ಜಾತ್ರೆ, ಉತ್ಸವ,ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ಸಮುದಾಯದಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ಪುನರುತ್ಥಾನವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಧಾರ್ಮಿಕ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತು: ಜಾತ್ರೆ, ಉತ್ಸವ,ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ಸಮುದಾಯದಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ಪುನರುತ್ಥಾನವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಡಿ.ಹಲಸಹಳ್ಳಿ ಇತಿಹಾಸ ಪ್ರಸಿದ್ದ ಷಡಕ್ಷರ ಗವಿಮಠದಲ್ಲಿ ಸುತ್ತೂರು ಪರಮಪೂಜ್ಯರ ದಿವ್ಯಸಾನಿಧ್ಯದಲ್ಲಿ ಅಯೋಜಿಸಿದ್ದ ಧಾರ್ಮಿಕ ಸಭೆ ಹಾಗೂ ರಾಜಗೋಪುರ ಮತ್ತು ಬಸವದ್ವಾರ ,ಷಡಕ್ಷರ ಮಂಗಳಮAಟಪ ಲೋಕಾರ್ಪಣೆಯ ಸಮಾರಂಭದಲ್ಲಿ ಬಾಗವಹಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಗ್ರಾಮದಲ್ಲಿ ನಡೆದಾಗ ಬಂಧು ಮಿತ್ರರು ಒಗ್ಗೂಡುತ್ತಾರೆ. ಸಂಬAಧಗಳು ಗಟ್ಟಿಗೊಳ್ಳುತ್ತವೆ,ಸಮಾಜದಲ್ಲಿ ಒಗ್ಗಟ್ಟು ಹೆಚ್ಚಾಗಲಿದೆ ಎಂದರು. ನಡುಗನ್ನಡ ಮಹಾಕವಿ ಹಾಗೂ ಸಂಸ್ಕೃತ ಕನ್ನಡದಲ್ಲಿ ಪಾಂಡಿತ್ಯ ಹೊಂದಿದ್ದ ಶ್ರೀಷಡಕ್ಷರ ದೇವರು ರಾಜವಿಲಾಸ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಈ ನಾಡಿಗೆ ಬೆಳಕು ನೀಡಿದ್ದಾರೆ, ಈ ಗವಿಮಠದಲ್ಲಿ ಬಸವೇಶ್ವರಸ್ವಾಮಿ ಗುಹೆಯಲ್ಲಿ ಮೂಡಿ ಈ ಕ್ಷೇತ್ರ ಪವಿತ್ರವಾಗಿದೆ ಎಂದರು. ಪರಿಸರ ಪ್ರೇಮಿಗಳಾಗಿದ್ದ ಪೂರ್ವಜರು: ನಮ್ಮ ಪೂರ್ವಜರು ಮಹಾನ್ ಪರಿಸರ ಪ್ರೇಮಿಗಳಾಗಿದ್ದರು. ನಮಗೆ ಈ ಭೂಮಿಯಲ್ಲಿ ಬದುಕುವ ಹಕ್ಕು ಇರುವಂತೆಯೇ ಖಗ, ಮೃಗ, ಕೀಟ, ಸಸ್ಯಗಳಿಗೂ ಬದುಕುವ ಹಕ್ಕಿದೆ ಎಂದು ತಿಳಿದಿದ್ದರು. ಬೆಟ್ಟ, ಗುಡ್ಡಗಳನ್ನೂ ಪೂಜಿಸುತ್ತಿದ್ದರು. ವನಮಹೋತ್ಸವ ಆಚರಿಸುವ ಮೂಲಕ ಕಾಡಿಗೆ ಗೌರವ ನೀಡುತ್ತಿದ್ದರು. ಪ್ರಕೃತಿ ಪರಿಸರ ಉಳಿಸಿದ್ದಾರೆ ಎಂದರು. ಆದರೆ ಇಂದು ಆಧುನಿಕ ಜೀವನಶೈಲಿ ನಮ್ಮ ನಿದ್ದೆ ಗೆಡಿಸಿದೆ. ನಮ್ಮ ಯುವಜನರು ನಮ್ಮ ಸಂಸ್ಕೃತಿ, ಪರಂಪರೆ ಮರೆಯುತ್ತಿದ್ದಾರೆ. ಮದ್ಯಪಾನ, ಧೂಮಪಾನ, ಮಾದಕ ದ್ರವ್ಯ ವ್ಯಸನಿಗಳಾಗಿ ತಮ್ಮ ಬದುಕನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಜನರಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಬೇಕು. ನಮ್ಮ ಯುವಜನರು ವ್ಯಸನ ಮುಕ್ತರಾಗಿ, ಶಾರೀರಿಕವಾಗಿ ಸದೃಢರಾಗಿ ಸರಿಯಾದ ಮಾರ್ಗದಲ್ಲಿ ಸಾಗಲು ಪೂಜ್ಯರು ದಾರಿ ತೋರಿಸಬೇಕು ಎಂದರು. ವೀರಶೈವ ಲಿಂಗಾಯತ ಸಮಾಜಕ್ಕೆ ಭವ್ಯ ಇತಿಹಾಸ ಇದೆ. ನಾವು ಕೇವಲ ನಮ್ಮ ಪೂರ್ವಜರ ಹಿರಿಮೆಯ ಬಗ್ಗೆ ಹೆಮ್ಮಪಟ್ಟರೆ ಸಾಲದು, ವರ್ತಮಾನದ ಜೀವಂತಿಕೆಯನ್ನೂ ಉಳಿಸಬೇಕು. ಇದಕ್ಕಾಗಿ ಶ್ರಮಿಸಿ ನಮ್ಮ ಸಮಾಜದ ಗರಿಮೆ ಎತ್ತಿಹಿಡಿಯಬೇಕು ಎಂದ ಅವರು ಬಸವಣ್ಣನವರು ಕಾಯಕವೇ ಕೈಲಾಸ ಎಂದರು, ದಾಸೋಹದ ಮಹತ್ವ ತಿಳಿಸಿದರು. ನಾವು ದುಡಿದು ಗಳಿಸಬೇಕು, ಗಳಿಸಿ ಉಳಿಸಬೇಕು, ಉಳಿಸಿದ್ದನ್ನು ದಾಸೋಹದ ಮೂಲಕ ಸಮಾಜಕ್ಕೆ ಮರಳಿ ನೀಡಬೇಕು ಎಂದು ಕರೆ ನೀಡಿದರು. ನುಡಿದಂತೆ ನಡೆ, ಈ ಜನ್ಮ ಕಡೆ ಎಂಬ ಶರಣವಾಣಿ ಸ್ಮರಿಸಿದ ಅವರು, ವೀರಶೈವ ಲಿಂಗಾಯತ ಮಠಮಾನ್ಯಗಳು ಈ ನಿಟ್ಟಿನಲ್ಲಿ ಅಕ್ಷರ, ಆಶ್ರಯ, ಅನ್ನ ದಾಸೋಹದ ಮೂಲಕ ಅದ್ಭುತ ಕಾರ್ಯ ಮಾಡುತ್ತಿವೆ. ಆಧುನಿಕ ಸಮಾಜದ ನಿರ್ಮಾಣಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದರು. ಎಲ್ಲ ಧರ್ಮ, ಜಾತಿ, ಭಾಷೆಯವರನ್ನೂ ಅಪ್ಪಿಕೊಂಡು, ಒಪ್ಪಿಕೊಂಡು, ಎಲ್ಲರಿಗೂ ಸಾಮಾಜಿಕ ನ್ಯಾಯಕೊಟ್ಟ ಸಮುದಾಯ ವೀರಶೈವ ಲಿಂಗಾಯತ ಸಮುದಾಯ. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ದೌರ್ಬಲ್ಯವಿದೆ. ಹೀಗಾಗಿ ನಾವು ಸಂಘಟಿತರಾಗಿ ನಮ್ಮ ಉಳಿವಿಗಾಗಿ ಶ್ರಮಿಸಬೇಕು ಎಂದರು. ಆಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರವೂ ಕಲುಷಿತವಾಗುತ್ತಿದೆ: ಈಶ್ವರ ಖಂಡ್ರೆ ವಿಷಾದ ಇಂದು ಎಲ್ಲ ಕ್ಷೇತ್ರಗಳಂತೆ ಆಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರವೂ ಕಲುಷಿತವಾಗುತ್ತಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ಪೂಜ್ಯರು, ಹಿರಿಯರು, ಮಠಾಧಿಪತಿಗಳು ಧಾರ್ಮಿಕ ಕ್ಷೇತ್ರದ ಪಾವಿತ್ರ‍್ಯ ಸಂರಕ್ಷಣೆಗೆ ಮಾರ್ಗದರ್ಶನ ಮಾಡಬೇಕು ಎಂದು ಮನವಿ ಮಾಡಿದರು. ಕೆಳಗೆ ಬಿದ್ದವರನ್ನು ಮೇಲೆತ್ತುವುದೇ ಧರ್ಮ ಎಂದ ಅವರು, ಇಂತಹ ಕಾರ್ಯವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಮಾಡುತ್ತಿದೆ. ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ವೀ.ಲಿಂ.ಭವನ, ವಿದ್ಯಾರ್ಥಿನಿಲಯ ನಿರ್ಮಾಣ ಮಾಡುವ ಸಂಕಲ್ಪ ಮಾಡಿದೆ ಎಂದು ತಿಳಿಸಿದರು. ತಮ್ಮನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ ಅವರು, ಇಂದು ಸಮಾಜ ಕವಲು ದಾರಿಯಲ್ಲಿದೆ. ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ನಮ್ಮ ಸಮಾಜದ ಮುಂದೆಯೂ ಅನೇಕ ಸಮಸ್ಯೆಗಳಿವೆ. ಅನೇಕ ಸವಾಲುಗಳಿವೆ. ಆ ಸವಾಲುಗಳನ್ನು ಮೆಟ್ಟಿನಿಲ್ಲಲು ಶ್ರಮಿಸುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಲೇಖಕಿ ಶಿಲ್ಪ ಮುತ್ತು ಬರೆದಿರುವ ಷಡಕ್ಷರ ಗವಿಮಠದ ಕಿರುಪರಿಚಯ ಪುಸ್ತಕವನ್ನು ಈಶ್ವರ್ ಕಂಡ್ರೆ ಬಿಡುಗಡೆ ಮಾಡಿದರು

- ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಕಚೇರಿ ಕಟ್ಟಡ ಉದ್ಘಾಟನೆ ಮಳವಳ್ಳಿ: ಕಳೆದ 44 ವರ್ಷಗಳ ಹಿಂದೆ ಒಂದು ಪುಟ್ಟ ಗ್ರಾಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯನ್ನು ಪ್ರಾರಂಭಿಸಿ ಇಂದು ಇಡೀ ಕರ್ನಾಟಕದಾದ್ಯಂತ ಎಲ್ಲಾ ವರ್ಗದ ಜನರು ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಯೋಗೇಶ್ ತಿಳಿಸಿದರು. ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಶಾಂತಿಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಳವಳ್ಳಿ ಯೋಜನಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತಾಡಿದ ಅವರು 2013ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಡಾ. ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಹಾಗೂ ಧರ್ಮಸ್ಥಳ ಮಂಜುನಾಥನವರ ಆಶೀರ್ವಾದದಿಂದ ಯೋಜನಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿತ್ತು ಆ ಕಟ್ಟಡ ದುರಸ್ತಿಯ ಹಿನ್ನೆಲೆಯಲ್ಲಿ ಶಾಂತಿ ಶಿಕ್ಷಣ ಸಂಸ್ಥೆಗೆ ಸೇರಿದ ಕಟ್ಟಡಕ್ಕೆ ಇಂದು ಸ್ಥಳಾಂತರ ಮಾಡಲಾಗಿದ್ದು ಅದರ ಉದ್ಘಾಟನೆಯು ನನ್ನ ಕೈಯಿಂದಲೇ ಮಾಡುತ್ತಿರುವುದು ನನ್ನ ಸೌಭಾಗ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು, ಡಾ. ವೀರೇಂದ್ರ ಹೆಗ್ಗಡೆಯವರು ಸುಮಾರು 44 ವರ್ಷಗಳ ಹಿಂದೆ ಒಂದು ಸಣ್ಣ ಗ್ರಾಮದಲ್ಲಿ ಪ್ರಾರಂಭ ಮಾಡಲಾಗಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವನ್ನು ಇಂದು ಇಡೀ ಕರ್ನಾಟಕದಲ್ಲಿ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಘಗಳು ಬಹಳಷ್ಟು ಯಶಸ್ವಿಯಾಗಿ ನಡೆಯುತ್ತಿದೆ ಸುಮಾರು 6.5 ಲಕ್ಷಕ್ಕೂ ಸ್ವಸಾಯ ಸಂಘಗಳು ಹಾಗೂ 55 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದೆ,ಎಲ್ಲಾ ವರ್ಗದ ಜನರಿಗೂ ಧರ್ಮಸ್ಥಳ ಯೋಜನೆಯ ಸೇವೆ ಸಿಗಲಿ ಎಂದು ಶುಭ ಹಾರೈಸಿದರು, ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಗನೂರು ಶಿವಕುಮಾರ್ ಮತ್ತು ಶಾಂತಿ ಶಿಕ್ಷಣಸಂಸ್ಥೆಯ ಕಾರ್ಯದರ್ಶಿ ಪುಟ್ಟರಾಜು ಇವರುಗಳು ಮಾತನಾಡಿ ದೂರದೃಷ್ಟಿಯಿಂದ ಡಾ. ವೀರೇಂದ್ರ ಹೆಗಡೆಯವರು ಸ್ಥಾಪಿಸಿದ ಧರ್ಮಸ್ಥಳ ಯೋಜನೆಯ ಎಲ್ಲಾ ಸವಲತ್ತುಗಳು ಎಲ್ಲಾ ವರ್ಗದ ಜನರಿಗೆ ದೊರೆಯುತ್ತಿದೆ ಇವರ ಈ ಸೇವೆ ಸದಾಕಾಲ ಹೀಗೆ ಮುಂದುವರೆಯಲಿ ಎಂದು ಶುಭಕೋರಿದರು, ಇದೇವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕಿ ಚೇತನಾ, ತಾಲೂಕು ಯೋಜನಾಧಿಕಾರಿ ಎನ್.ಲೋಕೇಶ್, ಕಿರುಗಾವಲು ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಎಚ್.ಉಮೇಶ್ ಮಾಳಿಗೆ, ಎಂಐಎಸ್ ಜಿಲ್ಲಾ ಯೋಜನಾಧಿಕಾರಿ ಅಶೋಕ್, ಜನಜಾಗೃತಿ ವೇದಿಕೆಯ ಜಿಲ್ಲಾಸದಸ್ಯ ಸುಂದರಪ್ಪ, ರವಿ ಪೂಜಾರಿ, ಸತೀಶ್, ಬೀಜಿಪುರ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಪೂರಿಗಾಲಿ ಮಂಟೇಸ್ವಾಮಿ, ಸೇರಿದಂತೆ ಬೆಳಕವಾಡಿ, ಪೂರಿಗಾಲಿ, ಕಿರಗಾವಲು, ಹಲಗೂರು,ಕಸಬಾ ಹೋಬಳಿಗಳ ವಲಯಗಳ ಮೇಲ್ವಿಚಾರಕರು, ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಜರಿದ್ದರು.1
- ಹನೂರು: ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿದೊಡ್ಡಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ವಿಶೇಷ ಅನುದಾನದಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, "ಗ್ರಾಮಸ್ಥರ ಸುದೀರ್ಘ ಕಾಲದ ಆಶಯದಂತೆ ಇಂದು ಭವನಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸುಸಜ್ಜಿತ ಕಟ್ಟಡ ಪೂರ್ಣಗೊಳ್ಳಲಿದೆ. ಇದರಿಂದ ಗ್ರಾಮದ ಶುಭ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ," ಎಂದು ತಿಳಿಸಿದರು. ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಭರವಸೆ: ಇದೇ ಸಂದರ್ಭದಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಶೀಘ್ರದಲ್ಲೇ ಟ್ಯಾಂಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಗ್ರಾಮದ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಶಾಗ್ಯ ರವಿ ಅಣ್ಣ, ಸುಂದ್ರಣ್ಣ, ಮಂಜೇಶ್, ವಿಜಯ್ ಕುಮಾರ್, ವೆಂಕಟಚಲ ತಿರುಪತಿ, ಅನಿಲ್ ಕುಮಾರ್, ಡಿ.ಕೆ. ರಾಜು ಹಾಗೂ ಗ್ರಾಮದ ಯಜಮಾನರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.2
- *ಭಾರತ ನಲ್ಲಿ ವೈರಲ್*1
- ಮಾದೇಶ್ವರ ಬೆಟ್ಟದಲ್ಲಿ ಭೀಕರ ಅಪಘಾತ: ಯುವಕ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೆಟ್ಟೂರು ಸಮೀಪ ವನ್ನಿಯಾರ ಗ್ರಾಮದ ರಾಹುಲ್ (23), ಎಂಬುವವರೆ ಆಗಿದ್ದಾರೆ. ಹಾಗಯೆ ಮೆಟ್ಟೂರು ತಾಲ್ಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ ಗಾಯಾಳು ಗುಗನ್ (17), ಚಿನ್ನದೊರೈ ಎಂದುಗುರುತಿಸಲಾಗಿದೆ ಘಟನೆ ವಿವರ: ತಮಿಳುನಾಡಿನ ದ್ವಿಚಕ್ರ ವಾಹನದಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು, ಮಾದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ತಕ್ಷಣ ಆಂಬುಲೆನ್ಸ್ ಸೌಲಭ್ಯ ಲಭ್ಯವಿರದ ಕಾರಣ ಗಾಯಾಳುವಿಗೆ ನೆರವು ತಲುಪಲು ವಿಳಂಬವಾದುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. .2
- ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ವನ್ನಿಯಾರ್ ಗ್ರಾಮದ ರಾಹುಲ್ (23) ಮೃತ ಯುವಕ. ಗಾಯಳುವನ್ನ ಮೆಟ್ಟೂರು ತಾಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ ಗುಗನ್ (17), ಚಿನ್ನದೊರೈ ಅವರ ಪುತ್ರ ಎಂದು ತಿಳಿದು ಬಂದಿದೆ. ದ್ವಿಚಕ್ರ ವಾಹನದಲ್ಲಿ ತಮ್ಮ ಊರು ಮೆಟ್ಟೂರಿಗೆ ತೆರಳುತ್ತಿದ್ದ ಈ ಇಬ್ಬರು, ಮದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ರಾಹುಲ್ ಸ್ಥಳದಲ್ಲೇ ಮೃತಪಟ್ಟರೆ, ಗುಗನ್ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಆಂಬ್ಯುಲೆನ್ಸ್ ಸೌಲಭ್ಯ ಸಿಗದಿದ್ದ ರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.1
- ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ1
- *ಭಾರತ ನಲ್ಲಿ ವೈರಲ್*1