ಗುಳೇದಗುಡ್ಡದಲ್ಲಿ ರಿಂಗ್ ರಸ್ತೆ ನಿರ್ಮಿಸಿ: ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಹೆಗಡೆ ಗುಳೇದಗುಡ್ಡ: ರಾಜ್ಯ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ 108 ನಗರ ಪಟ್ಟಣಗಳಲ್ಲಿ ಹೊಸ ರಿಂಗ್ ರಸ್ತೆಗಳನ್ನು ಮಾಡಲು ಮುಂದಾಗಿದ್ದು, ಗುಳೇದಗುಡ್ಡ ಪಟ್ಟಣದಲ್ಲಿ ರಿಂಗ್ ರಸ್ತೆ ನಿರ್ಮಿಸಲು ಕ್ರಮಜರುಗಿಸುವಂತೆ ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಹೆಗಡೆ ಆಗ್ರಹಿಸಿದ್ದಾರೆ. ಅವರು ಈ ಬಗ್ಗೆ ಪ್ರಕಟಣೆ ನೀಡಿ, ಸಣ್ಣ ಮತ್ತು ಮಧ್ಯಮ ಪಟ್ಟಣಗಳನ್ನು ಹೊಸ ಬೆಳವಣಿಗೆಯ ಆರ್ಥಿಕ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯಸರ್ಕಾರವು ಕರ್ನಾಟಕ ರೋಡ್ ನೆಟ್‌ವರ್ಕ ಗ್ರಿಡ್ ಪ್ಲಾನನ್ನು ಅನುಮೋದಿಸಿದೆ. ಗುಳೇದಗುಡ್ಡ ಪಟ್ಟಣದ ತಾಲೂಕು ಕೇಂದ್ರವಾಗಿದ್ದು ಜನದಟ್ಟಣೆ ಹಾಗೂ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪವಾರ್ ಕ್ರಾಸ್ ಹಾಗೂ ಕೆಳಗಿನ ಪೇಟೆ ಸರ್ಕಲ್‌ನಲ್ಲಿ ವಾಹನಗಳ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಿಂಗ್ ರಸ್ತೆ ನಿರ್ಮಾಣದಿಂದ ಎರಡೂ ಬದಿಗಳಲ್ಲಿ ಇಂಪ್ಯಾಕ್ಟ್ ಝೋನ್ ಎಂದು ಗುರುತಿಸಿ ಈ ವಲಯದಲ್ಲಿ ನಗರ ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಹೂಡಿಕೆ ಮತ್ತು ವ್ಯಾಪಾರ ಹೊಬಳಿ ಮಟ್ಟಕ್ಕೂ ವಿಸ್ತರಿಸುವುದರ ಜೊತೆಗೆ ರಿಯಲ್ ಎಸ್ಟೇಟ್ ಉದ್ಯೋಗ, ವ್ಯಾಪಾರ ವಹಿವಾಟುಗಳಿಗೆ ಹೊಸಚೈತನ್ಯ ದೊರೆಯುವುದು. ಆದ್ದರಿಂದ ಗುಳೇದಗುಡ್ಡ ಪಟ್ಟಣದಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಗುಳೇದಗುಡ್ಡದಲ್ಲಿ ರಿಂಗ್ ರಸ್ತೆ ನಿರ್ಮಿಸಿ: ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಹೆಗಡೆ ಗುಳೇದಗುಡ್ಡ: ರಾಜ್ಯ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ 108 ನಗರ ಪಟ್ಟಣಗಳಲ್ಲಿ ಹೊಸ ರಿಂಗ್ ರಸ್ತೆಗಳನ್ನು ಮಾಡಲು ಮುಂದಾಗಿದ್ದು, ಗುಳೇದಗುಡ್ಡ ಪಟ್ಟಣದಲ್ಲಿ ರಿಂಗ್ ರಸ್ತೆ ನಿರ್ಮಿಸಲು ಕ್ರಮಜರುಗಿಸುವಂತೆ ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಹೆಗಡೆ ಆಗ್ರಹಿಸಿದ್ದಾರೆ. ಅವರು ಈ ಬಗ್ಗೆ ಪ್ರಕಟಣೆ ನೀಡಿ, ಸಣ್ಣ ಮತ್ತು ಮಧ್ಯಮ ಪಟ್ಟಣಗಳನ್ನು ಹೊಸ ಬೆಳವಣಿಗೆಯ ಆರ್ಥಿಕ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯಸರ್ಕಾರವು ಕರ್ನಾಟಕ ರೋಡ್ ನೆಟ್‌ವರ್ಕ ಗ್ರಿಡ್ ಪ್ಲಾನನ್ನು ಅನುಮೋದಿಸಿದೆ. ಗುಳೇದಗುಡ್ಡ ಪಟ್ಟಣದ ತಾಲೂಕು ಕೇಂದ್ರವಾಗಿದ್ದು ಜನದಟ್ಟಣೆ ಹಾಗೂ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪವಾರ್ ಕ್ರಾಸ್ ಹಾಗೂ ಕೆಳಗಿನ ಪೇಟೆ ಸರ್ಕಲ್‌ನಲ್ಲಿ ವಾಹನಗಳ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಿಂಗ್ ರಸ್ತೆ ನಿರ್ಮಾಣದಿಂದ ಎರಡೂ ಬದಿಗಳಲ್ಲಿ ಇಂಪ್ಯಾಕ್ಟ್ ಝೋನ್ ಎಂದು ಗುರುತಿಸಿ ಈ ವಲಯದಲ್ಲಿ ನಗರ ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಹೂಡಿಕೆ ಮತ್ತು ವ್ಯಾಪಾರ ಹೊಬಳಿ ಮಟ್ಟಕ್ಕೂ ವಿಸ್ತರಿಸುವುದರ ಜೊತೆಗೆ ರಿಯಲ್ ಎಸ್ಟೇಟ್ ಉದ್ಯೋಗ, ವ್ಯಾಪಾರ ವಹಿವಾಟುಗಳಿಗೆ ಹೊಸಚೈತನ್ಯ ದೊರೆಯುವುದು. ಆದ್ದರಿಂದ ಗುಳೇದಗುಡ್ಡ ಪಟ್ಟಣದಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1