logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಕ್ಫ್ ಬೋರ್ಡ್‌ನ ಅಕ್ರಮ-ಅನ್ಯಾಯ ಸರಿಪಡಿಸಲು ಮುಸ್ಲಿಮರು ಒಗ್ಗಟ್ಟಾಗಲಿ: ಮುಜಾಹಿದ್ ಅಲಿ ಬಾಬ *ವಕ್ಫ್ ಬೋರ್ಡ್‌ನ ಅಕ್ರಮ-ಅನ್ಯಾಯ ಸರಿಪಡಿಸಲು ಮುಸ್ಲಿಮರು ಒಗ್ಗಟ್ಟಾಗಲಿ: ಮುಜಾಹಿದ್ ಅಲಿ ಬಾಬ* ಚಿತ್ರದುರ್ಗ, ಸೆಪ್ಟೆಂಬರ್. 15 : ವಕ್ಫ್ ಬೋರ್ಡ್‍ನಲ್ಲಾಗುತ್ತಿರುವ ಅಕ್ರಮ ಹಾಗೂ ಅನ್ಯಾಯಗಳನ್ನು ಸರಿಪಡಿಸಬೇಕಾದರೆ ಮೊದಲು ಎಲ್ಲರೂ ಒಂದಾಗಬೇಕೆಂದು ಸದಾ-ಎ-ಇತ್ತೆಹಾದ್ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷರಾದ ಅಲಿ ಜನಾಬ್ ಮುಜಾಹಿದ್ ಅಲಿ ಬಾಬ ಕರೆ ನೀಡಿದರು. ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಶಾಖೆ ಸ್ಥಾಪಿಸುವ ಹಾಗೂ ಜಿಲ್ಲಾ ವಕ್ಫ್ ಬೋರ್ಡ್ ವ್ಯಾಪಿಗೆ ಒಳಪಡುವ ಸಂಸ್ಥೆಗಳಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಬೇಕಾಗಿದೆ. ಹದಿನಾರು ವರ್ಷಗಳ ಹಳೆ ಸಂಘಟನೆ ನಮ್ಮದು. ಎಲ್ಲರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶ. ನಮ್ಮೂರಲ್ಲಿ ಆಗುತ್ತಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನಿರಬಾರದು. ಒಳ ಪಂಗಡಗಳನ್ನು ಮರೆತು ಎಲ್ಲರೂ ಒಂದಾಗುವತನಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗುವುದಿಲ್ಲ. ಶಿಯಾ, ಸುನ್ನಿ ಅಂತ ಒಡಕು ಮೂಡಿಸಿ ರಾಜಕೀಯವಾಗಿ ನಮ್ಮನ್ನ ಆಟ ಆಡಿಸುತ್ತಿದ್ದಾರೆ. ಇದರ ವಿರುದ್ದ ಮುಸಲ್ಮಾನರು ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು. ಟು ಬಿ. ಮೀಸಲಾತಿಯನ್ನು ತೆಗೆದು ಹಾಕಿದ್ದಲ್ಲದೆ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದ್ದು, ಬಿಜೆಪಿ. ಸಚಿವ ಜಮೀರ್ ಅಹಮದ್ ಸಿದ್ದರಾಮಯ್ಯನವರ ಜೊತೆಯಲ್ಲಿ ಸೇರಿಕೊಂಡು ಯಾರದ್ದು ನಡೆಯದಂತೆ ಮಾಡಿದ. ಮುಸಲ್ಮಾನರನ್ನು ವಿಭಜಿಸಿ ಕತಮ್ ಮಾಡಲು ಹೊರಟಿದ್ದಾರೆ. ಯು.ಟಿ.ಖಾದರ್ ಜೊತೆ ಸೇರಿಕೊಂಡಿರುವ ಜಿಲಾನಿ ಮುರಾಶಿಯನ್ನು ಮೊದಲು ತೆಗೆದು ಹಾಕಬೇಕು. ವಕ್ಫ್ ಮಂಡಳಿಗೆ ಕಮಿಟಿ ಮಾಡಿದಾಗ ಮಾತ್ರ ನಿಮಗೆಲ್ಲಾ ತಾಕತ್ತು ಬರುತ್ತದೆ. ಅಲ್ಲಿಯವರೆಗೂ ಮುಸಲ್ಮಾನರು ಅನ್ಯಾಯ ಅಕ್ರಮವನ್ನು ಖಂಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಸೈಯದ್ ಇಸ್ಮಾಯಿಲ್ ಮಾತನಾಡಿ ಟು ಬಿ.ಮೀಸಲಾತಿಯನ್ನು ತೆಗೆದು ಹಾಕಿ ಬಿಜೆಪಿ. ಸರ್ಕಾರ ಮುಸ್ಲಿಂರಿಗೆ ಘನ ಘೋರ ಅನ್ಯಾಯವೆಸಗಿದೆ. ಮತ್ತೆ ಟು ಬಿ.ಗಾಗಿ ಹೋರಾಟ ನಡೆಸಬೇಕಿದೆ. ಇಲ್ಲವಾದಲ್ಲಿ ಮುಸಲ್ಮಾನರು ಅಸ್ತಿತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದರ ಬಗ್ಗೆ ಗಮನ ಹರಿಸಿ ಎಂದು ಮುಜಾಹಿದ್ ಅಲಿಬಾಬರವರಲ್ಲಿ ಮನವಿ ಮಾಡಿದರು. ಸೈಯದ್ ಅಫಾಖ್ ಅಹಮದ್ ಮಾತನಾಡುತ್ತ ಒಂದು ವರ್ಷದಿಂದ ಜಿಲ್ಲಾ ವಕ್ಫ್ ಬೋರ್ಡ್ ಛೇರ್ಮನ್ ಹುದ್ದೆ ಖಾಲಿಯಿದೆ. ವಕ್ಫ್ ಮಂಡಳಿಯಿಂದ ಬರುವ ಆದಾಯದಲ್ಲಿ ಶೇ.30 ರಷ್ಟು ಹಣವನ್ನು ಬಡವರು, ವಿಧವೆಯರು ಹಾಗೂ ಬಡ ಮಕ್ಕಳ ನೆರವಿಗೆ ಉಪಯೋಗಿಸಬೇಕು. ವಕ್ಫ್ ಬೋರ್ಡ್‍ನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಎಲ್ಲವೂ ಬಗೆಹರಿಯಬೇಕಾಗಿರುವುದರಿಂದ ಸಚಿವ ಯು.ಟಿ.ಖಾದರ್ ಜೊತೆ ಚರ್ಚಿಸುವಂತೆ ಮುಜಾಹಿದ್ ಅಲಿಬಾಬರವರಲ್ಲಿ ವಿನಂತಿಸಿದರು. ಟಿ.ಶಫಿವುಲ್ಲಾ ಮಾತನಾಡುತ್ತ ಭಾರತದ ಎಲ್ಲಾ ಕಡೆ ಮುಸ್ಲಿಂರಿದ್ದಾರೆ. ರಾಜಕೀಯವಾಗಿ ಚಿಂತನೆ ಮಾಡಿದಾಗ ಅಸ್ತಿತ್ವ ಉಳಿಯುತ್ತದೆ. ಮುಸ್ಲಿಂರ ಸ್ಥಿತಿಗತಿ ಬಗ್ಗೆ ಚರ್ಚೆಯಾಗುತ್ತಿಲ್ಲ. ವಕ್ಫ್ ಬೋರ್ಡ್‍ನಲ್ಲಿ ಸಾಲು ಸಾಲು ಸಮಸ್ಯೆಗಳಿದೆ. ಅವುಗಳನ್ನು ಮೊದಲು ಬಗೆಹರಿಸಿ ಎಂದು ಸಭೆಯ ಗಮನಕ್ಕೆ ತಂದರು. ಹೆಚ್.ಪ್ಯಾರೆಜಾನ್ ಮಾತನಾಡಿ ಜಿಲ್ಲೆಯಲ್ಲಿ ಎರಡು ಲಕ್ಷ ಅಲ್ಪಸಂಖ್ಯಾತ ಮತಗಳಿವೆ. ಚಿತ್ರದುರ್ಗದಲ್ಲಿ 75 ಸಾವಿರ ಮುಸ್ಲಿಂ ಮತಗಳಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೇರಿದ 130 ಇಲಾಖೆಗಳಲ್ಲಿ ಯಾವ್ಯಾವ ಸೌಲಭ್ಯಗಳಿದೆ ಎನ್ನುವುದನ್ನು ಅಲ್ಪಸಂಖ್ಯಾತರಿಗೆ ತಿಳಿಸಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಕೊಡಿಸಬೇಕೆಂದು ವಿನಂತಿಸಿದರು. ಸಂಘಟನೆಯ ಅಧ್ಯಕ್ಷ ಅಲಿವುಲ್ ಹುಸೇನಿಸಾಬ್, ಎಸ್.ಆರ್.ಇ.ಹತಾವುಲ್ಲಾ, ಜಬಿ, ಮನ್ಸೂರ್, ಎ.ಜಾಕೀರ್‍ಹುಸೇನ್, ಸೈಯದ್ ಮೊಹಿದ್ದೀನ್, ಇನ್ನು ಅನೇಕ ಮುಸ್ಲಿಂ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದ್ದರು.

1 hr ago
user_ರಾಜಶೇಖರ್ GT
ರಾಜಶೇಖರ್ GT
ಕೂಡ್ಲಿಗಿ, ವಿಜಯನಗರ, ಕರ್ನಾಟಕ•
1 hr ago
f73f822e-62a1-4d08-a0f2-d409044a45cd

ವಕ್ಫ್ ಬೋರ್ಡ್‌ನ ಅಕ್ರಮ-ಅನ್ಯಾಯ ಸರಿಪಡಿಸಲು ಮುಸ್ಲಿಮರು ಒಗ್ಗಟ್ಟಾಗಲಿ: ಮುಜಾಹಿದ್ ಅಲಿ ಬಾಬ *ವಕ್ಫ್ ಬೋರ್ಡ್‌ನ ಅಕ್ರಮ-ಅನ್ಯಾಯ ಸರಿಪಡಿಸಲು ಮುಸ್ಲಿಮರು ಒಗ್ಗಟ್ಟಾಗಲಿ: ಮುಜಾಹಿದ್ ಅಲಿ ಬಾಬ* ಚಿತ್ರದುರ್ಗ, ಸೆಪ್ಟೆಂಬರ್. 15 : ವಕ್ಫ್ ಬೋರ್ಡ್‍ನಲ್ಲಾಗುತ್ತಿರುವ ಅಕ್ರಮ ಹಾಗೂ ಅನ್ಯಾಯಗಳನ್ನು ಸರಿಪಡಿಸಬೇಕಾದರೆ ಮೊದಲು ಎಲ್ಲರೂ ಒಂದಾಗಬೇಕೆಂದು ಸದಾ-ಎ-ಇತ್ತೆಹಾದ್ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷರಾದ ಅಲಿ ಜನಾಬ್ ಮುಜಾಹಿದ್ ಅಲಿ ಬಾಬ ಕರೆ ನೀಡಿದರು. ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಶಾಖೆ ಸ್ಥಾಪಿಸುವ ಹಾಗೂ ಜಿಲ್ಲಾ ವಕ್ಫ್ ಬೋರ್ಡ್ ವ್ಯಾಪಿಗೆ ಒಳಪಡುವ ಸಂಸ್ಥೆಗಳಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಬೇಕಾಗಿದೆ. ಹದಿನಾರು ವರ್ಷಗಳ ಹಳೆ ಸಂಘಟನೆ ನಮ್ಮದು. ಎಲ್ಲರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶ. ನಮ್ಮೂರಲ್ಲಿ ಆಗುತ್ತಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನಿರಬಾರದು. ಒಳ ಪಂಗಡಗಳನ್ನು ಮರೆತು ಎಲ್ಲರೂ ಒಂದಾಗುವತನಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗುವುದಿಲ್ಲ. ಶಿಯಾ, ಸುನ್ನಿ ಅಂತ ಒಡಕು ಮೂಡಿಸಿ ರಾಜಕೀಯವಾಗಿ ನಮ್ಮನ್ನ ಆಟ ಆಡಿಸುತ್ತಿದ್ದಾರೆ. ಇದರ ವಿರುದ್ದ ಮುಸಲ್ಮಾನರು ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು. ಟು ಬಿ. ಮೀಸಲಾತಿಯನ್ನು ತೆಗೆದು ಹಾಕಿದ್ದಲ್ಲದೆ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದ್ದು, ಬಿಜೆಪಿ. ಸಚಿವ ಜಮೀರ್ ಅಹಮದ್ ಸಿದ್ದರಾಮಯ್ಯನವರ ಜೊತೆಯಲ್ಲಿ ಸೇರಿಕೊಂಡು ಯಾರದ್ದು ನಡೆಯದಂತೆ ಮಾಡಿದ. ಮುಸಲ್ಮಾನರನ್ನು ವಿಭಜಿಸಿ ಕತಮ್ ಮಾಡಲು ಹೊರಟಿದ್ದಾರೆ. ಯು.ಟಿ.ಖಾದರ್ ಜೊತೆ ಸೇರಿಕೊಂಡಿರುವ ಜಿಲಾನಿ ಮುರಾಶಿಯನ್ನು ಮೊದಲು ತೆಗೆದು ಹಾಕಬೇಕು. ವಕ್ಫ್ ಮಂಡಳಿಗೆ ಕಮಿಟಿ ಮಾಡಿದಾಗ ಮಾತ್ರ ನಿಮಗೆಲ್ಲಾ ತಾಕತ್ತು ಬರುತ್ತದೆ. ಅಲ್ಲಿಯವರೆಗೂ ಮುಸಲ್ಮಾನರು ಅನ್ಯಾಯ ಅಕ್ರಮವನ್ನು ಖಂಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಸೈಯದ್ ಇಸ್ಮಾಯಿಲ್ ಮಾತನಾಡಿ ಟು ಬಿ.ಮೀಸಲಾತಿಯನ್ನು ತೆಗೆದು ಹಾಕಿ ಬಿಜೆಪಿ. ಸರ್ಕಾರ ಮುಸ್ಲಿಂರಿಗೆ ಘನ ಘೋರ ಅನ್ಯಾಯವೆಸಗಿದೆ. ಮತ್ತೆ ಟು ಬಿ.ಗಾಗಿ ಹೋರಾಟ ನಡೆಸಬೇಕಿದೆ. ಇಲ್ಲವಾದಲ್ಲಿ ಮುಸಲ್ಮಾನರು ಅಸ್ತಿತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದರ ಬಗ್ಗೆ ಗಮನ ಹರಿಸಿ ಎಂದು ಮುಜಾಹಿದ್ ಅಲಿಬಾಬರವರಲ್ಲಿ ಮನವಿ ಮಾಡಿದರು. ಸೈಯದ್ ಅಫಾಖ್ ಅಹಮದ್ ಮಾತನಾಡುತ್ತ ಒಂದು ವರ್ಷದಿಂದ ಜಿಲ್ಲಾ ವಕ್ಫ್ ಬೋರ್ಡ್ ಛೇರ್ಮನ್ ಹುದ್ದೆ ಖಾಲಿಯಿದೆ. ವಕ್ಫ್ ಮಂಡಳಿಯಿಂದ ಬರುವ ಆದಾಯದಲ್ಲಿ ಶೇ.30 ರಷ್ಟು ಹಣವನ್ನು ಬಡವರು, ವಿಧವೆಯರು ಹಾಗೂ ಬಡ ಮಕ್ಕಳ ನೆರವಿಗೆ ಉಪಯೋಗಿಸಬೇಕು. ವಕ್ಫ್ ಬೋರ್ಡ್‍ನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಎಲ್ಲವೂ ಬಗೆಹರಿಯಬೇಕಾಗಿರುವುದರಿಂದ ಸಚಿವ ಯು.ಟಿ.ಖಾದರ್ ಜೊತೆ ಚರ್ಚಿಸುವಂತೆ ಮುಜಾಹಿದ್ ಅಲಿಬಾಬರವರಲ್ಲಿ ವಿನಂತಿಸಿದರು. ಟಿ.ಶಫಿವುಲ್ಲಾ ಮಾತನಾಡುತ್ತ ಭಾರತದ ಎಲ್ಲಾ ಕಡೆ ಮುಸ್ಲಿಂರಿದ್ದಾರೆ. ರಾಜಕೀಯವಾಗಿ ಚಿಂತನೆ ಮಾಡಿದಾಗ ಅಸ್ತಿತ್ವ ಉಳಿಯುತ್ತದೆ. ಮುಸ್ಲಿಂರ ಸ್ಥಿತಿಗತಿ ಬಗ್ಗೆ ಚರ್ಚೆಯಾಗುತ್ತಿಲ್ಲ. ವಕ್ಫ್ ಬೋರ್ಡ್‍ನಲ್ಲಿ ಸಾಲು ಸಾಲು ಸಮಸ್ಯೆಗಳಿದೆ. ಅವುಗಳನ್ನು ಮೊದಲು ಬಗೆಹರಿಸಿ ಎಂದು ಸಭೆಯ ಗಮನಕ್ಕೆ ತಂದರು. ಹೆಚ್.ಪ್ಯಾರೆಜಾನ್ ಮಾತನಾಡಿ ಜಿಲ್ಲೆಯಲ್ಲಿ ಎರಡು ಲಕ್ಷ ಅಲ್ಪಸಂಖ್ಯಾತ ಮತಗಳಿವೆ. ಚಿತ್ರದುರ್ಗದಲ್ಲಿ 75 ಸಾವಿರ ಮುಸ್ಲಿಂ ಮತಗಳಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೇರಿದ 130 ಇಲಾಖೆಗಳಲ್ಲಿ ಯಾವ್ಯಾವ ಸೌಲಭ್ಯಗಳಿದೆ ಎನ್ನುವುದನ್ನು ಅಲ್ಪಸಂಖ್ಯಾತರಿಗೆ ತಿಳಿಸಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಕೊಡಿಸಬೇಕೆಂದು ವಿನಂತಿಸಿದರು. ಸಂಘಟನೆಯ ಅಧ್ಯಕ್ಷ ಅಲಿವುಲ್ ಹುಸೇನಿಸಾಬ್, ಎಸ್.ಆರ್.ಇ.ಹತಾವುಲ್ಲಾ, ಜಬಿ, ಮನ್ಸೂರ್, ಎ.ಜಾಕೀರ್‍ಹುಸೇನ್, ಸೈಯದ್ ಮೊಹಿದ್ದೀನ್, ಇನ್ನು ಅನೇಕ ಮುಸ್ಲಿಂ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು  ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ  ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು  , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    23 hrs ago
  • ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.
    1
    ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ
.ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ
ಮೊಳಕಾಲ್ಮುರು ಸುದ್ದಿ.
ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು.
ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    6 hrs ago
  • ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ! ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು. 📍 ಬಳ್ಳಾರಿ | ASN News24 ಕನ್ನಡ #BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics
    1
    ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ!
ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು.
📍 ಬಳ್ಳಾರಿ | ASN News24 ಕನ್ನಡ
#BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics
    user_AsnNews24Kannada
    AsnNews24Kannada
    Local News Reporter Ballari, Karnataka•
    1 hr ago
  • ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    1
    ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    1
    ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು
ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ.  ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    2
    ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    9 hrs ago
  • ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ
    1
    ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ
ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು.
ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ.
📍 ಸಂಗನಕಲ್ಲು, ಬಳ್ಳಾರಿ
📅 15-09-2026
ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ.
#Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ
    user_AsnNews24Kannada
    AsnNews24Kannada
    Local News Reporter Ballari, Karnataka•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.