ಸೆ.20ರಂದು ಭಾರತೀ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ರಾಮನಗರ : ನಗರದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ದಿ ಭಾರತೀ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸರ್ವ ಸದಸ್ಯರ ಸಭೆ ಸೆ.20ರ ಭಾನುವಾರ ವಿವೇಕಾನಂದನಗರ, ಬಿ.ಎಂ. ರಸ್ತೆಯಲ್ಲಿರುವ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು. ನಗರದ ಸೊಸೈಟಿ ಕಚೇರಿ ಆವರಣದಲ್ಲಿ ಗುರುವಾರ ಆಡಳಿತ ಮಂಡಳಿ ಸದಸ್ಯರ ಜೊತೆ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬಿ.ಎಲ್. ಲಕ್ಕೇಗೌಡರು ಸಂಸ್ಥಾಪಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಕಳೆದ 28 ವರ್ಷಗಳಿಂದ ಸೊಸೈಟಿ ಉತ್ತಮವಾಗಿ ಲಾಭದಲ್ಲಿ ನಡೆಯುತ್ತಾ ಬಂದಿದೆ. ತಾಲ್ಲೂಕಿನಲ್ಲಿ ಜನರ ಸೇವೆ ಮಾಡುತ್ತಾ ಬಂದಿದೆ. 4779 ಸದಸ್ಯರು ಸಂಘದಲ್ಲಿದ್ದು 2025-26ನೇ ಸಾಲಿನಲ್ಲಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳ ಉತ್ತಮ ಸಹಕಾರದಿಂದ 44,373,35 ರೂ. ಲಾಭಗಳಿಸಿದೆ. ವಾರ್ಷಿಕವಾಗಿ 41 ಕೋಟಿ ರೂ. ವಹಿವಾಟು ಮಾಡಲಾಗುತ್ತಿದೆ. ಶೇ.12 ರಷ್ಟು ಬಡ್ಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ 33 ಲಕ್ಷ ಸಾಲ ನೀಡಲಾಗಿದೆ ಎಂದರು. ಷೇರು ಬಂಡವಾಳ ಒಂದು ಕೋಟಿ 38 ಲಕ್ಷ ಇದೆ. ವಾರ್ಷಿಕ ಶೇ.10 ರ ಬಡ್ಡಿದರದಲ್ಲಿ ಆಭರಣ ಸಾಲ ನೀಡಲಾಗುತ್ತಿದೆ. ನಮ್ಮಲ್ಲಿ ಠೇವಣ ಸೌಲಭ್ಯ ಸಹ ಇದೆ. ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜೊತೆಯಲ್ಲಿ 2 ಸಾವಿರ ರೂ.ಗಳ ಕೈ ಗಡಿಯಾರ ನೀಡಲಾಗುತ್ತಿದೆ. ಜೊತೆಗೆ ಸದಸ್ಯರ ಮರಣೋತ್ತರವಾಗಿ ನಾಮಿನಿ ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡಲಾಗುತ್ತಿದೆ ಎಂದು ಹೇಳಿದರು. ಸದಸ್ಯರು ಸೆ.20ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿವೇಕಾನಂದನಗರದ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯುವ ಸಭೆಗೆ ಆಗಮಿಸಿ ಸೊಸೈಟಿ ಮತ್ತಷ್ಟು ಎತ್ತರಕ್ಕೆ ಬೆಳೆದು ಇನ್ನಷ್ಟು ಜನ ಸೇವೆಗೆ ಮುಂದಾಗುವ ದೃಷ್ಟಿಯಿಂದ ಸಲಹೆ ಸಹಕಾರ ನೀಡಬೇಕು ಎಂದರು. ಇದೇ ವೇಳೆ ಸೊಸೈಟಿಯ 2025-26ನೇ ಸಾಲಿನ ಆಹ್ವಾನ ಪತ್ರಿಕೆ ಮತ್ತು ಆಡಿಟ್ ವರದಿ ಲಾಭಾಂಶದ ವಿವರದ ಪುಸ್ತಕ ಬಿಡುಗಡೆ ಮಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಸಿ. ಸೋಮೇಗೌಡ, ನಿರ್ದೇಶಕರಾದ ಕೆ.ಪಿ.ಉಮೇಶ್, ದೊರೆಸ್ವಾಮಿ, ಜಿ.ಎಲ್.ಆಂಜನೇಯ, ಎಂ.ಶಿವಲಿಂಗಯ್ಯ, ಎ.ಆರ್.ಚಂದ್ರಶೇಖರ್, ಹೆಚ್.ಕೆ.ರುಕ್ಮಿಣ , ಎಸ್.ಕೃಷ್ಣಪ್ಪ ಮುಖ್ಯ ಕಾರ್ಯನಿರ್ವಹಕ ಬಿ.ಎಸ್.ಸುರೇಶ್ ಇದ್ದರು.
ಸೆ.20ರಂದು ಭಾರತೀ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ರಾಮನಗರ : ನಗರದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ದಿ ಭಾರತೀ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸರ್ವ ಸದಸ್ಯರ ಸಭೆ ಸೆ.20ರ ಭಾನುವಾರ ವಿವೇಕಾನಂದನಗರ, ಬಿ.ಎಂ. ರಸ್ತೆಯಲ್ಲಿರುವ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು. ನಗರದ ಸೊಸೈಟಿ ಕಚೇರಿ ಆವರಣದಲ್ಲಿ ಗುರುವಾರ ಆಡಳಿತ ಮಂಡಳಿ ಸದಸ್ಯರ ಜೊತೆ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬಿ.ಎಲ್. ಲಕ್ಕೇಗೌಡರು ಸಂಸ್ಥಾಪಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಕಳೆದ 28 ವರ್ಷಗಳಿಂದ ಸೊಸೈಟಿ ಉತ್ತಮವಾಗಿ ಲಾಭದಲ್ಲಿ ನಡೆಯುತ್ತಾ ಬಂದಿದೆ. ತಾಲ್ಲೂಕಿನಲ್ಲಿ ಜನರ ಸೇವೆ ಮಾಡುತ್ತಾ ಬಂದಿದೆ. 4779 ಸದಸ್ಯರು ಸಂಘದಲ್ಲಿದ್ದು 2025-26ನೇ ಸಾಲಿನಲ್ಲಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳ ಉತ್ತಮ ಸಹಕಾರದಿಂದ 44,373,35 ರೂ. ಲಾಭಗಳಿಸಿದೆ. ವಾರ್ಷಿಕವಾಗಿ 41 ಕೋಟಿ ರೂ. ವಹಿವಾಟು ಮಾಡಲಾಗುತ್ತಿದೆ. ಶೇ.12 ರಷ್ಟು ಬಡ್ಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ 33 ಲಕ್ಷ ಸಾಲ ನೀಡಲಾಗಿದೆ ಎಂದರು. ಷೇರು ಬಂಡವಾಳ ಒಂದು ಕೋಟಿ 38 ಲಕ್ಷ ಇದೆ. ವಾರ್ಷಿಕ ಶೇ.10 ರ ಬಡ್ಡಿದರದಲ್ಲಿ ಆಭರಣ ಸಾಲ ನೀಡಲಾಗುತ್ತಿದೆ. ನಮ್ಮಲ್ಲಿ ಠೇವಣ ಸೌಲಭ್ಯ ಸಹ ಇದೆ. ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜೊತೆಯಲ್ಲಿ 2 ಸಾವಿರ ರೂ.ಗಳ ಕೈ ಗಡಿಯಾರ ನೀಡಲಾಗುತ್ತಿದೆ. ಜೊತೆಗೆ ಸದಸ್ಯರ ಮರಣೋತ್ತರವಾಗಿ ನಾಮಿನಿ ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡಲಾಗುತ್ತಿದೆ ಎಂದು ಹೇಳಿದರು. ಸದಸ್ಯರು ಸೆ.20ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿವೇಕಾನಂದನಗರದ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯುವ ಸಭೆಗೆ ಆಗಮಿಸಿ ಸೊಸೈಟಿ ಮತ್ತಷ್ಟು ಎತ್ತರಕ್ಕೆ ಬೆಳೆದು ಇನ್ನಷ್ಟು ಜನ ಸೇವೆಗೆ ಮುಂದಾಗುವ ದೃಷ್ಟಿಯಿಂದ ಸಲಹೆ ಸಹಕಾರ ನೀಡಬೇಕು ಎಂದರು. ಇದೇ ವೇಳೆ ಸೊಸೈಟಿಯ 2025-26ನೇ ಸಾಲಿನ ಆಹ್ವಾನ ಪತ್ರಿಕೆ ಮತ್ತು ಆಡಿಟ್ ವರದಿ ಲಾಭಾಂಶದ ವಿವರದ ಪುಸ್ತಕ ಬಿಡುಗಡೆ ಮಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಸಿ. ಸೋಮೇಗೌಡ, ನಿರ್ದೇಶಕರಾದ ಕೆ.ಪಿ.ಉಮೇಶ್, ದೊರೆಸ್ವಾಮಿ, ಜಿ.ಎಲ್.ಆಂಜನೇಯ, ಎಂ.ಶಿವಲಿಂಗಯ್ಯ, ಎ.ಆರ್.ಚಂದ್ರಶೇಖರ್, ಹೆಚ್.ಕೆ.ರುಕ್ಮಿಣ , ಎಸ್.ಕೃಷ್ಣಪ್ಪ ಮುಖ್ಯ ಕಾರ್ಯನಿರ್ವಹಕ ಬಿ.ಎಸ್.ಸುರೇಶ್ ಇದ್ದರು.
- ಸೆ.20ರಂದು ಭಾರತೀ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ರಾಮನಗರ : ನಗರದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ದಿ ಭಾರತೀ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸರ್ವ ಸದಸ್ಯರ ಸಭೆ ಸೆ.20ರ ಭಾನುವಾರ ವಿವೇಕಾನಂದನಗರ, ಬಿ.ಎಂ. ರಸ್ತೆಯಲ್ಲಿರುವ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು. ನಗರದ ಸೊಸೈಟಿ ಕಚೇರಿ ಆವರಣದಲ್ಲಿ ಗುರುವಾರ ಆಡಳಿತ ಮಂಡಳಿ ಸದಸ್ಯರ ಜೊತೆ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬಿ.ಎಲ್. ಲಕ್ಕೇಗೌಡರು ಸಂಸ್ಥಾಪಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಕಳೆದ 28 ವರ್ಷಗಳಿಂದ ಸೊಸೈಟಿ ಉತ್ತಮವಾಗಿ ಲಾಭದಲ್ಲಿ ನಡೆಯುತ್ತಾ ಬಂದಿದೆ. ತಾಲ್ಲೂಕಿನಲ್ಲಿ ಜನರ ಸೇವೆ ಮಾಡುತ್ತಾ ಬಂದಿದೆ. 4779 ಸದಸ್ಯರು ಸಂಘದಲ್ಲಿದ್ದು 2025-26ನೇ ಸಾಲಿನಲ್ಲಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳ ಉತ್ತಮ ಸಹಕಾರದಿಂದ 44,373,35 ರೂ. ಲಾಭಗಳಿಸಿದೆ. ವಾರ್ಷಿಕವಾಗಿ 41 ಕೋಟಿ ರೂ. ವಹಿವಾಟು ಮಾಡಲಾಗುತ್ತಿದೆ. ಶೇ.12 ರಷ್ಟು ಬಡ್ಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ 33 ಲಕ್ಷ ಸಾಲ ನೀಡಲಾಗಿದೆ ಎಂದರು. ಷೇರು ಬಂಡವಾಳ ಒಂದು ಕೋಟಿ 38 ಲಕ್ಷ ಇದೆ. ವಾರ್ಷಿಕ ಶೇ.10 ರ ಬಡ್ಡಿದರದಲ್ಲಿ ಆಭರಣ ಸಾಲ ನೀಡಲಾಗುತ್ತಿದೆ. ನಮ್ಮಲ್ಲಿ ಠೇವಣ ಸೌಲಭ್ಯ ಸಹ ಇದೆ. ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜೊತೆಯಲ್ಲಿ 2 ಸಾವಿರ ರೂ.ಗಳ ಕೈ ಗಡಿಯಾರ ನೀಡಲಾಗುತ್ತಿದೆ. ಜೊತೆಗೆ ಸದಸ್ಯರ ಮರಣೋತ್ತರವಾಗಿ ನಾಮಿನಿ ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡಲಾಗುತ್ತಿದೆ ಎಂದು ಹೇಳಿದರು. ಸದಸ್ಯರು ಸೆ.20ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿವೇಕಾನಂದನಗರದ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯುವ ಸಭೆಗೆ ಆಗಮಿಸಿ ಸೊಸೈಟಿ ಮತ್ತಷ್ಟು ಎತ್ತರಕ್ಕೆ ಬೆಳೆದು ಇನ್ನಷ್ಟು ಜನ ಸೇವೆಗೆ ಮುಂದಾಗುವ ದೃಷ್ಟಿಯಿಂದ ಸಲಹೆ ಸಹಕಾರ ನೀಡಬೇಕು ಎಂದರು. ಇದೇ ವೇಳೆ ಸೊಸೈಟಿಯ 2025-26ನೇ ಸಾಲಿನ ಆಹ್ವಾನ ಪತ್ರಿಕೆ ಮತ್ತು ಆಡಿಟ್ ವರದಿ ಲಾಭಾಂಶದ ವಿವರದ ಪುಸ್ತಕ ಬಿಡುಗಡೆ ಮಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಸಿ. ಸೋಮೇಗೌಡ, ನಿರ್ದೇಶಕರಾದ ಕೆ.ಪಿ.ಉಮೇಶ್, ದೊರೆಸ್ವಾಮಿ, ಜಿ.ಎಲ್.ಆಂಜನೇಯ, ಎಂ.ಶಿವಲಿಂಗಯ್ಯ, ಎ.ಆರ್.ಚಂದ್ರಶೇಖರ್, ಹೆಚ್.ಕೆ.ರುಕ್ಮಿಣ , ಎಸ್.ಕೃಷ್ಣಪ್ಪ ಮುಖ್ಯ ಕಾರ್ಯನಿರ್ವಹಕ ಬಿ.ಎಸ್.ಸುರೇಶ್ ಇದ್ದರು.1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.1
- ಪಿಎಂ ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ- ಜಿಲ್ಲಾಧಿಕಾರಿ ಕುಮಾರ ಮಂಡ್ಯ-ಸಾಂಪ್ರದಾಯಿಕ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೊಳಿಸಿರುವ ಪಿಎಂ ವಿಶ್ವಕರ್ಮ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಕರೆಯುತ್ತಾರೆ ನೀಡಿದರು. ಮಂಡ್ಯದ ಅಂಬೇಡ್ಕರ್ ಭವನದಲ್ಲಿಂದು ವಿಶ್ವ ಕರ್ಮ ಜಯಂತಿಯಲ್ಲಿ ಬಾಗವಹಿಸಿ ಉದ್ಘಾಟನೆ ನೆರಬಮವೇರಿಸಿ ಮಾತನಾಡಿ ಅವರು ಜಿಲ್ಲೆಯಲ್ಲಿ ಈಗಾಗಲೇ 11 ಸಾವಿರಕ್ಕೂ ಹೆಚ್ಚು ಮಂದಿಗೆ ಯೋಜನೆಯಡಿ ತರಬೇತಿ ನೀಡಲಾಗಿದ್ದು, ಸಾಲ ಸೌಲಭ್ಯವೂ ಮಂಜೂರಾಗಿದೆ. ಫಲಾನುಭವಿಗಳು ಆಧುನಿಕ ತಂತ್ರಜ್ಞಾನ ಹಾಗೂ ಮಾರುಕಟ್ಟೆ ಅವಕಾಶಗಳನ್ನು ಬಳಸಿಕೊಂಡು ತಮ್ಮ ಸಾಂಪ್ರದಾಯಿಕ ವೃತ್ತಿಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು. ತಾಮ್ರ, ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ಲೋಹಗಳ ಕೆಲಸ ಹಾಗೂ ಇತರ ಕರಕುಶಲ ವೃತ್ತಿಗಳಲ್ಲಿ ತೊಡಗಿರುವವರು ತಮ್ಮ ಕೌಶಲ್ಯವನ್ನು ಆಧುನಿಕ ಮಾರುಕಟ್ಟೆಯ ಅಗತ್ಯಗಳಿಗೆ ಹೊಂದಿಸಿಕೊಳ್ಳಬೇಕು. ವೃತ್ತಿಯ ಬಗ್ಗೆ ಹೆಮ್ಮೆ ಹಾಗೂ ಗೌರವ ಹೊಂದುವುದರ ಜತೆಗೆ ತಮ್ಮ ಕಲೆ ಮತ್ತು ಕೌಶಲ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ಕಾರ್ಮಿಕ ಇಲಾಖೆಯ ಅಧಿಕಾರಿ ಸವಿತಾ, ಬಿಳಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿದ್ವಾನ್ ಬಿ.ಎಸ್. ಗಂಗಾಧರ ಆಚಾರ್ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಉಪಸ್ಥಿತರಿದ್ದರು.1
- ಸಾಮೂಹಿಕವಾಗಿ ದೀಪ ಹಚ್ಚಿ ಪ್ರಧಾನಿ ಮೋದಿ ಜನ್ಮದಿನ ಆಚರಿಸಿದ ಅಭಿಮಾನಿಗಳು ಪ್ರಧಾನಮಂತ್ರಿ ನರೇಂದ್ರಮೋದಿ ರವರ 76 ನೇ ಜನ್ಮ ದಿನದ ಅಂಗವಾಗಿ ಮಳವಳ್ಳಿಪಟ್ಟಣದ ಕೋಟೆ ಶ್ರೀ ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೀಪ ಹಚ್ಚಿ ಮೋದಿ ಅಭಿಮಾನಿಗಳು ಸಂಭ್ರಮಿಸಿದರು. ಈ ವೇಳೆ ಜೆಡಿಎಸ್ ಮುಖಂಡ ನಂದಕುಮಾರ ಮಾತನಾಡಿ, ನರೇಂದ್ರಮೋದಿ ಇನ್ನೂ ಹತ್ತಾರು ವರ್ಷಗಳ ಕಾಲ ಈ ದೇಶವನ್ನು ಮುನ್ನಡೆಸಲಿ ಎಂದರು. ಇನ್ನೂ ಇದೇ ವೇಳೆ ಪುರಸಭೆ ಮಾಜಿಸದಸ್ಯ ಕೃಷ್ಣ ಮಾತನಾಡಿ, ನರೇಂದ್ರಮೋದಿಜೀ ವಿಶ್ವಗುರು ಎನ್ನಸಿಕೊಂಡಿದ್ದಾರೆ, ಅವರಿಗೆ ದೇವರು ಆರೋಗ್ಯ ಅಯಸ್ಸು ನೀಡಲಿ ಎಂದರು. ಈ ವೇಳೆ ಬಿಜೆಪಿ ಮಾಜಿ ಅಧ್ಯಕ್ಷ ಕೃಷ್ಣ, ಜೆಡಿಎಸ್ ಮುಖಂಡ ನಂದಕುಮಾರ, ಬಿಜೆಪಿ ಹಿರಿಯ ಮುಖಂಡ ಅಪ್ಪಾಜೀಗೌಡ, ಕೋಟೆ ಸಲೀಂಪಾಷ, ಬಸವರಾಜು ವಿಶ್ವನಾಥ ಸೇರಿದಂತೆ ಹಲವರು ಇದ್ದರು.1
- ಪಟ್ಟಣದ ರೋಟರಿ ಶಾಲೆ ಆವರಣದಲ್ಲಿ ಇಂಜಿನಿಯರ್ಸ್ ದಿನಾಚರಣೆ. ಇಂಜೀನಿಯರ್ ದಂಪತಿಗಳಿಗೆ ಸನ್ಮಾನ ಮಳವಳ್ಳಿ ಪಟ್ಟಣದ ರೋಟರಿ ಶಾಲೆ ಹಾಗೂ ತಾಲೂಕಿನ ದೊಡ್ಡಬೂಹಳ್ಳಿ ಮತ್ತು ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವ ರಯ್ಯ ಜನ್ಮದಿನದ ಅಂಗವಾಗಿ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ರೋಟರಿ ಸಂಸ್ಥೆ ವತಿಯಿಂದ ಆಯೋಜಿಸ ಲಾಗಿತ್ತು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಪಟ್ಟಣದ ರೋಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿ ಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಪತಿಗಳು, ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರೋಟರಿ ಸಂಸ್ಥೆ ಕಾರ್ಯದರ್ಶಿ ಆರ್.ಜಿ.ಮಹದೇವಸ್ವಾಮಿ ಅವರು ವಿಶ್ವ ಓಝೋನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿ ಹೊಂದಿರಬೇಕು ಎಂದು ತಿಳಿಸಿದರು. ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲೂ ರೋಟರಿ ಸಂಸ್ಥೆ ವತಿಯಿಂದ ಎಂಜಿನಿ ಯರ್ಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಎಂಜಿನಿಯರ್ ನರಸಿಂಹಮೂರ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನರಸಿಂಹಮೂರ್ತಿ ಅವರು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದೊಡ್ಡಬೂಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಾಗೇಂದ್ರ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಹಿತಿಯನ್ನು ಎಂಜಿನಿಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರುಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಘನಶ್ಯಾಮ್ ದಾಸ್, ಆರ್.ಜಿ.ಮಹದೇವ ಸ್ವಾಮಿ, ಎಂ.ವಿ.ಸೋಮ ಶೇಖರ್, ಹರೀಶ್ ಸೇರಿದಂತೆ ಇತರ ಗಣ್ಯರು, ಶಿಕ್ಷಕರು ಉಪಸ್ಥಿತರಿದ್ದರು.1
- ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು1
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1