲಿಕೋಡುತ್ತಿದ್ದಾರೆ,ಮಂತ್ರಿಗಳು ಕೇವಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇದ್ದೀರಾ ಜನ ಇಡೀ ಯಾದಗಿರಿ ಜಿಲ್ಲೆ ಪ್ರವಾಸ ಮಾಡುವ ಬದಲು ಕೇವಲ ಶಹಾಪುರ ಸ್ವಕ್ಷೇತ್ರ ಸ್ವಾಮಿತರಾಗಿದ್ದಾರೆ ಇದು ನಮ್ಮ ತಾಲೂಕಿನ ದುರಂತವೇ ಸರಿ ಜಿಲ್ಲೆಯಲ್ಲಿ ಹಲವಾರು ಜಲಂತ ಸಮಸ್ಯೆಗಳಿವೆ ಕುಡಿಯುವನೀರು, ಕಳಪೆ, ಸಿಸಿರಸ್ತೆ, ಚರಂಡಿ, ರಸ್ತೆ ಹದಗೆಟ್ಟು ರಸ್ತೆಗಳು ಇವೆಲ್ಲ ಕೆಲಸಗಳು ಹದಗೆಟ್ಟಿರುವ ಯಾವ ಮುಖಂಡರು ಬಿಜೆಪಿ ಹಾಗೂಜೆಡಿಎಸ್ ಮುಖಂಡರು ಪ್ರಶ್ನಿಸುತ್ತಿಲ್ಲ ಇದು ಎಷ್ಟು ಸರಿ? ಏನೋ ಯಕ್ಷಪ್ರಶ್ನೆವಾಗಿದೆ ಇನ್ನಾದರೂ ವಿರೋಧ ಪಕ್ಷದವರು ಎಚ್ಚೆತ್ತುಕೊಂಡು ಇಂಥ ಜಲಂತ ಸಮಸ್ಯೆಗಳನ್ನ ಕೂಡಲೇ ಬಗೆಹರಿಸಿತಾಲೂಕಿಗೆ ಒಳ್ಳೆ ಕೆಲಸಗಳಾಗಲಿ ಎಂದು ನನ್ನ ಆಶಾಭಾವನೆಯಾಗಿದೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ

- Post by ಸುಭಾಷ ಗೋಡಿ1
- Post by Star Kannada News 24×71
- ಕೇಂದ್ರದಲ್ಲಿ ಇರುವಂತ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ರಾಯಚೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ, ಮಹದಾಯಿ ಯೋಜನೆ, ಮೇಕೆದಾಟು ಸೇರಿ ಹಲವು ಯೋಜನೆಗಳ ಬಗ್ಗೆ ಗಮನ ಹರಿಸಿಲ್ಲ. ಕರ್ನಾಟಕಕ್ಕೆ ಅನ್ಯಾಯವಾದಾಗ ಬಿಜೆಪಿ ಸಚಿವರು ಸಂಸದರು ಯಾರು ದ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು.1
- ಸೂರಿ ಅಣ್ಣಾ ಚಿತ್ರ ತಂಡದಿಂದ ಪತ್ರಿಕಾ...1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ. ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.1
- ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಡಾ.ಆರ್.ಸಿ.ಭಂಡಾರಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.1
- ಬಾಗಲಕೋಟೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ 2022ನೇ ಸಾಲಿನಲ್ಲಿ ಸುಮಾರು 8.40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ, ಗ್ರಂಥಾಲಯ ಹಾಗೂ ವಾಚನಾಲಯ ಕಟ್ಟಡ ಉದ್ಘಾಟನೆ ಆಗದೇ ಬೀಗ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೇ ಇರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರು ಕಟ್ಟಡವನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಸಾರ್ವಜನಿಕರ ತೆರಿಗೆಯ ಹಣದಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ತಕ್ಷಣವೇ ಸಾರ್ವಜನಿಕರಿಗೆ ತೆರೆಯಬೇಕು. ಇಲ್ಲಿ ಗ್ರಂಥಾಲಯ ಎಂದು ಫಲಕದಲ್ಲಿ ಉಲ್ಲೇಖಿಸಿದ್ದರೆ, ಗ್ರಂಥಾಲಯದ ವ್ಯವಸ್ಥೆ ಎಲ್ಲಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಮೂಲಭೂತ ಹಕ್ಕುಗಳಾದ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅವರು ಆಗ್ರಹಿಸಿದರು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇದೀಗ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.1
- Post by Star Kannada News 24×71