logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಜನರ ಧ್ವನಿ ಡಿಜಿಟಲ್ ಮೀಡಿಯಾ ನ್ಯೂಸ್ ❤️❤️❤️❤️❤️❤️❤️❤️❤️ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ 🟥🟥🟥🟥🟥🟥🟥🟥🟥 ಮುದ್ದೇಬಿಹಾಳ: ಪಟ್ಟಣದ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹಲವು ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸುಮಾರು 400 ಮೀಟರ್ ಓಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಿದರು. ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರವೂ ಪ್ರಮುಖವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ.

7 hrs ago
user_Ameensab Mulla
Ameensab Mulla
ಝರಾಕ್ಸ ಅಂಗಡಿ ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
7 hrs ago
4c95d7de-836f-425d-a73d-4cb4ffd3e19a

ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಜನರ ಧ್ವನಿ ಡಿಜಿಟಲ್ ಮೀಡಿಯಾ ನ್ಯೂಸ್ ❤️❤️❤️❤️❤️❤️❤️❤️❤️ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ 🟥🟥🟥🟥🟥🟥🟥🟥🟥 ಮುದ್ದೇಬಿಹಾಳ: ಪಟ್ಟಣದ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಸವ ಬಾಲ ಭಾರತೀ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಹಲವು ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸುಮಾರು 400 ಮೀಟರ್ ಓಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಿದರು. ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರವೂ ಪ್ರಮುಖವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ.

More news from ಕರ್ನಾಟಕ and nearby areas
  • ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ತಾಳಿಕೋಟಿ ವರದಿ ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಟ್ಟಿದೆ. ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಧರಣಿ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಅವರಿಗೆ ಬಿಸಿಲಿನ ತಾಪದಿಂದ ತಲೆ ಸುತ್ತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ರೈತ ಮುಖಂಡರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ಬಳಿಕ ಅರವಿಂದ ಕುಲಕರ್ಣಿ ಅವರು ಚೇತರಿಸಿಕೊಂಡಿದ್ದು, ಧರಣಿ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯ ಬರಗಾಲ ಘೋಷಣೆಯಿಂದ ಹೊರಗುಳಿದಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಎಂದು ರೈತ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ್ ಕುಲಕರ್ಣಿ, ಉಮೇಶ್ ವಾಲಿಕಾರ್, ಬಾಲಪ್ಪ ಗೌಡ ಲಿಂಗದಳ್ಳಿ ವಿಟ್ಟಲ್ ಬಿರಾದರ್, ಮಲ್ಲನಗೌಡ ಹಗರಟಿಗಿ, ಗುರುನಾಥ್ ರೆಡ್ಡಿ, ಪವಿತ್ರ ಬಡಿಗೇರ್, ಸಾವಿತ್ರಿ ಪಂದಗನೂರ್, ಬಸ್ಸು ಮಾಲಿ ಪಾಟೀಲ್, ಗುರುಲಿಂಗಪ್ಪ ಪಡಸಲಗಿ, ಮುತ್ತು ಗೌಡ ಪರ್ಸನಳ್ಳಿ, ರಾಜು ಗೌಡ ಆನಂದ್ ರೆಡ್ಡಿ, ಶಿವಶರಣಪ್ಪ ಸಾಹುಕಾರ್ ಇನ್ನು ಅನೇಕ ರೈತ ಮುಖಂಡರು ಭಾಗಿಯಾಗಿದ್ದರು
    1
    ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು.

14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ.
ತಾಳಿಕೋಟಿ ವರದಿ 
ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು.
14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ.
ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಟ್ಟಿದೆ.
ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಧರಣಿ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಅವರಿಗೆ ಬಿಸಿಲಿನ ತಾಪದಿಂದ ತಲೆ ಸುತ್ತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ನಡೆದಿದೆ.
ತಕ್ಷಣ ಸ್ಥಳದಲ್ಲಿದ್ದ ರೈತ ಮುಖಂಡರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ.
ಚಿಕಿತ್ಸೆಯ ಬಳಿಕ ಅರವಿಂದ ಕುಲಕರ್ಣಿ ಅವರು ಚೇತರಿಸಿಕೊಂಡಿದ್ದು, ಧರಣಿ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ, ವಿಜಯಪುರ ಜಿಲ್ಲೆಯ ಬರಗಾಲ ಘೋಷಣೆಯಿಂದ ಹೊರಗುಳಿದಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಎಂದು ರೈತ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ್ ಕುಲಕರ್ಣಿ, ಉಮೇಶ್ ವಾಲಿಕಾರ್, ಬಾಲಪ್ಪ ಗೌಡ ಲಿಂಗದಳ್ಳಿ ವಿಟ್ಟಲ್ ಬಿರಾದರ್, ಮಲ್ಲನಗೌಡ ಹಗರಟಿಗಿ, ಗುರುನಾಥ್ ರೆಡ್ಡಿ, ಪವಿತ್ರ ಬಡಿಗೇರ್, ಸಾವಿತ್ರಿ ಪಂದಗನೂರ್, ಬಸ್ಸು ಮಾಲಿ ಪಾಟೀಲ್, ಗುರುಲಿಂಗಪ್ಪ ಪಡಸಲಗಿ, ಮುತ್ತು ಗೌಡ ಪರ್ಸನಳ್ಳಿ, ರಾಜು ಗೌಡ ಆನಂದ್ ರೆಡ್ಡಿ, ಶಿವಶರಣಪ್ಪ ಸಾಹುಕಾರ್ ಇನ್ನು ಅನೇಕ ರೈತ ಮುಖಂಡರು ಭಾಗಿಯಾಗಿದ್ದರು
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    1 hr ago
  • ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ  ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. 
ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ  ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್
ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ  ಹಾಗೂ   ಅವರ ಹುಟ್ಟು ಹಬ್ಬದ ಅಂಗವಾಗಿ  ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ  ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ  ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. 
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆಗೆ ಯುವ ಕಾಂಗ್ರೆಸ್ ಒತ್ತಾಯ ಲಿಂಗಸುಗೂರು, ಸೆ.17: ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕರೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಅಗತ್ಯ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಯುವಕರ ಭವಿಷ್ಯದ ದೃಷ್ಟಿಯಿಂದ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖದೀರ ಪಾನವಾಲೆ, ಮಾಜಿ ಅಧ್ಯಕ್ಷರಾದ ಕುಪ್ಪಣ್ಣ ಕೌತಾಳ, ವಾಸಿಮ್ ಪಾಶಾ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    2
    ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆಗೆ ಯುವ ಕಾಂಗ್ರೆಸ್ ಒತ್ತಾಯ
ಲಿಂಗಸುಗೂರು, ಸೆ.17: ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ ಒತ್ತಾಯಿಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕರೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಅಗತ್ಯ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಯುವಕರ ಭವಿಷ್ಯದ ದೃಷ್ಟಿಯಿಂದ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖದೀರ ಪಾನವಾಲೆ, ಮಾಜಿ ಅಧ್ಯಕ್ಷರಾದ ಕುಪ್ಪಣ್ಣ ಕೌತಾಳ, ವಾಸಿಮ್ ಪಾಶಾ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    user_Amarayya Ghanti
    Amarayya Ghanti
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    3 hrs ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ  8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ
ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. 

ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು  ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    17 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
  • ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ* *ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ* *ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ  ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು. *ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು. *ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು. *ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು. *ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು. *ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
    1
    ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ*

*ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ*

*ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ  ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು.
*ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು.
*ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.
*ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು.
*ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು.
*ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು.
*ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ ನಿಯಮಿತ ಇದರ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ತಾಳಿಕೋಟಿ ವರದಿ ಲಿಂಗದಹಳ್ಳಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಆರಂಭಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶ್ರೀಮತಿ ಸೌಮ್ಯ ಆರ್.ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ ಸಂಘದ ಒಂದು ವರ್ಷದ ಚಟುವಟಿಕೆಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಹಾಜರಿದ್ದ ಶೇರುದಾರರು ಸಂಘದ ಅಭಿವೃದ್ಧಿಗಾಗಿ ಕೆಲವು ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಅಧ್ಯಕ್ಷತೆ ವಹಿಸಿದ ಬಸನಗೌಡ ಬಸರಕೋಡ ಅವರು ಮಾತನಾಡಿ ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು. ಶಿಕ್ಷಕ ಅಪ್ಪಸಾಹೇಬಗೌಡ ಮೂಲಿಮನಿ ಕಾರ್ಯಕ್ರಮವನ್ನು ಸುಂದರವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ , ಗಂಗಮ್ಮ ನಾಡಗೌಡ ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ,ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
    1
    ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ ನಿಯಮಿತ ಇದರ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು.
ತಾಳಿಕೋಟಿ ವರದಿ 
ಲಿಂಗದಹಳ್ಳಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ.
ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಆರಂಭಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶ್ರೀಮತಿ ಸೌಮ್ಯ ಆರ್.ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ ಸಂಘದ ಒಂದು ವರ್ಷದ ಚಟುವಟಿಕೆಗಳನ್ನು ಸಭೆಯ ಮುಂದಿಟ್ಟರು.
ಸಭೆಯಲ್ಲಿ ಹಾಜರಿದ್ದ ಶೇರುದಾರರು ಸಂಘದ ಅಭಿವೃದ್ಧಿಗಾಗಿ ಕೆಲವು ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ ಬಸನಗೌಡ ಬಸರಕೋಡ ಅವರು ಮಾತನಾಡಿ ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು. 
ಶಿಕ್ಷಕ ಅಪ್ಪಸಾಹೇಬಗೌಡ  ಮೂಲಿಮನಿ ಕಾರ್ಯಕ್ರಮವನ್ನು ಸುಂದರವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ , ಗಂಗಮ್ಮ ನಾಡಗೌಡ ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ,ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.