ಗುರುಪುರ ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅದ್ಯಪಾಡಿ ಸರ್ಕಾರಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಮಂಗಳೂರು: ವಿದ್ಯಾ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ವಾಮಂಜೂರಿನಲ್ಲಿ ನಡೆದ ಗುರುಪುರ ಹೋಬಳಿ ಮಟ್ಟದ 17ರ ವಯೋಮಿತಿಯೊಳಗಿನ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಅದ್ಯಪಾಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 9 ತಂಡಗಳು ಭಾಗವಹಿಸಿದ್ದ ಪಂದ್ಯಾಟದ ಮೊದಲ ಸುತ್ತಿನಲ್ಲಿ ಮೌಲಾನಾ ಆಜಾದ್ ಪ್ರೌಢಶಾಲೆ, ಗುರುಕಂಬಳ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿದ ಅದ್ಯಪಾಡಿ ತಂಡ, ಎರಡನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮುಚ್ಚೂರು ತಂಡದ ವಿರುದ್ಧವೂ ನೇರ ಸೆಟ್‌ಗಳಲ್ಲಿ ಜಯ ಸಾಧಿಸಿತು. ಮೂರನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಕುಪ್ಪೆಪದವು ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮಳಲಿ ತಂಡದ ವಿರುದ್ಧ ಹೋರಾಡಿದ ಅದ್ಯಪಾಡಿ ತಂಡ ವೀರೋಚಿತ ಸೋಲು ಅನುಭವಿಸಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾಟದಲ್ಲಿ ಅದ್ಯಪಾಡಿಯ ವಿದ್ಯಾರ್ಥಿ ಮೊಹಮ್ಮದ್ ರಾಹಿಫ್ ಅವರು ‘ಬೆಸ್ಟ್ ಅಟ್ಯಾಕರ್’ ಪ್ರಶಸ್ತಿಗೆ ಭಾಜನರಾದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ತರಬೇತಿ ನೀಡಿದ ಊರಿನವರು ಮತ್ತು ಹಳೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ತಂಡದ ಅತ್ಯುತ್ತಮ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆ ಮಾಡಿಕೊಟ್ಟ ಅಬ್ದುಲ್ ರಜಾಕ್ ಅವರಿಗೆ ಶಾಲೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.
ಗುರುಪುರ ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅದ್ಯಪಾಡಿ ಸರ್ಕಾರಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಮಂಗಳೂರು: ವಿದ್ಯಾ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ವಾಮಂಜೂರಿನಲ್ಲಿ ನಡೆದ ಗುರುಪುರ ಹೋಬಳಿ ಮಟ್ಟದ 17ರ ವಯೋಮಿತಿಯೊಳಗಿನ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಅದ್ಯಪಾಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 9 ತಂಡಗಳು ಭಾಗವಹಿಸಿದ್ದ ಪಂದ್ಯಾಟದ ಮೊದಲ ಸುತ್ತಿನಲ್ಲಿ ಮೌಲಾನಾ ಆಜಾದ್ ಪ್ರೌಢಶಾಲೆ, ಗುರುಕಂಬಳ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿದ ಅದ್ಯಪಾಡಿ ತಂಡ, ಎರಡನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮುಚ್ಚೂರು ತಂಡದ ವಿರುದ್ಧವೂ ನೇರ ಸೆಟ್‌ಗಳಲ್ಲಿ ಜಯ ಸಾಧಿಸಿತು. ಮೂರನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಕುಪ್ಪೆಪದವು ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮಳಲಿ ತಂಡದ ವಿರುದ್ಧ ಹೋರಾಡಿದ ಅದ್ಯಪಾಡಿ ತಂಡ ವೀರೋಚಿತ ಸೋಲು ಅನುಭವಿಸಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾಟದಲ್ಲಿ ಅದ್ಯಪಾಡಿಯ ವಿದ್ಯಾರ್ಥಿ ಮೊಹಮ್ಮದ್ ರಾಹಿಫ್ ಅವರು ‘ಬೆಸ್ಟ್ ಅಟ್ಯಾಕರ್’ ಪ್ರಶಸ್ತಿಗೆ ಭಾಜನರಾದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ತರಬೇತಿ ನೀಡಿದ ಊರಿನವರು ಮತ್ತು ಹಳೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ತಂಡದ ಅತ್ಯುತ್ತಮ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆ ಮಾಡಿಕೊಟ್ಟ ಅಬ್ದುಲ್ ರಜಾಕ್ ಅವರಿಗೆ ಶಾಲೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.
- ಗುರುಪುರ ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅದ್ಯಪಾಡಿ ಸರ್ಕಾರಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಮಂಗಳೂರು: ವಿದ್ಯಾ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ವಾಮಂಜೂರಿನಲ್ಲಿ ನಡೆದ ಗುರುಪುರ ಹೋಬಳಿ ಮಟ್ಟದ 17ರ ವಯೋಮಿತಿಯೊಳಗಿನ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಅದ್ಯಪಾಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 9 ತಂಡಗಳು ಭಾಗವಹಿಸಿದ್ದ ಪಂದ್ಯಾಟದ ಮೊದಲ ಸುತ್ತಿನಲ್ಲಿ ಮೌಲಾನಾ ಆಜಾದ್ ಪ್ರೌಢಶಾಲೆ, ಗುರುಕಂಬಳ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿದ ಅದ್ಯಪಾಡಿ ತಂಡ, ಎರಡನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮುಚ್ಚೂರು ತಂಡದ ವಿರುದ್ಧವೂ ನೇರ ಸೆಟ್‌ಗಳಲ್ಲಿ ಜಯ ಸಾಧಿಸಿತು. ಮೂರನೇ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಕುಪ್ಪೆಪದವು ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ, ಮಳಲಿ ತಂಡದ ವಿರುದ್ಧ ಹೋರಾಡಿದ ಅದ್ಯಪಾಡಿ ತಂಡ ವೀರೋಚಿತ ಸೋಲು ಅನುಭವಿಸಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾಟದಲ್ಲಿ ಅದ್ಯಪಾಡಿಯ ವಿದ್ಯಾರ್ಥಿ ಮೊಹಮ್ಮದ್ ರಾಹಿಫ್ ಅವರು ‘ಬೆಸ್ಟ್ ಅಟ್ಯಾಕರ್’ ಪ್ರಶಸ್ತಿಗೆ ಭಾಜನರಾದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ತರಬೇತಿ ನೀಡಿದ ಊರಿನವರು ಮತ್ತು ಹಳೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ತಂಡದ ಅತ್ಯುತ್ತಮ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆ ಮಾಡಿಕೊಟ್ಟ ಅಬ್ದುಲ್ ರಜಾಕ್ ಅವರಿಗೆ ಶಾಲೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.1
- ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.1
- ಕಡಬದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದೆಂಬ ಆಮಿಷ: ಕೇಸ್ ದಾಖಲು ಕಡಬ ಠಾಣಾ ವ್ಯಾಪ್ತಿಯ ಕಡಬ ಗ್ರಾಮದ ಅಂಬೇಡ್ಕರ್ ಭವನ ಎಂಬಲ್ಲಿ, ಹಾವೇರಿ ಮೂಲದ KINGS Bazaar ಎಂಬ ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಶೀಘ್ರವಾಗಿ ಹಣಗಳಿಸಬಹುದಾಗಿ, ಹೆಚ್ಚಿನ ಬೆಲೆಯ ವಸ್ತುಗಳನ್ನು ಕಡಿಮೆ ದರದಲ್ಲಿ ಪಡೆಯಬಹುದು ಹಾಗೂ ಜನರನ್ನು ಸದ್ರಿ ಯೋಜನೆಗೆ ಜನರನ್ನು ಸೇರಿಸಿದಲ್ಲಿ ಕಮಿಷನ್ ಹಣ ಸಂಪಾದಿಸಬಹುದಾಗಿ ಭರವಸೆ ನೀಡಿ, ಅಕ್ರಮವಾಗಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸಿ ಹಣವನ್ನು ಸ್ವೀಕರಿಸುವ ಯೋಜನೆ ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ KINGS Bazaar ಸಂಸ್ಥೆ, ಸಂಸ್ಥೆಯ ಮಾಲಿಕರು ಮತ್ತು ಯೋಜನೆಯನ್ನು ಸ್ಥಳೀಯವಾಗಿ ನಡೆಸುತ್ತಿದ್ದ ಬೆಳ್ತಂಗಡಿ ಕೊಕ್ಕಡ ನಿವಾಸಿಗಳಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50)ಹಾಗೂ ಗುರುಮೂರ್ತಿ (54), ಕಡಬ ಬಿಳಿನೆಲೆ ನಿವಾಸಿಗಳಾದ ಸುರೇಶ್ ಆರ್ ಎಸ್ (55), ಕಿರಣ ಕುಮಾರ್ (21) ಹಾಗೂ ಶ್ರೀನಾಥ್ (48), ಕಡಬ ಕೌಕ್ರಾಡಿ ನಿವಾಸಿ ಬಾಲಕೃಷ್ಣ ಪಿ ಹೆಚ್ (42), ಪುತ್ತೂರು ನಿವಾಸಿ ಸಂದೇಶ್ ಎಂಬವರುಗಳ ವಿರುದ್ಧ ಕಡಬ ಪೊಲೀಸ್ ಠಾಣಾ ಅ.ಕ್ರ: 100/2026, ಕಲಂ. 4, 5, 6 PRIZE CHIT & MONEY CIR.SCHEMES (BANNING) ACT, 1978 ರಂತೆ ಸ್ವ ಪಿರ್ಯಾದಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.1
- ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು. ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು3
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- Mangalore | ಲಕ್ಷಾಂತರ ರೂಪಾಯಿ ಮರಳಿಸಿ ಪ್ರಾಮಾಣಿಕತೆ ಮೆರೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿ ಅಬ್ದುಲ್ ಸಲೀಂ ಅದ್ಯಪಾಡಿ ಮಂಗಳೂರು: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಹಾಗೂ ಸೊತ್ತುಗಳನ್ನು ವಾರಸುದಾರರಿಗೆ ಮರಳಿಸುವ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ಅದ್ಯಪಾಡಿ ನಿವಾಸಿ ಅಬ್ದುಲ್ ಸಲೀಂ ಅವರು ಪ್ರಾಮಾಣಿಕತೆ ಹಾಗೂ ಮಾನವೀಯತೆಗೆ ಮಾದರಿಯಾಗಿದ್ದಾರೆ. ರಸ್ತೆಯಲ್ಲಿ ಕಳೆದುಹೋಗಿದ್ದ ದೊಡ್ಡ ಮೊತ್ತದ ಹಣವನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಸಲೀಂ ಅವರು ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಹಾಗೂ ಸೊತ್ತುಗಳು ಕೈಗೆ ಸಿಕ್ಕಿದ್ದರೂ ಯಾವುದೇ ಆಸೆಗೆ ಒಳಗಾಗದೆ ಅವುಗಳನ್ನು ಸುರಕ್ಷಿತವಾಗಿ ಸಂಬಂಧಪಟ್ಟವರಿಗೆ ತಲುಪಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ MSF ಭದ್ರತಾ ವಿಭಾಗದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ದುಲ್ ಸಲೀಂ ಅವರ ಈ ಕಾರ್ಯ ಸಾರ್ವಜನಿಕರ ಗಮನ ಸೆಳೆದಿದೆ. ಕರ್ತವ್ಯನಿಷ್ಠೆಯ ಜತೆಗೆ ಸಾರ್ವಜನಿಕರ ಆಸ್ತಿಯ ಬಗ್ಗೆ ತೋರಿದ ಕಾಳಜಿಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಪ್ರಾಮಾಣಿಕತೆಯೇ ಶಕ್ತಿ, ಸೇವೆಯೇ ಪ್ರೇರಣೆ” ಎಂಬುದನ್ನು ತಮ್ಮ ನಡೆ-ನುಡಿಯ ಮೂಲಕ ಸಾಬೀತುಪಡಿಸಿರುವ ಸಲೀಂ ಅವರ ಕಾರ್ಯಕ್ಕೆ ಟೀಮ್ ಕರಾವಳಿ ಬಜಪೆ ಸೇರಿದಂತೆ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಹಣ ಅಥವಾ ಬೆಲೆಬಾಳುವ ವಸ್ತುಗಳು ಸಿಕ್ಕಾಗ ಅದನ್ನು ತಮ್ಮದಾಗಿಸಿಕೊಳ್ಳುವ ಬದಲು ವಾರಸುದಾರರನ್ನು ಹುಡುಕಿ ಮರಳಿಸುವ ಸಲೀಂ ಅವರ ನಡೆ ಸಮಾಜಕ್ಕೆ ಉತ್ತಮ ಸಂದೇಶ ನೀಡಿದೆ. ಅವರ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆ ಇತರರಿಗೂ ಮಾದರಿಯಾಗಲಿ ಎಂಬ ಆಶಯವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.1