logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಕೋಲಾರ ತಾಲ್ಲೂಕಿನ ದಿಂಬ ರಾಧಾಕೃಷ್ಣ ಶಾಲೆಗೆ ಸಮಾಜ ಸೇವಕ ಲಕ್ಷ್ಮಣ ಗೌಡರಿಂದ ಕಾಂಕ್ರೀಟ್ ವ್ಯವಸ್ಥೆ* ಕೋಲಾರ: ತಾಲೂಕಿನ ದಿಂಬ ಗೇಟ್‌ನಲ್ಲಿರುವ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಅನುದಾನಿತ ಶಾಲೆಯ ಹೊಸ ಕಟ್ಟಡದ ಎರಡನೇ ಮಹಡಿ ನಿರ್ಮಾಣಕ್ಕೆ ಸಮಾಜ ಸೇವಕ ಹಾಗೂ ಎಲ್.ಜಿ. ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಅವರು ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆ ಕಲ್ಪಿಸಿದರು. ಸುಮಾರು 100 ಅಡಿ ಉದ್ದ ಹಾಗೂ 30 ಅಡಿ ಅಗಲದ ಎರಡನೇ ಮಹಡಿ ನಿರ್ಮಾಣಕ್ಕೆ ಅಗತ್ಯವಿರುವ ಕಾಂಕ್ರೀಟ್ ಮೋಲ್ಡ್ ವ್ಯವಸ್ಥೆಯನ್ನು ಅವರು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಹಾಗೂ ಹಿರಿಯ ವಕೀಲ ಕೆ.ವಿ. ಶಂಕರಪ್ಪ ಮಾತನಾಡಿ, ಶಾಲೆಯು ಅನುದಾನಿತವಾಗಿದ್ದು, ಬಡ ಹಾಗೂ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರ ಅತ್ಯಗತ್ಯ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಬಲವರ್ಧನೆಯಾಗಲು ದಾನಿಯ ಸಹಕಾರದ ಜೊತೆಗೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದರು. ಎಲ್.ಜಿ. ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಮಾತನಾಡಿ, ‘ಆರ್ಥಿಕವಾಗಿ ಹಿಂದುಳಿದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ನೀಡಲಾಗುವುದು. ವಿದ್ಯಾರ್ಥಿಗಳು ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬೇಕು’ ಎಂದರು. ಈ ಸಂದರ್ಭದಲ್ಲಿ ಡಾ. ರಾಧಾಕೃಷ್ಣ ವಿದ್ಯಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ವಿ. ರಾಮಚಂದ್ರಪ್ಪ, ಕಾರ್ಯದರ್ಶಿ ಡಿ.ಆರ್. ವಿವೇಕ್, ಸದಸ್ಯ ಹಾಗೂ ವಕೀಲ ಸುಧಾಕರ್, ಮುಖ್ಯ ಶಿಕ್ಷಕ ಬಿ. ರವಿ, ಸಹ ಶಿಕ್ಷಕರಾದ ಬಸವರಾಜ್, ಪ್ರಮೋದ್ ರೆಡ್ಡಿ, ಬಿ.ಎಂ. ಮಂಜುನಾಥ್ ಸೇರಿದಂತೆ ಶಾಲೆಯ ಸಿಬ್ಬಂದಿ ಇದ್ದರು.

1 hr ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
Grain Trader ಕೋಲಾರ, ಕೋಲಾರ, ಕರ್ನಾಟಕ•
1 hr ago
a925ca7c-eb2a-45ac-a342-2616a4e2f847

More news from ಕರ್ನಾಟಕ and nearby areas
  • *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್  ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು  ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ   ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.
    3
    *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ*

ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್  ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ 
ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು  ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ   ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು.
ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ
ಮುಖಂಡರುಗಳಾದ ಕಾಟ್ಮನೂರು
ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ
ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು.
ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್,
ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    11 hrs ago
  • ನಂಜನಗೂಡು : ಮಾದಕ ಜಾಲಕ್ಕೆ ಕಡಿವಾಣ ಹಾಕಿ.! ಪೊಲೀಸ್ ಇಲಾಖೆ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ.!?
    2
    ನಂಜನಗೂಡು : ಮಾದಕ ಜಾಲಕ್ಕೆ ಕಡಿವಾಣ ಹಾಕಿ.! ಪೊಲೀಸ್ ಇಲಾಖೆ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ.!?
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    2 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    1
    ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    2
    ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲ
ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ
ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ
ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ
ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ
ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ
    1
    ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    9 hrs ago
  • ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ! ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ!
    1
    ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ
ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ!

ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ
ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಮುಳಬಾಗಿಲು : ಕಾಯಕ ತತ್ವದ ಮಹತ್ವ ಸಾರಿದ,ಶ್ರೀ ಶರಣ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಿದ್ಧತೆ.!
    2
    ಮುಳಬಾಗಿಲು : ಕಾಯಕ ತತ್ವದ ಮಹತ್ವ ಸಾರಿದ,ಶ್ರೀ ಶರಣ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಿದ್ಧತೆ.!
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.