ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷ ರೋಹಿತ್ ಭಟ್ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ 500 ಕ್ಕೂ ಅಧಿಕ ಪ್ರತಿನಿಧಿಗಳು, 50ಕ್ಕೂ ಅಧಿಕ ಹೂಡಿಕೆದಾರರು , 40ಕ್ಕೂ ಅಧಿಕ ಆಹ್ವಾನಿತ ಗಣ್ಯರು , 30ಕ್ಕೂ ಅಧಿಕ ಸ್ಟಾರ್ಟಪ್ ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದರು . ಟೈ ಎಂದು ಪ್ರಖ್ಯಾತವಾಗಿರುವ ಅಂತಾರಾಷ್ಟ್ರೀಯ ಉದ್ಯಮ ಉತ್ತೇಜನ ಸಂಸ್ಥೆ ದಿ ಇಂಡಸ್ ಎಂಟಪ್ರ್ರನರ್ಸ್ ಇದರ ಮಂಗಳೂರು ಚಾಪ್ಟರ್, ಟೈಕಾನ್ ಮಂಗಳೂರು 2026ನ್ನು ಆಯೋಜಿಸುತ್ತಿದ್ದು ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ (KDEM) ಹಾಗೂ ಸಿಲಿಕಾನ್ ಬೀಚ್ ಪ್ರೋಗ್ರಾಮ್ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು . ಕರಾವಳಿ ಕರ್ನಾಟಕವು ಸೃಜನಶೀಲ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿರುವುದನ್ನು ಜಗತ್ತಿಗೆ ತೋರಿಸುವ ಕಾರ್ಯವನ್ನು ಉತ್ತೇಜಿಸುವ ಉದ್ದೇಶವನ್ನು ಇದು ಹೊಂದಿದೆ ಎಂದರು . ಕಾರ್ಯಕ್ರಮದಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ - ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ , ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ , ಭಾರತ ಸರಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಎಸ್. ಕೃಷ್ಣನ್ , ಕರ್ನಾಟಕ ಸರಕಾರದ ಮಾಹಿತಿ - ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಮಂಜುಳಾ ಮುಖ್ಯ ಗಣ್ಯರಾಗಿ ಭಾಗವಹಿಸಲಿರುವರು ಎಂದರು . ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಆಕ್ಸೆಲ್ ಇಂಡಿಯಾ ಪಾಲುದಾರ ಪದ್ಮಶ್ರೀ ಪ್ರಶಾಂತ್ ಪ್ರಕಾಶ್, ಟೈಇ ಜಾಗತಿಕ ಅಧ್ಯಕ್ಷ ಮುರಳಿ ಬುಕ್ಕಾಪಟ್ಟಣಂ, ತ್ರೀ ವನ್ ಫೋರ್ ಕ್ಯಾಪಿಟಲ್ ಅಧ್ಯಕ್ಷ ಮೋಹನ್ ದಾಸ್ ಪೈ, ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ನಟ-ಉದ್ಯಮಿ ಸುನೀಲ್ ಶೆಟ್ಟಿ, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇರಿಕೊಳ್ಳಲಿದ್ದಾರೆ ಎಂದರು . ಪತ್ರಿಕಾಗೋಷ್ಠಿಯಲ್ಲಿ ಟೈಕಾನ್ ಮಂಗಳೂರು 2026 ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರಾವ್ ಆರೂರ್ , ಯುನಿಫೈ ಸಿ ಎಕ್ಸ್ ನ ಚೀಫ್ ಪೀಪಲ್ ಸರ್ವೀಸಸ್ ಆಫೀಸರ್ ಶ್ಯಾಮ್ ಪ್ರಸಾದ್ ಹೆಬ್ಬಾರ್, ಕರುಣಾ ಇಂಫ್ರಾ ನಿರ್ದೇಶಕ ಸುದೇಶ್ ಕರುಣಾಕರನ್, ಯುನಿಕೋರ್ಟ್ ಕೋ ಫೌಂಡರ್ ಆ್ಯಂಡ್ ಸಿಇಒ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷ ರೋಹಿತ್ ಭಟ್ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ 500 ಕ್ಕೂ ಅಧಿಕ ಪ್ರತಿನಿಧಿಗಳು, 50ಕ್ಕೂ ಅಧಿಕ ಹೂಡಿಕೆದಾರರು , 40ಕ್ಕೂ ಅಧಿಕ ಆಹ್ವಾನಿತ ಗಣ್ಯರು , 30ಕ್ಕೂ ಅಧಿಕ ಸ್ಟಾರ್ಟಪ್ ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದರು . ಟೈ ಎಂದು ಪ್ರಖ್ಯಾತವಾಗಿರುವ ಅಂತಾರಾಷ್ಟ್ರೀಯ ಉದ್ಯಮ ಉತ್ತೇಜನ ಸಂಸ್ಥೆ ದಿ ಇಂಡಸ್ ಎಂಟಪ್ರ್ರನರ್ಸ್ ಇದರ ಮಂಗಳೂರು ಚಾಪ್ಟರ್, ಟೈಕಾನ್ ಮಂಗಳೂರು 2026ನ್ನು ಆಯೋಜಿಸುತ್ತಿದ್ದು ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ (KDEM) ಹಾಗೂ ಸಿಲಿಕಾನ್ ಬೀಚ್ ಪ್ರೋಗ್ರಾಮ್ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು . ಕರಾವಳಿ ಕರ್ನಾಟಕವು ಸೃಜನಶೀಲ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿರುವುದನ್ನು ಜಗತ್ತಿಗೆ ತೋರಿಸುವ ಕಾರ್ಯವನ್ನು ಉತ್ತೇಜಿಸುವ ಉದ್ದೇಶವನ್ನು ಇದು ಹೊಂದಿದೆ ಎಂದರು . ಕಾರ್ಯಕ್ರಮದಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ - ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ , ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ , ಭಾರತ ಸರಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಎಸ್. ಕೃಷ್ಣನ್ , ಕರ್ನಾಟಕ ಸರಕಾರದ ಮಾಹಿತಿ - ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಮಂಜುಳಾ ಮುಖ್ಯ ಗಣ್ಯರಾಗಿ ಭಾಗವಹಿಸಲಿರುವರು ಎಂದರು . ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಆಕ್ಸೆಲ್ ಇಂಡಿಯಾ ಪಾಲುದಾರ ಪದ್ಮಶ್ರೀ ಪ್ರಶಾಂತ್ ಪ್ರಕಾಶ್, ಟೈಇ ಜಾಗತಿಕ ಅಧ್ಯಕ್ಷ ಮುರಳಿ ಬುಕ್ಕಾಪಟ್ಟಣಂ, ತ್ರೀ ವನ್ ಫೋರ್ ಕ್ಯಾಪಿಟಲ್ ಅಧ್ಯಕ್ಷ ಮೋಹನ್ ದಾಸ್ ಪೈ, ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ನಟ-ಉದ್ಯಮಿ ಸುನೀಲ್ ಶೆಟ್ಟಿ, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇರಿಕೊಳ್ಳಲಿದ್ದಾರೆ ಎಂದರು . ಪತ್ರಿಕಾಗೋಷ್ಠಿಯಲ್ಲಿ ಟೈಕಾನ್ ಮಂಗಳೂರು 2026 ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರಾವ್ ಆರೂರ್ , ಯುನಿಫೈ ಸಿ ಎಕ್ಸ್ ನ ಚೀಫ್ ಪೀಪಲ್ ಸರ್ವೀಸಸ್ ಆಫೀಸರ್ ಶ್ಯಾಮ್ ಪ್ರಸಾದ್ ಹೆಬ್ಬಾರ್, ಕರುಣಾ ಇಂಫ್ರಾ ನಿರ್ದೇಶಕ ಸುದೇಶ್ ಕರುಣಾಕರನ್, ಯುನಿಕೋರ್ಟ್ ಕೋ ಫೌಂಡರ್ ಆ್ಯಂಡ್ ಸಿಇಒ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
- ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು. “ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು. “ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು. "ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು. "ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು. “ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು. “ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ” “ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು. ವರದಿ: ಶಂಶೀರ್ ಬುಡೋಳಿ1
- ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.2
- *ಭಾರತ ನಲ್ಲಿ ವೈರಲ್*1
- ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ1
- Post by ದಯಾನಂದ ಡಿ ಎಚ್1
- ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರಿಂದ ಪ್ರತಿಭಟನೆ: ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಚಳ್ಳಕೆರೆ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಈ ಹಣ ಬಿಡುಗಡೆ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬೆಳೆ ಬೇಯಿಸಿಕೊಂಡು ಕಾಲಹರಣ ಮಾಡಿಕೊಂಡು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈಗಾಗಲೇ ರೈತ ಸಂಘ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಭೆ ನಡೆಸಿದ್ದು ಮುಂದಿನ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದ ವೇಳೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಎಲ್ಲಾ ರೈತ ಸಂಘಟನೆಗಳ ಸದಸ್ಯರು ಒಗ್ಗಟ್ಟಾಗಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬರಪೀಡಿತ ಜಿಲ್ಲೆಯಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜಕೀಯ ಮುಖಂಡರು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರನ್ನು ವಲೈಸಲು ಭದ್ರಾ ಮೇಲ್ದಂಡೆ ಯೋಜನೆ ಜಾರಿಯ ಬಗ್ಗೆ ಮಾತನಾಡುತ್ತಾರೆ ಆದರೆ ಇದುವರೆಗೂ ಜಾರಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸದರು ಶಾಸಕರು ವಿಫಲರಾಗಿದ್ದಾರೆ ಈ ಭಾಗದ ರೈತರು ಶೇಂಗಾ ತೊಗರಿ ಮೆಕ್ಕೆಜೋಳ ಈರುಳ್ಳಿ ಟೊಮೆಟೊ ಗಳಂತಹ ಬೆಳೆಗಳನ್ನು ಅವಲಂಬಿಸಿದ್ದು ಮಳೆಯ ಅಭಾವದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಜಾರಿಯಾದರೆ ಜಿಲ್ಲೆಯ ಕೆರೆಗಳು ತುಂಬಿ ರೈತರಿಗೆ ಜೀವನಾಡಿ ಯಾಗುತ್ತವೆ ಇದುವರೆಗೂ ಸುಮಾರು 10.000 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಖರ್ಚಾಗಿದ್ದು ಆದರೂ ಸಹ ಯೋಜನೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ ಯೋಜನೆ ವಿಳಂಬವಾದಂತೆಲ್ಲ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು ತ್ವರಿತ ಗತಿಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ 5300 ಕೋಟಿ ಬಿಡುಗಡೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆಗೊಳಿಸಿದರೆ ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಂಡು ರೈತರ ಬಾಳು ಹಸನಾಗುತ್ತದೆ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಂಘಟನೆಗಳ ಸದಸ್ಯರು ವಿವಿಧ ಸಂಘಟನೆಗಳ ರೈತರು ಒಗ್ಗಟ್ಟಾಗಿ ಹೋರಾಟ ಮಾಡಿ ಜಿಲ್ಲೆಯನ್ನು ಬಂದ್ ಮಾಡುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರೈತ ಮುಖಂಡರು ಉಪಸ್ಥಿತರಿದ್ದರು.1
- ಮಾಚಿದೇವರ ಜಯಂತಿ ದಿನವೇ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕರ ದಿನಾಂಕವನ್ನು ನಿಗದಿಪಡಿಸಿ ಮುಂದಿನ ಕಾರ್ಯಕ್ರಮದ ಬಗ್ಗೆ ತಿಳಿಸಲಾಗುವುದು ಎಂದು ಮುಖಂಡ ವಿಜಯ್ ಕುಮಾರ್ ತಿಳಿಸಿದರು .... ಹನೂರು ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ಕಮಿಟಿ ಸಭೆ ಹಾಗೂ ಮಾಚಿದೇವರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು . ಜಿಲ್ಲಾ ಕಮಿಟಿ ರಚನೆ ಮಾಡಲು ತಾಲೂಕಿನ ಸಮುದಾಯದ ಜನ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಪದಾಧಿಕಾರಿಗಳ ಬಗ್ಗೆ ಆಯ್ಕೆ ಮಾಡಲು ಸಹಮತವಿದೆ ಜೊತೆಗೆ ಪಟ್ಟಣದಲ್ಲಿ ಫೆಬ್ರವರಿ 1,ರಂದು ಮಾಚಿದೇವರ ಜಯಂತಿ ದಿನವೇ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕರ ದಿನಾಂಕವನ್ನು ನಿಗದಿಪಡಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು . ಸಮುದಾಯದ ದಶಕಗಳ ಬೇಡಿಕೆ : ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಈ ಹಿಂದೆ ಜನಪ್ರತಿನಿಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಆದರೂ ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಿದ್ದ ಸಮುದಾಯ ಭವನಕ್ಕೆ ಶಾಸಕ ಎಂಆರ್ ಮಂಜುನಾಥ್ ಅವರು ಅನುದಾನ ನೀಡಿದ್ದಾರೆ ಅವರ ಉಪಸ್ಥಿತಿಯಲ್ಲಿಯೇ ಭವನ ನಿರ್ಮಾಣ ಮಾಡಲು ದಿನಾಂಕ ನಿಗದಿಪಡಿಸಿ ಹಲವು ವರ್ಷಗಳ ಬೇಡಿಕೆ ಈಡೇರಿಸಲು ತಳ ಸಮುದಾಯಗಳ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿರುವ ಶಾಸಕರು ಪಟ್ಟಣದಲ್ಲಿ ಉತ್ತಮವಾದ ಸಮುದಾಯ ಭವನ ನಿರ್ಮಾಣ ಮಾಡಲು ಸಮುದಾಯ ಜನತೆಗೆ ಭರವಸೆ ನೀಡಿದ್ದಾರೆ ಹೀಗಾಗಿ ಸರ್ಕಾರದಿಂದ ಸಿಗುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಮುದಾಯ ಭವನ ನಿರ್ಮಾಣ ಮಾಡಲು ಸಹಕಾರ ನೀಡಬೇಕು ಪ್ರತಿಯೊಬ್ಬರು ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಕೃಷ್ಣಮೂರ್ತಿ ರುದ್ರಣ್ಣ ಮಾದೇವ್ ಕುಮಾರ್ ನಂದೀಶ್ ಶಾಂತರಾಜು ಹಾಗೂ ಜಿಲ್ಲೆಯ ತಾಲೂಕಿನ ವಿವಿಧ ಭಾಗದ ಮುಖಂಡರು ಉಪಸ್ಥಿತರಿದ್ದರು1
- ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. "ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು" ಎಂದು ವಿವರಿಸಿದರು. ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, "ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ" ಎಂದರು. ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, "ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ" ಎಂದರು. ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, "ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ" ಎಂದರು. ವರದಿ: ಶಂಶೀರ್ ಬುಡೋಳಿ1