logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್‌ಒಸಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್‌ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ 24x7 ಭದ್ರತೆ ಹಾಗೂ ಸಿಸಿಟಿವಿ ವ್ಯವಸ್ಥೆ ಕಡ್ಡಾಯವಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಕನಿಷ್ಠ 30 ದಿನಗಳ ಕಾಲ ಸಂಗ್ರಹಿಸಬೇಕು. ಧಾರ್ಮಿಕ ಭಾವನೆ ಕೆರಳಿಸುವ ಘೋಷಣೆ, ಬ್ಯಾನರ್‌ಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಈವ್‌ಟೀಸಿಂಗ್, ಹಿಂಬಾಲಿಸುವುದು ಹಾಗೂ ಲೈಂಗಿಕ ಕಿರುಕುಳಕ್ಕೆ ಶೂನ್ಯ ಸಹಿಷ್ಣುತೆ ಇರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ತು ಸೇವೆ, ಅಗ್ನಿಶಾಮಕ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಆಯೋಜಕರು ಕಡ್ಡಾಯವಾಗಿ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿದಲ್ಲಿ BNS ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

9 hrs ago
user_Sathyapatha news plus
Sathyapatha news plus
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
9 hrs ago
5df5daad-9ac8-4f8f-abb3-f66c438b9f21

ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್‌ಒಸಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್‌ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ 24x7 ಭದ್ರತೆ ಹಾಗೂ ಸಿಸಿಟಿವಿ ವ್ಯವಸ್ಥೆ ಕಡ್ಡಾಯವಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಕನಿಷ್ಠ 30 ದಿನಗಳ ಕಾಲ ಸಂಗ್ರಹಿಸಬೇಕು. ಧಾರ್ಮಿಕ ಭಾವನೆ ಕೆರಳಿಸುವ ಘೋಷಣೆ, ಬ್ಯಾನರ್‌ಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಈವ್‌ಟೀಸಿಂಗ್, ಹಿಂಬಾಲಿಸುವುದು ಹಾಗೂ ಲೈಂಗಿಕ ಕಿರುಕುಳಕ್ಕೆ ಶೂನ್ಯ ಸಹಿಷ್ಣುತೆ ಇರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ತು ಸೇವೆ, ಅಗ್ನಿಶಾಮಕ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಆಯೋಜಕರು ಕಡ್ಡಾಯವಾಗಿ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿದಲ್ಲಿ BNS ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

More news from ಕರ್ನಾಟಕ and nearby areas
  • ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....! ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ. ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    1
    ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....!
ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ.
ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.
ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ.
ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
  • ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ. ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    1
    ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು
ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ.
ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    14 hrs ago
  • ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    1
    ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ
ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • ಕೊಡಗಿನಲ್ಲಿ ಧಾರಾಕಾರ ಮಳೆ, ತುಂಬಿ ಹರಿಯುತ್ತಿರುವ ಕಾವೇರಿ ನದಿ ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    1
    ಕೊಡಗಿನಲ್ಲಿ ಧಾರಾಕಾರ ಮಳೆ,  ತುಂಬಿ ಹರಿಯುತ್ತಿರುವ ಕಾವೇರಿ ನದಿ
ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    18 hrs ago
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    1
    ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    19 hrs ago
  • ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    1
    ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
-------------
ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
27 ಪಂಚಾಯಿತಿಗಳಲ್ಲೂ ಸಂಘ ರಚನೆ:
ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    10 hrs ago
  • ದರ್ಬೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.31ರಂದು ‘ಪುತ್ತೂರು ಚಲೋ’ ಪುತ್ತೂರು: ದರ್ಬೆಯಲ್ಲಿ ಆ.೨೧ರಂದು ನಡೆದ ಘಟನೆಗೆ ಸಂಬಂಧಿಸಿ ಮೂರು ಪ್ರಮುಖ ಭೇಡಿಕೆಯನ್ನು ಮುಂದಿಟ್ಟು ನ್ಯಾಯ ಕೊಡಿಸುವಂತೆ ಆಗ್ರಹಿಸಿ ಆ.೩೧ರಂದು ಪುತ್ತೂರು ಚಲೋ ಪ್ರತಿಭಟನಾ ಮೆರವಣಿಗೆ ಸಮಾವೇಶ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಬಜರಂಗದಳ ವಿಭಾಗ ಸಹಸಂಚಾಲಕ ಪುನಿತ್ ಅತ್ತಾವರ, ಹಿಂದು ಜಾಗರಣ ವೇದಿಕೆ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಅವರು ಜಂಟಿಯಾಗಿ ತಿಳಿಸಿದ್ದಾರೆ. ದರ್ಬೆಯ ಘಟನೆಯಿಂದಾಗಿ ಗಾಯಗೊಂಡು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಾಗಿರುವ ಅಂಜನಾ ಪೈ ಅವರ ಆರೋಗ್ಯ ವಿಚಾರಿಸಲು ಬಂದಿದ್ದ ಅವರು ಮಾದ್ಯಮದೊಂದಿಗೆ ಮಾತನಾಡಿದರು. ಮುಸ್ಲಿಂ ಜಿಹಾದಿಗಳಿಂದ ಹಳೆಗೊಳಗಾದ ಆ ತಾಯಿಯ ಭೇಟಿ ಮಾಡಲು ಇವತ್ತು ನಾವು ಬಂದಿದ್ದೇವೆ. ಇವತ್ತು ಹಿಂದೂ ಜಾಗರಣೆ ವೇದಿಕೆ ಕರೆಕೊಟ್ಟ ಸ್ವಯಂ ಪ್ರೇರಿತ ಬಂದ್‌ಗೆ ಹಿಂದು ಸಮಾಜ ಸಹಕಾರ ನೀಡಿದೆ. ಆದರೆ ಆ ತಾಯಿಗೆ ಹಲ್ಲೆ ಮಾಡಿದವರನ್ನು ಇಷ್ಟರವರೆಗೆ ಬಂದನ ಮಾಡಿಲ್ಲ, ನಮ್ಮ ಆಗ್ರಹ ಇಷ್ಟೆ. ಅವರನ್ನು ಬಂಧಿಸಬೇಕು. ಈ ಘಟನೆಯ ಹಿಂದಿರುವ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕೂಡಾ ತನಿಖೆ ಮಾಡಬೇಕು. ತಾಯಿಯ ರಕ್ಷಣೆಗೆ ಬಂದ ಅವರ ಮಗನ ಮೇಲೆ ಇವತ್ತು ಕೇಸು ದಾಖಲು ಮಾಡಿ, ಅವನ ಮೇಲೆ ಕೊಲೆ ಯತ್ನ ಕೇಸು ದಾಖಲು ಮಾಡಿ, ಅವನನ್ನು ಇವತ್ತು ಜೈಲಿಗೆ ಹಾಕಿದ್ದಾರೆ. ಅವನ ಮೇಲೆ ಹಾಕಿದಂತಹ ೩೦೭, ಬಿಎನ್‌ಎಸ್ ಸೆಕ್ಷನ್ ೧೦೯, ಸೆಕ್ಷನ್ ಅನ್ನು ಕೂಡ ತೆಗೆಯಬೇಕು ಎಂಬ ನಿಟ್ಟಿನಲ್ಲಿ ಆ. ೩೧ರ ಸೋಮವಾರ ಇಡೀ ಹಿಂದೂ ಸಮಾಜವನ್ನು ಒಟ್ಟು ಸೇರಿಸಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣೆ ವೇದಿಕೆ ಪುತ್ತೂರು ಇದರ ವತಿಯಿಂದ ’ಪುತ್ತೂರು ಚಲೋ’ ಎಂಬ ಕಾರ್ಯಕ್ರಮವನ್ನು, ಬಹಳ ದೊಡ್ಡದಾದ ಒಂದು ಪ್ರತಿಭಟನೆಯನ್ನು ಪುತ್ತೂರಿನಲ್ಲಿ ನಾವು ನಡೆಸಲು ನಿರ್ಧಾರ ಮಾಡಿದ್ದೇವೆ. ಹಾಗಾಗಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಹಿಂದೂ ಸಮಾಜದ ಯುವಕರು, ಇಡೀ ಹಿಂದೂ ಸಮಾಜ, ಈ ಪುತ್ತೂರಿನ ವ್ಯಾಪಾರಸ್ಥರು, ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನೆಲ್ಲ ಬಂದು ಮಾಡುವಂತೆ ಕರೆ ಕೊಡುವುದಿಲ್ಲ. ಆದರೆ ಅವರೆಲ್ಲ ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುಂತೆ ಮನವಿ ಮಾಡುತ್ತೇವೆ. ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತಾಧಿಕಾರಿಗಳು, ಹಿಂದೂ ಜಾಗರಣೆ ವೇದಿಕೆಯ ಪ್ರಾಂತ ಮಟ್ಟದ ಪ್ರಮುಖರು ಎಲ್ಲರೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದವರು ಹೇಳಿದರು. ಸರಕಾರ ತುಷ್ಟೀಕರಣವನ್ನು ಮಾಡುತ್ತಿದೆ: ಹಿಂದು ಜಾಗರಣ ವೇದಿಕೆ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಅವರು ಮಾತನಾಡಿ ದರ್ಬೆಯಲ್ಲಿ ನಡೆದ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತಾ ಇದೆ, ಅಂಜನಾ ಪೈ ಅವರನ್ನು ನೀಡಿದ ದೂರಿನ ತನಿಖೆಯಾಗಬೇಕು. ಅವರ ಕೈ ಮತ್ತು ಕಾಲಿಗೆ ಶಸ್ತ್ರಚಿಕಿತ್ಸೆಗೆ ಆಗಿದೆ. ಅಂಜನಾ ಪೈ ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ, ಕಾನೂನಿನ ಅಡಿಯಲ್ಲಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಅನ್ನುವಂತಹ ಆಗ್ರಹವನ್ನು ಇಡೀ ಹಿಂದೂ ಸಮಾಜ ಆಗ್ರಹಿಸುತ್ತಾ ಇವತ್ತು ಸ್ವಯಂ ಪ್ರೇರಿತ ಬಂದ್ ಆಗಿದೆ. ಆದರೆ ಈ ಹೋರಾಟವನ್ನು ನಾವು ಇಲ್ಲಿಗೆ ಮುಕ್ತಾಯಗೊಳಿಸುವುದಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಕೂಡ ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ. ಯಾಕೆಂದರೆ ಸರಕಾರವು ಕೂಡ ಒಂದು ರೀತಿಯಲ್ಲಿ ತುಷ್ಟೀಕರಣವನ್ನು ಮಾಡ್ತಾ ಇದೆ. ಮುಂದಿನ ದಿನಗಳಲ್ಲಿ ಈ ಸಮಾಜದಲ್ಲಿ ಬದುಕಿ ಬಾಳಬೇಕಾದರೆ ನಾವು ರಸ್ತೆಗೆ ಇಳಿಬೇಕಾದಂತಹ ಅನಿವಾರ್ಯ ಪರಿಸ್ಥಿತಿ ಇದ್ದಾಗ, ನಾವು ಇಳಿದೇ ಇಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು ಆ.೩೧ರಂದು ಪುತ್ತೂರು ಚಲೋ ಅನ್ನುವಂತಹ ಹೆಸರಿನಲ್ಲಿ ಒಂದು ಜನಾಂದೋಲನವನ್ನು ವಿಶ್ವ ಹಿಂದೂ ಪರಿಷತ್ತು, ಬಜರಂಗಳ ಮತ್ತು ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ, ಇಡೀ ಹಿಂದೂ ಸಮಾಜದ ಪರಿವಾರ ಸಂಘಟನೆಗಳು ಎಲ್ಲರೂ ಸೇರಿ ನಡೆಯಲಿದೆ ಎಂದರು. ಈ ಸಂದರ್ಭ ವಿಶ್ವಹಿಂದು ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಹಿಂದು ಜಾಗರಣ ವೇದಿಕೆಯ ನರಸಿಂಹ ಮಾಣಿ, ವಿಶ್ವಹಿಂದೂ ಪರಿಷತ್‌ನ ನವಿನ್ ನೆರಿಯ, ದಾಮೋದರ್ ಪಾಟಾಳಿ, ಸಂತೋಷ್, ಹರೀಶ್ ದೋಳ್ಪಾಡಿ, ರವಿ ಶೆಟ್ಟಿ ಕಡಬ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
    1
    ದರ್ಬೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.31ರಂದು ‘ಪುತ್ತೂರು ಚಲೋ’
ಪುತ್ತೂರು: ದರ್ಬೆಯಲ್ಲಿ ಆ.೨೧ರಂದು ನಡೆದ ಘಟನೆಗೆ ಸಂಬಂಧಿಸಿ ಮೂರು ಪ್ರಮುಖ ಭೇಡಿಕೆಯನ್ನು ಮುಂದಿಟ್ಟು ನ್ಯಾಯ ಕೊಡಿಸುವಂತೆ ಆಗ್ರಹಿಸಿ ಆ.೩೧ರಂದು ಪುತ್ತೂರು ಚಲೋ ಪ್ರತಿಭಟನಾ ಮೆರವಣಿಗೆ ಸಮಾವೇಶ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಬಜರಂಗದಳ ವಿಭಾಗ ಸಹಸಂಚಾಲಕ ಪುನಿತ್ ಅತ್ತಾವರ, ಹಿಂದು ಜಾಗರಣ ವೇದಿಕೆ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಅವರು ಜಂಟಿಯಾಗಿ ತಿಳಿಸಿದ್ದಾರೆ.
ದರ್ಬೆಯ ಘಟನೆಯಿಂದಾಗಿ ಗಾಯಗೊಂಡು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಾಗಿರುವ ಅಂಜನಾ ಪೈ ಅವರ ಆರೋಗ್ಯ ವಿಚಾರಿಸಲು ಬಂದಿದ್ದ ಅವರು ಮಾದ್ಯಮದೊಂದಿಗೆ ಮಾತನಾಡಿದರು. ಮುಸ್ಲಿಂ ಜಿಹಾದಿಗಳಿಂದ ಹಳೆಗೊಳಗಾದ ಆ ತಾಯಿಯ ಭೇಟಿ ಮಾಡಲು ಇವತ್ತು ನಾವು ಬಂದಿದ್ದೇವೆ. ಇವತ್ತು ಹಿಂದೂ ಜಾಗರಣೆ ವೇದಿಕೆ ಕರೆಕೊಟ್ಟ ಸ್ವಯಂ ಪ್ರೇರಿತ ಬಂದ್‌ಗೆ ಹಿಂದು ಸಮಾಜ ಸಹಕಾರ ನೀಡಿದೆ. ಆದರೆ ಆ ತಾಯಿಗೆ ಹಲ್ಲೆ ಮಾಡಿದವರನ್ನು ಇಷ್ಟರವರೆಗೆ ಬಂದನ ಮಾಡಿಲ್ಲ, ನಮ್ಮ ಆಗ್ರಹ ಇಷ್ಟೆ. ಅವರನ್ನು ಬಂಧಿಸಬೇಕು. ಈ ಘಟನೆಯ ಹಿಂದಿರುವ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕೂಡಾ ತನಿಖೆ ಮಾಡಬೇಕು. ತಾಯಿಯ ರಕ್ಷಣೆಗೆ ಬಂದ ಅವರ ಮಗನ ಮೇಲೆ ಇವತ್ತು ಕೇಸು ದಾಖಲು ಮಾಡಿ, ಅವನ ಮೇಲೆ ಕೊಲೆ ಯತ್ನ ಕೇಸು ದಾಖಲು ಮಾಡಿ, ಅವನನ್ನು ಇವತ್ತು ಜೈಲಿಗೆ ಹಾಕಿದ್ದಾರೆ. ಅವನ ಮೇಲೆ ಹಾಕಿದಂತಹ ೩೦೭, ಬಿಎನ್‌ಎಸ್ ಸೆಕ್ಷನ್ ೧೦೯, ಸೆಕ್ಷನ್ ಅನ್ನು ಕೂಡ ತೆಗೆಯಬೇಕು ಎಂಬ ನಿಟ್ಟಿನಲ್ಲಿ ಆ. ೩೧ರ ಸೋಮವಾರ ಇಡೀ ಹಿಂದೂ ಸಮಾಜವನ್ನು ಒಟ್ಟು ಸೇರಿಸಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣೆ ವೇದಿಕೆ ಪುತ್ತೂರು ಇದರ ವತಿಯಿಂದ ’ಪುತ್ತೂರು ಚಲೋ’ ಎಂಬ ಕಾರ್ಯಕ್ರಮವನ್ನು, ಬಹಳ ದೊಡ್ಡದಾದ ಒಂದು ಪ್ರತಿಭಟನೆಯನ್ನು ಪುತ್ತೂರಿನಲ್ಲಿ ನಾವು ನಡೆಸಲು ನಿರ್ಧಾರ ಮಾಡಿದ್ದೇವೆ. ಹಾಗಾಗಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಹಿಂದೂ ಸಮಾಜದ ಯುವಕರು, ಇಡೀ ಹಿಂದೂ ಸಮಾಜ, ಈ ಪುತ್ತೂರಿನ ವ್ಯಾಪಾರಸ್ಥರು, ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನೆಲ್ಲ ಬಂದು ಮಾಡುವಂತೆ ಕರೆ ಕೊಡುವುದಿಲ್ಲ. ಆದರೆ ಅವರೆಲ್ಲ ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುಂತೆ ಮನವಿ ಮಾಡುತ್ತೇವೆ.  ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತಾಧಿಕಾರಿಗಳು, ಹಿಂದೂ ಜಾಗರಣೆ ವೇದಿಕೆಯ ಪ್ರಾಂತ ಮಟ್ಟದ ಪ್ರಮುಖರು ಎಲ್ಲರೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದವರು ಹೇಳಿದರು.
ಸರಕಾರ ತುಷ್ಟೀಕರಣವನ್ನು ಮಾಡುತ್ತಿದೆ:
ಹಿಂದು ಜಾಗರಣ ವೇದಿಕೆ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಅವರು ಮಾತನಾಡಿ ದರ್ಬೆಯಲ್ಲಿ ನಡೆದ ಘಟನೆಯನ್ನು  ಹಿಂದೂ ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತಾ ಇದೆ, ಅಂಜನಾ ಪೈ ಅವರನ್ನು ನೀಡಿದ ದೂರಿನ ತನಿಖೆಯಾಗಬೇಕು. ಅವರ ಕೈ ಮತ್ತು ಕಾಲಿಗೆ ಶಸ್ತ್ರಚಿಕಿತ್ಸೆಗೆ ಆಗಿದೆ. ಅಂಜನಾ ಪೈ ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ, ಕಾನೂನಿನ ಅಡಿಯಲ್ಲಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಅನ್ನುವಂತಹ ಆಗ್ರಹವನ್ನು ಇಡೀ ಹಿಂದೂ ಸಮಾಜ ಆಗ್ರಹಿಸುತ್ತಾ ಇವತ್ತು ಸ್ವಯಂ ಪ್ರೇರಿತ ಬಂದ್ ಆಗಿದೆ. ಆದರೆ ಈ ಹೋರಾಟವನ್ನು ನಾವು ಇಲ್ಲಿಗೆ ಮುಕ್ತಾಯಗೊಳಿಸುವುದಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಕೂಡ ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ. ಯಾಕೆಂದರೆ ಸರಕಾರವು ಕೂಡ ಒಂದು ರೀತಿಯಲ್ಲಿ ತುಷ್ಟೀಕರಣವನ್ನು ಮಾಡ್ತಾ ಇದೆ. ಮುಂದಿನ ದಿನಗಳಲ್ಲಿ ಈ ಸಮಾಜದಲ್ಲಿ ಬದುಕಿ ಬಾಳಬೇಕಾದರೆ ನಾವು ರಸ್ತೆಗೆ ಇಳಿಬೇಕಾದಂತಹ ಅನಿವಾರ್ಯ ಪರಿಸ್ಥಿತಿ ಇದ್ದಾಗ, ನಾವು ಇಳಿದೇ ಇಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು ಆ.೩೧ರಂದು ಪುತ್ತೂರು ಚಲೋ ಅನ್ನುವಂತಹ ಹೆಸರಿನಲ್ಲಿ ಒಂದು ಜನಾಂದೋಲನವನ್ನು ವಿಶ್ವ ಹಿಂದೂ ಪರಿಷತ್ತು, ಬಜರಂಗಳ ಮತ್ತು ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ, ಇಡೀ ಹಿಂದೂ ಸಮಾಜದ ಪರಿವಾರ ಸಂಘಟನೆಗಳು ಎಲ್ಲರೂ ಸೇರಿ ನಡೆಯಲಿದೆ ಎಂದರು. ಈ ಸಂದರ್ಭ ವಿಶ್ವಹಿಂದು ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಹಿಂದು ಜಾಗರಣ ವೇದಿಕೆಯ ನರಸಿಂಹ ಮಾಣಿ, ವಿಶ್ವಹಿಂದೂ ಪರಿಷತ್‌ನ ನವಿನ್ ನೆರಿಯ, ದಾಮೋದರ್ ಪಾಟಾಳಿ, ಸಂತೋಷ್, ಹರೀಶ್ ದೋಳ್ಪಾಡಿ, ರವಿ ಶೆಟ್ಟಿ ಕಡಬ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.