ನಾಮಫಲಕದಲ್ಲಿ ಹೆಸರೇ ಇಲ್ಲದ ಅಧಿಕಾರಿಯ ಕಥೆ, ಜನರಲ್ಲಿ ಗೊಂದಲ... "ಬಿಳಗಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ವಿಚಾರ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಇಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭರತೇಶ್ ಪಾಟೀಲ್ ಅವರ ನೇಮಕಾತಿ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ." "ಸುಮಾರು ಆರು ತಿಂಗಳ ಹಿಂದೆ ಮುಂಡರಗಿ ಎಂಬ ಅಧಿಕಾರಿ ಬಿಳಗಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ವರ್ಗಾವಣೆ ನಡೆದಿದ್ದು, ಅವರ ಜಾಗಕ್ಕೆ ಭರತೇಶ್ ಪಾಟೀಲ್ ಅವರು ಬಂದಿದ್ದಾರೆ ಎನ್ನಲಾಗಿದೆ." "ಆದರೆ, ಈ ವರ್ಗಾವಣೆ ಅಧಿಕೃತವಾಗಿದೆಯೇ ಅಥವಾ ಕೇವಲ ಮೇಲ್ನೋಟಕ್ಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಕಾರಣ ಏನೆಂದರೆ, ಕಚೇರಿಯಲ್ಲಿರುವ ಅಧಿಕಾರಿಗಳ ವಿವರವನ್ನು ಸೂಚಿಸುವ ಫಲಕದಲ್ಲಿ ಇಂದಿಗೂ ಭರತೇಶ್ ಪಾಟೀಲ್ ಅವರ ಹೆಸರು ಕಾಣಿಸುತ್ತಿಲ್ಲ." "ಒಬ್ಬ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗುವ ದಿನಾಂಕದಿಂದ ಹಿಡಿದು ವರ್ಗಾವಣೆಗೊಂಡ ದಿನಾಂಕದವರೆಗೆ ಎಲ್ಲಾ ವಿವರಗಳನ್ನು ದಾಖಲಿಸುವ ಈ ಫಲಕದಲ್ಲಿ ಅವರ ಹೆಸರು ಇಲ್ಲದಿರುವುದು ಅನುಮಾನಾಸ್ಪದವಾಗಿದೆ." "ಆರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರೆ, ಹೆಸರು ಫಲಕದಲ್ಲಿ ಇರಬೇಕು. ಇದು ಯಾಕೆ ಇಲ್ಲ ಅನ್ನೋದು ಪ್ರಶ್ನೆ." "ಭರತೇಶ್ ಪಾಟೀಲ್ ಅವರ ನೇಮಕಾತಿ ಮತ್ತು ವರ್ಗಾವಣೆ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ." "ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

- "ಬಿಳಗಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ವಿಚಾರ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಇಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭರತೇಶ್ ಪಾಟೀಲ್ ಅವರ ನೇಮಕಾತಿ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ." "ಸುಮಾರು ಆರು ತಿಂಗಳ ಹಿಂದೆ ಮುಂಡರಗಿ ಎಂಬ ಅಧಿಕಾರಿ ಬಿಳಗಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ವರ್ಗಾವಣೆ ನಡೆದಿದ್ದು, ಅವರ ಜಾಗಕ್ಕೆ ಭರತೇಶ್ ಪಾಟೀಲ್ ಅವರು ಬಂದಿದ್ದಾರೆ ಎನ್ನಲಾಗಿದೆ." "ಆದರೆ, ಈ ವರ್ಗಾವಣೆ ಅಧಿಕೃತವಾಗಿದೆಯೇ ಅಥವಾ ಕೇವಲ ಮೇಲ್ನೋಟಕ್ಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಕಾರಣ ಏನೆಂದರೆ, ಕಚೇರಿಯಲ್ಲಿರುವ ಅಧಿಕಾರಿಗಳ ವಿವರವನ್ನು ಸೂಚಿಸುವ ಫಲಕದಲ್ಲಿ ಇಂದಿಗೂ ಭರತೇಶ್ ಪಾಟೀಲ್ ಅವರ ಹೆಸರು ಕಾಣಿಸುತ್ತಿಲ್ಲ." "ಒಬ್ಬ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗುವ ದಿನಾಂಕದಿಂದ ಹಿಡಿದು ವರ್ಗಾವಣೆಗೊಂಡ ದಿನಾಂಕದವರೆಗೆ ಎಲ್ಲಾ ವಿವರಗಳನ್ನು ದಾಖಲಿಸುವ ಈ ಫಲಕದಲ್ಲಿ ಅವರ ಹೆಸರು ಇಲ್ಲದಿರುವುದು ಅನುಮಾನಾಸ್ಪದವಾಗಿದೆ." "ಆರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರೆ, ಹೆಸರು ಫಲಕದಲ್ಲಿ ಇರಬೇಕು. ಇದು ಯಾಕೆ ಇಲ್ಲ ಅನ್ನೋದು ಪ್ರಶ್ನೆ." "ಭರತೇಶ್ ಪಾಟೀಲ್ ಅವರ ನೇಮಕಾತಿ ಮತ್ತು ವರ್ಗಾವಣೆ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ." "ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- Post by ನಾಗರಾಜ್ ಕುರಿ1
- Post by @april14news1
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.4
- ವಿಜಯಪುರ: ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ಅಪಮಾನ ವಿಜಯಪುರದಲ್ಲಿ ಶನಿವಾರ ಮುಸ್ಲಿಂ ಸಮಾಜದ ಮುಖಂಡರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಬಾಂಧವರು ಬೆಂಬಲ ನೀಡಿದರೂ, ಇಂದು ದೇಶದಲ್ಲಿ ಕಾಂಗ್ರೆಸ್‌ನಿಂದ ಮುಸ್ಲಿಮರಿಗೆ ಅಪಮಾನವಾಗುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ಪರಿಣಾಮವಾಗಿ, ಇಂದು ಒಬ್ಬೊಬ್ಬ ಮುಸ್ಲಿಂ ಮುಖಂಡರನ್ನು ಪಕ್ಷದಿಂದ ಹೊರಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ದೂರಿದರು.1
- ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ. ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.1