logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ

4 hrs ago
user_N S Patange
N S Patange
Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
4 hrs ago

ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ

ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ

ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ

ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ

More news from ಕರ್ನಾಟಕ and nearby areas
  • ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಸಮಿತಿ ರಚನೆ ಚಿಂಚೋಳಿ ತಾಲೂಕು ವ್ಯಾಪ್ತಿಯ ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ರಚನಾ ಸಭೆ ನಡೆಯಿತು. ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಶ್ರೀಮತಿ ಅರ್ಚನಾ ಗಂ ಜಗಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಜಕುಮಾರ್ ಅವರು ಆಯ್ಕೆಯಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಗುರು ಶ್ರೀ ಬಸವಣಪ್ಪ ಅವರು ಮಾತನಾಡಿ, ಶಾಲೆಯು ಸಮುದಾಯದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾಗ ಮಾತ್ರ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಲೆಯ ಅಭಿವೃದ್ಧಿಗೆ ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
    1
    ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಸಮಿತಿ ರಚನೆ
ಚಿಂಚೋಳಿ ತಾಲೂಕು ವ್ಯಾಪ್ತಿಯ ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ರಚನಾ ಸಭೆ ನಡೆಯಿತು.
ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಶ್ರೀಮತಿ ಅರ್ಚನಾ ಗಂ ಜಗಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಜಕುಮಾರ್ ಅವರು ಆಯ್ಕೆಯಾದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಗುರು ಶ್ರೀ ಬಸವಣಪ್ಪ ಅವರು ಮಾತನಾಡಿ, ಶಾಲೆಯು ಸಮುದಾಯದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾಗ ಮಾತ್ರ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಲೆಯ ಅಭಿವೃದ್ಧಿಗೆ ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    17 hrs ago
  • ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ
ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು.
ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    1
    ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ
🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ
⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ
🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ
ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ.
ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ.
🏷️
#KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    user_AsnNews24Kannada
    AsnNews24Kannada
    Local News Reporter Shorapur, Yadgir•
    14 hrs ago
  • *ಮಂತ್ರಾಲಯದಲ್ಲಿ ಕುಡಿಯುವ ನೀರಿನ ಮಹತ್ವದ ಯೋಜನೆಗೆ ಭೂಮಿ ಪೂಜೆ * ರಾಯಚೂರ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಂದ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜೆ ಮಾಡಲಾಯಿತು. 20 MCFT ಸಾಮರ್ಥ್ಯದ ಇಂಪೌಂಡಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ಸುಮಾರು 56.63 ಕೋಟಿ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಮಂತ್ರಾಲಯ ದೇವಸ್ಥಾನದ ಪಕ್ಕದಲೇ ಇರುವ ತುಂಗಭದ್ರಾ ನದಿಯಿಂದ ನೀರು ಸಂಗ್ರಹಿಸಿ ಶುದ್ಧೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆ ಇದ್ದಾಗಿದೆ.HAL ಸಂಸ್ಥೆ CSR ಪಾಲುದಾರEIT Technologies ಎಂಜಿನಿಯರಿಂಗ್ ಪಾಲುದಾರರಿಂದ ಕೆಲಸ‌ ಕೈಎತ್ತುಗೊಂಡಿದೆ.ನೀರಿನ ಭದ್ರತೆಗೆ ಮಂತ್ರಾಲಯ ಮಠದಿಂದ ಮಹತ್ವದ ಹೆಜ್ಜೆ ಇಟ್ಟಿದೆ
    1
    *ಮಂತ್ರಾಲಯದಲ್ಲಿ ಕುಡಿಯುವ ನೀರಿನ ಮಹತ್ವದ ಯೋಜನೆಗೆ ಭೂಮಿ ಪೂಜೆ *
ರಾಯಚೂರ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಂದ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜೆ ಮಾಡಲಾಯಿತು. 20 MCFT ಸಾಮರ್ಥ್ಯದ ಇಂಪೌಂಡಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ಸುಮಾರು 56.63 ಕೋಟಿ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಮಂತ್ರಾಲಯ ದೇವಸ್ಥಾನದ ಪಕ್ಕದಲೇ ಇರುವ ತುಂಗಭದ್ರಾ ನದಿಯಿಂದ ನೀರು ಸಂಗ್ರಹಿಸಿ ಶುದ್ಧೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆ ಇದ್ದಾಗಿದೆ.HAL ಸಂಸ್ಥೆ CSR ಪಾಲುದಾರEIT Technologies ಎಂಜಿನಿಯರಿಂಗ್ ಪಾಲುದಾರರಿಂದ ಕೆಲಸ‌ ಕೈಎತ್ತುಗೊಂಡಿದೆ.ನೀರಿನ ಭದ್ರತೆಗೆ ಮಂತ್ರಾಲಯ ಮಠದಿಂದ ಮಹತ್ವದ ಹೆಜ್ಜೆ ಇಟ್ಟಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    19 hrs ago
  • ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು
    1
    ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ
ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ರಾಯಚೂರು ಜಿಲ್ಲಾ ಸಿರುವರ್ ತಾಲೂಕ್ ಲಕ್ಕಮದಿನ್ನಿ ಗ್ರಾಮದ ಸ್ಥಿತಿ ತಿಳಿಸುವುದೇನೆಂದರೆ ಇಲ್ಲಿ ಸಿಸಿ ರಸ್ತೆ ಇಲ್ಲದೆ ಸುಮಾರು 20 ವರ್ಷಗಳು ಕಳೆದರೂ ಇನ್ನೂ ಸಿಸಿ ರಸ್ತೆ ಆಗಿಲ್ಲ ಸುಮಾರು 40 ವರ್ಷಗಳಿಂದ ಇಲ್ಲಿ ವಾಸಿಸುತ್ತೇವೆ ನಾವು ಇಲ್ಲಿ ಹಾವು ಕಪ್ಪೆ ಮೀನು ಸೊಳ್ಳೆ ಎಲ್ಲಾನು ಇಲ್ಲೇ ಸಿಗುತ್ತೆ ನಮ್ಮ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದ್ದೇವೆ ಲಿಖಿತ ಮುಖಾಂತರ ಕೂಡ ಕೊಟ್ಟಿದ್ದೇವೆ ಇಲ್ಲಿಯವರೆಗೂ ಯಾವುದೇ ರಾಜಕಾರಣಿ ಯಾವುದೇ ಅಧಿಕಾರಿ ಕ್ರಮ ತಗೊಂಡಿಲ್ಲ ಹಾಗಾಗಿ ನಾವು ನಮ್ಮ ತಾಲೂಕ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಮಾಡಿಕೊಳ್ಳಲಿ ಎಂದು ನಿರ್ಣಾಮ ಮಾಡಿದ್ದೇವೆ ಈ ಬಂಡ ರಾಜಕಾರಣಿಗಳಿಗೆ ಬಂಡ ಆಫೀಸರಿಸಿ ಗಳಿಗೆ ಇವರೆಲ್ಲ ವೋಟ್ ಬೇಕಿದ್ದಾಗ ಮಾತ್ರ ನಮ್ಮ ಗ್ರಾಮಗಳಿಗೆ ಬರ್ತಾರೆ ತಾವು ವಿಜೇತರಾದ ಮೇಲೆ ನಮ್ಮನ್ನ ಈ ಸ್ಥಿತಿಗೆ ತರುತ್ತಾರೆ
    1
    ರಾಯಚೂರು ಜಿಲ್ಲಾ ಸಿರುವರ್ ತಾಲೂಕ್ ಲಕ್ಕಮದಿನ್ನಿ ಗ್ರಾಮದ ಸ್ಥಿತಿ 
ತಿಳಿಸುವುದೇನೆಂದರೆ ಇಲ್ಲಿ ಸಿಸಿ ರಸ್ತೆ ಇಲ್ಲದೆ ಸುಮಾರು 20 ವರ್ಷಗಳು ಕಳೆದರೂ ಇನ್ನೂ ಸಿಸಿ ರಸ್ತೆ ಆಗಿಲ್ಲ ಸುಮಾರು 40 ವರ್ಷಗಳಿಂದ ಇಲ್ಲಿ ವಾಸಿಸುತ್ತೇವೆ ನಾವು ಇಲ್ಲಿ ಹಾವು ಕಪ್ಪೆ ಮೀನು ಸೊಳ್ಳೆ ಎಲ್ಲಾನು ಇಲ್ಲೇ ಸಿಗುತ್ತೆ ನಮ್ಮ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದ್ದೇವೆ ಲಿಖಿತ ಮುಖಾಂತರ ಕೂಡ ಕೊಟ್ಟಿದ್ದೇವೆ ಇಲ್ಲಿಯವರೆಗೂ ಯಾವುದೇ ರಾಜಕಾರಣಿ ಯಾವುದೇ ಅಧಿಕಾರಿ ಕ್ರಮ ತಗೊಂಡಿಲ್ಲ ಹಾಗಾಗಿ ನಾವು ನಮ್ಮ ತಾಲೂಕ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಮಾಡಿಕೊಳ್ಳಲಿ ಎಂದು ನಿರ್ಣಾಮ ಮಾಡಿದ್ದೇವೆ ಈ ಬಂಡ ರಾಜಕಾರಣಿಗಳಿಗೆ ಬಂಡ ಆಫೀಸರಿಸಿ ಗಳಿಗೆ ಇವರೆಲ್ಲ ವೋಟ್ ಬೇಕಿದ್ದಾಗ ಮಾತ್ರ ನಮ್ಮ ಗ್ರಾಮಗಳಿಗೆ ಬರ್ತಾರೆ ತಾವು ವಿಜೇತರಾದ ಮೇಲೆ ನಮ್ಮನ್ನ ಈ ಸ್ಥಿತಿಗೆ ತರುತ್ತಾರೆ
    user_Ramesh Kumar
    Ramesh Kumar
    Farmer ಸಿರ್ವಾರ, ರಾಯಚೂರು, ಕರ್ನಾಟಕ•
    18 hrs ago
  • ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್, ಜಾತ್ರೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದರು. ಕೊಂಡಮಾಯಿ ಚೇಳಿನ ಜಾತ್ರೆಗೆ ಮೂಲಸೌಕರ್ಯ ಕಲ್ಪಿಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿ: ಉಮೇಶ ಕೆ. ಮುದ್ನಾಳ್ ಆಗ್ರಹ ಗುರುಮಠಕಲ್: ತಾಲ್ಲೂಕಿನ ಕಂದಕೂರ ಗ್ರಾಮದ ಐತಿಹಾಸಿಕ ಕೊಂಡಮಾಯಿ ದೇವಿ ಚೇಳಿನ ಜಾತ್ರೆ ನಾಗರ ಪಂಚಮಿ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದ್ದಾರೆ. ಗುರುವಾರ ಬೆಳಿಗ್ಗೆ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಂದಕೂರ ಬೆಟ್ಟದ ಮೇಲಿರುವ ಈ ದೇವಾಲಯಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಚೇಳಿನ ಜಾತ್ರೆ ಎಂಬ ವಿಶಿಷ್ಟ ಆಚರಣೆಯಿಂದ ಈ ಕ್ಷೇತ್ರ ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜಾತ್ರೆಯ ದಿನ ಚೇಳು ಕಚ್ಚಿದರೂ ಯಾವುದೇ ಅನಾಹುತವಾಗುವುದಿಲ್ಲ ಎಂಬ ನಂಬಿಕೆ ಭಕ್ತರಲ್ಲಿ ಇದೆ. ಈ ಅಪರೂಪದ ಸಂಪ್ರದಾಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಸೇರುತ್ತಾರೆ ಎಂದರು. ಆದರೆ, ಇಷ್ಟೊಂದು ಮಹತ್ವದ ಧಾರ್ಮಿಕ ಕ್ಷೇತ್ರಕ್ಕೆ ಇಂದಿಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ವಿದ್ಯುತ್ ಬೆಳಕು, ಶೌಚಾಲಯ ಹಾಗೂ ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ ಎಂದು ಆರೋಪಿಸಿದರು. ದೇಗುಲಕ್ಕೆ ತೆರಳುವ ಸುಮಾರು ಎರಡು ಕಿಲೋಮೀಟರ್ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದರೆ ವಾಹನ ಸಂಚಾರ ದುಸ್ತರವಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು ಭಕ್ತರಿಗೆ ತೊಂದರೆ ಉಂಟುಮಾಡುತ್ತಿವೆ. ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಭಕ್ತರು ಕತ್ತಲಲ್ಲೇ ಬೆಟ್ಟ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ನಾಗರ ಪಂಚಮಿ ಜಾತ್ರೆಗೂ ಮುನ್ನ ಕಂದಕೂರ ಸರ್ಕಲ್‌ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಭೀಮಾಶಂಕರ, ಪವನ, ಮಲ್ಲೇಶಿ, ಶಶಿಕಾಂತ, ಭರತಕುಮಾರ, ಹಣಮಂತ, ಮಹೇಶ್, ಅಂಜು, ಬನ್ನಪ್ಪ, ನಾಗಪ್ಪ, ಚಾಂದಪಾಶಾ, ಭಾಗಪ್ಪ, ಮಲ್ಲು, ಸಮೀರ್, ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೋಟ್:೦೧ ಕೊಂಡಮಾಯಿ ದೇವಿ ದೇಗುಲಕ್ಕೆ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. – ಉಮೇಶ ಕೆ. ಮುದ್ನಾಳ್, ಸಾಮಾಜಿಕ ಹೋರಾಟಗಾರ
    4
    ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್, ಜಾತ್ರೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದರು.
ಕೊಂಡಮಾಯಿ ಚೇಳಿನ ಜಾತ್ರೆಗೆ ಮೂಲಸೌಕರ್ಯ ಕಲ್ಪಿಸಿ
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿ: ಉಮೇಶ ಕೆ. ಮುದ್ನಾಳ್ ಆಗ್ರಹ
ಗುರುಮಠಕಲ್: ತಾಲ್ಲೂಕಿನ ಕಂದಕೂರ ಗ್ರಾಮದ ಐತಿಹಾಸಿಕ ಕೊಂಡಮಾಯಿ ದೇವಿ ಚೇಳಿನ ಜಾತ್ರೆ ನಾಗರ ಪಂಚಮಿ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದ್ದಾರೆ.
ಗುರುವಾರ ಬೆಳಿಗ್ಗೆ ಕೊಂಡಮಾಯಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಂದಕೂರ ಬೆಟ್ಟದ ಮೇಲಿರುವ ಈ ದೇವಾಲಯಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಚೇಳಿನ ಜಾತ್ರೆ ಎಂಬ ವಿಶಿಷ್ಟ ಆಚರಣೆಯಿಂದ ಈ ಕ್ಷೇತ್ರ ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜಾತ್ರೆಯ ದಿನ ಚೇಳು ಕಚ್ಚಿದರೂ ಯಾವುದೇ ಅನಾಹುತವಾಗುವುದಿಲ್ಲ ಎಂಬ ನಂಬಿಕೆ ಭಕ್ತರಲ್ಲಿ ಇದೆ. ಈ ಅಪರೂಪದ ಸಂಪ್ರದಾಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಸೇರುತ್ತಾರೆ ಎಂದರು.
ಆದರೆ, ಇಷ್ಟೊಂದು ಮಹತ್ವದ ಧಾರ್ಮಿಕ ಕ್ಷೇತ್ರಕ್ಕೆ ಇಂದಿಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ವಿದ್ಯುತ್ ಬೆಳಕು, ಶೌಚಾಲಯ ಹಾಗೂ ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ ಎಂದು ಆರೋಪಿಸಿದರು.
ದೇಗುಲಕ್ಕೆ ತೆರಳುವ ಸುಮಾರು ಎರಡು ಕಿಲೋಮೀಟರ್ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದರೆ ವಾಹನ ಸಂಚಾರ ದುಸ್ತರವಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು ಭಕ್ತರಿಗೆ ತೊಂದರೆ ಉಂಟುಮಾಡುತ್ತಿವೆ. ರಾತ್ರಿ ವೇಳೆಯಲ್ಲಿ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಭಕ್ತರು ಕತ್ತಲಲ್ಲೇ ಬೆಟ್ಟ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ನಾಗರ ಪಂಚಮಿ ಜಾತ್ರೆಗೂ ಮುನ್ನ ಕಂದಕೂರ ಸರ್ಕಲ್‌ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಭೀಮಾಶಂಕರ, ಪವನ, ಮಲ್ಲೇಶಿ, ಶಶಿಕಾಂತ, ಭರತಕುಮಾರ, ಹಣಮಂತ, ಮಹೇಶ್, ಅಂಜು, ಬನ್ನಪ್ಪ, ನಾಗಪ್ಪ, ಚಾಂದಪಾಶಾ, ಭಾಗಪ್ಪ, ಮಲ್ಲು, ಸಮೀರ್, ಕಾರ್ತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೋಟ್:೦೧
ಕೊಂಡಮಾಯಿ ದೇವಿ ದೇಗುಲಕ್ಕೆ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು.
– ಉಮೇಶ ಕೆ. ಮುದ್ನಾಳ್, ಸಾಮಾಜಿಕ ಹೋರಾಟಗಾರ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    15 hrs ago
  • ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು. ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.
    1
    ವಿವಿಧ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ  ಹೊರಗುತ್ತಿಗೆ ನೌಕರರಿಂದ ರಾಯಚೂರಿನಲ್ಲಿ ಆ.14ರಂದು ಪ್ರತಿಭಟನೆ 
ರಾಯಚೂರು, ಜು.31: ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಎದುರಿಸುತ್ತಿರುವ ವೇತನ ತಾರತಮ್ಯ, ಕಡಿಮೆ ವೇತನ, ಹಲವು ತಿಂಗಳ ಬಾಕಿ ಸಂಬಳ, ಅಧಿಕಾರಿಗಳ ಕಿರುಕುಳ, ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 14ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ (ಡಿಎಚ್‌ಒ) ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI) ಜಿಲ್ಲಾಾಧ್ಯಕ್ಷ ಜೆ. ಅಡವಿರಾವ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಡೆಹಿಡಿದಿರುವ ಹೊರಗುತ್ತಿಗೆ ಕಾರ್ಮಿಕರ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೆ ತರಬೇಕು. ರಾಯಚೂರು ಜಿಲ್ಲೆಯ ಆರೋಗ್ಯ ಇಲಾಖೆಯ ಡಿ ಮತ್ತು ಸಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಮೂರುರಿಂದ ಆರು ತಿಂಗಳವರೆಗೆ ಸಂಬಳ ಪಾವತಿಯಾಗದೇ ಆರ್ಥಿಕ ಸಂಕಷ್ಟ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.
ಬಳ್ಳಾರಿಯ ಪಾಪುಲರ್ ಇಂಜಿನಿಯರಿಂಗ್ ಸರ್ವಿಸಸ್ ಏಜೆನ್ಸಿಯ ಮೂಲಕ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನವನ್ನು ತಕ್ಷಣ ಪಾವತಿಸಬೇಕು. ಅಗತ್ಯವಿದ್ದರೆ ಏಜೆನ್ಸಿಯ ಗುತ್ತಿಗೆಯನ್ನು ರದ್ದುಗೊಳಿಸಿ ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಯನ್ನು ಸಂಘ ಸ್ವಾಗತಿಸುತ್ತಿದ್ದರೂ, ಅದನ್ನು ನೆಪವನ್ನಾಗಿ ಮಾಡಿಕೊಂಡು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಬಾರದು. ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅರ್ಹ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ವೇತನ ತಾರತಮ್ಯ ನಿವಾರಣೆ, ಅಧಿಕಾರಿಗಳ ಕಿರುಕುಳಕ್ಕೆ ಕಡಿವಾಣ, ಪಿಎಫ್ ಹಾಗೂ ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಂಕ್ರಪ್ಪ ಗುಂಡನಾಗರ, ಆಂಜನೇಯ ಭಂಡಾರಿ, ಧೇಮಣ್ಣ, ಶರಣಪ್ಪ, ಜಗದೀಶ್ ಗೌಡ, ನಾಗೇಂದ್ರ ಹಾಗೂ ದೇವೇಂದ್ರ ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಊಟ ಸೇವಿಸಿ ವಸತಿ ಶಾಲೆಯ 21 ಮಕ್ಕಳು ಅಸ್ವಸ್ಥ- ಆಸ್ಪತ್ರೆಗೆ ದಾಖಲು ರಾಯಚೂರ:ಬೆಳಗಿನ ಉಪಹಾರ ಸೇವಿಸಿ 21 ಮಕ್ಕಳು ಅಸ್ವಸ್ಥರಾದ ಘಟನೆ ಸಿಂಧನೂರು ತಾಲುಕಿನ ವಳಬಳ್ಳಾರಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮುಂಜಾನೆ ಪಲಾವ್, ಉಪಹಾರ ಸೇವಿಸಿದ್ದ ಮಕ್ಕಳು ಊಟದಲ್ಲಿ ಹುಳುಗಳು ಕಂಡಿಬಂದಿದ್ದೆ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಉಪಹಾರದ ಸ್ವಲ್ಪ ಸಮಯದಲ್ಲಿ ಕೆಲವು ಮಕ್ಕಳಿಗೆ ತಲೆನೋವು ಹಾಗೂ ಮೂರ್ಚೆಯಂತಹ ಅನುಭವವಾಗಿದೆ.ತಕ್ಷಣವೇ ವಾರ್ಡನ್ ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದು, ಮೊದಲು ಎರಡು ಮೂರು ಮಕ್ಕಳು ನಂತರ 20 ,ಮಕ್ಕಳಲ್ಲಿ ಕಂಡುಬಂದೆ. ವಸತಿ ನಿಲಯದಲ್ಲಿ ಒಟ್ಟು 540 ಮಕ್ಕಳು ವಸತಿ ಇದ್ದು ಆಹಾರದಲ್ಲಿ ಗುಣಮಟ್ಟ ಕಾಪಾಡದೇ ಇದ್ದದ್ದೇ ಇದಕ್ಕೆ ಕಾರಣ ಎಂದು ಪೋಷಕರು ಕಿಡಿಕಾರಿದ್ದಾರೆ.
    1
    ಊಟ ಸೇವಿಸಿ ವಸತಿ ಶಾಲೆಯ 21 ಮಕ್ಕಳು ಅಸ್ವಸ್ಥ- ಆಸ್ಪತ್ರೆಗೆ ದಾಖಲು
ರಾಯಚೂರ:ಬೆಳಗಿನ ಉಪಹಾರ ಸೇವಿಸಿ 21 ಮಕ್ಕಳು ಅಸ್ವಸ್ಥರಾದ ಘಟನೆ ಸಿಂಧನೂರು ತಾಲುಕಿನ ವಳಬಳ್ಳಾರಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮುಂಜಾನೆ ಪಲಾವ್, ಉಪಹಾರ ಸೇವಿಸಿದ್ದ ಮಕ್ಕಳು ಊಟದಲ್ಲಿ ಹುಳುಗಳು ಕಂಡಿಬಂದಿದ್ದೆ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಉಪಹಾರದ ಸ್ವಲ್ಪ ಸಮಯದಲ್ಲಿ ಕೆಲವು ಮಕ್ಕಳಿಗೆ ತಲೆನೋವು ಹಾಗೂ ಮೂರ್ಚೆಯಂತಹ ಅನುಭವವಾಗಿದೆ.ತಕ್ಷಣವೇ ವಾರ್ಡನ್ ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದು, ಮೊದಲು ಎರಡು ಮೂರು ಮಕ್ಕಳು ನಂತರ 20 ,ಮಕ್ಕಳಲ್ಲಿ ಕಂಡುಬಂದೆ. ವಸತಿ ನಿಲಯದಲ್ಲಿ ಒಟ್ಟು  540 ಮಕ್ಕಳು ವಸತಿ ಇದ್ದು ಆಹಾರದಲ್ಲಿ ಗುಣಮಟ್ಟ ಕಾಪಾಡದೇ ಇದ್ದದ್ದೇ ಇದಕ್ಕೆ ಕಾರಣ ಎಂದು ಪೋಷಕರು ಕಿಡಿಕಾರಿದ್ದಾರೆ.
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.