ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ
ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ
- ಬಾಳೆಹೊನ್ನಿಗ ಗ್ರಾಮದಲ್ಲಿ ಬಾಳೆ ತೋಟಕ್ಕೆ ಕಾಡಾನೆಗಳ ಲಗ್ಗೆ ಮೂರು ಲಕ್ಷ ರೂ ನಷ್ಟ. ಮಳವಳ್ಳಿ: ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳು ಬಾಳೆಹೊನ್ನಿಗ ಗ್ರಾಮದ ಬಿ.ಕೆ.ಇಂದ್ರ ಮತ್ತು ಬಿ.ವಿ.ಕೃಷ್ಣಪ್ಪ ಎಂಬುವರಿಗೆ ಸೇರಿದ ಬಾಳೆ ತೋಟಕ್ಕೆ ಲಗ್ಗೆ ಇಟ್ಟು ಸುಮಾರು 400 ಪಸಲು ಭರಿತವಾದ ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಸುಮಾರು ಮೂರು ಲಕ್ಷ ರೂ ನಷ್ಟ ಸಂಭವಿಸಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ ಬಳಿ ನಡೆದಿದೆ ಮೂಲತಃ ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಮಾತನಾಡಿ, ನಮ್ಮಮಾವನವರಾದ ಬಿ.ವಿ.ಕೃಷ್ಣಪ್ಪ ಮತ್ತು ನನ್ನ ಪತ್ನಿಯಾದ ಬಿ.ಕೆ.ಇಂದ್ರರಾಜ್ ರವರು ಮೂರು ಎಕರೆ ಜಮೀನಿನಲ್ಲಿ ಸುಮಾರು 2,784 ಯಾಲಕ್ಕಿಬಾಳೆ ಗಿಡಗಳನ್ನು ಹಾಕಿ ರಾತ್ರಿ ಹಗಲು ಎನ್ನದೆ ವಿದ್ಯುತ್ ಕಣ್ಣಮುಚ್ಚಾಲೆ ಆಟದಲ್ಲಿ ಜಮೀನಿಗೆ ನೀರು ಹಾಯಿಸಿ ಪಸಲು ಬೆಳೆದಿದ್ದು, ಇನ್ನು ಎರಡು ತಿಂಗಳೊಳಗೆ ಬಾಳೆ ಗೊನೆಗಳನ್ನು ಕಟಾವ್ ಮಾಡಿ ಮಾರಾಟ ಮಾಡಬೇಕಾಗಿತ್ತು. ಆದರೆ ಸೋಮವಾರ ತಡರಾತ್ರಿ ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳ ಗುಂಪು ನಮ್ಮ ಬಾಳೆ ತೋಟಕ್ಕೆ ನುಗ್ಗಿ ಫಲ ಬಿಟ್ಟಿದ್ದ ಸುಮಾರು 400 ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಬೆಳೆಯನ್ನು ನಾಶಪಡಿಸಿರುತ್ತವೆ. ಸಮಯಕ್ಕೆ ಸರಿಯಾಗಿ ರಾಮನಗರ ವ್ಯಾಪ್ತಿಯ 30ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಟಾಕಿ ಸಿಡಿಸಿ ಮತ್ತೆ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. ಇವರು ರಾತ್ರಿ ಬರದಿದ್ದರೆ ನಮ್ಮ ಬಾಳೆ ತೋಟ ಪೂರ್ತಿ ಕಾಡಾನೆ ಗಳುತುಳಿದು ನಾಶವಾಗುತ್ತಿತ್ತು. ಹಲಗೂರು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಸಮಯಕ್ಕೆ ಸ್ಥಳಕ್ಕೆ ಬರದಿರುವುದಕ್ಕೆರಾಜು ಬೇಸರ ವ್ಯಕ್ತಪಡಿಸಿದರು. ನಾವು ಬೆಳೆದ ಪಸಲುಗಳು ಕೈ ಸೇರುವ ಮುನ್ನವೇ ಕಾಡಾನೆಗಳ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ನಾಶವಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯವರು ಕಾಡಂಚಿನಲ್ಲಿ ಆನೆ ಕಂದಕಗಳನ್ನು ತೆಗೆಯುವುದರ ಮುಖಾಂತರ ಹಾಗೂ ರೈಲ್ವೆ ಕಂಬಿ ಬ್ಯಾರಿಕೇಟ್ ಹಾಗೂ ತೂಗುವ ಸೋಲಾರ್ ಬೇಲಿ ಅಳವಡಿಸಿ ಕಾಡು ಪ್ರಾಣಿಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ರೈತರ ಬೆಳೆ ಉಳಿಸುವಂತೆ ಆಗ್ರಹಿಸಿ, ಸರ್ಕಾರದಿಂದ ನಮಗೆ ಕೊಡುವಪರಿಹಾರದ ಹಣ ಸಾಲುವುದಿಲ್ಲ ಸೂಕ್ತವಾಗಿ ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಸಿಬ್ಬಂದಿಯವರೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್‍ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್‍ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.1
- All About,Misappropriation of funds by highly influential person in #Hyderabad *ಭಾರತ ನಲ್ಲಿ ವೈರಲ್*1
- ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆಗೆ 1,000 ಹಣ ಕೇಳಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಗ್ರಾಮದ ಬಡ ಕುಟುಂಬದ ರೈತಾಪಿ ಜನರ ಮೇಲೆ ಚಿಕಿತ್ಸೆ ನೀಡಿ ಸರಿಪಡಿಸಬೇಕಾದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಬರೆದು ಉಚಿತ ಆಂಬುಲೆನ್ಸ್ ಸೇವೆ ಇದ್ದರೂ ಕೂಡ ವಯಸ್ಸಾದ ರೋಗಿಗಳ ಬಳಿ ಸಾವಿರ ರೂಪಾಯಿಗಳ ಸುಲಿಗೆ ಮಾಡಲು ಮುಂದಾಗಿದ್ದಾರೆ.1
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹೆಚ್ಚಾಗಿ ಬರಲು ಮುಂದಾದ ಯುವಕರು:ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ ಮಳವಳ್ಳಿ: ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಯುವಕರು ಹೆಚ್ಚಾಗಿ ಬರಲು ಮುಂದಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ ತಿಳಿಸಿದರು. ಮಳವಳ್ಳಿ ಪಟ್ಟಣದಲ್ಲಿ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಮ್ ಆದ್ಮಿ ಪಕ್ಷ ದೆಹಲಿ ಹಾಗೂ ಪಂಜಾಬ್ ನಲ್ಲಿ ಉತ್ತಮ ಅಧಿಕಾರ ನಡೆಸಿದ್ದು, ರಾಜ್ಯದ ಜನರು ಇಂತಹ ಅಧಿಕಾರವನ್ನು ಬಯಸುತ್ತಿದ್ದಾರೆ. ರಾಜಕೀಯ ಪಕ್ಷ ಬದಲಾಯಿಸುವ ಬದಲು ಜನರಿಗೆ ಅನುಕೂಲ ಮಾಡಬೇಕಾಗಿದೆ. ಇದಲ್ಲದೆ ಚುನಾವಣೆಯಲ್ಲಿ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವ ಹೊಣೆ ನಮ್ಮ ಜನರಿದ್ದಾಗಿದೆ ಎಂದರು. ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಸಂಘಟನೆ ಮಾಡಲು ಹೊರಟಿದೆ. ಎಂದರು. ಈ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜೀಪ್ ಸಹಾನಿ, ಮಂಡ್ಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಾಸೀಮ್, ರಾಷ್ಟ್ರೀಯ ಸಂವಿಧಾನ ಪರ ವಿಚಾರ ವೇದಿಕೆ ಅಧ್ಯಕ್ಷ ಕೃಷ್ಣಕುಮಾರ ಸೇರಿದಂತೆ ಹಲವರು ಇದ್ದರು.1