logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆತ್ಮನಿರ್ಭರ ಯೋಜನೆ ರೈತರ ಸಶಕ್ತಿಕರಣಕ್ಕೆ ಅನಕೂಲ; ಧಾರವಾಡ ಜಿಲ್ಲೆಯಲ್ಲಿ 540 ಘಟಕಗಳಿಗೆ ಸಾಲ ಮಂಜೂರಾಗಿದ್ದು, 100 ಅರ್ಜಿಗಳು ವಿಲೇವಾರಿಗೆ ಸಿದ್ದವಾಗಿವೆ: ಜಿಲ್ಲಾಧಿಕಾರಿ ಸ್ನೇಹಲ್. ಆರ್. ಧಾರವಾಡ ಏ.15: ಆತ್ಮನಿರ್ಭರ ಭಾರತ ಕಾರ್ಯಕ್ರಮದಡಿಯಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ಯೋಜನೆಗೆ ಸಂಬಂಧಿಸಿದಂತೆ ಇಂದು (ಏ.15) ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆಯು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಅವರು, ಆತ್ಮನಿರ್ಭರ ಭಾರತ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆದ್ಯತೆ ನೀಡಿ, ಮಾತನಾಡಿದರು. 2020-21 ರಿಂದ ಜಾರಿಯಲ್ಲಿರುವ ಪ್ರಸ್ತುತ ಕಾರ್ಯಕ್ರಮವು ಸ್ವಯಂ ಉದ್ಯೋಗ ಮಾಡುವ ಫಲಾನುಭವಿಗಳಿಗೆ ಅತ್ಯಂತ ಉಪಯುಕ್ತವಾಗಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಅರ್ಹ ಸಾರ್ವಜನಿಕರು ಮುಂದೆ ಬರಬೇಕೆಂದು ಅವರು ತಿಳಿಸಿದರು. ಆತ್ಮನಿರ್ಭರ ಯೋಜನೆಯು ಗರಿಷ್ಠ 15 ಲಕ್ಷ ರೂಪಾಯಿಗೆ ಮಿತಿಗೊಳಪಟ್ಟು ಶೇ. 50 ರ ಸಹಾಯ ಧನದೊಂದಿಗೆ ಸಾಲ ನೀಡುವ ಕಾರ್ಯಕ್ರಮವಾಗಿದ್ದು, ಯಾವುದೇ ಸಿದ್ಧ ಆಹಾರ ಅಥವಾ ಮೌಲ್ಯವರ್ಧಿತ ಉತ್ಪನ್ನಗಳ ಘಟಕಗಳನ್ನು ಸ್ಥಾಪಿಸಲು ಅವಕಾಶ ಇರುತ್ತದೆ ಎಂದು ಹೇಳಿದರು. ವೈಯಕ್ತಿಕ ಉದ್ದಿಮೆಗಳು, ಗುಂಪು ಚಟುಗಟಿಕೆಗಳು, ಪ್ರಾಥಮಿಕ ಬಂಡವಾಳ(ಬೀಜಧನ), ಸಾಮಾನ್ಯ ಮೂಲಭೂತ ಸೌಕರ್ಯ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕ ಕೆಲಸಕಾರ್ಯಗಳಿಗೆ ಸಾಲ ಕೊಡುವ ಯೋಜನೆ ಇದ್ದು, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಫಲಾನುಭವಿಗಳಿಗೆ ತಮ್ಮ ಹಂತದಲ್ಲಿಯೇ ಸಹಾಯ ಮಾಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳನ್ನು (ಡಿ.ಆರ್.ಪಿ.) ನೇಮಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಮನ್ವಯ ಸಂಸ್ಥೆಯಾಗಿ ಕಪೆಕ್ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಕೃಷಿ ಇಲಾಖೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಫಲಾನುಭವಿಗಳು ತಮ್ಮ ವಹಿವಾಟಿನ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಧಾರವಾಡ ಜಿಲ್ಲೆಯಲ್ಲಿ 540 ಘಟಕಗಳಿಗೆ ಸಾಲ ಮಂಜೂರಾಗಿದ್ದು, ಬಹಳಷ್ಟು ಕುಟುಂಬಗಳ ಜೀವನ ನಿರ್ವಹಣೆಗೆ ಆದಾಯ ದೊರೆತಂತಾಗಿದೆ. ಅಲ್ಲದೆ ಪ್ರತಿ ಘಟಕದಲ್ಲೂ ಹಲವಾರು ಜನರಿಗೆ ದೈನಂದಿನ ಕೆಲಸ ಸಿಗುವ ಮೂಲಕ ಕಾರ್ಮಿಕರಿಗೂ ಜೀವನಾಂಶ ಗಳಿಸಿಕೊಳ್ಳಲು ಅನುಕೂಲವಾಗಿದೆ. 100 ಕ್ಕೂ ಹೆಚ್ಚು ಪ್ರಸ್ತಾವನೆಗಳು ವಿವಿಧ ಬ್ಯಾಂಕುಗಳಲ್ಲಿ ಪರಿಶೀಲನೆಯಲ್ಲಿದ್ದು, ಇಷ್ಟರಲ್ಲೇ ಸಾಲ ಮಂಜೂರಾಗುತ್ತದೆ. ಇತರೆ ಯೋಜನೆಗೆ ಹೋಲಿಸಿದಲ್ಲಿ ಪ್ರಸ್ತುತ ಕಾರ್ಯಕ್ರಮದಲ್ಲಿ ಸಾಲ ನೀಡುವ ಪ್ರಕ್ರಿಯೆಯನ್ನು ಬಹಳಷ್ಟು ಸರಳೀಕೃತಗೊಳಿಸಿದೆ. ಇದಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಮಿತಿ (ಡಿ.ಎಲ್.ಸಿ.) ಉಸ್ತುವಾರಿ ವಹಿಸಿಕೊಂಡಿದ್ದು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಫಲಾನುಭವಿಗಳ ಹಿತದೃಷ್ಟಿಯಿಂದ ಮತ್ತು ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸುವ ಆಶಯದಿಂದ ಪ್ರಸ್ತುತ ಸಾಲ ಸಂಪರ್ಕಿತ ಯೋಜನೆಯನ್ನು 2026ನೇ ಸಾಲಿನ ಸಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ನಿರುದ್ಯೋಗಿ ಯುವಕ-ಯುವತಿಯರು ವೈವಿಧ್ಯಮಯ ಮತ್ತು ಹೊಸ ಮಾದರಿಯ ಆಹಾರ ಘಟಕಗಳನ್ನು ಸ್ಥಾಪಿಸಲು ಮುಂದೆ ಬರಬೇಕೆಂದು ಹೇಳಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ ಗಡಾದ, ನಬಾರ್ಡ ವ್ಯವಸ್ಥಾಪಕ ಮಯೂರ ಕಾಂಬಳೆ, ಡಿ.ಐ.ಸಿ. ಅಧಿಕಾರಿ ಶಿವಾನಂದ ಕಮ್ಮಾರ, ತೋಟಗಾರಿಕಾ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು. #AtmanirbharBharat #SelfEmployment #FarmersEmpowerment #DharwadNews #KarnatakaNews #GovernmentSchemes #PMFME #FoodProcessing #StartupIndia #RuralDevelopment #SkillDevelopment #LoanScheme #SubsidyScheme #YouthEmpowerment #Entrepreneurship #MakeInIndia #AgriBusiness #FarmersSupport #IndiaDevelopment #LocalBusiness #SmallScaleIndustry #EconomicGrowth #NewOpportunities #JobsCreation #DigitalIndia

12 hrs ago
user_Nitin 9071795156 press reporte
Nitin 9071795156 press reporte
Press advisory ಕಳಘಟಗಿ, ಧಾರವಾಡ, ಕರ್ನಾಟಕ•
12 hrs ago
b4b61148-d816-4303-9804-dd6528b947ed

ಆತ್ಮನಿರ್ಭರ ಯೋಜನೆ ರೈತರ ಸಶಕ್ತಿಕರಣಕ್ಕೆ ಅನಕೂಲ; ಧಾರವಾಡ ಜಿಲ್ಲೆಯಲ್ಲಿ 540 ಘಟಕಗಳಿಗೆ ಸಾಲ ಮಂಜೂರಾಗಿದ್ದು, 100 ಅರ್ಜಿಗಳು ವಿಲೇವಾರಿಗೆ ಸಿದ್ದವಾಗಿವೆ: ಜಿಲ್ಲಾಧಿಕಾರಿ ಸ್ನೇಹಲ್. ಆರ್. ಧಾರವಾಡ ಏ.15: ಆತ್ಮನಿರ್ಭರ ಭಾರತ ಕಾರ್ಯಕ್ರಮದಡಿಯಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ಯೋಜನೆಗೆ ಸಂಬಂಧಿಸಿದಂತೆ ಇಂದು (ಏ.15) ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆಯು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಅವರು, ಆತ್ಮನಿರ್ಭರ ಭಾರತ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆದ್ಯತೆ ನೀಡಿ, ಮಾತನಾಡಿದರು. 2020-21 ರಿಂದ ಜಾರಿಯಲ್ಲಿರುವ ಪ್ರಸ್ತುತ ಕಾರ್ಯಕ್ರಮವು ಸ್ವಯಂ ಉದ್ಯೋಗ ಮಾಡುವ ಫಲಾನುಭವಿಗಳಿಗೆ ಅತ್ಯಂತ ಉಪಯುಕ್ತವಾಗಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಅರ್ಹ ಸಾರ್ವಜನಿಕರು ಮುಂದೆ ಬರಬೇಕೆಂದು ಅವರು ತಿಳಿಸಿದರು. ಆತ್ಮನಿರ್ಭರ ಯೋಜನೆಯು ಗರಿಷ್ಠ 15 ಲಕ್ಷ ರೂಪಾಯಿಗೆ ಮಿತಿಗೊಳಪಟ್ಟು ಶೇ. 50 ರ ಸಹಾಯ ಧನದೊಂದಿಗೆ ಸಾಲ ನೀಡುವ ಕಾರ್ಯಕ್ರಮವಾಗಿದ್ದು, ಯಾವುದೇ ಸಿದ್ಧ ಆಹಾರ ಅಥವಾ ಮೌಲ್ಯವರ್ಧಿತ ಉತ್ಪನ್ನಗಳ ಘಟಕಗಳನ್ನು ಸ್ಥಾಪಿಸಲು ಅವಕಾಶ ಇರುತ್ತದೆ ಎಂದು ಹೇಳಿದರು. ವೈಯಕ್ತಿಕ ಉದ್ದಿಮೆಗಳು, ಗುಂಪು ಚಟುಗಟಿಕೆಗಳು, ಪ್ರಾಥಮಿಕ ಬಂಡವಾಳ(ಬೀಜಧನ), ಸಾಮಾನ್ಯ ಮೂಲಭೂತ ಸೌಕರ್ಯ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕ ಕೆಲಸಕಾರ್ಯಗಳಿಗೆ ಸಾಲ ಕೊಡುವ ಯೋಜನೆ ಇದ್ದು, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಫಲಾನುಭವಿಗಳಿಗೆ ತಮ್ಮ ಹಂತದಲ್ಲಿಯೇ ಸಹಾಯ ಮಾಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳನ್ನು (ಡಿ.ಆರ್.ಪಿ.) ನೇಮಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಮನ್ವಯ ಸಂಸ್ಥೆಯಾಗಿ ಕಪೆಕ್ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ

e4c1d2f7-d2dc-4c2c-92e6-787994612716

ಮಟ್ಟದಲ್ಲಿ ಕೃಷಿ ಇಲಾಖೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಫಲಾನುಭವಿಗಳು ತಮ್ಮ ವಹಿವಾಟಿನ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಧಾರವಾಡ ಜಿಲ್ಲೆಯಲ್ಲಿ 540 ಘಟಕಗಳಿಗೆ ಸಾಲ ಮಂಜೂರಾಗಿದ್ದು, ಬಹಳಷ್ಟು ಕುಟುಂಬಗಳ ಜೀವನ ನಿರ್ವಹಣೆಗೆ ಆದಾಯ ದೊರೆತಂತಾಗಿದೆ. ಅಲ್ಲದೆ ಪ್ರತಿ ಘಟಕದಲ್ಲೂ ಹಲವಾರು ಜನರಿಗೆ ದೈನಂದಿನ ಕೆಲಸ ಸಿಗುವ ಮೂಲಕ ಕಾರ್ಮಿಕರಿಗೂ ಜೀವನಾಂಶ ಗಳಿಸಿಕೊಳ್ಳಲು ಅನುಕೂಲವಾಗಿದೆ. 100 ಕ್ಕೂ ಹೆಚ್ಚು ಪ್ರಸ್ತಾವನೆಗಳು ವಿವಿಧ ಬ್ಯಾಂಕುಗಳಲ್ಲಿ ಪರಿಶೀಲನೆಯಲ್ಲಿದ್ದು, ಇಷ್ಟರಲ್ಲೇ ಸಾಲ ಮಂಜೂರಾಗುತ್ತದೆ. ಇತರೆ ಯೋಜನೆಗೆ ಹೋಲಿಸಿದಲ್ಲಿ ಪ್ರಸ್ತುತ ಕಾರ್ಯಕ್ರಮದಲ್ಲಿ ಸಾಲ ನೀಡುವ ಪ್ರಕ್ರಿಯೆಯನ್ನು ಬಹಳಷ್ಟು ಸರಳೀಕೃತಗೊಳಿಸಿದೆ. ಇದಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಮಿತಿ (ಡಿ.ಎಲ್.ಸಿ.) ಉಸ್ತುವಾರಿ ವಹಿಸಿಕೊಂಡಿದ್ದು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಫಲಾನುಭವಿಗಳ ಹಿತದೃಷ್ಟಿಯಿಂದ ಮತ್ತು ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸುವ ಆಶಯದಿಂದ ಪ್ರಸ್ತುತ ಸಾಲ ಸಂಪರ್ಕಿತ ಯೋಜನೆಯನ್ನು 2026ನೇ ಸಾಲಿನ ಸಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ನಿರುದ್ಯೋಗಿ ಯುವಕ-ಯುವತಿಯರು ವೈವಿಧ್ಯಮಯ ಮತ್ತು ಹೊಸ ಮಾದರಿಯ ಆಹಾರ ಘಟಕಗಳನ್ನು ಸ್ಥಾಪಿಸಲು ಮುಂದೆ ಬರಬೇಕೆಂದು ಹೇಳಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ ಗಡಾದ, ನಬಾರ್ಡ ವ್ಯವಸ್ಥಾಪಕ ಮಯೂರ ಕಾಂಬಳೆ, ಡಿ.ಐ.ಸಿ. ಅಧಿಕಾರಿ ಶಿವಾನಂದ ಕಮ್ಮಾರ, ತೋಟಗಾರಿಕಾ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು. #AtmanirbharBharat #SelfEmployment #FarmersEmpowerment #DharwadNews #KarnatakaNews #GovernmentSchemes #PMFME #FoodProcessing #StartupIndia #RuralDevelopment #SkillDevelopment #LoanScheme #SubsidyScheme #YouthEmpowerment #Entrepreneurship #MakeInIndia #AgriBusiness #FarmersSupport #IndiaDevelopment #LocalBusiness #SmallScaleIndustry #EconomicGrowth #NewOpportunities #JobsCreation #DigitalIndia

More news from ಕರ್ನಾಟಕ and nearby areas
  • ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    1
    ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    9 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    18 hrs ago
  • ​ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ​ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ​ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
    1
    ​ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು.
ಮಂಗಳವಾರದಂದು ​ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
​ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
    user_Girish Ghatage
    Girish Ghatage
    Reporter in media line ಧಾರವಾಡ, ಧಾರವಾಡ, ಕರ್ನಾಟಕ•
    2 min ago
  • ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.
    1
    ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ  ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    9 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    14 hrs ago
  • 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    1
    10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    18 hrs ago
  • ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ​ "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ​ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    1
    ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು 
​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ 
ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
​
"ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು 
​
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    5 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.