Shuru
Apke Nagar Ki App…
ತೀರ್ಥಹಳ್ಳಿ ಸಿದ್ಧೇಶ್ವರ ಗುಡ್ಡದಲ್ಲಿ ಹತ್ತಿಕೊಂಡ ಬೆಂಕಿ : ನಂದಿಸಲು ಹರಸಾಹಸ ತೀರ್ಥಹಳ್ಳಿ: ಪಟ್ಟಣದ ಬಾಳೇಬೈಲಿನಲ್ಲಿರುವ ಸಿದ್ಧೇಶ್ವರ ಗುಡ್ಡದಲ್ಲಿ ಯಾರೋ ಕಿಡಿಗೇಡಿಗಳು ಬೀಡಿ ಸಿಗರೇಟು ಸೇದಿ ಹಾಕಿದ್ದ ಕಾರಣ ಏಕಾಏಕಿ ಬೆಂಕಿ ಹತ್ತಿಕೊಂಡು ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸಿದ್ಧೇಶ್ವರ ಸಮಿತಿಯ ಯುವಕರು ಹರ ಸಾಹಸ ಪಟ್ಟಿದ್ದಾರೆ.
ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಸಿದ್ಧೇಶ್ವರ ಗುಡ್ಡದಲ್ಲಿ ಹತ್ತಿಕೊಂಡ ಬೆಂಕಿ : ನಂದಿಸಲು ಹರಸಾಹಸ ತೀರ್ಥಹಳ್ಳಿ: ಪಟ್ಟಣದ ಬಾಳೇಬೈಲಿನಲ್ಲಿರುವ ಸಿದ್ಧೇಶ್ವರ ಗುಡ್ಡದಲ್ಲಿ ಯಾರೋ ಕಿಡಿಗೇಡಿಗಳು ಬೀಡಿ ಸಿಗರೇಟು ಸೇದಿ ಹಾಕಿದ್ದ ಕಾರಣ ಏಕಾಏಕಿ ಬೆಂಕಿ ಹತ್ತಿಕೊಂಡು ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸಿದ್ಧೇಶ್ವರ ಸಮಿತಿಯ ಯುವಕರು ಹರ ಸಾಹಸ ಪಟ್ಟಿದ್ದಾರೆ.
More news from ಕರ್ನಾಟಕ and nearby areas
- ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ2
- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..1
- ಚಳ್ಳಕೆರೆ ನಗರದ ಸೂಪರ್ ಮಾರ್ಟ್ ನಲ್ಲಿ ಅವದಿ ಮುಗಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮೇಲ್ಭಾಗದ ಮೆಟ್ರೋ ಪ್ರೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ಅವಧಿ ಮುಗಿದ ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ1
- ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.1