ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
- ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ *ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು , ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದಾಖಲುಗಳ ಸಮೇತ ದೂರಿದರು. ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ. ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ , ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ. ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.1
- ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ! ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು. 📍 ಬಳ್ಳಾರಿ | ASN News24 ಕನ್ನಡ #BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1
- ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1