logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಕೆ.ಸಿ. ಮಹೇಶ್ ಅವರನ್ನು ಗ್ರಾಮಸ್ಥರು, ಸ್ನೇಹಿತರು ಹಾಗೂ ಕುಟುಂಬದವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ. ಮಹೇಶ್ ಅವರು, ಪಟ್ಟಣ ಪ್ರದೇಶದ ವ್ಯಾಮೋಹವನ್ನು ಬಿಟ್ಟು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವುಗಳ ಉಳಿವಿಗೆ ಮತ್ತು ಬೆಳವಣಿಗೆಗೆ ಮುಂದಾಗುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮಹೇಶ್, ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಮತ್ತು ನಿವೃತ್ತಿ ಸಾಮಾನ್ಯವಾಗಿದ್ದು, ತಮ್ಮ ನಿವೃತ್ತಿ ಹಿನ್ನೆಲೆಯಲ್ಲಿ ಸನ್ಮಾನಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಮ್ಮ ಸೇವಾ ಅವಧಿಯಲ್ಲಿ ಗ್ರಾಮಸ್ಥರು ಮತ್ತು ಎಲ್ಲರೂ ನೀಡಿದ ಸಹಕಾರವನ್ನು ಸ್ಮರಿಸಿದರು. ಇದೇ ವೇಳೆ, ಸಿದ್ದಯ್ಯ ಅವರು ಮಹೇಶ್ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು, ಅವರ ಸ್ನೇಹಮಯಿ ವರ್ತನೆ ಮತ್ತು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದನ್ನು ಉಲ್ಲೇಖಿಸಿದರು. ನಿವೃತ್ತ ಶಿಕ್ಷಕ ಕೆ.ಸಿ. ಮಹೇಶ್ ಅವರ ಅಕ್ಕನ ಮಕ್ಕಳಾದ ಪುನೀತ್ ಮತ್ತು ವಿನಯ್, ಶಾಲೆಯ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಬಾಕ್ಸ್, ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಾಲಿನಿ ಮಹೇಶ್, ನಿವೃತ್ತ ಶಿಕ್ಷಕರಾದ ಬೋರೇಗೌಡ, ಕೃಷ್ಣೆಗೌಡ, ಸುಂದರಪ್ಪ, ಜಿ.ಎಸ್. ಕೃಷ್ಣ, ಬಸವರಾಜು, ಕುಟುಂಬದವರಾದ ಗಂಗಾಧರ ಸ್ವಾಮಿ, ಸ್ನೇಹಿತರಾದ ಮಹೇಶ್, ನಾಗೇಂದ್ರ ಪ್ರಕಾಶ, ಅಭಿ, ಜಯಣ್ಣ, ರವೀಶ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

1 hr ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
ಮಳವಳ್ಳಿ, ಮಂಡ್ಯ, ಕರ್ನಾಟಕ•
1 hr ago

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಕೆ.ಸಿ. ಮಹೇಶ್ ಅವರನ್ನು ಗ್ರಾಮಸ್ಥರು, ಸ್ನೇಹಿತರು ಹಾಗೂ ಕುಟುಂಬದವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ. ಮಹೇಶ್ ಅವರು, ಪಟ್ಟಣ ಪ್ರದೇಶದ ವ್ಯಾಮೋಹವನ್ನು ಬಿಟ್ಟು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವುಗಳ ಉಳಿವಿಗೆ ಮತ್ತು ಬೆಳವಣಿಗೆಗೆ ಮುಂದಾಗುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮಹೇಶ್, ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಮತ್ತು ನಿವೃತ್ತಿ ಸಾಮಾನ್ಯವಾಗಿದ್ದು, ತಮ್ಮ ನಿವೃತ್ತಿ ಹಿನ್ನೆಲೆಯಲ್ಲಿ ಸನ್ಮಾನಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಮ್ಮ ಸೇವಾ ಅವಧಿಯಲ್ಲಿ ಗ್ರಾಮಸ್ಥರು ಮತ್ತು ಎಲ್ಲರೂ ನೀಡಿದ ಸಹಕಾರವನ್ನು ಸ್ಮರಿಸಿದರು. ಇದೇ ವೇಳೆ, ಸಿದ್ದಯ್ಯ ಅವರು ಮಹೇಶ್ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು, ಅವರ ಸ್ನೇಹಮಯಿ ವರ್ತನೆ ಮತ್ತು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದನ್ನು ಉಲ್ಲೇಖಿಸಿದರು. ನಿವೃತ್ತ ಶಿಕ್ಷಕ ಕೆ.ಸಿ. ಮಹೇಶ್ ಅವರ ಅಕ್ಕನ ಮಕ್ಕಳಾದ ಪುನೀತ್ ಮತ್ತು ವಿನಯ್, ಶಾಲೆಯ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಬಾಕ್ಸ್, ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಾಲಿನಿ ಮಹೇಶ್, ನಿವೃತ್ತ ಶಿಕ್ಷಕರಾದ ಬೋರೇಗೌಡ, ಕೃಷ್ಣೆಗೌಡ, ಸುಂದರಪ್ಪ, ಜಿ.ಎಸ್. ಕೃಷ್ಣ, ಬಸವರಾಜು, ಕುಟುಂಬದವರಾದ ಗಂಗಾಧರ ಸ್ವಾಮಿ, ಸ್ನೇಹಿತರಾದ ಮಹೇಶ್, ನಾಗೇಂದ್ರ ಪ್ರಕಾಶ, ಅಭಿ, ಜಯಣ್ಣ, ರವೀಶ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಕೆ.ಸಿ. ಮಹೇಶ್ ಅವರನ್ನು ಗ್ರಾಮಸ್ಥರು, ಸ್ನೇಹಿತರು ಹಾಗೂ ಕುಟುಂಬದವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ. ಮಹೇಶ್ ಅವರು, ಪಟ್ಟಣ ಪ್ರದೇಶದ ವ್ಯಾಮೋಹವನ್ನು ಬಿಟ್ಟು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವುಗಳ ಉಳಿವಿಗೆ ಮತ್ತು ಬೆಳವಣಿಗೆಗೆ ಮುಂದಾಗುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮಹೇಶ್, ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಮತ್ತು ನಿವೃತ್ತಿ ಸಾಮಾನ್ಯವಾಗಿದ್ದು, ತಮ್ಮ ನಿವೃತ್ತಿ ಹಿನ್ನೆಲೆಯಲ್ಲಿ ಸನ್ಮಾನಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಮ್ಮ ಸೇವಾ ಅವಧಿಯಲ್ಲಿ ಗ್ರಾಮಸ್ಥರು ಮತ್ತು ಎಲ್ಲರೂ ನೀಡಿದ ಸಹಕಾರವನ್ನು ಸ್ಮರಿಸಿದರು. ಇದೇ ವೇಳೆ, ಸಿದ್ದಯ್ಯ ಅವರು ಮಹೇಶ್ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು, ಅವರ ಸ್ನೇಹಮಯಿ ವರ್ತನೆ ಮತ್ತು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದನ್ನು ಉಲ್ಲೇಖಿಸಿದರು. ನಿವೃತ್ತ ಶಿಕ್ಷಕ ಕೆ.ಸಿ. ಮಹೇಶ್ ಅವರ ಅಕ್ಕನ ಮಕ್ಕಳಾದ ಪುನೀತ್ ಮತ್ತು ವಿನಯ್, ಶಾಲೆಯ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಬಾಕ್ಸ್, ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಾಲಿನಿ ಮಹೇಶ್, ನಿವೃತ್ತ ಶಿಕ್ಷಕರಾದ ಬೋರೇಗೌಡ, ಕೃಷ್ಣೆಗೌಡ, ಸುಂದರಪ್ಪ, ಜಿ.ಎಸ್. ಕೃಷ್ಣ, ಬಸವರಾಜು, ಕುಟುಂಬದವರಾದ ಗಂಗಾಧರ ಸ್ವಾಮಿ, ಸ್ನೇಹಿತರಾದ ಮಹೇಶ್, ನಾಗೇಂದ್ರ ಪ್ರಕಾಶ, ಅಭಿ, ಜಯಣ್ಣ, ರವೀಶ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಕೆ.ಸಿ. ಮಹೇಶ್ ಅವರನ್ನು ಗ್ರಾಮಸ್ಥರು, ಸ್ನೇಹಿತರು ಹಾಗೂ ಕುಟುಂಬದವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ. ಮಹೇಶ್ ಅವರು, ಪಟ್ಟಣ ಪ್ರದೇಶದ ವ್ಯಾಮೋಹವನ್ನು ಬಿಟ್ಟು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವುಗಳ ಉಳಿವಿಗೆ ಮತ್ತು ಬೆಳವಣಿಗೆಗೆ ಮುಂದಾಗುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮಹೇಶ್, ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಮತ್ತು ನಿವೃತ್ತಿ ಸಾಮಾನ್ಯವಾಗಿದ್ದು, ತಮ್ಮ ನಿವೃತ್ತಿ ಹಿನ್ನೆಲೆಯಲ್ಲಿ ಸನ್ಮಾನಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಮ್ಮ ಸೇವಾ ಅವಧಿಯಲ್ಲಿ ಗ್ರಾಮಸ್ಥರು ಮತ್ತು ಎಲ್ಲರೂ ನೀಡಿದ ಸಹಕಾರವನ್ನು ಸ್ಮರಿಸಿದರು. ಇದೇ ವೇಳೆ, ಸಿದ್ದಯ್ಯ ಅವರು ಮಹೇಶ್ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು, ಅವರ ಸ್ನೇಹಮಯಿ ವರ್ತನೆ ಮತ್ತು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದನ್ನು ಉಲ್ಲೇಖಿಸಿದರು.

ನಿವೃತ್ತ ಶಿಕ್ಷಕ ಕೆ.ಸಿ. ಮಹೇಶ್ ಅವರ ಅಕ್ಕನ ಮಕ್ಕಳಾದ ಪುನೀತ್ ಮತ್ತು ವಿನಯ್, ಶಾಲೆಯ ವಿದ್ಯಾರ್ಥಿಗಳಿಗೆ ಜಾಮಿಟ್ರಿ ಬಾಕ್ಸ್, ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಾಲಿನಿ ಮಹೇಶ್, ನಿವೃತ್ತ ಶಿಕ್ಷಕರಾದ ಬೋರೇಗೌಡ, ಕೃಷ್ಣೆಗೌಡ, ಸುಂದರಪ್ಪ, ಜಿ.ಎಸ್. ಕೃಷ್ಣ, ಬಸವರಾಜು, ಕುಟುಂಬದವರಾದ ಗಂಗಾಧರ ಸ್ವಾಮಿ, ಸ್ನೇಹಿತರಾದ ಮಹೇಶ್, ನಾಗೇಂದ್ರ ಪ್ರಕಾಶ, ಅಭಿ, ಜಯಣ್ಣ, ರವೀಶ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಭಾನುವಾರ ಡಾ. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಅದ್ದೂರಿ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಈ ಬೃಹತ್ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮಿನಿ ವಿಧಾನಸೌಧದ ಬಳಿ ಬೆಳ್ಳಿರಥದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿವಿಧ ಪುಷ್ಪಾಲಂಕಾರಗಳಿಂದ ಶೃಂಗರಿಸಲಾಗಿತ್ತು. ಅಂಬೇಡ್ಕರ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ತಾಲೂಕಿನ ಪ್ರಗತಿಪರ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಗೆ ಕೊಳ್ಳೇಗಾಲದ ಡಿವೈಎಸ್‌ಪಿ ಮೋಹನ್ ಅವರು ಚಾಲನೆ ನೀಡಿದರು. ವಾದ್ಯಕಲಾ ತಂಡಗಳೊಂದಿಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಟೋಗಳಲ್ಲಿ ಅಂಬೇಡ್ಕರ್ ಭಾವಚಿತ್ರಗಳನ್ನು ಇಟ್ಟು ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಯುವಕರು ಮತ್ತು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಈ ಕಾರ್ಯಕ್ರಮವು ಭಾರಿ ಜನೋತ್ಸವದಂತೆ ಆಚರಣೆಯಾಗಿ, ಜನರ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸಿತು.
    1
    ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಭಾನುವಾರ ಡಾ. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಅದ್ದೂರಿ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಈ ಬೃಹತ್ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಮಿನಿ ವಿಧಾನಸೌಧದ ಬಳಿ ಬೆಳ್ಳಿರಥದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿವಿಧ ಪುಷ್ಪಾಲಂಕಾರಗಳಿಂದ ಶೃಂಗರಿಸಲಾಗಿತ್ತು. ಅಂಬೇಡ್ಕರ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ತಾಲೂಕಿನ ಪ್ರಗತಿಪರ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಗೆ ಕೊಳ್ಳೇಗಾಲದ ಡಿವೈಎಸ್‌ಪಿ ಮೋಹನ್ ಅವರು ಚಾಲನೆ ನೀಡಿದರು. ವಾದ್ಯಕಲಾ ತಂಡಗಳೊಂದಿಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಟೋಗಳಲ್ಲಿ ಅಂಬೇಡ್ಕರ್ ಭಾವಚಿತ್ರಗಳನ್ನು ಇಟ್ಟು ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಯುವಕರು ಮತ್ತು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಈ ಕಾರ್ಯಕ್ರಮವು ಭಾರಿ ಜನೋತ್ಸವದಂತೆ ಆಚರಣೆಯಾಗಿ, ಜನರ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸಿತು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    10 hrs ago
  • ವಕ್ಫ್ ಮಂಡಳಿಯಲ್ಲಿ ಅಧಿಕಾರದ ಕೇಂದ್ರ ಸ್ಥಾನವನ್ನು ಆಕ್ರಮಿಸಿಕೊಂಡು, ಸಮುದಾಯದ ಬಡ ಮತ್ತು ದುರ್ಬಲ ವರ್ಗದವರಿಗೆ ಸೇವೆ ಸಲ್ಲಿಸದವರಿಗೆ ಇದೊಂದು ಪಾಠವಾಗಿದೆ. ಈ ಕುರಿತ ಸಂದೇಶವು ಭಾರತದಲ್ಲಿ ವೈರಲ್ ಆಗುತ್ತಿದೆ.
    1
    ವಕ್ಫ್ ಮಂಡಳಿಯಲ್ಲಿ ಅಧಿಕಾರದ ಕೇಂದ್ರ ಸ್ಥಾನವನ್ನು ಆಕ್ರಮಿಸಿಕೊಂಡು, ಸಮುದಾಯದ ಬಡ ಮತ್ತು ದುರ್ಬಲ ವರ್ಗದವರಿಗೆ ಸೇವೆ ಸಲ್ಲಿಸದವರಿಗೆ ಇದೊಂದು ಪಾಠವಾಗಿದೆ. ಈ ಕುರಿತ ಸಂದೇಶವು ಭಾರತದಲ್ಲಿ ವೈರಲ್ ಆಗುತ್ತಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಮೈಸೂರು ಜಿಲ್ಲೆಯ ಹಿರೇಮರಳಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ವಿಶಿಷ್ಟ ಕಾರ್ಯವೊಂದು ನಿರಂತರವಾಗಿ ನಡೆಯುತ್ತಿದೆ. ಗ್ರಾಮದ ದೇವಸ್ಥಾನಗಳ ಸನ್ನಿಧಿ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಸುತ್ತಮುತ್ತಲಿನ ಪ್ರದೇಶಗಳನ್ನು ಶುಚಿಯಾಗಿ ಕಾಪಾಡುವ ಉದ್ದೇಶದಿಂದ ಪ್ರತೀ ಭಾನುವಾರ ವಿಶೇಷ ಸ್ವಚ್ಛತಾ ಸೇವೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಗ್ರಾಮಸ್ಥರು ಉತ್ಸಾಹದಿಂದ ಸ್ಪಂದಿಸುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತೆಯ ಹೊಸ ಸಂಸ್ಕೃತಿಗೆ ನಾಂದಿ ಹಾಡಿದ್ದಾರೆ. ಗ್ರಾಮದ ಹಿರಿಯರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಪ್ರತೀ ಭಾನುವಾರ ಎರಡು ಗಂಟೆಗಳ ಕಾಲ ಗ್ರಾಮಸ್ಥರು ಒಗ್ಗೂಡಿ ಶ್ರಮದಾನ ಮಾಡುತ್ತಾರೆ. ದೇವಸ್ಥಾನದ ಆವರಣ, ರಸ್ತೆ ಬದಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಜನರು ಹೆಚ್ಚಾಗಿ ಓಡಾಡುವ ಪ್ರದೇಶಗಳನ್ನು ಸ್ವಚ್ಛಗೊಳಿಸುವ ಕೆಲಸ ಕೈಗೊಳ್ಳಲಾಗುತ್ತಿದೆ. ಕಸ ಸಂಗ್ರಹಣೆ, ಗಿಡಗಂಟಿಗಳ ತೆರವು, ನೀರು ನಿಲ್ಲುವ ಸ್ಥಳಗಳ ಶುಚೀಕರಣ ಸೇರಿದಂತೆ ಹಲವು ಕಾರ್ಯಗಳನ್ನು ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ನಿರ್ವಹಿಸುತ್ತಿದ್ದಾರೆ. ಈ ಸ್ವಚ್ಛತಾ ಸೇವೆಯ ವಿಶೇಷತೆ ಎಂದರೆ ಎಲ್ಲ ವಯೋಮಾನದವರು ಇದರಲ್ಲಿ ಭಾಗವಹಿಸುತ್ತಿರುವುದು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಹ ಕೈಜೋಡಿಸುತ್ತಿದ್ದು, ಗ್ರಾಮದಲ್ಲಿ ಒಗ್ಗಟ್ಟಿನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜದ ಹಿತದೃಷ್ಟಿಯಿಂದ ಗ್ರಾಮಸ್ಥರು ಕೈಗೊಂಡಿರುವ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವಚ್ಛ ಪರಿಸರವು ಉತ್ತಮ ಆರೋಗ್ಯಕ್ಕೆ ಮೂಲ ಎಂಬ ಅರಿವು ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಕಾಪಾಡುವ ಜವಾಬ್ದಾರಿಯನ್ನು ಈ ಕಾರ್ಯಕ್ರಮ ಜನರಲ್ಲಿ ಬೆಳೆಸುತ್ತಿದೆ. ಗ್ರಾಮವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಸಂಕಲ್ಪದೊಂದಿಗೆ ಆರಂಭವಾದ ಈ ಕಾರ್ಯ ಈಗ ಜನಾಂದೋಲನದ ರೂಪ ಪಡೆದುಕೊಂಡಿದೆ. ಗ್ರಾಮಸ್ಥರ ಈ ಸೇವಾ ಮನೋಭಾವ ಇತರ ಗ್ರಾಮಗಳಿಗೂ ಮಾದರಿಯಾಗಿದ್ದು, ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಸಂದೇಶವನ್ನು ಸಾರುತ್ತಿದೆ. ಹಿರೇಮರಳಿ ಗ್ರಾಮದ ಭಾನುವಾರದ ಸ್ವಚ್ಛತಾ ಸೇವೆ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುವ ಉತ್ತಮ ಉದಾಹರಣೆಯಾಗಿದೆ.
    1
    ಮೈಸೂರು ಜಿಲ್ಲೆಯ ಹಿರೇಮರಳಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ವಿಶಿಷ್ಟ ಕಾರ್ಯವೊಂದು ನಿರಂತರವಾಗಿ ನಡೆಯುತ್ತಿದೆ. ಗ್ರಾಮದ ದೇವಸ್ಥಾನಗಳ ಸನ್ನಿಧಿ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಸುತ್ತಮುತ್ತಲಿನ ಪ್ರದೇಶಗಳನ್ನು ಶುಚಿಯಾಗಿ ಕಾಪಾಡುವ ಉದ್ದೇಶದಿಂದ ಪ್ರತೀ ಭಾನುವಾರ ವಿಶೇಷ ಸ್ವಚ್ಛತಾ ಸೇವೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಗ್ರಾಮಸ್ಥರು ಉತ್ಸಾಹದಿಂದ ಸ್ಪಂದಿಸುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತೆಯ ಹೊಸ ಸಂಸ್ಕೃತಿಗೆ ನಾಂದಿ ಹಾಡಿದ್ದಾರೆ.

ಗ್ರಾಮದ ಹಿರಿಯರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಪ್ರತೀ ಭಾನುವಾರ ಎರಡು ಗಂಟೆಗಳ ಕಾಲ ಗ್ರಾಮಸ್ಥರು ಒಗ್ಗೂಡಿ ಶ್ರಮದಾನ ಮಾಡುತ್ತಾರೆ. ದೇವಸ್ಥಾನದ ಆವರಣ, ರಸ್ತೆ ಬದಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಜನರು ಹೆಚ್ಚಾಗಿ ಓಡಾಡುವ ಪ್ರದೇಶಗಳನ್ನು ಸ್ವಚ್ಛಗೊಳಿಸುವ ಕೆಲಸ ಕೈಗೊಳ್ಳಲಾಗುತ್ತಿದೆ. ಕಸ ಸಂಗ್ರಹಣೆ, ಗಿಡಗಂಟಿಗಳ ತೆರವು, ನೀರು ನಿಲ್ಲುವ ಸ್ಥಳಗಳ ಶುಚೀಕರಣ ಸೇರಿದಂತೆ ಹಲವು ಕಾರ್ಯಗಳನ್ನು ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ನಿರ್ವಹಿಸುತ್ತಿದ್ದಾರೆ.

ಈ ಸ್ವಚ್ಛತಾ ಸೇವೆಯ ವಿಶೇಷತೆ ಎಂದರೆ ಎಲ್ಲ ವಯೋಮಾನದವರು ಇದರಲ್ಲಿ ಭಾಗವಹಿಸುತ್ತಿರುವುದು. ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಹ ಕೈಜೋಡಿಸುತ್ತಿದ್ದು, ಗ್ರಾಮದಲ್ಲಿ ಒಗ್ಗಟ್ಟಿನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜದ ಹಿತದೃಷ್ಟಿಯಿಂದ ಗ್ರಾಮಸ್ಥರು ಕೈಗೊಂಡಿರುವ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವಚ್ಛ ಪರಿಸರವು ಉತ್ತಮ ಆರೋಗ್ಯಕ್ಕೆ ಮೂಲ ಎಂಬ ಅರಿವು ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಕಾಪಾಡುವ ಜವಾಬ್ದಾರಿಯನ್ನು ಈ ಕಾರ್ಯಕ್ರಮ ಜನರಲ್ಲಿ ಬೆಳೆಸುತ್ತಿದೆ. ಗ್ರಾಮವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಸಂಕಲ್ಪದೊಂದಿಗೆ ಆರಂಭವಾದ ಈ ಕಾರ್ಯ ಈಗ ಜನಾಂದೋಲನದ ರೂಪ ಪಡೆದುಕೊಂಡಿದೆ.

ಗ್ರಾಮಸ್ಥರ ಈ ಸೇವಾ ಮನೋಭಾವ ಇತರ ಗ್ರಾಮಗಳಿಗೂ ಮಾದರಿಯಾಗಿದ್ದು, ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಸಂದೇಶವನ್ನು ಸಾರುತ್ತಿದೆ. ಹಿರೇಮರಳಿ ಗ್ರಾಮದ ಭಾನುವಾರದ ಸ್ವಚ್ಛತಾ ಸೇವೆ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುವ ಉತ್ತಮ ಉದಾಹರಣೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    1 hr ago
  • ಹನೂರು ಪಟ್ಟಣದ ಪಿ ಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಉಪ್ಪಾರ ಬಳಗದ ವತಿಯಿಂದ ಭಗೀರಥ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆರ್ ಎಂ ಸಿ ಆವರಣದಿಂದ ಮೆರವಣಿಗೆ ಮೂಲಕ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದರು. ಶಾಸಕ ಎಂ.ಆರ್. ಮಂಜುನಾಥ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದತ್ತೇಶ್ ಕುಮಾರ್, ಸಮಾಜ ಸೇವಕ ನಿಶಾಂತ್, ಮುಖಂಡ ಮಂಜೇಶ್ ಗೌಡ, ಉಪ್ಪಾರ ಸಮುದಾಯದ ಮುಖಂಡರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
    4
    ಹನೂರು ಪಟ್ಟಣದ ಪಿ ಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಉಪ್ಪಾರ ಬಳಗದ ವತಿಯಿಂದ ಭಗೀರಥ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆರ್ ಎಂ ಸಿ ಆವರಣದಿಂದ ಮೆರವಣಿಗೆ ಮೂಲಕ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದರು. ಶಾಸಕ ಎಂ.ಆರ್. ಮಂಜುನಾಥ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದತ್ತೇಶ್ ಕುಮಾರ್, ಸಮಾಜ ಸೇವಕ ನಿಶಾಂತ್, ಮುಖಂಡ ಮಂಜೇಶ್ ಗೌಡ, ಉಪ್ಪಾರ ಸಮುದಾಯದ ಮುಖಂಡರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ, ನಿಯೋಜಿತ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ, ದಿನೇಶ್ ಗುಂಡೂರಾವ್ ಅವರು ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು.
    1
    ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ, ನಿಯೋಜಿತ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ, ದಿನೇಶ್ ಗುಂಡೂರಾವ್ ಅವರು ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಚಾಮರಾಜನಗರ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟವು ಸಚಿವರಾದ ಡಾ. ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಿತು. ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯು ಕಾಂಗ್ರೆಸ್ ಪಕ್ಷವು ಪರಮೇಶ್ವರ ಅವರನ್ನು ಸಿಎಂ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಆದ ಶಾಪವಿಮೋಚನೆ ಮಾಡಿಕೊಳ್ಳಬೇಕೆಂದು ಆಗ್ರಹಿಸಿತು. ನೇತೃತ್ವ ವಹಿಸಿದ್ದ ವೆಂಕಟರಮಣಸ್ವಾಮಿ ಅವರು ಮಾತನಾಡಿ, ಕಳೆದ 80 ವರ್ಷಗಳಿಂದಲೂ ದಲಿತ ಸಮುದಾಯ ಕಾಂಗ್ರೆಸ್‌ಗೆ ನಿರಂತರವಾಗಿ ಮತ ಹಾಕಿಕೊಂಡು ಬಂದಿದೆ ಎಂದು ತಿಳಿಸಿದರು. ಎಂಟು ವರ್ಷಗಳ ಹಿಂದೆ ಪರಮೇಶ್ವರ ಅವರಿಗೆ ಮುಖ್ಯಮಂತ್ರಿಯಾಗಲು ಎಲ್ಲ ಅವಕಾಶಗಳಿದ್ದರೂ ಸಹ, ಪಕ್ಷದ ಕೆಲವರೇ ಅವರನ್ನು ಸೋಲಿಸಿ ಆ ಅವಕಾಶವನ್ನು ತಪ್ಪಿಸಿದರು. ಆ ಶಾಪದಿಂದ ಮುಕ್ತಿ ಪಡೆಯಬೇಕಾದರೆ ಕಾಂಗ್ರೆಸ್ ತಕ್ಷಣವೇ ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಬಲವಾಗಿ ಒತ್ತಾಯಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆಯ ಹೆಬ್ಬಾಗಿಲಿನಿಂದ ಭುವನೇಶ್ವರಿ ವೃತ್ತದವರೆಗೆ ಈ ಪಂಜಿನ ಮೆರವಣಿಗೆ ಸಾಗಿತು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ ಡಿ.ಜಿ. ಸಾಗರಬಣದ ಜಿಲ್ಲಾ ಸಂಚಾಲಕ ಸಿ.ಎಂ. ಶಿವಣ್ಣ, ಸುರೇಶ್ ರಾಮಸಮುದ್ರ, ಪ್ರಕಾಶ್, ರಂಗಸ್ವಾಮಿ, ಸಿದ್ದರಾಜು, ಆಟೋ ಉಮೇಶ್, ಗೌರಿಶಂಕರ, ತಮ್ಮಯ್ಯ, ಪರಶಿವು, ಮಲ್ಲು ಸೇರಿದಂತೆ ಹಲವರು ಭಾಗವಹಿಸಿದ್ದರು.
    1
    ಚಾಮರಾಜನಗರ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟವು ಸಚಿವರಾದ ಡಾ. ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಿತು. ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯು ಕಾಂಗ್ರೆಸ್ ಪಕ್ಷವು ಪರಮೇಶ್ವರ ಅವರನ್ನು ಸಿಎಂ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಆದ ಶಾಪವಿಮೋಚನೆ ಮಾಡಿಕೊಳ್ಳಬೇಕೆಂದು ಆಗ್ರಹಿಸಿತು.

ನೇತೃತ್ವ ವಹಿಸಿದ್ದ ವೆಂಕಟರಮಣಸ್ವಾಮಿ ಅವರು ಮಾತನಾಡಿ, ಕಳೆದ 80 ವರ್ಷಗಳಿಂದಲೂ ದಲಿತ ಸಮುದಾಯ ಕಾಂಗ್ರೆಸ್‌ಗೆ ನಿರಂತರವಾಗಿ ಮತ ಹಾಕಿಕೊಂಡು ಬಂದಿದೆ ಎಂದು ತಿಳಿಸಿದರು. ಎಂಟು ವರ್ಷಗಳ ಹಿಂದೆ ಪರಮೇಶ್ವರ ಅವರಿಗೆ ಮುಖ್ಯಮಂತ್ರಿಯಾಗಲು ಎಲ್ಲ ಅವಕಾಶಗಳಿದ್ದರೂ ಸಹ, ಪಕ್ಷದ ಕೆಲವರೇ ಅವರನ್ನು ಸೋಲಿಸಿ ಆ ಅವಕಾಶವನ್ನು ತಪ್ಪಿಸಿದರು. ಆ ಶಾಪದಿಂದ ಮುಕ್ತಿ ಪಡೆಯಬೇಕಾದರೆ ಕಾಂಗ್ರೆಸ್ ತಕ್ಷಣವೇ ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಬಲವಾಗಿ ಒತ್ತಾಯಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆಯ ಹೆಬ್ಬಾಗಿಲಿನಿಂದ ಭುವನೇಶ್ವರಿ ವೃತ್ತದವರೆಗೆ ಈ ಪಂಜಿನ ಮೆರವಣಿಗೆ ಸಾಗಿತು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ ಡಿ.ಜಿ. ಸಾಗರಬಣದ ಜಿಲ್ಲಾ ಸಂಚಾಲಕ ಸಿ.ಎಂ. ಶಿವಣ್ಣ, ಸುರೇಶ್ ರಾಮಸಮುದ್ರ, ಪ್ರಕಾಶ್, ರಂಗಸ್ವಾಮಿ, ಸಿದ್ದರಾಜು, ಆಟೋ ಉಮೇಶ್, ಗೌರಿಶಂಕರ, ತಮ್ಮಯ್ಯ, ಪರಶಿವು, ಮಲ್ಲು ಸೇರಿದಂತೆ ಹಲವರು ಭಾಗವಹಿಸಿದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    14 hrs ago
  • ಯಳಂದೂರು: ಯರಗಂಬಳ್ಳಿ ಮತ್ತು ಗುಂಬಳ್ಳಿ ರಸ್ತೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ, ರಸ್ತೆಗೆ ಬೃಹತ್ ಮರ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ರಸ್ತೆಯ ಪಕ್ಕದಲ್ಲಿದ್ದ ಮರವು ಏಕಾಏಕಿ ಬುಡಸಮೇತ ರಸ್ತೆಗೆ ಉರುಳಿದಾಗ, ಅದರ ರಭಸಕ್ಕೆ ಸಿಲುಕಿದ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಸಾರ್ವಜನಿಕರು ಆತಂಕಗೊಂಡಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮರ ಬಿದ್ದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು; ನಂತರ ಸ್ಥಳೀಯರ ಸಹಾಯದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ರಸ್ತೆಯ ಅಕ್ಕಪಕ್ಕದಲ್ಲಿ ಒಣಗಿರುವ ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ಹಲವು ಮರಗಳಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    4
    ಯಳಂದೂರು: ಯರಗಂಬಳ್ಳಿ ಮತ್ತು ಗುಂಬಳ್ಳಿ ರಸ್ತೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ, ರಸ್ತೆಗೆ ಬೃಹತ್ ಮರ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ರಸ್ತೆಯ ಪಕ್ಕದಲ್ಲಿದ್ದ ಮರವು ಏಕಾಏಕಿ ಬುಡಸಮೇತ ರಸ್ತೆಗೆ ಉರುಳಿದಾಗ, ಅದರ ರಭಸಕ್ಕೆ ಸಿಲುಕಿದ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಸಾರ್ವಜನಿಕರು ಆತಂಕಗೊಂಡಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮರ ಬಿದ್ದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು; ನಂತರ ಸ್ಥಳೀಯರ ಸಹಾಯದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ರಸ್ತೆಯ ಅಕ್ಕಪಕ್ಕದಲ್ಲಿ ಒಣಗಿರುವ ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ಹಲವು ಮರಗಳಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.