ಪಟ್ಟಣದ ರೋಟರಿ ಶಾಲೆ ಆವರಣದಲ್ಲಿ ಇಂಜಿನಿಯರ್ಸ್ ದಿನಾಚರಣೆ. ಇಂಜೀನಿಯರ್ ದಂಪತಿಗಳಿಗೆ ಸನ್ಮಾನ ಮಳವಳ್ಳಿ ಪಟ್ಟಣದ ರೋಟರಿ ಶಾಲೆ ಹಾಗೂ ತಾಲೂಕಿನ ದೊಡ್ಡಬೂಹಳ್ಳಿ ಮತ್ತು ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವ ರಯ್ಯ ಜನ್ಮದಿನದ ಅಂಗವಾಗಿ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ರೋಟರಿ ಸಂಸ್ಥೆ ವತಿಯಿಂದ ಆಯೋಜಿಸ ಲಾಗಿತ್ತು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಪಟ್ಟಣದ ರೋಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿ ಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಪತಿಗಳು, ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರೋಟರಿ ಸಂಸ್ಥೆ ಕಾರ್ಯದರ್ಶಿ ಆರ್.ಜಿ.ಮಹದೇವಸ್ವಾಮಿ ಅವರು ವಿಶ್ವ ಓಝೋನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿ ಹೊಂದಿರಬೇಕು ಎಂದು ತಿಳಿಸಿದರು. ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲೂ ರೋಟರಿ ಸಂಸ್ಥೆ ವತಿಯಿಂದ ಎಂಜಿನಿ ಯರ್ಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಎಂಜಿನಿಯರ್ ನರಸಿಂಹಮೂರ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನರಸಿಂಹಮೂರ್ತಿ ಅವರು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದೊಡ್ಡಬೂಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಾಗೇಂದ್ರ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಹಿತಿಯನ್ನು ಎಂಜಿನಿಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರುಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಘನಶ್ಯಾಮ್ ದಾಸ್, ಆರ್.ಜಿ.ಮಹದೇವ ಸ್ವಾಮಿ, ಎಂ.ವಿ.ಸೋಮ ಶೇಖರ್, ಹರೀಶ್ ಸೇರಿದಂತೆ ಇತರ ಗಣ್ಯರು, ಶಿಕ್ಷಕರು ಉಪಸ್ಥಿತರಿದ್ದರು.
ಪಟ್ಟಣದ ರೋಟರಿ ಶಾಲೆ ಆವರಣದಲ್ಲಿ ಇಂಜಿನಿಯರ್ಸ್ ದಿನಾಚರಣೆ. ಇಂಜೀನಿಯರ್ ದಂಪತಿಗಳಿಗೆ ಸನ್ಮಾನ ಮಳವಳ್ಳಿ ಪಟ್ಟಣದ ರೋಟರಿ ಶಾಲೆ ಹಾಗೂ ತಾಲೂಕಿನ ದೊಡ್ಡಬೂಹಳ್ಳಿ ಮತ್ತು ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವ ರಯ್ಯ ಜನ್ಮದಿನದ ಅಂಗವಾಗಿ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ರೋಟರಿ ಸಂಸ್ಥೆ ವತಿಯಿಂದ ಆಯೋಜಿಸ ಲಾಗಿತ್ತು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಪಟ್ಟಣದ ರೋಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿ ಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಪತಿಗಳು, ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರೋಟರಿ ಸಂಸ್ಥೆ ಕಾರ್ಯದರ್ಶಿ ಆರ್.ಜಿ.ಮಹದೇವಸ್ವಾಮಿ ಅವರು ವಿಶ್ವ ಓಝೋನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿ ಹೊಂದಿರಬೇಕು ಎಂದು ತಿಳಿಸಿದರು. ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲೂ ರೋಟರಿ ಸಂಸ್ಥೆ ವತಿಯಿಂದ ಎಂಜಿನಿ ಯರ್ಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಎಂಜಿನಿಯರ್ ನರಸಿಂಹಮೂರ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನರಸಿಂಹಮೂರ್ತಿ ಅವರು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದೊಡ್ಡಬೂಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಾಗೇಂದ್ರ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಹಿತಿಯನ್ನು ಎಂಜಿನಿಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರುಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಘನಶ್ಯಾಮ್ ದಾಸ್, ಆರ್.ಜಿ.ಮಹದೇವ ಸ್ವಾಮಿ, ಎಂ.ವಿ.ಸೋಮ ಶೇಖರ್, ಹರೀಶ್ ಸೇರಿದಂತೆ ಇತರ ಗಣ್ಯರು, ಶಿಕ್ಷಕರು ಉಪಸ್ಥಿತರಿದ್ದರು.
- ಪಟ್ಟಣದ ರೋಟರಿ ಶಾಲೆ ಆವರಣದಲ್ಲಿ ಇಂಜಿನಿಯರ್ಸ್ ದಿನಾಚರಣೆ. ಇಂಜೀನಿಯರ್ ದಂಪತಿಗಳಿಗೆ ಸನ್ಮಾನ ಮಳವಳ್ಳಿ ಪಟ್ಟಣದ ರೋಟರಿ ಶಾಲೆ ಹಾಗೂ ತಾಲೂಕಿನ ದೊಡ್ಡಬೂಹಳ್ಳಿ ಮತ್ತು ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವ ರಯ್ಯ ಜನ್ಮದಿನದ ಅಂಗವಾಗಿ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ರೋಟರಿ ಸಂಸ್ಥೆ ವತಿಯಿಂದ ಆಯೋಜಿಸ ಲಾಗಿತ್ತು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಪಟ್ಟಣದ ರೋಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿ ಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಪತಿಗಳು, ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರೋಟರಿ ಸಂಸ್ಥೆ ಕಾರ್ಯದರ್ಶಿ ಆರ್.ಜಿ.ಮಹದೇವಸ್ವಾಮಿ ಅವರು ವಿಶ್ವ ಓಝೋನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿ ಹೊಂದಿರಬೇಕು ಎಂದು ತಿಳಿಸಿದರು. ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲೂ ರೋಟರಿ ಸಂಸ್ಥೆ ವತಿಯಿಂದ ಎಂಜಿನಿ ಯರ್ಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಎಂಜಿನಿಯರ್ ನರಸಿಂಹಮೂರ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನರಸಿಂಹಮೂರ್ತಿ ಅವರು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದೊಡ್ಡಬೂಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಾಗೇಂದ್ರ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಹಿತಿಯನ್ನು ಎಂಜಿನಿಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರುಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಘನಶ್ಯಾಮ್ ದಾಸ್, ಆರ್.ಜಿ.ಮಹದೇವ ಸ್ವಾಮಿ, ಎಂ.ವಿ.ಸೋಮ ಶೇಖರ್, ಹರೀಶ್ ಸೇರಿದಂತೆ ಇತರ ಗಣ್ಯರು, ಶಿಕ್ಷಕರು ಉಪಸ್ಥಿತರಿದ್ದರು.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಸೆ.20ರಂದು ಭಾರತೀ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ರಾಮನಗರ : ನಗರದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ದಿ ಭಾರತೀ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸರ್ವ ಸದಸ್ಯರ ಸಭೆ ಸೆ.20ರ ಭಾನುವಾರ ವಿವೇಕಾನಂದನಗರ, ಬಿ.ಎಂ. ರಸ್ತೆಯಲ್ಲಿರುವ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು. ನಗರದ ಸೊಸೈಟಿ ಕಚೇರಿ ಆವರಣದಲ್ಲಿ ಗುರುವಾರ ಆಡಳಿತ ಮಂಡಳಿ ಸದಸ್ಯರ ಜೊತೆ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬಿ.ಎಲ್. ಲಕ್ಕೇಗೌಡರು ಸಂಸ್ಥಾಪಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಕಳೆದ 28 ವರ್ಷಗಳಿಂದ ಸೊಸೈಟಿ ಉತ್ತಮವಾಗಿ ಲಾಭದಲ್ಲಿ ನಡೆಯುತ್ತಾ ಬಂದಿದೆ. ತಾಲ್ಲೂಕಿನಲ್ಲಿ ಜನರ ಸೇವೆ ಮಾಡುತ್ತಾ ಬಂದಿದೆ. 4779 ಸದಸ್ಯರು ಸಂಘದಲ್ಲಿದ್ದು 2025-26ನೇ ಸಾಲಿನಲ್ಲಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳ ಉತ್ತಮ ಸಹಕಾರದಿಂದ 44,373,35 ರೂ. ಲಾಭಗಳಿಸಿದೆ. ವಾರ್ಷಿಕವಾಗಿ 41 ಕೋಟಿ ರೂ. ವಹಿವಾಟು ಮಾಡಲಾಗುತ್ತಿದೆ. ಶೇ.12 ರಷ್ಟು ಬಡ್ಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ 33 ಲಕ್ಷ ಸಾಲ ನೀಡಲಾಗಿದೆ ಎಂದರು. ಷೇರು ಬಂಡವಾಳ ಒಂದು ಕೋಟಿ 38 ಲಕ್ಷ ಇದೆ. ವಾರ್ಷಿಕ ಶೇ.10 ರ ಬಡ್ಡಿದರದಲ್ಲಿ ಆಭರಣ ಸಾಲ ನೀಡಲಾಗುತ್ತಿದೆ. ನಮ್ಮಲ್ಲಿ ಠೇವಣ ಸೌಲಭ್ಯ ಸಹ ಇದೆ. ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜೊತೆಯಲ್ಲಿ 2 ಸಾವಿರ ರೂ.ಗಳ ಕೈ ಗಡಿಯಾರ ನೀಡಲಾಗುತ್ತಿದೆ. ಜೊತೆಗೆ ಸದಸ್ಯರ ಮರಣೋತ್ತರವಾಗಿ ನಾಮಿನಿ ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡಲಾಗುತ್ತಿದೆ ಎಂದು ಹೇಳಿದರು. ಸದಸ್ಯರು ಸೆ.20ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿವೇಕಾನಂದನಗರದ ರಾಯಲ್ ಕನ್‌ವೆನ್‌ಷನ್ ಹಾಲ್‌ನಲ್ಲಿ ನಡೆಯುವ ಸಭೆಗೆ ಆಗಮಿಸಿ ಸೊಸೈಟಿ ಮತ್ತಷ್ಟು ಎತ್ತರಕ್ಕೆ ಬೆಳೆದು ಇನ್ನಷ್ಟು ಜನ ಸೇವೆಗೆ ಮುಂದಾಗುವ ದೃಷ್ಟಿಯಿಂದ ಸಲಹೆ ಸಹಕಾರ ನೀಡಬೇಕು ಎಂದರು. ಇದೇ ವೇಳೆ ಸೊಸೈಟಿಯ 2025-26ನೇ ಸಾಲಿನ ಆಹ್ವಾನ ಪತ್ರಿಕೆ ಮತ್ತು ಆಡಿಟ್ ವರದಿ ಲಾಭಾಂಶದ ವಿವರದ ಪುಸ್ತಕ ಬಿಡುಗಡೆ ಮಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಸಿ. ಸೋಮೇಗೌಡ, ನಿರ್ದೇಶಕರಾದ ಕೆ.ಪಿ.ಉಮೇಶ್, ದೊರೆಸ್ವಾಮಿ, ಜಿ.ಎಲ್.ಆಂಜನೇಯ, ಎಂ.ಶಿವಲಿಂಗಯ್ಯ, ಎ.ಆರ್.ಚಂದ್ರಶೇಖರ್, ಹೆಚ್.ಕೆ.ರುಕ್ಮಿಣ , ಎಸ್.ಕೃಷ್ಣಪ್ಪ ಮುಖ್ಯ ಕಾರ್ಯನಿರ್ವಹಕ ಬಿ.ಎಸ್.ಸುರೇಶ್ ಇದ್ದರು.1
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- All About,Day Dreamers who are Yet to Come out of Sleep but wanted to become famous overnight by spreading selfish propaganda *ಭಾರತ ನಲ್ಲಿ ವೈರಲ್*1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.1