ಗಣಪತಿಯ ಚತುರತ್ ದಿನದಂದೆ ಅವಘಡ. ಅಯ್ಯೋ ಏನಿದು ಒಂದೆ ಮನೆಯಲ್ಲಿ ನಾಲ್ಕು ಸಾವು... ಫ್ರಿಜ್ ಸ್ಫೋಟ: ಗಣೇಶ ಹಬ್ಬದಂದೇ ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವ ದಹನ **ಬೆಳಗಾವಿ:** ನಾಡಿನೆಲ್ಲೆಡೆ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದರೆ, ಇತ್ತ ಬೆಳಗಾವಿ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಮನೆಯಲ್ಲಿದ್ದ ಫ್ರಿಜ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಫೋಟದ ರಭಸಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ಆವರಿಸಿದ್ದರಿಂದ, ಒಳಗಿದ್ದವರಿಗೆ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ. **ಮೃತರ ವಿವರ:** * **ಗಜಾನನ ದಮೋನೆ** (65 ವರ್ಷ) * **ಶಾರಧಾ ದಮೋನೆ** (45 ವರ್ಷ) * **ಭಾರತಿ ದಮೋನೆ** (50 ವರ್ಷ) * **ರೋಷನ ದಮೋನೆ** (21 ವರ್ಷ) **ಇಬ್ಬರ ಸ್ಥಿತಿ ಗಂಭೀರ:** ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ಬಡ ಕುಟುಂಬದಲ್ಲಿ ಗಣೇಶ ಚತುರ್ಥಿಯ ಶುಭ ದಿನದಂದೇ ಈ ಪರಿಯ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ತೀವ್ರ ಶೋಕ ತಂದೊಡ್ಡಿದೆ. ಘಟನಾ ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್1
- ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.1
- ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ1
- ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್ ಎಸ್ಟೇಟ್ ಸಿಎಂ ಡಿಕೆ ಶಿವಕುಮಾರ್ ಅವರೇ, ಸಮರ್ಪಕ ವಿದ್ಯುತ್, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.1
- ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.1
- ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ ! .1