Shuru
Apke Nagar Ki App…
KOLAR KI.AWAAZ KOUSAR NEWS
KOLAR KI.AWAAZ KOUSAR NEWS
KOLAR KI.AWAAZ KOUSAR NEWS
More news from ಕರ್ನಾಟಕ and nearby areas
- ಶಿಡ್ಲಘಟ್ಟ ವಾಯ್ಸ್ ಓವರ್ ಜಗಜ್ಯೋತಿ ಶ್ರೀ ಕ್ರಾಂತಿಕಾರಿ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ಶಾಸಕ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ ಬಹಳ ಅರ್ಥ ಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರ ಸೇವಾ ಮತ್ತು ಅಭಿವೃದ್ಧಿ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವಿಷುಯಲ್ ಪ್ಲೋ ವಾಯ್ಸ್ ಓವರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬಿ ಎನ್ ರವಿಕುಮಾರ್ ಬಸವಣ್ಣನ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ೧೨ನೇ ಶತಮಾನದಲ್ಲಿ ದೇಶಕ್ಕಾಗಿ ಹೋರಾಡಿದ ಬಸವಣ್ಣನವರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶ. ಮುಖ್ಯವಾಗಿ ಜನಪ್ರತಿನಿಧಿಗಳು ಬಸವಣ್ಣನವರ ತತ್ವಸಿಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬೈಟ್ : ಶಾಸಕ ರವಿಕುಮಾರ್ ವಾಯ್ಸ್ ಓವರ್ ಇನ್ನೂ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಸಿಂಚನ ಸಿ ಶೇಖರ್ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತ ಬಸವಣ್ಣನವರ ಜೀವನ ಚರಿತ್ರೆಯನ್ನು ಸ್ಮರಿಸಿದರು, ಅವರು ನಡೆದು ಬಂದ ಹಾದಿ ಅವರ ಸಾಧನೆಗಳನ್ನು ಕುರಿತು ತಿಳಿಸಿಕೊಟ್ಟರು. ಬೈಟ್ ವಿದ್ಯಾಥಿನಿ : ಸಿಂಚನ ಸಿ ಶೇಖರ್ ವಾಯ್ಸ್.ಓವರ್ ಕಾರ್ಯಕ್ರಮದಲ್ಲಿ ಶಾಸಕ ಬಿ ಎನ್ ರವಿಕುಮಾರ್, ತಹಶೀಲ್ದಾರ ಗಗನಸಿಂಧು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಹೇಮಾವತಿ, ಸೇರಿದಂತೆ ಬಸವೇಶ್ವರ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.1
- Post by Venu Gopal2
- ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ1
- Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.1
- ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.1
- ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾನ ವ್ಯಕ್ತ ಪಡಿಸಿದ್ದಾರೆ.2
- Post by Venu Gopal2
- ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಲಾರಿ ಡಿಕ್ಕಿ ಚಾಲಕ-ಕಂಡಕ್ಟರ್ ಗಾಯ, ರಕ್ಷಣಾ ಕಾರ್ಯಾಚರಣೆ1
- “ಸೇವೆಯೇ ನಿಜವಾದ ಗೌರವ”: ಮಹದೇವಪ್ಪ ಜನ್ಮದಿನದಲ್ಲಿ ಅಪ್ಪಟ್ಟ ಅಭಿಮಾನಿ ಗುರುದೇವ್ ಸಂದೇಶ1