ಹಬ್ಬಗಳು ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ: ಮಲ್ಲಯ್ಯ ಹಾಲ್ವಿ ಹಬ್ಬಗಳು ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ: ಮಲ್ಲಯ್ಯ ಹಾಲ್ವಿ ಸ್ಪಂದನ ಸಾಂಸ್ಕೃತಿಕ ಕಲಾ ಸಂಸ್ಥೆಯಿಂದ ಜಾನಪದ ಗಾನ ಸಂಭ್ರಮ ಕಾರಟಗಿ: ಹಬ್ಬಗಳು ಮನಸ್ಸು–ಮನಸ್ಸುಗಳನ್ನು ಬೆಸೆಯುವ ಜೊತೆಗೆ ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ. ಜಾತಿ, ಮತ, ಧರ್ಮದ ಭೇದಗಳನ್ನು ಮರೆತು ಭಾವೈಕ್ಯತೆಯಿಂದ ಬದುಕಿದಾಗ ಮಾತ್ರ ಹಬ್ಬಗಳ ಆಚರಣೆಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ನಿವೃತ್ತ ಕಾರ್ಯದರ್ಶಿ ಮಲ್ಲಯ್ಯ ಹಾಲ್ವಿ ಹೇಳಿದರು. ಪಟ್ಟಣದ ಸ್ಪಂದನ ಸಾಂಸ್ಕೃತಿಕ ಕಲಾ ಸಂಸ್ಥೆ, ಹಲಗೇರಿ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಿದ್ದ ದ್ವಿತೀಯ ವರ್ಷದ ಜಾನಪದ ಗಾನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಹಬ್ಬಗಳು ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವಾಗಿವೆ. ಇಂತಹ ಸಂದರ್ಭದಲ್ಲಿ ಮೂಲ ಜಾನಪದ ಕಲೆ, ಸಾಹಿತ್ಯ ಹಾಗೂ ಸಂಗೀತವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸ್ಪಂದನ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಪೀಳಿಗೆಗೆ ಜಾನಪದ ಕಲೆಯ ಪರಿಚಯ ಮಾಡಿಸುವ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕು ಎಂದು ಅವರು ಆಶಿಸಿದರು. ಅಲೆಮಾರಿ ಸಂಸ್ಥೆಯ ರಾಜ್ಯ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಬೈಲಪತ್ತಾರ್ ಮಾತನಾಡಿ, ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿಯೂ ವಿವಿಧ ಜಾನಪದ ಕಲಾವಿದರನ್ನು ಆಹ್ವಾನಿಸಿ ಮೂಲ ಜಾನಪದ ಕಲೆಗಳನ್ನು ಜನರಿಗೆ ಪರಿಚಯಿಸುತ್ತಿರುವ ಸ್ಪಂದನ ಸಂಸ್ಥೆಯ ಕಾರ್ಯ ಇಂದಿನ ಯುವಜನತೆಗೆ ಮಾರ್ಗದರ್ಶಿಯಾಗಿದೆ ಎಂದರು. ಮೊಬೈಲ್ ರೀಲ್‌ಗಳ ಪ್ರಭಾವದ ನಡುವೆ ಮೂಲ ಜಾನಪದ ಕಲೆಗಳು ಮರೆಯಾಗದಂತೆ ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೊಟ್ರಗೌಡ ಪಾಟೀಲ್ ವಹಿಸಿದ್ದರು. ಅಂತರರಾಷ್ಟ್ರೀಯ ಜಾನಪದ ಕಲಾವಿದ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮೆಹಬೂಬ್ ಕಿಲ್ಲೇದಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಚಂದ್ರಶೇಖರಯ್ಯ ಹಿರೇಮಠ, ಟಿ. ಉಮೇಶ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಕಾರಟಗಿ ತಾಲೂಕು ಘಟಕದ ಅಧ್ಯಕ್ಷ ಶರಣಪ್ಪ ಕೋಟ್ಯಾಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪಟ್ಟಣದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಲಿ ಹುಸೇನ್ ಅವರನ್ನು ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ಅಲಿಫಾ ಕಿಲ್ಲೇದಾರ ಭರತನಾಟ್ಯ ಪ್ರದರ್ಶಿಸಿದರು. ಜಾನಪದ ಕಲಾವಿದ ಗಂಗಣ್ಣ ವಂದಾಲಿ ಶಿಕ್ಷಕರು ಬಿಸೋಕಲ್ಲಿನ ಪದಗಳನ್ನು, ಕುಮಾರಿ ಸೃಜಿತ ವಂದಾಲಿ ಜೋಗುಳ ಪದಗಳನ್ನು, ಕುಮಾರ್ ಅಮಿತ್ ಗುರುರಾಜ್ ಸುಗಮ ಸಂಗೀತವನ್ನು ಹಾಗೂ ವೀರೇಶ್ ಜಲ್ಲಿ ಮತ್ತು ಅಂಬರೀಶ್ ಅಯ್ಯಾ ಜಾನಪದ ಗಾಯನವನ್ನು ಪ್ರಸ್ತುತಪಡಿಸಿದರು. ಸಿಂಧನೂರು ತಾಲೂಕಿನ ಕೆ. ಬಸಾಪುರ ಗ್ರಾಮದ ಪೀರಸಾಬ ಅಂಗಡಿ ಹಾಗೂ ತಂಡ ತತ್ವಪದಗಳನ್ನು ಹಾಡಿದರು. ಜಂಭುನಾಥನಹಳ್ಳಿಯ ಅಮರೇಶ ಹಳ್ಯಾಪುರ ಹಾಗೂ ತಂಡ ಭಜನಾ ಪದಗಳನ್ನು ಪ್ರಸ್ತುತಪಡಿಸಿದರು. ಮೆಹಬೂಬ್ ಕಿಲ್ಲೇದಾರ ಅವರು ಜಾನಪದ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ವಾದ್ಯಗಾರರಾದ ರಿಯಾನ್ ಕಿಲ್ಲೇದಾರ ಹಾಗೂ ಶರಣಬಸವ ಮಡಿವಾಳ ಸಾಥ್ ನೀಡಿದರು. ಶಿಕ್ಷಕ ಹಾಗೂ ಸಾಹಿತಿ ರಮೇಶ ಸಿ. ಬನ್ನಿಕೊಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾನಪದ ಗಾನ ಸಂಭ್ರಮವನ್ನು ಆಸ್ವಾದಿಸಿದರು.
ಹಬ್ಬಗಳು ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ: ಮಲ್ಲಯ್ಯ ಹಾಲ್ವಿ ಹಬ್ಬಗಳು ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ: ಮಲ್ಲಯ್ಯ ಹಾಲ್ವಿ ಸ್ಪಂದನ ಸಾಂಸ್ಕೃತಿಕ ಕಲಾ ಸಂಸ್ಥೆಯಿಂದ ಜಾನಪದ ಗಾನ ಸಂಭ್ರಮ ಕಾರಟಗಿ: ಹಬ್ಬಗಳು ಮನಸ್ಸು–ಮನಸ್ಸುಗಳನ್ನು ಬೆಸೆಯುವ ಜೊತೆಗೆ ಮನುಷ್ಯ–ಮನುಷ್ಯರನ್ನು ಒಂದುಗೂಡಿಸುತ್ತವೆ. ಜಾತಿ, ಮತ, ಧರ್ಮದ ಭೇದಗಳನ್ನು ಮರೆತು ಭಾವೈಕ್ಯತೆಯಿಂದ ಬದುಕಿದಾಗ ಮಾತ್ರ ಹಬ್ಬಗಳ ಆಚರಣೆಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ನಿವೃತ್ತ ಕಾರ್ಯದರ್ಶಿ ಮಲ್ಲಯ್ಯ ಹಾಲ್ವಿ ಹೇಳಿದರು. ಪಟ್ಟಣದ ಸ್ಪಂದನ ಸಾಂಸ್ಕೃತಿಕ ಕಲಾ ಸಂಸ್ಥೆ, ಹಲಗೇರಿ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಿದ್ದ ದ್ವಿತೀಯ ವರ್ಷದ ಜಾನಪದ ಗಾನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಹಬ್ಬಗಳು ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವಾಗಿವೆ. ಇಂತಹ ಸಂದರ್ಭದಲ್ಲಿ ಮೂಲ ಜಾನಪದ ಕಲೆ, ಸಾಹಿತ್ಯ ಹಾಗೂ ಸಂಗೀತವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸ್ಪಂದನ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಪೀಳಿಗೆಗೆ ಜಾನಪದ ಕಲೆಯ ಪರಿಚಯ ಮಾಡಿಸುವ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕು ಎಂದು ಅವರು ಆಶಿಸಿದರು. ಅಲೆಮಾರಿ ಸಂಸ್ಥೆಯ ರಾಜ್ಯ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಬೈಲಪತ್ತಾರ್ ಮಾತನಾಡಿ, ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿಯೂ ವಿವಿಧ ಜಾನಪದ ಕಲಾವಿದರನ್ನು ಆಹ್ವಾನಿಸಿ ಮೂಲ ಜಾನಪದ ಕಲೆಗಳನ್ನು ಜನರಿಗೆ ಪರಿಚಯಿಸುತ್ತಿರುವ ಸ್ಪಂದನ ಸಂಸ್ಥೆಯ ಕಾರ್ಯ ಇಂದಿನ ಯುವಜನತೆಗೆ ಮಾರ್ಗದರ್ಶಿಯಾಗಿದೆ ಎಂದರು. ಮೊಬೈಲ್ ರೀಲ್‌ಗಳ ಪ್ರಭಾವದ ನಡುವೆ ಮೂಲ ಜಾನಪದ ಕಲೆಗಳು ಮರೆಯಾಗದಂತೆ ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಸ್ಪಂದನ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೊಟ್ರಗೌಡ ಪಾಟೀಲ್ ವಹಿಸಿದ್ದರು. ಅಂತರರಾಷ್ಟ್ರೀಯ ಜಾನಪದ ಕಲಾವಿದ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮೆಹಬೂಬ್ ಕಿಲ್ಲೇದಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಚಂದ್ರಶೇಖರಯ್ಯ ಹಿರೇಮಠ, ಟಿ. ಉಮೇಶ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಕಾರಟಗಿ ತಾಲೂಕು ಘಟಕದ ಅಧ್ಯಕ್ಷ ಶರಣಪ್ಪ ಕೋಟ್ಯಾಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪಟ್ಟಣದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಲಿ ಹುಸೇನ್ ಅವರನ್ನು ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ಅಲಿಫಾ ಕಿಲ್ಲೇದಾರ ಭರತನಾಟ್ಯ ಪ್ರದರ್ಶಿಸಿದರು. ಜಾನಪದ ಕಲಾವಿದ ಗಂಗಣ್ಣ ವಂದಾಲಿ ಶಿಕ್ಷಕರು ಬಿಸೋಕಲ್ಲಿನ ಪದಗಳನ್ನು, ಕುಮಾರಿ ಸೃಜಿತ ವಂದಾಲಿ ಜೋಗುಳ ಪದಗಳನ್ನು, ಕುಮಾರ್ ಅಮಿತ್ ಗುರುರಾಜ್ ಸುಗಮ ಸಂಗೀತವನ್ನು ಹಾಗೂ ವೀರೇಶ್ ಜಲ್ಲಿ ಮತ್ತು ಅಂಬರೀಶ್ ಅಯ್ಯಾ ಜಾನಪದ ಗಾಯನವನ್ನು ಪ್ರಸ್ತುತಪಡಿಸಿದರು. ಸಿಂಧನೂರು ತಾಲೂಕಿನ ಕೆ. ಬಸಾಪುರ ಗ್ರಾಮದ ಪೀರಸಾಬ ಅಂಗಡಿ ಹಾಗೂ ತಂಡ ತತ್ವಪದಗಳನ್ನು ಹಾಡಿದರು. ಜಂಭುನಾಥನಹಳ್ಳಿಯ ಅಮರೇಶ ಹಳ್ಯಾಪುರ ಹಾಗೂ ತಂಡ ಭಜನಾ ಪದಗಳನ್ನು ಪ್ರಸ್ತುತಪಡಿಸಿದರು. ಮೆಹಬೂಬ್ ಕಿಲ್ಲೇದಾರ ಅವರು ಜಾನಪದ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ವಾದ್ಯಗಾರರಾದ ರಿಯಾನ್ ಕಿಲ್ಲೇದಾರ ಹಾಗೂ ಶರಣಬಸವ ಮಡಿವಾಳ ಸಾಥ್ ನೀಡಿದರು. ಶಿಕ್ಷಕ ಹಾಗೂ ಸಾಹಿತಿ ರಮೇಶ ಸಿ. ಬನ್ನಿಕೊಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾನಪದ ಗಾನ ಸಂಭ್ರಮವನ್ನು ಆಸ್ವಾದಿಸಿದರು.
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.1
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- ಪಕ್ಕ ಲವರ್’ ಸಿನಿಮಾ ಶುರು! 🎬 ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ! ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ! ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬 ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ. ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ. ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ. ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ. #PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada1