logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗದ ತೀರ್ಥಹಳ್ಳಿಯ ಬಾಣಂತಿ ಸಾವು ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಬಾಣಂತಿ ಸುಮಾ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಎಲ್ಲಾ ಸೌಲಭ್ಯಗಳಿರುವ ಸುಸಜ್ಜಿತ ಮೆಡಿಕಲ್ ಕಾಲೇಜು (ಮೆಗ್ಗಾನ್) ಇದ್ದರೂ, ರೋಗಿಯನ್ನು ಮಣಿಪಾಲ್ ಆಸ್ಪತ್ರೆಗೆ ಏಕೆ ಕಳುಹಿಸಲಾಯಿತು ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಬಗ್ಗೆ ಕೇವಲ ಸ್ಥಳೀಯ ತನಿಖೆ ಮಾತ್ರವಲ್ಲದೆ, ಉನ್ನತ ಮಟ್ಟದ ಅಧಿಕಾರಿಗಳಿಂದಲೂ ತನಿಖೆ ಮಾಡಿಸಲಾಗುವುದು ಹಾಗೂ ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೂ ಚರ್ಚಿಸುವುದಾಗಿ ಅವರು ಹೇಳಿದ್ದಾರೆ. ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಲೋಪದೋಷಗಳಿವೆಯೇ ಅಥವಾ ಇಲ್ಲವೇ ಎಂಬುದು ತನಿಖೆಯ ನಂತರವೇ ಹೊರಬರಲಿದೆ. ಹೆರಿಗೆ ಎಂಬುದು ಯಾವುದೇ ರೋಗವಲ್ಲ, ಹೀಗಿದ್ದರೂ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ಸುಸಜ್ಜಿತ ಆಸ್ಪತ್ರೆಗಳಿದ್ದರೂ ಸಾವು ಸಂಭವಿಸಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಕೇವಲ ಅಧಿಕಾರಿಗಳು ನೀಡುವ ಮಾಹಿತಿಯನ್ನು ತಾವು ನಂಬುವುದಿಲ್ಲ ಎಂದಿರುವ ಸಚಿವರು, ವಾಸ್ತವ ಸಂಗತಿಯನ್ನು ತಿಳಿಯಲು ಜಿಲ್ಲಾಧಿಕಾರಿಗಳ ತನಿಖೆಗೆ ಸೂಚಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

1 hr ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 hr ago
1c523a9b-2616-4aae-85f0-35d8a8ff0a80

ಶಿವಮೊಗ್ಗದ ತೀರ್ಥಹಳ್ಳಿಯ ಬಾಣಂತಿ ಸಾವು ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಬಾಣಂತಿ ಸುಮಾ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಎಲ್ಲಾ ಸೌಲಭ್ಯಗಳಿರುವ ಸುಸಜ್ಜಿತ ಮೆಡಿಕಲ್ ಕಾಲೇಜು (ಮೆಗ್ಗಾನ್) ಇದ್ದರೂ, ರೋಗಿಯನ್ನು ಮಣಿಪಾಲ್ ಆಸ್ಪತ್ರೆಗೆ ಏಕೆ ಕಳುಹಿಸಲಾಯಿತು ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಬಗ್ಗೆ ಕೇವಲ ಸ್ಥಳೀಯ ತನಿಖೆ ಮಾತ್ರವಲ್ಲದೆ, ಉನ್ನತ ಮಟ್ಟದ ಅಧಿಕಾರಿಗಳಿಂದಲೂ ತನಿಖೆ ಮಾಡಿಸಲಾಗುವುದು ಹಾಗೂ ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೂ ಚರ್ಚಿಸುವುದಾಗಿ ಅವರು ಹೇಳಿದ್ದಾರೆ. ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಲೋಪದೋಷಗಳಿವೆಯೇ ಅಥವಾ ಇಲ್ಲವೇ ಎಂಬುದು ತನಿಖೆಯ ನಂತರವೇ ಹೊರಬರಲಿದೆ. ಹೆರಿಗೆ ಎಂಬುದು ಯಾವುದೇ ರೋಗವಲ್ಲ, ಹೀಗಿದ್ದರೂ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ಸುಸಜ್ಜಿತ ಆಸ್ಪತ್ರೆಗಳಿದ್ದರೂ ಸಾವು ಸಂಭವಿಸಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಕೇವಲ ಅಧಿಕಾರಿಗಳು ನೀಡುವ ಮಾಹಿತಿಯನ್ನು ತಾವು ನಂಬುವುದಿಲ್ಲ ಎಂದಿರುವ ಸಚಿವರು, ವಾಸ್ತವ ಸಂಗತಿಯನ್ನು ತಿಳಿಯಲು ಜಿಲ್ಲಾಧಿಕಾರಿಗಳ ತನಿಖೆಗೆ ಸೂಚಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

More news from ಕರ್ನಾಟಕ and nearby areas
  • Available for Sale Item : ಅಕ್ಕಿ Quantity Available : 500 Price : 60 City / Locality : ಹೊಸನಗರ Farming Sector : Crops ಕೆಂಪಕ್ಕಿ ದೊರೆಯುತ್ತದೆ
    1
    Available for Sale
Item : ಅಕ್ಕಿ
Quantity Available : 500
Price : 60
City / Locality : ಹೊಸನಗರ 
Farming Sector : Crops
ಕೆಂಪಕ್ಕಿ ದೊರೆಯುತ್ತದೆ
    user_Krishnamurthy
    Krishnamurthy
    ಹೊಸನಗರ, ಶಿವಮೊಗ್ಗ, ಕರ್ನಾಟಕ•
    10 hrs ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ.

ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    2
    ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.

ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    8 hrs ago
  • ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    1
    ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    1
    ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರ ನಾಯ್ಕ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಂಬಾಣಿ ಸಮುದಾಯವನ್ನು ಸಂಘಟಿಸಿ, ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹೊಳಲ್ಕೆರೆ ಪಟ್ಟಣದ ಜ್ಞಾಪನಂ ಫೌಂಡೇಶನ್‌ಗೆ ಭೇಟಿ ನೀಡಿದ ಅವರು, ಬಿಜೆಪಿ ಹಿರಿಯ ಮುಖಂಡ ಜಯಸಿಂಹ ಖಾಟ್ರೋತ್ ಅವರೊಂದಿಗೆ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಈ ವಿಷಯವನ್ನು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಶಾಸಕರು ತಿಳಿಸಿದರು. ಇದರ ಭಾಗವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಲಂಬಾಣಿ ತಾಂಡಾಗಳನ್ನು ಗುರುತಿಸಿ, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಮುದಾಯದ ಸಂಕಷ್ಟಗಳನ್ನು ಆಲಿಸಿ, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
    1
    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರ ನಾಯ್ಕ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಂಬಾಣಿ ಸಮುದಾಯವನ್ನು ಸಂಘಟಿಸಿ, ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹೊಳಲ್ಕೆರೆ ಪಟ್ಟಣದ ಜ್ಞಾಪನಂ ಫೌಂಡೇಶನ್‌ಗೆ ಭೇಟಿ ನೀಡಿದ ಅವರು, ಬಿಜೆಪಿ ಹಿರಿಯ ಮುಖಂಡ ಜಯಸಿಂಹ ಖಾಟ್ರೋತ್ ಅವರೊಂದಿಗೆ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಈ ವಿಷಯವನ್ನು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಶಾಸಕರು ತಿಳಿಸಿದರು. ಇದರ ಭಾಗವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಲಂಬಾಣಿ ತಾಂಡಾಗಳನ್ನು ಗುರುತಿಸಿ, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಮುದಾಯದ ಸಂಕಷ್ಟಗಳನ್ನು ಆಲಿಸಿ, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    1
    ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.