ವಾಣಿಜ್ಯ ಅಂಗಡಿ ಮಳಿಗೆಗಳು ಉದ್ಘಾಟನೆ ಮಾಡಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ತಾಲ್ಲೂಕು ಮಿಟ್ಟೇಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣ ಬಳಿ 20:00 ಲಕ್ಷ ರೂ.ವೆಚ್ಚದಲ್ಲಿ ಮಿಟ್ಟೇಮರಿ ಗ್ರಾಮ ಪಂಚಾಯತಿ ವರ್ಗ-1ರ ಯೋಜನೆಯಡಿ ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಅಂಗಡಿ ಮಳಿಗೆಗಳನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ನೆರವೇರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಲು ಸಹಕರಿಸಿದ ಗ್ರಾಮ ಪಂಚಾಯತಿ ಅದ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಅಭಿನಂದನೆಗಳು ತಿಳಿಸುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಗೆ ಏಳು ವರ್ಷ, 240 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುವ ಮೂಲಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ ಆದ್ದರಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದ ವಿರೋಧಿ ನಿಲುವುಗಳನ್ನು ಸದಾ ಪ್ರತಿಪಾದಿಸಿರುವ ಸಿದ್ದರಾಮಯ್ಯ ಅವರು, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇತ್ತೀಚಿನ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮಾಜಿ ಸಿಎಂ ದಿವಂಗತ ದೇವರಾಜ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತೀಕ್ ಭಾಷಾ,ಇಓ ರಮೇಶ್ ಕುಮಾರ್, ಗ್ರಾಮ ಪಂಚಾಯತಿ ಅದ್ಯಕ್ಷೆ ಸೀತಮ್ಮ ಅಂಜನಪ್ಪ,ಉಪಾಧ್ಯಕ್ಷೆ ಗೌತಮಿ ವಿಜಯಗೋಪಾಲ ರೆಡ್ಡಿ, ಮಾಜಿ ಅಧ್ಯಕ್ಷ ನರಸಿಂಹಯ್ಯ,ಸದಸ್ಯರಾದ ನರಸರೆಡ್ಡಿ,ಮಮತಾ ಎನ್ ಮಂಜುನಾಥ್, ಅಶ್ವಥಮ್ಮ ಕಾಮರೆಡ್ಡಿ,ನಾರಾಯಣ ಸ್ವಾಮಿ, ವೆಂಕಟೇಶ್, ಅಂಜನಮ್ಮ ನಾಗರಾಜು, ಮಂಜುಳಾ ಶ್ರೀನಿವಾಸ್, ವೆಂಕಟರವಣಪ್ಪ,ಅಂಜನಪ್ಪ,ರಾಮಲಕ್ಷ್ಮಮ್ಮ,ಪಿ.ಡಿ.ಓ ಡಿ.ಎಂ.ವೆಂಕಟೇಶಪ್ಪ, ಗುತ್ತಿಗೆದಾರ ನಾಗರಾಜು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಯುವಕರು, ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಉಂಟಾಗಿ, ಪೊಲೀಸ್ ಪೇದೆಯೊಬ್ಬರ ಪುತ್ರನಿಂದ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಖಂಡಿಸಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಡಕಟ್ಟು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೊಬ್ಬರ ಪುತ್ರ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ನುಗ್ಗಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಆದರೆ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಬೇಸತ್ತ ಬುಡಕಟ್ಟು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬುಡಕಟ್ಟು ಕಾರ್ಯದರ್ಶಿ ಮಾದೇಗೌಡ, ಆಧಿವಾಡಿ ಪೋಡುಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ನಮ್ಮ ಅದ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬದವರಿಂದಲೇ ಕಾನೂನು ಉಲ್ಲಂಘನೆ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.1
- *ಭಾರತ ನಲ್ಲಿ ವೈರಲ್*1
- ಸ್ಮಶಾನಕ್ಕೆ ರಸ್ತೆ ಕಲ್ಪಿಸಿ ಕೊಡದಿದ್ದರೆ ಉಗ್ರ ಹೋರಾಟ - ಗ್ರಾಮರಸ್ಥರು ಎಚ್ಚರಿಕೆ. ಹನೂರು: ತಾಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವ ರಸ್ತೆ ತೆರವು ಮಾಡದಿದ್ದರೆ ತಾಲೂಕು ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು. ತಾಲ್ಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಇದೇ ಗ್ರಾಮದ ಲೋಕೇಶ್ ಎಂಬವರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ತಹಶೀಲ್ದಾರ್ ಕೆಎಸ್ ಚೈತ್ರ ರವರ ಸಮ್ಮುಖದಲ್ಲಿ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಂದು ಸರ್ವೆಮಾಡಿದರು. ಆ ಪ್ರಕಾರ ಹಿಂದೆ ಇದ್ದ ರೂಢಿಗತ ದಾರಿಯು ಖಾಸಗಿ ವ್ಯಕ್ತಿಗೆ ಸೇರಿದ ಪಟ್ಟಾ ಭೂಮಿಯಾಗಿದೆ. ಅದರ ಪಕ್ಕದಲ್ಲಿರುವ ಹಳ್ಳದಲ್ಲಿ ನಿಮಗೆ ದಾರಿ ಬಿಡಿಸಬೇಕು ಎಂದು ಭೂಮಾಪನ ಇಲಾಖೆ ಅಧಿಕಾರಿ ನಟರಾಜು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಅರಿತ ತಹಶೀಲ್ದಾರ್ ರವರು ಗ್ರಾಮಸ್ಥರು ಧೃತಿಗೆಡಬೇಡಿ. ನಿಮಗೆ ರಸ್ತೆ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವಾರ ಗಡುವು ನೀಡಿ, ಜಮೀನು ಮಾಲೀಕರ ಜೊತೆ ಮಾತನಾಡಿ ರಸ್ತೆಗೆ ಅಗತ್ಯವಾಗಿರುವ ಜಾಗ ಬಿಡಿಸಲು ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.4
- ಸರಕಾರಿ ನೌಕರರ ವತಿಯಿಂದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ. ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಿಟಿ ವೀರೇಶ್ ಮಾಹಿತಿ ನೀಡಿದ್ದಾರೆ..1