logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ* *ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ* *ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. *2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು. ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು. "ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು. ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. *ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

3 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•

More news from ಕರ್ನಾಟಕ and nearby areas
  • ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು‌ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
    1
    ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ.
ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ  ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್  ಪ್ರತಿಭಟನೆ ಬುಧವಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ  ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು‌ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    14 hrs ago
  • ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    3
    ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ  ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ  ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.
    1
    ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ
ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. 
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು.
ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    1 hr ago
  • ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.
    1
    ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ
ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ
ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು.
ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    22 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    26 min ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ ನಾಯಕ ಕರೆ ನೀಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
    1
    ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ 
ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ
ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ  ನಾಯಕ  ಕರೆ ನೀಡಿದರು.
ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    22 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    23 hrs ago
  • ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-
*ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು  , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.