ಫಸಲು ಬಂದಿದ್ದ ಎರಡು ಎಕರೆಯ ಬಾಳೆಗಿಡಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು: ಕಡೂರು ಠಾಣೆಯಲ್ಲಿ ಪ್ರಕರಣ ದಾಖಲು ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಸಲು ಬಂದಿದ್ದ ಎರಡು ಎಕರೆಯ ಬಾಳೆಗಿಡಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು: ಕಡೂರು ಠಾಣೆಯಲ್ಲಿ ಪ್ರಕರಣ ದಾಖಲು ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ
ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು
20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಅರಕಲಗೂಡು ತಾಲ್ಲೂಕಿನ ಜೋಡಿಗುಬ್ಬಿ ಕ್ರಾಸ್ ಬಳಿ ಘಟನೆ ಅರಕಲಗೂಡ ತಾಲ್ಲೂಕಿನ ಹೆತ್ತಗೌಡನಹಳ್ಳಿ ಗ್ರಾಮದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೆರೆಗೋಡು ಗ್ರಾಮದ ಮೂವರಿಂದ ಹಲ್ಲೆ ಅರಕಲಗೂಡು ಪೋಲೀಸ್'ರು ಸ್ಥಳಕ್ಕೆ ಭೇಟಿ , ಪರಿಶೀಲನೆ1
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿರುವ ಸಂದೇಶ್ ಎಂಬವರ ಮಾಲಿಕತ್ವದ 'ಗುರುರಾಜ್’ ಎಂಬ ಆಳಸಮುದ್ರ ಮೀನುಗಾರಿಕಾ ಬೋಟ್‍ನಲ್ಲಿ ಗೋಬಿಂದ ದಾಸ್(42) ಎಂಬವರು ಮಾರ್ಚ್ 6 ರಂದು ರಾತ್ರಿ ಒಟ್ಟು 9 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿರುತ್ತಾರೆ. ಮೀನುಹಿಡಿಯುವ ಸಲುವಾಗಿ ಬಲೆ ಬೀಸಲು ತೊಡಗಿದಾಗ ಗೋಬಿಂದ ದಾಸ್ ಬೋಟ್‍ನಲ್ಲಿ ಇರದೇ ಕಾಣೆಯಾಗಿದ್ದಾರೆ. ಅಥವಾ ರಾತ್ರಿ ಸಮಯ ಗೋಬಿಂದ ದಾಸ್ ಆಕಸ್ಮಿಕವಾಗಿ ಬೋಟ್‍ನಿಂದ ಜಾರಿ ಆಳ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಿಳಿ ಮಿಶ್ರಿತ ಕೂದಲು, ಹಿಂದಿ, ಬೆಂಗಾಳಿ ಭಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಟೀಶರ್ಟ್,ಮತ್ತು ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- Post by Suresh Belagere1
- ಚಪ್ಪಲಿ ಪೊರಕೆ ತೋರಿಸುವುದು ಬಿಜೆಪಿ ಸಂಸ್ಕೃತಿ ಎಂದು ಚಿತ್ರದುರ್ಗದಲ್ಲಿ ಯೋಗೀಶ್ ಬಾಬು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ದ್ರಾಕ್ಷ ರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು ಅವರು ಮಾತನಾಡಿದ್ದು ಯಾರಿಗೂ ಕೂಡ ಅಲ್ಲಿಗೆ ಬರ್ರಿ ಇಲ್ಲಿಗೆ ಬರ್ರಿ ಎಂದು ಸವಾಲ್ ಹಾಕುವುದು ಸರಿಯಲ್ಲ, ಎಲ್ಲರಿಗೂ ಕೂಡ ವಾಕ್ ಸ್ವಾತಂತ್ರ್ಯ ಇರುತ್ತದೆ. ದಾವಣಗೆರೆಗೆ ಬನ್ನಿ ಎಂದು ಹೇಳುವುದು ತಪ್ಪು ಎಂದು ಟಾಂಗ್ ಕೊಟ್ಟಿದ್ದಾರೆ1
- Post by Md Aleemulla Shariff1
- ಕಡೂರು : ಏ.2ರಂದು ಕಡೂರಿನಲ್ಲಿ ಜಿಲ್ಲಾ ಮಟ್ಟದ ಶ್ರೀ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಸಮಾರಂಭವನ್ನು ಆದ್ದೂರಿಯಾಗಿ ಆಚರಿಸಲಾಗುವುದು ಎಂದು ದೇವರ ದಾಸಿಮಯ್ಯ ಆಚರಣೆ ಜಿಲ್ಲಾ ಸಮಿತಿಯ ಅಧ್ಯಕ್ಷ ಜೆ ಯೋಗೀಶ್ವರ ತಿಳಿಸಿದರು. ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ಸಭಾ ಕಾರ್ಯಕ್ರಮವು ಮಧ್ಯಾಹ್ನ 12ಗಂಟೆಗೆ ಪ್ರಾರಂಭವಾಗಲಿದೆ. ಸಮಾರಂಭಕ್ಕೂ ಮುನ್ನಾ ಬೆಳಿಗ್ಗೆ 10ಗಂಟೆಗೆ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಆವರಣದಿಂದ ಪೆಂಡಾಲ್ ವರೆಗೂ ದೇವರದಾಸಿಮಯ್ಯ ಅವರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳೊಂದಿಗೆ. ಮೆರವಣಿಗೆ ನಡೆಸಲಾಗುತ್ತದೆ. ಹಂಪೆ ಹೇಮಕೂಟದ ಶ್ರೀ ದಯಾನಂದ ಪುರಿ ಸ್ವಾಮೀಜಿ, ಹಾಗೂ ಮಹಾರಾಷ್ಟ್ರ ಸೊಲ್ಲಾಪುರದ ಶ್ರೀ ಡಾ. ಅಭಿನವ ರಾಮಲಿಂಗ ಪಟ್ಟದೇವರು ಹಾಗೂ ಜಿಲ್ಲೆಯ ಸಮಾಜ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ದೇವಾಂಗ ಸಂಘದ ತಾಲೂಕು ಅಧ್ಯಕ್ಷ ಎಚ್.ಎಲ್. ರಂಗನಾಥ್ ಮಾತನಾಡಿ, ಜಿಲ್ಲೆಯಾದ್ಯಂತ ಸಮಾಜದ ಬಂಧುಗಳು ಇರುವ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಜಿಲ್ಲಾದ್ಯಂತ 5,000ಕ್ಕೂ ಹೆಚ್ಚು ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆ ಇದೆ. ಈ ಮೂಲಕ ಸಮಾಜದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು. ಸಮಾವೇಶದಲ್ಲಿ ಪಟ್ಟಣದ ಪ್ರಖ್ಯಾತಿ ವೈದ್ಯರಾದ ಡಾ. ಛಾಯಾಪತಿ ಅವರಿಗೆ ದೇವಲ ಮಹರ್ಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದರು. ದೇವಾಂಗ ಸಮಾಜದ ಕಡೂರು ನಗರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದಂತಹ ವಿಶಿಷ್ಟ ಕೊಡುಗೆ ನೀಡಿರುವ ದೇವರ ದಾಸಿಮಯ್ಯ ಅವರ 1046ನೇ ಜಯಂತಿಯನ್ನು ಕಡೂರಿನಲ್ಲಿ ಶೈಕ್ಷಣಿಕ,ರಾಜಕೀಯ, ಸಾಮಾಜಿಕವಾಗಿ ಸಂಘಟನೆ ಮೂಲಕ ಜಿಲ್ಲಾ ಮಟ್ಟದಲ್ಲಿ ದೇವಾಂಗ ಜನ ಜಾಗೃತಿ ಮತ್ತು ಸಂಘಟನಾ ಸಮಾವೇಶವನ್ನು ಈ ಬಾರಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಉದ್ಘಾಟಿಸಲಿದ್ದಾರೆ.ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಮಾಜಿ ಸಚಿವರಾದ ಉಮಾಶ್ರೀ, ಎಂ ಡಿ ಲಕ್ಷ್ಮಿ ನಾರಾಯಣ್. ಶಾಸಕರುಗಳಾದ ಎಚ್ ಡಿ ತಮ್ಮಯ್ಯ. ಸಿ.ಟಿ ರವಿ, ಜಿ ಎಚ್ ಶ್ರೀನಿವಾಸ್, ಎಸ್. ಎಲ್ ಭೋಜೇಗೌಡ, ಮಾಜಿ ಶಾಸಕರಾದ ವೈಎಸ್‌ವಿ ದತ್ತ, ಬೆಳ್ಳಿಪ್ರಕಾಶ್ ಮುಂತಾದವರು ಭಾಗವಹಿಸಲಿದ್ದು, ಸಾಹಿತಿ ನಾಗಶ್ರೀ ತ್ಯಾಗರಾಜ್ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ. ಶ್ರೀನಿವಾಸ್, ರಾಜ್ಯ ಸಹ ಕಾರ್ಯದರ್ಶಿ ಸಿ.ಎಸ್.ರವಿಕುಮಾರ್, ಕಾರ್ಯದರ್ಶಿ ಧನಪಾಲ್. ಎಚ್ ಎಲ್. ಶೇಖರಪ್ಪ. ಸಿಂಗಟಗೆರೆ ಸಿದ್ದಪ್ಪ. ಅರೆಕಲ್ ಪ್ರಕಾಶ್. ಎಚ್. ವೆಂಕಟೇಶ್ ಮೂರ್ತಿ. ಚಿಕ್ಕಪಟ್ಟಣಗೆರೆ ನಾಗರಾಜು, ಕುಮಾರಸ್ವಾಮಿ ಮತ್ತಿತರಿದ್ದರು.3