ಸುರಕ್ಷತಾ ನಿಯಮ ಪಾಲಿಸದ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ. ಪ್ರಭು ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಸುರಕ್ಷಿತ ಹಾಗೂ ನಿಯಮಬದ್ಧವಾಗಿ ಗಣಿಗಾರಿಕೆ ನಡೆಸುವ ಕುರಿತು ಗಣಿ ಮಾಲೀಕರು ಮತ್ತು ಸಂಬಂಧಪಟ್ಟವರಿಗೆ ಅರಿವು ಮೂಡಿಸಬೇಕು. ನಿಯಮಗಳನ್ನು ಪಾಲಿಸದೆ ಗಣಿಗಾರಿಕೆ ನಡೆಸುವುದು ಕಂಡುಬಂದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಗಳು ಸಂಘಟನಾತ್ಮಕವಾಗಿ ಏಕಕಾಲದಲ್ಲಿ ದಾಳಿ ನಡೆಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣಿಗಾರಿಕೆಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಅಹವಾಲು ಆಲಿಸಿದ ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಮಂಡಿಕಲ್ಲು ಹೋಬಳಿಯ ಸುತ್ತಮುತ್ತಲಿನ ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ಧೂಳು, ಟಿಪ್ಪರ್ ಲಾರಿಗಳ ಸಂಚಾರ, ರಸ್ತೆ ಹಾಳಾಗುತ್ತಿರುವುದು ಹಾಗೂ ಬೆಳೆಗಳಿಗೆ ಹಾನಿಯಾಗುತ್ತಿರುವ ಕುರಿತು ರೈತರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ರೈತರಿಗೆ ಭರವಸೆ ನೀಡಿದರು. ಕಲ್ಲುಪುಡಿ ಘಟಕಗಳಿಂದ ಹೊರಬರುವ ಧೂಳಿನಿಂದಾಗಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಟಿಪ್ಪರ್ ಲಾರಿಗಳ ನಿರಂತರ ಓಡಾಟದಿಂದ ರಸ್ತೆಗಳು ಗುಂಡಿಬಿದ್ದು ಹದಗೆಟ್ಟಿದ್ದು, ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ, ಕ್ರಷರ್‌ಗಳಿಂದ ಹೊರಸೂಸುವ ಧೂಳಿನಿಂದ ಕೃಷಿ ಬೆಳೆಗಳು ನಾಶವಾಗುತ್ತಿದ್ದು, ಜಾನುವಾರುಗಳಿಗೆ ಅಗತ್ಯವಾದ ಮೇವು ಲಭ್ಯತೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ರೈತರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆ ಕೇವಲ ಬೆಳೆಗಳ ಮೇಲೆ ಮಾತ್ರವಲ್ಲದೆ, ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಧೂಳಿನ ಸಮಸ್ಯೆ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಅಲ್ಪಾವಧಿ ಹಾಗೂ ದೀರ್ಘಾವಧಿಯ ಕ್ರಮಗಳ ಪಟ್ಟಿಯನ್ನು ಸಿದ್ಧಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮಗಳ ಕುರಿತು ಸಮಾಲೋಚನೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂದಿನ ಒಂದು ವಾರದೊಳಗೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗೂ ಕಲ್ಲುಪುಡಿ ಘಟಕಗಳ ಮಾಲೀಕರ ಸಭೆ ನಡೆಸಬೇಕು. ಆ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿ, ಮೊದಲ ಹಂತದಲ್ಲಿ ಸಮಸ್ಯೆಗಳಿಗೆ ಕೈಗೊಳ್ಳಬಹುದಾದ ಸೂಕ್ತ ಕ್ರಮಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು. ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿ, ಸಮಸ್ಯೆಯ ಸಂಪೂರ್ಣ ಪರಿಶೀಲನೆ ನಡೆಸಲಾಗುವುದು. ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲುಪುಡಿ ಘಟಕಗಳ ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಮತ್ತು ಜಲ್ಲಿ ಸೇರಿದಂತೆ ಗಣಿ ಉತ್ಪನ್ನಗಳು ಅತ್ಯಗತ್ಯವಾಗಿವೆ. ಅದರಲ್ಲೂ ಬೆಂಗಳೂರು ಉತ್ತರ ಭಾಗಕ್ಕೆ ಜಿಲ್ಲೆಯಿಂದ ಶೇ.50ರಷ್ಟು ಗಣಿ ಉತ್ಪನ್ನಗಳು ಪೂರೈಕೆಯಾಗುತ್ತಿವೆ. ಆದ್ದರಿಂದ ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಮುಂದೆ ಬರುವವರಿಗೆ ಅವಕಾಶ ಕಲ್ಪಿಸಲಾಗುವುದು. ಆದರೆ, ಗಣಿಗಾರಿಕೆ ನಡೆಸುವ ಸಂದರ್ಭದಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ನಿಗದಿಪಡಿಸಿರುವ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಣಿ ಮಾಲೀಕರಿಗೆ ತಿಳಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಕ್ವಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಕಾಲಕಾಲಕ್ಕೆ ನಿರಂತರವಾಗಿ ನೀರು ಸಿಂಪಡಿಸಬೇಕು. ಮರಳು ಹಾಗೂ ಜಲ್ಲಿ ಸಾಗಿಸುವ ವಾಹನಗಳಲ್ಲಿ ಕಡ್ಡಾಯವಾಗಿ ವೇಗ ನಿಯಂತ್ರಕ ಸ್ಪೀಡೋ ಮೀಟರ್ ಅಳವಡಿಸಬೇಕು. ಕನ್‌ವೇಯರ್ ಬೆಲ್ಟ್ಗಳಲ್ಲಿ ಧೂಳು ನಿಯಂತ್ರಣಕ್ಕಾಗಿ ನೀರು ಸಿಂಪಡಿಸುವ ವ್ಯವಸ್ಥೆ ಮಾಡಬೇಕು. ನಿಯಮಾನುಸಾರ ಕಂಟ್ರೋಲ್ ಸ್ಫೋಟಕ ವ್ಯವಸ್ಥೆ ಇರಬೇಕು. ಅಲ್ಲದೆ, ಕಾನೂನು ಉಲ್ಲಂಘನೆಗಳನ್ನು ಪತ್ತೆಹಚ್ಚಲು ಎಐ ತಂತ್ರಜ್ಞಾನ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುವ ಕುರಿತೂ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಸಾರ್ವಜನಿಕರ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಗಳ ಪ್ರಕಾರವೇ ಗಣಿಗಾರಿಕೆ ನಡೆಯಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಒತ್ತಡಕ್ಕೂ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು. ರೈತರೊಂದಿಗೆ ಸಭೆ ನಡೆಸಿ, ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ತೊಂದರೆಗಳ ಕುರಿತು ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರೈತರಿಂದ ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಪಡೆದುಕೊಂಡರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸುರೇಶ್, ತಹಸೀಲ್ದಾರ್ ರಶ್ಮಿ, ಜಿಲ್ಲಾ ಪರಿಸರ ಅಧಿಕಾರಿ ವಿಮಲಾಕ್ಷಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸುರಕ್ಷತಾ ನಿಯಮ ಪಾಲಿಸದ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ. ಪ್ರಭು ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಸುರಕ್ಷಿತ ಹಾಗೂ ನಿಯಮಬದ್ಧವಾಗಿ ಗಣಿಗಾರಿಕೆ ನಡೆಸುವ ಕುರಿತು ಗಣಿ ಮಾಲೀಕರು ಮತ್ತು ಸಂಬಂಧಪಟ್ಟವರಿಗೆ ಅರಿವು ಮೂಡಿಸಬೇಕು. ನಿಯಮಗಳನ್ನು ಪಾಲಿಸದೆ ಗಣಿಗಾರಿಕೆ ನಡೆಸುವುದು ಕಂಡುಬಂದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಗಳು ಸಂಘಟನಾತ್ಮಕವಾಗಿ ಏಕಕಾಲದಲ್ಲಿ ದಾಳಿ ನಡೆಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣಿಗಾರಿಕೆಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಅಹವಾಲು ಆಲಿಸಿದ ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಮಂಡಿಕಲ್ಲು ಹೋಬಳಿಯ ಸುತ್ತಮುತ್ತಲಿನ ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ಧೂಳು, ಟಿಪ್ಪರ್ ಲಾರಿಗಳ ಸಂಚಾರ, ರಸ್ತೆ ಹಾಳಾಗುತ್ತಿರುವುದು ಹಾಗೂ ಬೆಳೆಗಳಿಗೆ ಹಾನಿಯಾಗುತ್ತಿರುವ ಕುರಿತು ರೈತರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ರೈತರಿಗೆ ಭರವಸೆ ನೀಡಿದರು. ಕಲ್ಲುಪುಡಿ
ಘಟಕಗಳಿಂದ ಹೊರಬರುವ ಧೂಳಿನಿಂದಾಗಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಟಿಪ್ಪರ್ ಲಾರಿಗಳ ನಿರಂತರ ಓಡಾಟದಿಂದ ರಸ್ತೆಗಳು ಗುಂಡಿಬಿದ್ದು ಹದಗೆಟ್ಟಿದ್ದು, ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ, ಕ್ರಷರ್‌ಗಳಿಂದ ಹೊರಸೂಸುವ ಧೂಳಿನಿಂದ ಕೃಷಿ ಬೆಳೆಗಳು ನಾಶವಾಗುತ್ತಿದ್ದು, ಜಾನುವಾರುಗಳಿಗೆ ಅಗತ್ಯವಾದ ಮೇವು ಲಭ್ಯತೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ರೈತರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆ ಕೇವಲ ಬೆಳೆಗಳ ಮೇಲೆ ಮಾತ್ರವಲ್ಲದೆ, ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಧೂಳಿನ ಸಮಸ್ಯೆ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಅಲ್ಪಾವಧಿ ಹಾಗೂ ದೀರ್ಘಾವಧಿಯ ಕ್ರಮಗಳ ಪಟ್ಟಿಯನ್ನು ಸಿದ್ಧಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮಗಳ ಕುರಿತು ಸಮಾಲೋಚನೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂದಿನ ಒಂದು ವಾರದೊಳಗೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗೂ ಕಲ್ಲುಪುಡಿ ಘಟಕಗಳ ಮಾಲೀಕರ ಸಭೆ ನಡೆಸಬೇಕು. ಆ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿ, ಮೊದಲ ಹಂತದಲ್ಲಿ ಸಮಸ್ಯೆಗಳಿಗೆ ಕೈಗೊಳ್ಳಬಹುದಾದ ಸೂಕ್ತ ಕ್ರಮಗಳ ಕುರಿತು ಮಾರ್ಗದರ್ಶನ
ನೀಡಬೇಕು ಎಂದು ತಿಳಿಸಿದರು. ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿ, ಸಮಸ್ಯೆಯ ಸಂಪೂರ್ಣ ಪರಿಶೀಲನೆ ನಡೆಸಲಾಗುವುದು. ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲುಪುಡಿ ಘಟಕಗಳ ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಮತ್ತು ಜಲ್ಲಿ ಸೇರಿದಂತೆ ಗಣಿ ಉತ್ಪನ್ನಗಳು ಅತ್ಯಗತ್ಯವಾಗಿವೆ. ಅದರಲ್ಲೂ ಬೆಂಗಳೂರು ಉತ್ತರ ಭಾಗಕ್ಕೆ ಜಿಲ್ಲೆಯಿಂದ ಶೇ.50ರಷ್ಟು ಗಣಿ ಉತ್ಪನ್ನಗಳು ಪೂರೈಕೆಯಾಗುತ್ತಿವೆ. ಆದ್ದರಿಂದ ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಮುಂದೆ ಬರುವವರಿಗೆ ಅವಕಾಶ ಕಲ್ಪಿಸಲಾಗುವುದು. ಆದರೆ, ಗಣಿಗಾರಿಕೆ ನಡೆಸುವ ಸಂದರ್ಭದಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ನಿಗದಿಪಡಿಸಿರುವ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಣಿ ಮಾಲೀಕರಿಗೆ ತಿಳಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಕ್ವಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಕಾಲಕಾಲಕ್ಕೆ ನಿರಂತರವಾಗಿ ನೀರು ಸಿಂಪಡಿಸಬೇಕು. ಮರಳು ಹಾಗೂ ಜಲ್ಲಿ ಸಾಗಿಸುವ ವಾಹನಗಳಲ್ಲಿ
ಕಡ್ಡಾಯವಾಗಿ ವೇಗ ನಿಯಂತ್ರಕ ಸ್ಪೀಡೋ ಮೀಟರ್ ಅಳವಡಿಸಬೇಕು. ಕನ್‌ವೇಯರ್ ಬೆಲ್ಟ್ಗಳಲ್ಲಿ ಧೂಳು ನಿಯಂತ್ರಣಕ್ಕಾಗಿ ನೀರು ಸಿಂಪಡಿಸುವ ವ್ಯವಸ್ಥೆ ಮಾಡಬೇಕು. ನಿಯಮಾನುಸಾರ ಕಂಟ್ರೋಲ್ ಸ್ಫೋಟಕ ವ್ಯವಸ್ಥೆ ಇರಬೇಕು. ಅಲ್ಲದೆ, ಕಾನೂನು ಉಲ್ಲಂಘನೆಗಳನ್ನು ಪತ್ತೆಹಚ್ಚಲು ಎಐ ತಂತ್ರಜ್ಞಾನ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುವ ಕುರಿತೂ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಸಾರ್ವಜನಿಕರ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಗಳ ಪ್ರಕಾರವೇ ಗಣಿಗಾರಿಕೆ ನಡೆಯಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಒತ್ತಡಕ್ಕೂ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು. ರೈತರೊಂದಿಗೆ ಸಭೆ ನಡೆಸಿ, ಕಲ್ಲುಪುಡಿ ಘಟಕಗಳಿಂದ ಉಂಟಾಗುತ್ತಿರುವ ತೊಂದರೆಗಳ ಕುರಿತು ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರೈತರಿಂದ ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಪಡೆದುಕೊಂಡರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸುರೇಶ್, ತಹಸೀಲ್ದಾರ್ ರಶ್ಮಿ, ಜಿಲ್ಲಾ ಪರಿಸರ ಅಧಿಕಾರಿ ವಿಮಲಾಕ್ಷಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ1
- ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ1
- ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .1
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x71
- ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ತುಮಕೂರು:ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು,ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ.ಇದರಿAದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ70 ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಶೇ30ರಷ್ಟು ಭೂಮಿಯಲ್ಲಿನ ಫಸಲು ಸಹ ಸಕಾಲಕ್ಕೆ ಮಳೆಯಿಲ್ಲದೆ ಒಣಗಿದ್ದು,ದಿನದಿಂದ ದಿನಕ್ಕೆ ಅಂತರಜಲ ಕುಸಿಯುತ್ತಿದ್ದು,ಮುಂದಿನ 15-20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ತಕ್ಷಣವೇ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜಾನುವಾರುಗಳ ಮೇವಿಗೆ ಗೋಶಾಲೆ ತೆರೆಯುವುದು.ಎಕರೆಗೆ ತಲಾ 50 ಸಾವಿರ ಬೆಳೆ ಪರಿಹಾರ,ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದಂತೆ ವಿಬಿಜಿ ರಾಮಜಿ ಅಡಿಯಲ್ಲಿ ಕೆಲಸ ನೀಡಿ ಜನರ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ75ರಷ್ಟು ನೀರಿನ ಸಂಗ್ರಹವಿತ್ತು. ಆಗ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಎಚ್ಚೆತ್ತುಕೊಂಡು ನಮ್ಮ ಕೆರೆ, ಕೆಟ್ಟೆಗಳಿಗೆ ನೀರು ಹರಿಸಿಕೊಂಡಿದ್ದರೆ ಅಂತರ ಜಲ ಕುಸಿತ ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ನಿರ್ಲಕ್ಷದ ಫಲವಾಗಿ ನಮ್ಮ ಜಿಲ್ಲೆಗೆ ಬರಬೇಕಾದ ನೀರು ತೆಮಿಳು ನಾಡಿಗೆ ಹರಿಸಿ,ಸರಕಾರ ತನ್ನ ಖರ್ಚಿ ಉಳಿಸಿಕೊಂಡಿದೆ.ನಮ್ಮ ತೋಟ, ತುಡಿಕೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ.ಈಗಲಾದರೂ ಜಿಲ್ಲಾಡಳಿತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ಎ.ಗೋವಿಂದರಾಜು ನುಡಿದರು. ಈಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ದಿನದಲ್ಲಿ ಒಂದು ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ.ನಿರ್ಮಾಣವಾಗಿರುವ 220 ಕೆ.ವಿ.ಉಪಸ್ಥಾವರಗಳು ಕಾರ್ಯಾರಂಭಗೊAಡಿಲ್ಲ.ಬೇಸ್ಕಾA ಅಧಿಕಾರಿಗಳು ಅಸಹಾಯಕರಾಗಿದ್ದಾರೆ.ಹಾಗಾಗಿ ಬೆಸ್ಕಾಂ ಸೂಪರಿಂಡೆAಟ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳು ಸೆಪ್ಟಂಬರ್ 21ರೊಳಗೆ ರೈತರು,ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ಸೆಪ್ಟಂಬರ್ 23 ರಿಂದ ಹಂತ ಹಂತವಾಗಿ ಎಲ್ಲಾ ತಾಲೂಕು ಬೆಸ್ಕಾಂ ಕಚೇರಿ ಮತ್ತು ತಹಶೀಲ್ದಾರರ ಕಚೇರಿಯ ಮುಂದೆ ಪಿಕೇಟಿಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬAಧಿಸಿ ದಂತೆ ಸೆಪ್ಟಂಬರ್ 23 ರಂದು ಮಧುಗಿರಿ ಎ.ಸಿ.ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು. ಈಲ್ಲೆಯಲ್ಲಿ ಸರಕಾರದ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ, ರೈಲ್ವೆಗೆ ಸೇರಿ ರೈತರ ಸಾಕಷ್ಟು ಫಲವತ್ತಾ ಭೂಮಿಯನ್ನು ವಶಪಡಿಸಿಕೊಂಡು 20-30 ವರ್ಷಗಳು ಕಳೆದರು ವೈಜ್ಞಾನಿಕ ಪರಿಹಾರ ನೀಡಿಲ್ಲ. ನ್ಯಾಯಾಲಯಕ್ಕೆ ಹೋದ ರೈತರಿಗೆ ಕೋರ್ಟ್ ಆದೇಶದಂತೆ ಸುಮಾರು 500 ಕೋಟಿ ರೂಗಳಿಗೆ ಹೆಚ್ಚಿನ ಬಾಕಿ ನೀಡಬೇಕಿದೆ.ಆದರೆ ಇದುವರೆಗೂ ಒಂದು ನೈಯಾಫೈಸೆ ನೀಡಿಲ್ಲ. ಹಲವು ಮೂಲ ಜಮೀನುದಾರರು ಸಾವನ್ನಪ್ಪಿದ್ದಾರೆ.ಸರಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಹಾಗೆಯೇ ಕಳೆದ ಸಾಲಿನಲ್ಲಿ ನ್ಯಾಫೇಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತು ಸುಮಾರು 400 ಕೋಟಿ ರೂ ಬಾಕಿ ಬರಬೇಕಾಗಿದೆ. ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎ.ಗೋವಿಂದರಾಜು ಆಗ್ರಹಿಸಿದರು. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದೆ.ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದ ಕಾರಣ, ಉತ್ಪಾಧನಾ ವೆಚ್ಚ ಹೆಚ್ಚಾಗಿ,ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಒಂದು ಬಾರಿಗೆ ರೈತರ ಸಾಲಮನ್ನಾಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು.ಹಾಗೆಯೇ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು ಬಲವಂತದ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ,ಬರದಿಂದ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದು,ಸರಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ, ಬೇಳೆ, ಬೆಲ್ಲ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ರಿಯಾಯತಿ ದರದಲ್ಲಿ ನೀಡಬೇಕು.ಹಾಗೆಯೇ ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ50ರ ರಿಯಾಯಿತಿ ದರದಲ್ಲಿ ನೀಡಬೇಕು. ಲೀಟರ್ ಹಾಲಿಗೆ 40 ರೂ ನೀಡಬೇಕೆಂದು ಒತ್ತಾಯಿಸಿದರು. ನಂದಿಹಳ್ಳಿ-ಮಲ್ಲಸAದ್ರ-ವಸAತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಅಧಿಕಾರಿಗಳು ಮುಂದಾಗುತ್ತಲೇ ಇದ್ದಾರೆ.ಜನರಿಗೆ ಹೆಚ್ಚು ಉಪಯೋಗವಿಲ್ಲದ ಔಟರ್‌ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ 7-8 ತಾಲೂಕುಗಳಿಗೆ ಮರಣ ಶಾಸನವಾಗಿರುವ ಏಕ್ಸ್ಪ್ರೆಸ್ ಕೇನಾಲ್ ಯೋಜನೆಯನ್ನು ಸರಕಾರ ರದ್ದು ಮಾಡಬೇಕು. ಕುಣಿಗಲ್ ನೆಪದಲ್ಲಿ ಬಿಡದಿಯೇ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ ಎಂದು ಜಿ.ಸಿ.ಶಂಕರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ1