logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತರು: ವೈದ್ಯರಿಗೆ ತರಾಟೆ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಕೆ.ಎನ್. ಪಣೀಂದ್ರ ಹಾಗೂ ಬಿ. ವೀರಪ್ಪ ಅವರು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ರೋಗಿಗಳೊಂದಿಗೆ ನೇರವಾಗಿ ಮಾತನಾಡಿದ ಅವರು, ವೈದ್ಯರ ಹಾಜರಾತಿ, ಔಷಧಿ ಲಭ್ಯತೆ, ಊಟ, ಬಿಸಿ ನೀರು ಹಾಗೂ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ರೋಗಿಗಳಿಗೆ ಶುದ್ಧ ಹಾಗೂ ಸುರಕ್ಷಿತ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವಧಿ ಮೀರಿದ ಔಷಧಿಗಳ ನಿರ್ವಹಣೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. #LiveHaveri #HaveriNews #DistrictHospital #Lokayukta

20 hrs ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
20 hrs ago
fd1d639d-6a0a-4452-81fc-61ef4bc7fa42
e3ab841d-79ea-465f-86d2-6acbb5faa348
1141471b-d18a-4aaf-be04-dd3f67cd5868

ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತರು: ವೈದ್ಯರಿಗೆ ತರಾಟೆ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಕೆ.ಎನ್. ಪಣೀಂದ್ರ ಹಾಗೂ ಬಿ. ವೀರಪ್ಪ ಅವರು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ರೋಗಿಗಳೊಂದಿಗೆ ನೇರವಾಗಿ ಮಾತನಾಡಿದ ಅವರು, ವೈದ್ಯರ ಹಾಜರಾತಿ, ಔಷಧಿ ಲಭ್ಯತೆ, ಊಟ, ಬಿಸಿ ನೀರು ಹಾಗೂ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ರೋಗಿಗಳಿಗೆ ಶುದ್ಧ ಹಾಗೂ ಸುರಕ್ಷಿತ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವಧಿ ಮೀರಿದ ಔಷಧಿಗಳ ನಿರ್ವಹಣೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. #LiveHaveri #HaveriNews #DistrictHospital #Lokayukta

More news from ಕರ್ನಾಟಕ and nearby areas
  • ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------
    1
    ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ
ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ
ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ
ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ....
ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ
ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ
ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ
ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ.
-----------------
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    9 hrs ago
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    1
    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ
ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    50 min ago
  • ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ *ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್ ಕಾರ್ಯಕರ್ತೆಯರು. ತಮ್ಮ ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ , ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ ನೇತೃತ್ವದಲ್ಲಿ , ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ ಕೆ. ಪದ್ಮ‍ಾವತಿ , ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ , ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ , ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
*ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್  ಕಾರ್ಯಕರ್ತೆಯರು. ತಮ್ಮ  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ,  ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ  ನೇತೃತ್ವದಲ್ಲಿ ,  ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ  ಕೆ. ಪದ್ಮ‍ಾವತಿ ,  ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ ,  ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ ,  ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ  , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    15 hrs ago
  • ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್ ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್ ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
    1
    ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್  ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್  ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    23 hrs ago
  • “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾 ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ. “ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ. 📍 ಸ್ಥಳ: ಗಾಂಧಿ ಭವನ, ಬಳ್ಳಾರಿ 📅 ದಿನಾಂಕ: ಆಗಸ್ಟ್ 26, 2026 ⏰ ಸಮಯ: ಬೆಳಿಗ್ಗೆ 11 ಗಂಟೆ 📆 ಮುಂದೆ: ಪ್ರತಿ ಬುಧವಾರ 🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ. #Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    1
    “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು
ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾
ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ.
“ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.
ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ.
📍 ಸ್ಥಳ: ಗಾಂಧಿ ಭವನ, ಬಳ್ಳಾರಿ
📅 ದಿನಾಂಕ: ಆಗಸ್ಟ್ 26, 2026
⏰ ಸಮಯ: ಬೆಳಿಗ್ಗೆ 11 ಗಂಟೆ
📆 ಮುಂದೆ: ಪ್ರತಿ ಬುಧವಾರ
🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು
ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
#Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    user_AsnNews24Kannada
    AsnNews24Kannada
    Local News Reporter Ballari, Karnataka•
    7 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    9 hrs ago
  • ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    2
    ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ
ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ  ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು  ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು.
ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯  ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ   ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ.  ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ  ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು.
ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್,  ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    12 hrs ago
  • ರಾಯಚೂರು ಜಿಲ್ಲೆಯ ದಲಿತ ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿಅತ್ಯಾಚಾರ ಕೊಲೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ಬಳ್ಳಾರಿ / ಕಂಪ್ಲಿ : ರಾಯಚೂರು ಜಿಲ್ಲೆಯ ದಲಿತ ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿ ಅತ್ಯಾಚಾರ ಕೊಲೆ ಖಂಡಿಸಿ, ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕಂದಾಯ ಅಧಿಕಾರಿ ಸುರೇಶ್‌ಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರಕ್ಕೆ ರವಾನಿಸಿದರು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ ಕೊಲೆ ಮತ್ತು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಮತ್ತು ಕೊಲೆಯನ್ನು ತೀವ್ರವಾಗಿ ಖಂಡಿಸಿದ್ದು ದಿನೇ ದಿನೇ ದಲಿತರ ಮೇಲೆ ದೌರ್ಜನ್ಯಗಳು, ಕೊಲೆಗಳು, ಅತ್ಯಾಚಾರಗಳು ಸಂಭವಿಸುತ್ತಿದ್ದು ಇದಕ್ಕೆ ನೇರ ಸರ್ಕಾರವೇ ಹೊಣೆ ಹಾಗೂ ನೊಂದ ದಲಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಮತ್ತು ಸರ್ಕಾರವು ಉದ್ಯೋಗ ಮತ್ತು ಪರಿಹಾರ ಕೊಡಬೇಕು. ಹಾಗೂ ಆರೋಪಿಗಳನ್ನು ಕೂಡಲೆ ಬಂಧಿಸಿ ಕಾನೂನಾತ್ಮಕವಾಗಿ ತನಿಖೆ ನಡೆಸಿ, ಈ ಕೃತ್ಯವನ್ನು ಮಾಡಿದವರಿಗೆ ಸಂಪೂರ್ಣ ವಿಚಾರಣೆ ನಡೆಸಿ ಆದಷ್ಟು ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡುತ್ತೇವೆ |
    1
    ರಾಯಚೂರು ಜಿಲ್ಲೆಯ ದಲಿತ
ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿಅತ್ಯಾಚಾರ ಕೊಲೆ ಖಂಡಿಸಿ ನಗರದಲ್ಲಿ ಪ್ರತಿಭಟನೆ 
ಬಳ್ಳಾರಿ / ಕಂಪ್ಲಿ : ರಾಯಚೂರು ಜಿಲ್ಲೆಯ ದಲಿತ
ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿ
ಅತ್ಯಾಚಾರ ಕೊಲೆ ಖಂಡಿಸಿ, ಸಮಾನ ಮನಸ್ಕರ
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು
ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕಂದಾಯ
ಅಧಿಕಾರಿ ಸುರೇಶ್‌ಗೆ ಮನವಿ ಪತ್ರ ಸಲ್ಲಿಸುವ ಮೂಲಕ
ಸರ್ಕಾರಕ್ಕೆ ರವಾನಿಸಿದರು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ
ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ
ಕೊಲೆ ಮತ್ತು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ
ಯುವತಿ ಅಶ್ವಿನಿ ಅತ್ಯಾಚಾರ ಮತ್ತು ಕೊಲೆಯನ್ನು
ತೀವ್ರವಾಗಿ ಖಂಡಿಸಿದ್ದು ದಿನೇ ದಿನೇ ದಲಿತರ ಮೇಲೆ
ದೌರ್ಜನ್ಯಗಳು, ಕೊಲೆಗಳು, ಅತ್ಯಾಚಾರಗಳು
ಸಂಭವಿಸುತ್ತಿದ್ದು ಇದಕ್ಕೆ ನೇರ ಸರ್ಕಾರವೇ ಹೊಣೆ ಹಾಗೂ
ನೊಂದ ದಲಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಮತ್ತು
ಸರ್ಕಾರವು ಉದ್ಯೋಗ ಮತ್ತು ಪರಿಹಾರ ಕೊಡಬೇಕು.
ಹಾಗೂ ಆರೋಪಿಗಳನ್ನು ಕೂಡಲೆ ಬಂಧಿಸಿ
ಕಾನೂನಾತ್ಮಕವಾಗಿ ತನಿಖೆ ನಡೆಸಿ, ಈ ಕೃತ್ಯವನ್ನು
ಮಾಡಿದವರಿಗೆ ಸಂಪೂರ್ಣ ವಿಚಾರಣೆ ನಡೆಸಿ ಆದಷ್ಟು ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡುತ್ತೇವೆ 
|
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.