ಆ.31 ರಂದು ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭ ಮಂಡ್ಯ: ಜನದನಿ ಸಾಂಸ್ಕೃತಿಕ ಟ್ರಸ್ಟ್ ನಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ 29ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿ, 3ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಮತ್ತು ಎಚ್.ಶಾರದಮ್ಮ ಹಾಗೂ ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭವನ್ನು ಆ.31 ರಂದು ಸಂಜೆ 5 ಗಂಟೆಗೆ ನಗರದ ಕೆ.ವಿ.ಎಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನದನಿ ಸಾಂಸ್ಕೃತಿಕ ಟ್ರಸ್‌ನ ಅಧ್ಯಕ್ಷ ಕೋಣನಹಳ್ಳಿ ಜಯರಾಮು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ಪೂರ್ವದಿಂದಲೂ ಸಾರ್ವಜನಿಕ ಸೇವೆ ಹಾಗೂ ಹೋರಾಟದಲ್ಲಿ ತೊಡಗಿರುವ ಪ್ರತಿಷ್ಠಿತ ಇಂಡುವಾಳು ಹೊನ್ನಯ್ಯ ಕುಟುಂಬದ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮುತ್ತನೂರು ಗ್ರಾಮದ ಬೆಳ್ಳಶೆಟ್ಟಿ, ದೇವಮ್ಮ ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ವೈದ್ಯೆ ಆರ್.ತಾರಾ, ಇಂಡುವಾಳು ಹೆಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿಗೆ ಸೋಮಶೇಖರ್ (ವಾಲಿಬಾಲ್ ಸೋಮಣ್ಣ) ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕೃತರಿಗೆ 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ ಸಾಲಿನ ಎಚ್.ಶಾರದಮ್ಮ ಮತ್ತು ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರಕ್ಕೆ ಎಂ.ಆರ್.ದೀಕ್ಷಿತಾ, ಚಂದನ್ ಬಿ.ಎಂ., ಚೈತ್ರಾ ಹಾಗೂ ಬಿ.ಎನ್.ಜ್ಯೋತಿಅವರನ್ನು ಆಯ್ಕೆ ಮಾಡಿಲಾಗಿದ್ದು, ತಲಾ 5 ಸಾವಿರ ನಗದಿನೊಂದಿಗೆ ಪುರಸ್ಕೃರಿಸಲಾಗುವುದು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸುವರು. ರಂಗಾಯಣ ಮೈಸೂರು ನಿರ್ದೇಶಕ ಸತೀಶ್ ತಿಪಟೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ.ಎಸ್.ತುಕಾರಾಂ ಅಭಿನಂದನಾ ನುಡಿಗಳ ನ್ನಾಡಲಿದ್ದು, ಇಂಡುವಾಳು ಹೆಚ್.ಹೊನ್ನಯ್ಯ ಅವರ ಮಗ ಹಾಗೂ ರೈತಪರ ಹೋರಾಟಗಾರ ಇಂಡುವಾಳು ಚಂದ್ರಶೇಖರ್ ಉಪಸ್ಥಿತರಿರಲಿ ದ್ದಾರೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಹೆಚ್.ಡಿ.ಸೋಮಶೇಖರ್, ಟ್ರಸ್ಟ್ ಉಪಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಇದ್ದರು.
ಆ.31 ರಂದು ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭ ಮಂಡ್ಯ: ಜನದನಿ ಸಾಂಸ್ಕೃತಿಕ ಟ್ರಸ್ಟ್ ನಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ 29ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿ, 3ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಮತ್ತು ಎಚ್.ಶಾರದಮ್ಮ ಹಾಗೂ ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭವನ್ನು ಆ.31 ರಂದು ಸಂಜೆ 5 ಗಂಟೆಗೆ ನಗರದ ಕೆ.ವಿ.ಎಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನದನಿ ಸಾಂಸ್ಕೃತಿಕ ಟ್ರಸ್‌ನ ಅಧ್ಯಕ್ಷ ಕೋಣನಹಳ್ಳಿ ಜಯರಾಮು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ಪೂರ್ವದಿಂದಲೂ ಸಾರ್ವಜನಿಕ ಸೇವೆ ಹಾಗೂ ಹೋರಾಟದಲ್ಲಿ ತೊಡಗಿರುವ ಪ್ರತಿಷ್ಠಿತ ಇಂಡುವಾಳು ಹೊನ್ನಯ್ಯ ಕುಟುಂಬದ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮುತ್ತನೂರು ಗ್ರಾಮದ ಬೆಳ್ಳಶೆಟ್ಟಿ, ದೇವಮ್ಮ ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ವೈದ್ಯೆ ಆರ್.ತಾರಾ, ಇಂಡುವಾಳು ಹೆಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿಗೆ ಸೋಮಶೇಖರ್ (ವಾಲಿಬಾಲ್ ಸೋಮಣ್ಣ) ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕೃತರಿಗೆ 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ ಸಾಲಿನ ಎಚ್.ಶಾರದಮ್ಮ ಮತ್ತು ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರಕ್ಕೆ ಎಂ.ಆರ್.ದೀಕ್ಷಿತಾ, ಚಂದನ್ ಬಿ.ಎಂ., ಚೈತ್ರಾ ಹಾಗೂ ಬಿ.ಎನ್.ಜ್ಯೋತಿಅವರನ್ನು ಆಯ್ಕೆ ಮಾಡಿಲಾಗಿದ್ದು, ತಲಾ 5 ಸಾವಿರ ನಗದಿನೊಂದಿಗೆ ಪುರಸ್ಕೃರಿಸಲಾಗುವುದು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸುವರು. ರಂಗಾಯಣ ಮೈಸೂರು ನಿರ್ದೇಶಕ ಸತೀಶ್ ತಿಪಟೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ.ಎಸ್.ತುಕಾರಾಂ ಅಭಿನಂದನಾ ನುಡಿಗಳ ನ್ನಾಡಲಿದ್ದು, ಇಂಡುವಾಳು ಹೆಚ್.ಹೊನ್ನಯ್ಯ ಅವರ ಮಗ ಹಾಗೂ ರೈತಪರ ಹೋರಾಟಗಾರ ಇಂಡುವಾಳು ಚಂದ್ರಶೇಖರ್ ಉಪಸ್ಥಿತರಿರಲಿ ದ್ದಾರೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಹೆಚ್.ಡಿ.ಸೋಮಶೇಖರ್, ಟ್ರಸ್ಟ್ ಉಪಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಇದ್ದರು.
- ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಮಂಡ್ಯ-ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ. ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ ಲಿಂಕ್ ಅನ್ನು ಸಹ ಒದಗಿಸಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24x7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.1
- ಹಲಗೂರಿನಲ್ಲಿ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಮಳವಳ್ಳಿ :ತಾಲ್ಲೂಕಿನ ಹಲಗೂರು ಗ್ರಾಮದ ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಕ್ತಿ ಭಾವ ಪೂರಕವಾಗಿ ಆಚರಿಸಲಾಯಿತು. ಗುರುವಾರ ಬೆಳಿಗ್ಗೆ ಪಟ್ಟದ ರಾಣಿ ಅಮ್ಮನವರ ಮೂರ್ತಿಯನ್ನು ಶುಚಿಗೊಳಿಸಿ ,ನಂತರ ದುರ್ಗಾ ಹೋಮ ಮಹಾಗಣಪತಿ ಹೋಮ ನವಗ್ರಹ ಶಾಂತಿ ಹೋಮ ಪಂಚಾಮೃತ ಅಭಿಷೇಕ ನಡೆಸಿ, ನಂತರ ವಿವಿಧ ಪುಷ್ಪಗಳಿಂದ ದೇವರ ಮೂರ್ತಿಯನ್ನು ಅಲಂಕರಿಸಿ ವಿಶೇಷವಾಗಿ ಪೂಜಾ ಪುನಸ್ಕಾರಗಳನ್ನು ನಡೆಸಲಾಯಿತು. ಗ್ರಾಮ ದೇವತೆಯಾದ ಪಟ್ಟಲದಮ್ಮ, ಶ್ರೀ ಸಿದ್ದೇಶ್ವರ ಸ್ವಾಮಿ ಸತ್ತಿಗೆ ಹಾಗೂ ಪಟ್ಟದ ರಾಣಿ ದೇವರಿಗೆ ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಲ್ಲಿ ಹೂ -ಹೊಂಬಾಳೆ ಮಾಡಿಕೊಂಡು ವಿಶೇಷವಾಗಿ ಅಲಂಕರಿಸಿ ಪೂಜಾ ಕುಣಿತದೊಡನೆ ಮೆರವಣಿಗೆ ಮುಖಾಂತರ ದೇವಸ್ಥಾನಕ್ಕೆ ದೇವರ ಮೂರ್ತಿಗಳನ್ನು ತರಲಾಯಿತು.ನಂತರ ಮಹಾಮಂಗಳಾರತಿ ನಡೆಸಿ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ರವಿ ಮಾತನಾಡಿ, ನಾವು ಪ್ರತಿವರ್ಷ ಅಮ್ಮನವರಿಗೆ ಪೂಜೆ ಪುನಸ್ಕಾರವನ್ನು ನಡೆಸಿಕೊಂಡು ಬರುತ್ತಿದ್ದು ,ಇಂದು ನಾಲ್ಕನೇ ವರ್ಷದ ಪ್ರಯುಕ್ತ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ ಬಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದೇವೆ. ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟದ ರಾಣಿ ಅಮ್ಮನವರ ಸೇವಾ ಟ್ರಸ್ಟಿನ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- All About,Could you please Sir ji, Clear about your statement for "Concrete Road Aane ke Inkamath Hai" *ಭಾರತ ನಲ್ಲಿ ವೈರಲ್*1
- ಕೊಳ್ಳೇಗಾಲ. ಪಾಳ್ಯ ಕೆರೆಗಳಿಗೆ ನೀರು ಹರಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟುದಾರರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಮೂಲಕ ಪ್ರತಿಭಟಿಸಿ, ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು. ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬೀಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬೀಡದೇ ಒಣಗುತ್ತಿದೆ ಎಂದು ಆರೋಪಿಸಿದರು. ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ, ರಾಜಪ್ಪ, ಪಾರ್ಥ, ರೈತ ಮುಖಂಡರು ಇದ್ದರು.4
- ಮೈಸೂರು ಅರಣ್ಯ ಭವನದಲ್ಲಿ ಆನೆಗಳ ವೀಕ್ಷಣೆಗೆ ನಿರ್ಬಂಧಗಳ ಬಿಗಿ – ದೂರದಿಂದಲೇ ದರ್ಶನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ನಗರದಲ್ಲಿ ಗಜಪಡೆಯ ಸಂಚಾರ ಆರಂಭವಾಗಿದ್ದು, ಅರಣ್ಯ ಭವನದಲ್ಲಿ ತಂಗಿರುವ ಆನೆಗಳನ್ನು ನೋಡಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಆನೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ವೀಕ್ಷಣೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ. ಅರಣ್ಯ ಭವನದ ಆವರಣದಲ್ಲಿ ಇರುವ ಆನೆಗಳ ಬಳಿ ತೆರಳಿ ಸೆಲ್ಫಿ, ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಆನೆಗಳೊಂದಿಗೆ ಅತೀ ಸಮೀಪದಲ್ಲಿ ನಿಂತು ಚಿತ್ರ ತೆಗೆಯುವುದು ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ನಿಗದಿತ ಅಂತರದಿಂದಲೇ ಆನೆಗಳನ್ನು ವೀಕ್ಷಿಸುವಂತೆ ಸೂಚಿಸಲಾಗಿದೆ. ಇದರಿಂದ ಆನೆಗಳಿಗೆ ಯಾವುದೇ ರೀತಿಯ ತೊಂದರೆ, ಆತಂಕ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಆನೆಗಳನ್ನು ಹತ್ತಿರದಿಂದ ನೋಡಲು ಸಾಧ್ಯವಾಗದಿದ್ದರೂ, ಅರಣ್ಯ ಭವನದ ಸುತ್ತಮುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದೂರದಿಂದಲೇ ಗಜಪಡೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಅರಣ್ಯ ಭವನದ ಮುಖ್ಯ ಗೇಟ್ ಬಳಿಯಲ್ಲಿ ಜನರು ನಿಂತು ಆನೆಗಳ ಚಲನವಲನವನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ದಸರಾ ಗಜಪಡೆ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಉತ್ಸಾಹ ಹೆಚ್ಚಾಗಿದೆ. ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ಪಡೆಯುವ ಆಸೆ ಸಹಜವಾದರೂ, ಅವು ಕಾಡುಪ್ರಾಣಿಗಳಾಗಿರುವುದರಿಂದ ಕ್ಷಣಮಾತ್ರದ ಅಜಾಗರೂಕತೆಯೂ ಅಪಾಯಕ್ಕೆ ಕಾರಣವಾಗಬಹುದು. ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆ ವಿಧಿಸಿರುವ ನಿಯಮಗಳನ್ನು ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಬೇಕಾಗಿದೆ. ಆನೆಗಳಿಗೂ ಯಾವುದೇ ತೊಂದರೆಯಾಗದಂತೆ ಸಹಕರಿಸುವುದು ದಸರಾ ಸಂಭ್ರಮವನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಅಗತ್ಯವಾಗಿದೆ. ಅರಣ್ಯ ಭವನದ ಗೇಟ್ ಸುತ್ತಲೂ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯೂ ಜನರ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.3
- ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.1
- ಪ್ರಾಮಾಣಿಕ ಅಧಿಕಾರಿಗಳಿಗೆ ಲೋಕಾಯುಕ್ತದ ಬೆಂಬಲವಿದೆ ಯಾವುದೇ ಚಿಂತೆಬೇಡ ಮಂಡ್ಯ-ಕರ್ನಾಟಕ ಲೋಕಾಯುಕ್ತ ಸಂಸ್ಥೆ ಸ್ವತಂತ್ರ ಸಂಸ್ಥೆಯಾಗಿದ್ದು, ಯಾರ ಒತ್ತಡಕ್ಕೂ ಒಳಗಾಗದೆ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಮಂಡ್ಯ ಜಿಲ್ಲೆಯ ಬಗ್ಗೆ ನನಗೆ ವಿಶೇಷ ಪ್ರೀತಿ ಇದೆ ಎಂಬುದಕ್ಕಿಂತಲೂ ಇಲ್ಲಿನ ಜನರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ಬಗ್ಗೆ ಗೌರವವಿದೆ. ಆದರೆ ಜನರಿಗೆ ಅನ್ಯಾಯ ಮಾಡುವ, ಮೋಸ ಮಾಡುವ ಅಥವಾ ಭ್ರಷ್ಟಾಚಾರದಲ್ಲಿ ತೊಡಗುವ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಲೋಕಾಯುಕ್ತರು ಹೇಳಿದರು. ಸರ್ಕಾರಿ ಭೂಮಿ ಮತ್ತು ಸಾರ್ವಜನಿಕ ಆಸ್ತಿಗಳ ಅಕ್ರಮ ಬಳಕೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು. ಅಕ್ರಮ ಮಂಜೂರಾತಿ, ಸುಳ್ಳು ದಾಖಲೆಗಳು, ಕಾನೂನುಬಾಹಿರವಾಗಿ ಸರ್ಕಾರಿ ಜಮೀನುಗಳನ್ನು ಪಡೆಯುವ ಪ್ರಯತ್ನಗಳು ಕಂಡುಬಂದರೆ ಅವುಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಧಿಕಾರ ಶಾಶ್ವತವಲ್ಲ. ಇಂದು ಅಧಿಕಾರದಲ್ಲಿರುವವರು ನಾಳೆ ಸಾಮಾನ್ಯ ನಾಗರಿಕರಾಗಬಹುದು. ಹೀಗಾಗಿ ಅಧಿಕಾರಿಗಳು ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ರೀತಿಯಲ್ಲಿ ಕೆಲಸ ಮಾಡಬೇಕು. ಅಧಿಕಾರಕ್ಕಿಂತ ಜನರ ವಿಶ್ವಾಸ ದೊಡ್ಡದು ಎಂದು ಅವರು ಹೇಳಿದರು. ಜನರು ದೂರು ನೀಡಿದಾಗ ಅದನ್ನು ನಿರ್ಲಕ್ಷಿಸದೆ ತಕ್ಷಣ ಸ್ಪಂದಿಸಬೇಕು. ಲೋಕಾಯುಕ್ತ ಸಂಸ್ಥೆಗೆ ದೂರು ಬಂದ ನಂತರ ಸಂಬಂಧಪಟ್ಟ ಅಧಿಕಾರಿಗಳು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು. ಕರ್ತವ್ಯಲೋಪ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದು ಕೇವಲ ಲೋಕಾಯುಕ್ತ ಸಂಸ್ಥೆಯ ಜವಾಬ್ದಾರಿಯಲ್ಲ. ಸಮಾಜ, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪ್ರತಿಯೊಬ್ಬ ನಾಗರಿಕರೂ ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಲೋಕಾಯುಕ್ತರು ಹೇಳಿದರು. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ಬೆಂಬಲಕ್ಕೆ ಲೋಕಾಯುಕ್ತ ಸಂಸ್ಥೆ ಸದಾ ನಿಲ್ಲಲಿದೆ ಎಂದು ಲೋಕಾಯುಕ್ತರು ಹೇಳಿದರು. ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕೆಲಸ ಮಾಡಿದರೆ ಯಾವುದೇ ಭಯಪಡುವ ಅಗತ್ಯವಿಲ್ಲ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಎದುರಿಸಲು ಲೋಕಾಯುಕ್ತ ಸಂಸ್ಥೆ ನೆರವಾಗಲಿದೆ. ಆದರೆ ಕರ್ತವ್ಯಲೋಪ, ಭ್ರಷ್ಟಾಚಾರ ಅಥವಾ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು. *ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿ* ನಿಮ್ಮ ಬೆನ್ನಿಗೆ ಲೋಕಾಯುಕ್ತ ಸಂಸ್ಥೆ ಇರುತ್ತದೆ. ಆದರೆ ತಪ್ಪು ಮಾಡಿದರೆ ಯಾರನ್ನೂ ಬಿಡುವುದಿಲ್ಲ” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದರು. ತಾಲೂಕು ಮಟ್ಟದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಬೇಕು. ಜನರು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಜನಸೇವೆಯನ್ನು ತಮ್ಮ ಮೊದಲ ಆದ್ಯತೆಯನ್ನಾಗಿ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದರು. *ಕೆರೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ* ಕೆರೆ-ಕಟ್ಟೆಗಳ ಒತ್ತುವರಿ ಹಾಗೂ ಅಕ್ರಮ ನಿರ್ಮಾಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, “ಇಂದು ಕೆರೆಗಳನ್ನು ಒತ್ತುವರಿ ಮಾಡಿ ಮುಚ್ಚಿದರೆ ನಾಳೆ ನಮ್ಮ ಮಕ್ಕಳಿಗೆ ನೀರಿನ ಸಮಸ್ಯೆ ಎದುರಾಗುತ್ತದೆ” ಎಂದು ಎಚ್ಚರಿಸಿದರು. ಕೆರೆಗಳು ಮತ್ತು ಜಲಮೂಲಗಳನ್ನು ಉಳಿಸುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕೆರೆಗಳ ಸಂರಕ್ಷಣೆಗೆ ಮುಂದಾಗಬೇಕು. ನಗರೀಕರಣದ ಹೆಸರಿನಲ್ಲಿ ಕೆರೆಗಳನ್ನು ನಾಶಪಡಿಸಿದರೆ ಭವಿಷ್ಯದಲ್ಲಿ ಅದರ ಪರಿಣಾಮವನ್ನು ಸಮಾಜವೇ ಎದುರಿಸಬೇಕಾಗುತ್ತದೆ ಎಂದರು. ಕೆಂಪೇಗೌಡರ ಕಾಲದಲ್ಲಿ ಬೆಂಗಳೂರಿನಲ್ಲಿ ಇದ್ದ ಕೆರೆಗಳ ಸಂಖ್ಯೆ ಹಾಗೂ ಇಂದಿನ ಪರಿಸ್ಥಿತಿಯನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿಯ ಹೆಸರಿನಲ್ಲಿ ಜಲಮೂಲಗಳನ್ನು ನಾಶಪಡಿಸುವ ಪ್ರವೃತ್ತಿ ಆತಂಕಕಾರಿ. ಕಾಂಕ್ರೀಟ್ ಕಾಡಿನ ನಡುವೆ ಜಲಮೂಲಗಳನ್ನು ಉಳಿಸುವುದು ಅತ್ಯಂತ ಅಗತ್ಯ ಎಂದು ಹೇಳಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ವರ್ಗಾವಣೆ ಸೇರಿದಂತೆ ಯಾವುದೇ ಒತ್ತಡಕ್ಕೆ ಹೆದರಬೇಕಿಲ್ಲ. ಜನರ ಹಿತದೃಷ್ಟಿಯಿಂದ ನಿಯಮಾನುಸಾರ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯ ಬೆಂಬಲವಿದೆ ಎಂದರು. ಅದೇ ವೇಳೆ ಭ್ರಷ್ಟಾಚಾರ, ಕರ್ತವ್ಯಲೋಪ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. “ನಾನು ಯಾರನ್ನೂ ಬಿಡುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ರಕ್ಷಣೆ, ತಪ್ಪು ಮಾಡುವವರಿಗೆ ಕಾನೂನು ಕ್ರಮ” ಎಂಬ ನಿಲುವು ಲೋಕಾಯುಕ್ತ ಸಂಸ್ಥೆಯದ್ದಾಗಿದೆ ಎಂದು ತಿಳಿಸಿದರು. *ಸೈನಿಕರ ತ್ಯಾಗ ಮರೆಯಬಾರದು* ದೇಶದ ಗಡಿಯಲ್ಲಿ ಸೈನಿಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಿದ್ದಾರೆ. ಅವರ ತ್ಯಾಗದಿಂದಲೇ ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಸೈನಿಕರ ತ್ಯಾಗವನ್ನು ಪ್ರತಿಯೊಬ್ಬ ನಾಗರಿಕರೂ ಸ್ಮರಿಸಬೇಕು ಎಂದರು. ದೇಶದ ಭದ್ರತೆಗೆ ಬಾಹ್ಯ ಶತ್ರುಗಳಷ್ಟೇ ಅಲ್ಲ, ಸಮಾಜದೊಳಗಿನ ಭ್ರಷ್ಟಾಚಾರವೂ ದೊಡ್ಡ ಅಪಾಯವಾಗಿದೆ. ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಬೆಳೆಸಿದರೆ ದೇಶದ ವ್ಯವಸ್ಥೆಯೇ ದುರ್ಬಲವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. *ಪ್ರಾಮಾಣಿಕತೆಯ ಅನ್ನವೇ ನೆಮ್ಮದಿ ಕೊಡುತ್ತದೆ* ಪ್ರಾಮಾಣಿಕವಾಗಿ ಗಳಿಸಿದ ಸಂಪತ್ತು ಮತ್ತು ಆದಾಯದಿಂದ ಬದುಕುವ ಜೀವನವೇ ನೆಮ್ಮದಿಯ ಜೀವನ. ಅನ್ಯಾಯದ ಮೂಲಕ ಗಳಿಸಿದ ಹಣದಿಂದ ಕುಟುಂಬವನ್ನು ಪೋಷಿಸಿದರೆ ಆ ಹಣ ನೆಮ್ಮದಿಯನ್ನು ನೀಡುವುದಿಲ್ಲ ಎಂದು ಲೋಕಾಯುಕ್ತರು ಹೇಳಿದರು. ಸರ್ಕಾರಿ ನೌಕರರು ತಮ್ಮ ಆದಾಯಕ್ಕೆ ಹೋಲಿಕೆಯಾಗದ ರೀತಿಯಲ್ಲಿ ಆಸ್ತಿ ಸಂಪಾದಿಸಿದರೆ ಅದರ ಮೂಲದ ಬಗ್ಗೆ ಪರಿಶೀಲನೆ ನಡೆಯಬೇಕು. ಕುಟುಂಬದ ಸದಸ್ಯರೂ ಅಕ್ರಮ ಸಂಪತ್ತಿನ ಬಗ್ಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. “ಪ್ರಾಮಾಣಿಕವಾಗಿ ಗಳಿಸಿದ ಅನ್ನವೇ ನೆಮ್ಮದಿ ಕೊಡುತ್ತದೆ; ಅನ್ಯಾಯದ ಹಣದಿಂದ ಬಂದ ಸಂಪತ್ತು ನೆಮ್ಮದಿ ನೀಡುವುದಿಲ್ಲ” ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿಗಳು ಹಾಗೂ ಉಪ ನಿಬಂಧಕರಾದ ಅರವಿಂದ್ ಎನ್. ವಿ. ಜಿಲ್ಲಾ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎಂ. ಆನಂದ್, ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ವಿ. ಜೆ. ಶೋಭರಾಣಿ, ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಮಂಡ್ಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸತ್ಯಾನಂದ್ ರವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.1