logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೇರಳ ಚುನಾವಣೆ ಬೆನ್ನಲ್ಲೇ ಆರ್ ಪಿಎಫ್ ನಿಂದ 201 ಸ್ಮಾರ್ಟ್ ಫೋನ್‌ಗಳು ವಶಕ್ಕೆ 201 ಸ್ಮಾರ್ಟ್‌ಫೋನ್‌ಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ಸುರಕ್ಷತಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಅವುಗಳ ಮೌಲ್ಯ 10.05 ಲಕ್ಷ ಎಂದು ಅಂದಾಜಿಸಲಾಗಿದೆ.ಕೇರಳ ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಿನ್ನ, ನಗದು, ಮತ್ತಿತರ ಬೆಲೆಬಾಳುವ ವಸ್ತುಗಳು ರೈಲಿನ ಮೂಲಕ ಆ ರಾಜ್ಯಕ್ಕೆ ಕಳ್ಳಸಾಗಣೆಯಾಗುವುದನ್ನು ತಪ್ಪಿಸಲು ಆರ್‌ಪಿಎಫ್‌ ಸಿಬ್ಬಂದಿಯು ರೈಲುಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸ್ಮಾರ್ಟ್‌ಫೋನ್‌ಗಳಿದ್ದ ಬ್ಯಾಗ್‌ ಈ ತಪಾಸಣೆ ವೇಳೆ ಪತ್ತೆಯಾಗಿದೆ. ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ದೇಹದಲ್ಲಿ ಧರಿಸಿದ್ದ ಕ್ಯಾಮೆರಾಗಳಲ್ಲಿ (ಬಾಡಿ ವೋರ್ನ್‌ ಕ್ಯಾಮೆರಾ) ದಾಖಲಾದ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಈ ಬೋಗಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸಿರುವುದು ಕಂಡುಬಂದಿದೆ. ಅಪರಾಧ ಗುಪ್ತವಾರ್ತೆ ಶಾಖೆ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ನೆರವಿನೊಂದಿಗೆ ಈ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೂ ಮಾಹಿತಿ ಹಂಚಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾಗೂ ವಶಪಡಿಸಿಕೊಂಡ ಸ್ವತ್ತುಗಳ ಕುರಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

1 day ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
1 day ago

ಕೇರಳ ಚುನಾವಣೆ ಬೆನ್ನಲ್ಲೇ ಆರ್ ಪಿಎಫ್ ನಿಂದ 201 ಸ್ಮಾರ್ಟ್ ಫೋನ್‌ಗಳು ವಶಕ್ಕೆ 201 ಸ್ಮಾರ್ಟ್‌ಫೋನ್‌ಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ಸುರಕ್ಷತಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಅವುಗಳ ಮೌಲ್ಯ 10.05 ಲಕ್ಷ ಎಂದು ಅಂದಾಜಿಸಲಾಗಿದೆ.ಕೇರಳ ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಿನ್ನ, ನಗದು, ಮತ್ತಿತರ ಬೆಲೆಬಾಳುವ ವಸ್ತುಗಳು ರೈಲಿನ ಮೂಲಕ ಆ ರಾಜ್ಯಕ್ಕೆ ಕಳ್ಳಸಾಗಣೆಯಾಗುವುದನ್ನು ತಪ್ಪಿಸಲು ಆರ್‌ಪಿಎಫ್‌ ಸಿಬ್ಬಂದಿಯು ರೈಲುಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸ್ಮಾರ್ಟ್‌ಫೋನ್‌ಗಳಿದ್ದ ಬ್ಯಾಗ್‌ ಈ ತಪಾಸಣೆ ವೇಳೆ ಪತ್ತೆಯಾಗಿದೆ. ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ದೇಹದಲ್ಲಿ ಧರಿಸಿದ್ದ ಕ್ಯಾಮೆರಾಗಳಲ್ಲಿ (ಬಾಡಿ ವೋರ್ನ್‌ ಕ್ಯಾಮೆರಾ) ದಾಖಲಾದ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಈ ಬೋಗಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸಿರುವುದು ಕಂಡುಬಂದಿದೆ. ಅಪರಾಧ ಗುಪ್ತವಾರ್ತೆ ಶಾಖೆ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ನೆರವಿನೊಂದಿಗೆ ಈ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೂ ಮಾಹಿತಿ ಹಂಚಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾಗೂ ವಶಪಡಿಸಿಕೊಂಡ ಸ್ವತ್ತುಗಳ ಕುರಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು. ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.
    1
    ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು.
ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    29 min ago
  • Post by Sunil Sunil
    1
    Post by Sunil Sunil
    user_Sunil Sunil
    Sunil Sunil
    ಚನ್ನರಾಯಪಟ್ಟಣ, ಹಾಸನ, ಕರ್ನಾಟಕ•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
  • ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    1
    ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು.
ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer ನಂಜನಗೂಡು, ಮೈಸೂರು, ಕರ್ನಾಟಕ•
    21 hrs ago
  • ಚಿತ್ರದುರ್ಗ, ಬಿಸಿಲ ಝಳ-ಜನರಿಗೆ ತಂಪು ನೀರಿನ ವ್ಯವಸ್ಥೆ ಚಿತ್ರದುರ್ಗ ಜಿಲ್ಲೆ‌,ಮೊಳಕಾಲ್ಮೂರಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಜನರ ತಾಪ ತಣ್ಣಗಾಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಶುದ್ಧ ಹಾಗೂ ತಂಪು ನಿರಿನ ಅರವಟ್ಟಿಗೆ ನಿರ್ಮಿಸಿ ವಿನೂತನ ಪ್ರಯತ್ನ ಮಾಡಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಹಾನಗಲ್ ಕ್ರಾಸ್ ನಲ್ಲಿ ಜನರ ತೃಷೆ ಇಂಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಅರಟಿಕೆ ನಿರ್ಮಾಣ ಮಾಡಿದ್ದಾರೆ. ತೆಂಗಿನ ಗರಿಗಳಿಂದ ಚಪ್ಪರ ಹಾಕಿ, ಮಣ್ಣಿನ‌ ಮಡಿಕೆಗಳಲ್ಲಿ ತಂಪಾದ ಶುದ್ಧ ಕುಡಿಯುವ ನಿರನ್ನು ಇಟ್ಟಿದ್ದಾರೆ. ಮೊಳಕಾಲ್ಮೂರು ತಾಲೂಕು ಮೊದಲೇ ಹೆಚ್ವು ಬಿಸಿಲು ದಾಖಲಾಗೋದ್ರಿಂದ ಜನರ ಬಾಯಾರಿಕೆ ನೋಗಿಸಲು ಪ್ರತಿನಿತ್ಯ ಈ ಮಡಕೆಗಳಿಗೆ ಶುದ್ಧ ಕುಡಿಯುವ ನೀರನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದರಿಂದ ತುಂಬಾ ಸಹಾಯವಾಗಿದೆ. ಹಾನಗಲ್ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರು ಭೇಷ್ ಎಂದಿದ್ದಾರೆ....
    1
    ಚಿತ್ರದುರ್ಗ,
ಬಿಸಿಲ ಝಳ-ಜನರಿಗೆ ತಂಪು ನೀರಿನ ವ್ಯವಸ್ಥೆ
ಚಿತ್ರದುರ್ಗ ಜಿಲ್ಲೆ‌,ಮೊಳಕಾಲ್ಮೂರಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಜನರ ತಾಪ ತಣ್ಣಗಾಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಶುದ್ಧ ಹಾಗೂ ತಂಪು ನಿರಿನ ಅರವಟ್ಟಿಗೆ ನಿರ್ಮಿಸಿ ವಿನೂತನ ಪ್ರಯತ್ನ ಮಾಡಿದ್ದಾರೆ.
ಮೊಳಕಾಲ್ಮೂರು ತಾಲೂಕಿನ ಹಾನಗಲ್ ಕ್ರಾಸ್ ನಲ್ಲಿ ಜನರ ತೃಷೆ ಇಂಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಅರಟಿಕೆ ನಿರ್ಮಾಣ ಮಾಡಿದ್ದಾರೆ. ತೆಂಗಿನ ಗರಿಗಳಿಂದ ಚಪ್ಪರ ಹಾಕಿ, ಮಣ್ಣಿನ‌ ಮಡಿಕೆಗಳಲ್ಲಿ ತಂಪಾದ ಶುದ್ಧ ಕುಡಿಯುವ ನಿರನ್ನು ಇಟ್ಟಿದ್ದಾರೆ. ಮೊಳಕಾಲ್ಮೂರು ತಾಲೂಕು ಮೊದಲೇ ಹೆಚ್ವು ಬಿಸಿಲು ದಾಖಲಾಗೋದ್ರಿಂದ ಜನರ ಬಾಯಾರಿಕೆ ನೋಗಿಸಲು ಪ್ರತಿನಿತ್ಯ ಈ ಮಡಕೆಗಳಿಗೆ ಶುದ್ಧ ಕುಡಿಯುವ ನೀರನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದರಿಂದ ತುಂಬಾ ಸಹಾಯವಾಗಿದೆ. ಹಾನಗಲ್ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರು ಭೇಷ್ ಎಂದಿದ್ದಾರೆ....
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ, ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
    1
    ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ,  ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    4
    ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು.
ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ, ಗುಟ್ಕಾ ಉಗಿದರೆ 1000 ದಂಡ ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್ ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹಿರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲಾ ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ತಮ್ಮ ವ್ಯಾಪಿಯಲ್ಲಿರುವ ಸ್ಥಳಿಯಾಡಳಿತಕ್ಕೆ ಮತ್ತು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬಹುದು ಎಂದು ರಾಜು ಕೆ. ತಿಳಿಸಿದರು. ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಂಬಾಕಿನ ಅಪಾಯಕ್ಕೆ ಸಿಲುಕುವ ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಇರುವ ಸ್ಥಳಕ್ಕೆ ಹೋಗಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು. ಕೋಟ್ಪಾ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2,587 ಪ್ರಕರಣ ದಾಖಲಾಗಿದ್ದು, ರೂ 3.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ತಂಬಾಕಿಗೆ ಸಂಬಂಧಿಸಿದಂತೆ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನ ಪ್ಯಾಕ್‍ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಅಳತೆಯಲ್ಲಿದ್ದರೆ ಮತ್ತು ಹಳೆಯದಾದ ಎಚ್ಚರಿಕೆಯ ಚಿತ್ರಗಳನ್ನು ಹಾಕಿದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.
    1
    ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ, ಗುಟ್ಕಾ ಉಗಿದರೆ 1000 ದಂಡ
ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ  ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ  ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು  ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ.  ಹೋಟೆಲ್, ಕ್ಯಾಂಟೀನ್‍ಗಳಿಂದ  ಹೆಚ್ಚಾಗಿ ಕಾರ್ಮಿಕರು ಅಥವಾ  ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್ ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ  ಪ್ಲಾಸ್ಟಿಕ್ ಬಳಕೆ   ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು  ಅವರು ಸೂಚಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ  ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು.  ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹಿರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ  ತಂಬಾಕು ಉತ್ಪನ್ನಗಳ ಪ್ರಚಾರ,  21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ  ಸಿಗರೇಟ್, ತಂಬಾಕು  ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಲಾ ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ತಮ್ಮ ವ್ಯಾಪಿಯಲ್ಲಿರುವ ಸ್ಥಳಿಯಾಡಳಿತಕ್ಕೆ ಮತ್ತು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು  ಸಮನ್ವಯದಿಂದ  ಕಾರ್ಯನಿರ್ವಹಿಸಿದರೆ  ಜಿಲ್ಲೆಯಲ್ಲಿ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬಹುದು ಎಂದು ರಾಜು ಕೆ. ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು  ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ  ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು,  ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ  ಸೂಕ್ತ ಕ್ರಮ ಕೈಗೊಳ್ಳಲು  ಅವರು ಸೂಚಿಸಿದರು. ತಂಬಾಕಿನ ಅಪಾಯಕ್ಕೆ ಸಿಲುಕುವ ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಇರುವ ಸ್ಥಳಕ್ಕೆ ಹೋಗಿ ತಂಬಾಕಿನ ದುಷ್ಪರಿಣಾಮಗಳ  ಬಗ್ಗೆ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ  ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು.  ಕೋಟ್ಪಾ  ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು  2,587 ಪ್ರಕರಣ ದಾಖಲಾಗಿದ್ದು, ರೂ 3.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.  ತಂಬಾಕಿಗೆ ಸಂಬಂಧಿಸಿದಂತೆ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನ ಪ್ಯಾಕ್‍ನಲ್ಲಿ  ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಅಳತೆಯಲ್ಲಿದ್ದರೆ ಮತ್ತು ಹಳೆಯದಾದ ಎಚ್ಚರಿಕೆಯ ಚಿತ್ರಗಳನ್ನು ಹಾಕಿದರೆ  ದಂಡ ವಿಧಿಸಲಾಗುತ್ತದೆ ಎಂದು   ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ  ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    35 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.